ಬೆಳಗಾವಿ: ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪೊಲೀಸ್ ಇನ್ಸ್‌ಪೆಕ್ಟರ್ ಮುರಗೇಶ ಚನ್ನಣ್ಣವರ ಅವರನ್ನು ಇಂದು ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಮುಕ್ತಾಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುರಗೇಶ ಚನ್ನಣ್ಣವರ 2005 ನೇ ಸಾಲಿನಲ್ಲಿ ಪಿಎಸ್‌ಐ ರಾಗಿದ್ದು 2016ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ಹೊಂದಿ ಹಾಲಿ ಹೆಸ್ಕಾಂ ಜಾಗೃತ ದಳ, ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2021 ರಲ್ಲಿ ಇತ್ತೀಚೆಗೆ ಓರಿಸಾದ …
Read More »Monthly Archives: ಮಾರ್ಚ್ 2021
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ
ಬೆಳಗಾವಿ– ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯಂತೆ 2010 ರಿಂದ 2019 ರವರೆಗೆ ವಿವಿಧ ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿಲ್ಲದ ಹಾಗೂ ಪದವಿ ಪೂರ್ಣಗೊಳಿಸದ ಸ್ನಾತಕ (ಬಿ.ಎ., ಬಿ.ಎಸ್.ಸಿ., ಬಿ.ಎಸ್.ಸಿ.(ಸಿ.ಎಸ್), ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಡ್., ಬಿ.ಪಿ.ಎಡ್.) ಪದವಿಯ ಹಾಗೂ …
Read More »ರಾಧಿಕಾ ಪಂಡಿತ್ ಬರ್ತಡೇ: ಮೊಹಮ್ಮದ್ ನಲಪಾಡ್ ಸೇರಿ ಸ್ನೇಹಿತರು ಭಾಗಿ
ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ಇತ್ತೀಚಿಗಷ್ಟೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಕೊರೊನಾ ವೈರಸ್ ಹಿನ್ನೆಲೆ ಈ ವರ್ಷ ಅಭಿಮಾನಿಗಳ ಜೊತೆ ಜನುಮದಿನ ಸಂಭ್ರಮಿಸಲು ಸಾಧ್ಯವಾಗಿಲ್ಲ. ನೆಚ್ಚಿನ ನಟಿಯ ಹುಟ್ಟುಹಬ್ಬದ ಕ್ಷಣದಲ್ಲಿ ಭಾಗಿಯಾಗಿಲ್ಲ ಎಂಬ ಕಾರಣಕ್ಕೆ ಅಭಿಮಾನಿಗಳು ನಿರಾಸೆಯಾಗಿದ್ದರು. ಇದೀಗ, ರಾಧಿಕಾ ಪಂಡಿತ್ ಬರ್ತಡೇ ಸೆಲೆಬ್ರೆಷನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಸೇರಿದಂತೆ ಸ್ನೇಹಿತರು ರಾಧಿಕಾ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ …
Read More »ವಿದೇಶದಲ್ಲಿ ಗಾಳಿಪಟ ಹಾರಿಸಿ ಸಂಭ್ರಮಿಸಿದ ನಟ ಗಣೇಶ್
ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಬಹುನಿರೀಕ್ಷೆಯ ಗಾಳಿಪಟ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಗಾಳಿಪಟ-2 ಸಿನಿಮಾದ ಚಿತ್ರೀಕರಣ ಸದ್ಯ ಕಜಕಿಸ್ತಾನದಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡು ಗಣಿ ಗಾಳಿಪಟ ಉತ್ಸವದಲ್ಲಿ ಭಾಗಿಯಾಗಿದ್ದಾರೆ. ಪುತ್ರ ವಿಹಾನ್ ಫೋಟೋವಿರುವ ಗಾಳಿಪಟ ಹಾರಿಸಿ ಗಣೇಶ್ ಸಂಭ್ರಮಿಸಿದ್ದಾರೆ. ಈ ಸುಂದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಗಣೇಶ್ ಜೊತೆ ನಟ ದಿಗಂತ್ ಮತ್ತು ಪವನ್ ಕುಮಾರ್ ಸಹ ಕಜಕಿಸ್ತಾನದಲ್ಲಿದ್ದಾರೆ. …
Read More »ಸಮುದ್ರದಲ್ಲಿ ತೇಲಿ ಬಂತು ಫುಲ್ ಬಾಟಲ್- ವಿದೇಶಿ ಮದ್ಯ ಎಂದು ಕುಡಿದ ಮೀನುಗಾರರು- ಮುಂದಾದದ್ದು ದುರಂತ!
ಚೆನ್ನೈ: ಸಮುದ್ರದಲ್ಲಿ ದ್ರವ ತುಂಬಿದ ಕೆಲವು ಬಾಟಲಿಗಳು ತೇಲಿ ಬಂದಿದ್ದನ್ನು ನೋಡಿದ ಮೀನುಗಾರರು ಇವು ವಿದೇಶಿ ಮದ್ಯ ಎಂದು ಸೇವನೆ ಮಾಡಿರುವ ಘಟನೆ ತಮಿಳುನಾಡಿನ ರಾಮೇಶ್ವರದಲ್ಲಿ ನಡೆದಿದೆ. ಆದರೆ ಇದು ಅವರ ಜೀವಕ್ಕೆ ಮುಳುವಾಗಿದೆ. ಅದರಲ್ಲಿ ಇದ್ದುದು ಮದ್ಯವಾಗಿರದೇ ಯಾವುದೇ ವಿಷಪೂರಿತ ದ್ರವವಾಗಿತ್ತು. ಅದನ್ನು ಕುಡಿಯುತ್ತಿದ್ದಂತೆಯೇ ಮೂವರು ಮೀನುಗಾರರು ಮೃತಪಟ್ಟಿದ್ದಾರೆ. ಮೃತರನ್ನು ರಾಮೇಶ್ವರಂ ಬಳಿಯ ತಂಗಾಚಿಮಡಂನ ಅಂಥೋನಿಸ್ವಾಮಿ (38) ಅರೋಕಿಯಾ ಪ್ರೋಹಿತ್ (50) ಹಾಗೂ ವಿನೋದ್ ಕುಮಾರ್ (26) ಎಂದು …
Read More »ಸಾಂಸ್ಕೃತಿಕ ನಗರಿಯಲ್ಲಿ ‘ಯುವರತ್ನ’ ಪ್ರೀ ರಿಲೀಸ್
ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷೆಯ ‘ಯುವರತ್ನ’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಮಾರ್ಚ್ 20ರಂದು ಮೈಸೂರಿನಲ್ಲಿ ನೆರವೇರಿಸಲಿದ್ದಾರೆ. ಏಪ್ರಿಲ್ 1ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ ಈ ಸಿನಿಮಾದಲ್ಲಿ ಸಯ್ಯೇಶಾ ನಾಯಕಿಯಾಗಿ ನಟಿಸಿದ್ದಾರೆ ವಿಜಯ್ ಕಿರಗಂದೂರು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ. ಪ್ರಕಾಶ್ ರಾಜ್, ಧನಂಜಯ್, ಸೋನು ಗೌಡ …
Read More »ಶಿವರಾತ್ರಿಯಂದು ಅಬ್ಬರಿಸಲು ಸಜ್ಜಾಗಿದೆ ‘ರಾಬರ್ಟ್’
ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು ಟ್ರೈಲರ್ ಹಾಗೂ ಹಾಡುಗಳ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ದರ್ಶನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. …
Read More »ಹಕ್ಕು ಪತ್ರಗಳ ವಿತರಣೆ ವಿಳಂಬ : ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ
ಗದಗ,ಮಾ.10(ಹಿ.ಸ): ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ಮನೆ ಕಳೆದುಕೊಂಡ ಕುಟುಂಬಗಳು ಸರ್ಕಾರದ ಆಸರೆ ಮನೆಗಳ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆ ರೋಣ ತಹಶಿಲ್ದಾರ ಕಚೇರಿ ಎದುರು ಬುಧವಾರ ವಿನೂತನ ಪ್ರತಿಭಟನೆ ಮಾಡಿದರು. ರೋಣ ತಹಶಿಲ್ದಾರ್ ಕಚೇರಿ ಬಳಿ ಗಾಡಗೋಳಿ ಗ್ರಾಮದ ನೆರೆ ಸಂತ್ರಸ್ತರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ವಿನೂತನ ಹೋರಾಟ ಮಾಡಿದರು. ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹ ಸಂದರ್ಭದಲ್ಲಿ ನೂರಾರು ಕುಟುಂಬಗಳು ಮನೆ …
Read More »ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ
ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …
Read More »ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಪೂರ್ತಿ ರೇಂಜರ್ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …
Read More »