Breaking News
Home / 2021 / ಮಾರ್ಚ್ (page 49)

Monthly Archives: ಮಾರ್ಚ್ 2021

ರಮೇಶ್‌ ಜಾರಕಿಹೊಳಿ ಪರ ನಿಂತ ಸರ್ಕಾರ, ?

ಬೆಂಗಳೂರು: ಸಿ.ಡಿ ಪ್ರಕರಣದಲ್ಲಿ ಸರ್ಕಾರವು ರಮೇಶ್‌ ಜಾರಕಿಹೊಳಿ ಅವರಿಗೆ ನೀಡುತ್ತಿರುವ ಮನ್ನಣೆಯನ್ನು ಸಂತ್ರಸ್ತೆಗೆ ನೀಡುತ್ತಿಲ್ಲ ಎಂದು ವಕೀಲ ಜಗದೀಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿ.ಡಿ ಪ್ರಕರಣದಿಂದಾಗಿ ಸಂತ್ರಸ್ತೆಗೆ ಅನ್ಯಾಯವಾಗಿದೆ. ಈವರೆಗೂ ಆಕೆಗೆ ರಕ್ಷಣೆ ನೀಡಿಲ್ಲ. ಆದರೆ, ಸರ್ಕಾರವೇ ರಮೇಶ್‌ ಜಾರಕಿಹೊಳಿ ಪರವಾಗಿ ನಿಂತಿದೆ. ನಿರ್ಭಯ ಮಾರ್ಗಸೂಚಿ ಪ್ರಕಾರ ಯಾವುದೇ ಮಹಿಳೆಗೆ ಲೈಂಗಿಕ ಕಿರುಕುಳ ಆಗಿದ್ದರೆ ಆಕೆಗೆ ರಕ್ಷಣೆ ನೀಡಿ 24 ಗಂಟೆಯೊಳಗೆ ಎಫ್‌ಐಆರ್‌ ದಾಖಲಿಸಿಕೊಳ್ಳಬೇಕು ಎಂದು ದೂರಿನಲ್ಲಿ ಹೇಳಿದ್ದಾರೆ. ಅಧಿಕಾರ ದುರುಪಯೋಗ …

Read More »

3 ಕೋಟಿ ಪಡಿತರ ಚೀಟಿ ರದ್ದು; ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ

ನವದೆಹಲಿ, ಮಾರ್ಚ್ 17: ಆಧಾರ್ ಸಂಖ್ಯೆ ಜೋಡಣೆಯಾಗದ ಕಾರಣ ಸುಮಾರು ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ರದ್ದುಗೊಳಿಸಿರುವುದು “ಅತಿ ಗಂಭೀರ ವಿಷಯ” ಎಂದು ಉಲ್ಲೇಖಿಸಿರುವ ಸುಪ್ರೀಂ ಕೋರ್ಟ್, ಈ ಕುರಿತು ಕೇಂದ್ರ ಹಾಗೂ ಎಲ್ಲಾ ರಾಜ್ಯಗಳಿಂದ ಪ್ರತಿಕ್ರಿಯೆ ಕೇಳಿದೆ. ಎಸ್‌.ಎ.ಬೊಬ್ಡೆ, ಎ.ಎಸ್. ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠ ಈ ಸಂಬಂಧ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದು, “ಈ ವಿಷಯವನ್ನು ದುರದೃಷ್ಟ ಎಂದು ಹೇಳಿ ಸುಮ್ಮನಾಗುವಂತಿಲ್ಲ. ಪಡಿತರ ಚೀಟಿ …

Read More »

ಯೋಗೇಶ್ ಗೌಡ ಹತ್ಯೆ ಕೇಸ್ : ಮಾಜಿ ಶಾಸಕ ‘ವಿನಯ್ ಕುಲಕರ್ಣಿ’ ಜಾಮೀನು ಅರ್ಜಿ ವಜಾ

ಬೆಂಗಳೂರು : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ಪ್ರಕರಣ ಸಂಬಂಧ ವಿನಯ್ ಜಿಲ್ಲಾ ಸಿಬಿಐ ವಿಶೇಷ ನ್ಯಾಯಾಲಯ ಸೇರಿದಂತೆ ಹೈಕೋರ್ಟ್ ನಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಎಲ್ಲಾದರಲ್ಲೂ ಅರ್ಜಿ ವಜಾ ಆಗಿದೆ. ಹಾಗಾಗಿ ಮಾಜಿ ಸಚಿವರು ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ಸಂಬಂಧ ವಾದ ಪ್ರತಿವಾದ …

Read More »

ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ…!

ಬೆಂಗಳೂರು: ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಸಿಡಿಯಲ್ಲಿದ್ದ ಯುವತಿಯ ರೂಮ್ ನಲ್ಲಿ ಬರೋಬ್ಬರಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ನಿನ್ನೆ ಸಂಜೆ ಎಸ್‌ಐಟಿ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ 23 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಇಷ್ಟೊಂದು ನಗದು ಹೇಗೆ ಬಂತು ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ. ನರೇಶ್ ಮನೆಯಲ್ಲಿ ಶೋಧಿಸಿದಾಗ 18.5 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಖರೀದಿಸಿದ …

Read More »

ಸಚಿವರಿಗೆ ಸ್ವಪ‍ಕ್ಷೀಯರಿಂದಲೇ ಮುಜುಗರ

ಬೆಂಗಳೂರು: ನೇಕಾರರ ಸಮಸ್ಯೆ ಕುರಿತು ಆಡಳಿತ ಪಕ್ಷದ ಸದಸ್ಯರೇ ಪದೇ ಪದೇ ಪ್ರಶ್ನೆಗಳನ್ನು ಕೇಳುವ ಮೂಲಕ ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಮುಜುಗರ ತಂದ ವಿದ್ಯಮಾನ ವಿಧಾನಸಭೆಯಲ್ಲಿ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ, ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದರು. ‘ನೇಕಾರ ಸಮ್ಮಾನ್‌ ಯೋಜನೆಯಡಿ ನೀಡಿದ ₹2 ಸಾವಿರ ಯಾವುದಕ್ಕೂ ಸಾಲದು. ಲಾಕ್‌ಡೌನ್‌ ಅವಧಿಯಲ್ಲಿ ನೇಕಾರರು ತಯಾರಿಸಿದ ಸೀರೆಗಳನ್ನು ಇಲಾಖೆ ಖರೀದಿ ಮಾಡಿಲ್ಲ. …

Read More »

ಜೈ ಶ್ರೀರಾಮ್‌, ಜೈ ಹನುಮಾನ್‌ ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯುತ್ತದೆಯೇ?’

ಬೆಂಗಳೂರು: ಜೈ ಶ್ರೀರಾಮ್‌, ಜೈ ಹನುಮಾನ್‌ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು. ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. …

Read More »

ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆ ಇಲ್ಲ: B.S.Y.

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಜತೆಗಿನ ವಿಡಿಯೋ ಸಂವಾದದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಮುಂದಿನ ನಿಲುವುಗಳ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಗೊಳಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ . ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಜಾರಿಗೊಳಿಸುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದಲ್ಲಿ ಆರ್ ಟಿಪಿಎಸ್ ಪರೀಕ್ಷೆ ಪ್ರಮಾಣಕ್ಕೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊರೋನಾ …

Read More »

ಲೋಕಸಭಾ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. : ಎಂ.ಜಿ.ಹಿರೇಮಠ

ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.17) ನಡೆದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಾದರಿ ನೀತಿ ಸಂಹಿತೆ ಪಾಲನೆಗೆ …

Read More »

ಜಾರಕಿಹೊಳಿ ಸಿಡಿ ಪ್ರಕರಣ: ಯುವತಿಗೆ ನೋಟಿಸ್ ಜಾರಿ, ಆಕೆಯಿಂದ ಸ್ಪಂದನೆ ಇಲ್ಲ

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಅಧಿಕಾರಿಗಳು ಸೋಮವಾರ 2 ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸೋಮವಾರ ತಡರಾತ್ರಿ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ತೆರಳಿ ವಿಚಾರಣೆಗೆ ನಡೆಸಿದ್ದು, ಎಸ್‍ಐಟಿ ಪೊಲೀಸರ ಎದುರು 4 ಪುಟಗಳ ಹೇಳಿಕೆ ದಾಖಲಿಸಿದ್ದು, ಈತನಿಗೆ ಸಮಯದಲ್ಲಿ ಎಸಿಪಿ ಧರ್ಮೆಂದ್ರ ಎದುರು ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. …

Read More »

ಬೈಕ್ ಸ್ಟಂಟ್ ರಾಣಿಯರಿಗೆ ಬಿತ್ತು ಭಾರೀ ದಂಡ

ಲಕ್ನೋ: ಹುಡುಗಿಯರಿಬ್ಬರು ಬೈಕ್‍ನಲ್ಲಿ ಸ್ಟಂಟ್ ಮಾಡಿ ಅದನ್ನು ಚಿತ್ರೀಕರಣ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಇದನ್ನು ಗಮನಿಸಿರುವ ಪೊಲೀಸರು ಬೈಕ್ ರೈಡ್ ಮಾಡಿದ ಹುಡುಗಿಯ ಮೇಲೆ 28 ಸಾವಿರ ರೂಪಾಯಿ ದಂಡ ಪ್ರಯೋಗ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್‍ನ ಶಿವಾಂಗಿ ದಬಾಸ್ ತನ್ನ ಸ್ನೇಹಿತೆ ಕುಸ್ತಿಪಟು ಸ್ನೇಹಾ ರಘವಂಶಿಯ ಹೆಗಲ ಮೇಲೆ ಕೂತು ಬುಲೆಟ್ ಬೈಕ್‍ನಲ್ಲಿ ಗಾಜಿಯಾಬಾದ್‍ನಲ್ಲಿ ರೌಂಡ್ಸ್ ಹೊಡೆದಿದ್ದಾಳೆ. ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ …

Read More »