ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ಭಜರಂಗಿ-2 ಚಿತ್ರ ಇದೀಗ ಸೆಟ್ಟೇರಿದೆ. ಇಂದು ಚಿತ್ರದ ಮುಹೂರ್ತ ನೆರವೇರಿದ್ದು ಶೂಟಿಂಗ್ ಭರದಿಂದ ಸಾಗಲಿದೆ. ಯಡಿಯೂರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇವತ್ತು ಶಿವಣ್ಣ ಮುಂದಿನ ಚಿತ್ರ ಭಜರಂಗಿ-2 ಮುಹೂರ್ತ ನೆರವೇರಿತು. ಭಜರಂಗಿ, ವಜ್ರಕಾಯ ನಂತರ ಮತ್ತೆ ಹರ್ಷ- ಶಿವಣ್ಣ ಜೋಡಿ ಒಂದಾಗಿದೆ. ಹರ್ಷ ನಿರ್ದೇಶನದ ಈ ಎರಡೂ ಚಿತ್ರಗಳು ಸೂಪರ್ ಹಿಟ್ ಆಗಿತ್ತು, ಇನ್ನು ಇದೀಗ ಸೆಟ್ಟೇರಿರೋ ಭಜರಂಗಿ-2 ಕೂಡ ಇವುಗಳಂತೆಯೇ …
Read More »Monthly Archives: ಮಾರ್ಚ್ 2021
ಪೆಟ್ರೋಲ್-ಡೀಸೆಲ್‌ನಿಂದ ರಾಜ್ಯಕ್ಕೆ ₹12,342 ಕೋಟಿ ತೆರಿಗೆ
ಬೆಂಗಳೂರು: ‘ಡೀಸೆಲ್ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ ₹12,432 ಕೋಟಿ ತೆರಿಗೆ ಬಂದಿದೆ’ ಎಂದು ರಾಜ್ಯ ಸರ್ಕಾರ ಹೇಳಿದೆ. ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನ ಪ್ರಕಾಶ್ ರಾಠೋಡ್ ಪ್ರಶ್ನೆ ಕೇಳಿದ್ದರು. ‘ದಕ್ಷಿಣದ ರಾಜ್ಯಗಳಿಗೆ ಹೋಲಿಸಿದಾಗ ಕೇರಳ ಬಿಟ್ಟು ಪೆಟ್ರೋಲ್, ಡೀಸೆಲ್ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ, ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರಿಗೆ ಬಂದಿದೆ ಎಂಬ ಮಾಹಿತಿ ಇಲ್ಲ’ ಎಂದು ಸಭಾ ನಾಯಕ …
Read More »ಅಣ್ಣನ ಸಿಡಿ ಬಗ್ಗೆ ಮೌನ ಮುರಿದ ಸಹೋದರ ಲಖನ್ ಜಾರಕಿಹೊಳಿ ಹೇಳಿದ್ದೇನು?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋರ್ಟ್ ಆಚೆಗೆ ಸರಿ -ತಪ್ಪುಗಳ ವಾದ ಪ್ರತಿವಾದ ನಡೆದಿದ್ದು, ವಿರೋಧ ಪಕ್ಷಗಳಿಂದ ಸಿಡಿ ಪ್ರಕರಣಕ್ಕೆ ವಿರೋಧ ವ್ಯಕ್ತವಾದರೆ, ರಮೇಶ್ ಬೆಂಬಲಿಗರು ಇದು ನಕಲಿ ಎಂದು ರಸ್ತೆಗಿಳಿದಿದ್ದಾರೆ. ಇದೆಲ್ಲಾ ಒಂದು ತೂಕವಾದರೆ ರಮೇಶ್ ಜಾರಕಿಹೊಳಿ ಸಹೋದರರು ರಮೇಶ್ ಬೆನ್ನಿಗೆ ನಿಂತಿದ್ದಾರೆ ಎನ್ನುವುದು ವಿಶೇಷ. ರಮೇಶಣ್ಣ ಇದರಿಂದ ಗೆದ್ದು ಬರುತ್ತಾರೆ ಇದು ರಾಜಕೀಯ ಷಡ್ಯಂತ್ರ. ರಮೇಶ್ರನ್ನು ರಾಜಕೀಯವಾಗಿ ಮುಗಿಸಲು ಈ …
Read More »ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ:.ಕುಮಾರಸ್ವಾಮಿ ಆರೋಪ
ಮೈಸೂರು: ‘ನನಗೆ ಲಭಿಸಿರುವ ಮಾಹಿತಿ ಪ್ರಕಾರ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ₹5 ಕೋಟಿ ಡೀಲ್ ನಡೆದಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಈ ಪ್ರಕರಣದ ಹಿಂದೆ ದೊಡ್ಡವರ ಕೈವಾಡವಿದೆ. ಸಂತ್ರಸ್ತೆ ಎಲ್ಲಿದ್ದಾಳೆ ಎಂಬುದನ್ನು ಹುಡುಕುವ ಬದಲು, ದೂರು ನೀಡಿದ ದಿನೇಶ್ ಕಲ್ಲಹಳ್ಳಿಯನ್ನು ಬಂಧಿಸಬೇಕು. ಇನ್ನಷ್ಟು ಸಿ.ಡಿಗಳಿವೆ ಎಂದು ಹೇಳುವ ಆತನನ್ನು ವಿಚಾರಣೆಗೆ ಒಳಪಡಿಸಿದರೆ ಇಡೀ ಪ್ರಕರಣದ ಸತ್ಯಾಂಶ ಹೊರಬರಲಿದೆ’ ಎಂದು ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮದವರಿಗೆ …
Read More »ಎಸ್ಟಿ ಸಮುದಾಯದಿಂದ ‘ನಾಟಕ ಬಿಡಿ, ಮೀಸಲಾತಿ ಕೊಡಿ’ ಅಭಿಯಾನ; ಕೊಟ್ಟ ಮಾತು ಉಳಿಸಿಕೊಳ್ಳುವಂತೆ ಸಿಎಂಗೆ ಆಗ್ರಹ
ಬೆಂಗಳೂರು(ಮಾ.5): ಪರಿಶಿಷ್ಟ ಪಂಗಡಕ್ಕೆ ಶೇ. 7.5 ಮೀಸಲಾತಿ ಘೋಷಣೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲಿ ಎಂದು ವಾಲ್ಮೀಕಿ ಸಮುದಾಯದ ಒಕ್ಕೂಟ ಅಭಿಯಾನ ಆರಂಭಿಸಿದೆ. ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಆ ವರದಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರವೇ ಸಂಪುಟ ಉಪಸಮಿತಿ ರಚಿಸಿತ್ತು. ಇದರಿಂದಾಗಿ ಮಾರ್ಚ್ 9ರೊಳಗೆ ಪರಿಶಿಷ್ಟ ಪಂಗಡಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುವುದಾಗಿ ಸ್ವತಃ …
Read More »ಪಂಚಮಸಾಲಿ ಮೀಸಲಾತಿ ಹೋರಾಟ : ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಸ್ವಾಮೀಜಿ ಕರೆ
ಬೆಂಗಳೂರು : ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟಕ್ಕೆ ಸಂಬಂಧಿಸಿದಂತೆ ಸಮಾಜದ ಶಾಸಕರು ಸದನದ ಬಾವಿಗಿಳಿದು ಹೋರಾಟ ಮಾಡುವಂತೆ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮಾಜದ 2 ಎ ಮೀಸಲಾತಿ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯತ್ನಾಳ್ ಗೆ ಸಮಾಜದ 22 ಶಾಸಕಕರು ಬೆಂಬಲ ನೀಡಬೇಕು. ಇಲ್ಲದಿದ್ದರೆ ನಾಳೆ ಸಮಾಜದ 22 ಶಾಸಕರನ್ನು ಜನರು ನಿರ್ಲಕ್ಷ್ಯ ಮಾಡುತ್ತಾರೆ. …
Read More »ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ
ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು. ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು …
Read More »ಮತ್ತೂಂದು ಸ್ಪೇಸ್ ಎಕ್ಸ್ ರಾಕೆಟ್ ಸ್ಫೋಟ
ಕ್ಯಾಲಿಫೋರ್ನಿಯಾ: ಅಮೆರಿಕದ ಪ್ರಸಿದ್ಧ ರಾಕೆಟ್ ನಿರ್ಮಾಣ ಸಂಸ್ಥೆ ಸ್ಪೇಸ್ ಎಕ್ಸ್‌ನ ಸ್ಟಾರ್‌ಶಿಪ್ ಪರೀಕ್ಷಾ ಮಾದರಿಯ ರಾಕೆಟ್, ಅತ್ಯುನ್ನತ ಎತ್ತರದ ಪರೀಕ್ಷಾ ಹಾರಾಟ ಮುಗಿಸಿ, ಲ್ಯಾಂಡ್ ಆಗುವ ವೇಳೆ ಸ್ಫೋಟಗೊಂಡಿದೆ. ಮುಂದಿನ ಪೀಳಿಗೆಯ ವಾಹನವಾದ “ಎಸ್‌ಎನ್- 10′ ರಾಕೆಟ್, ಟೆಕ್ಸಾಸ್‌ನ ಬೊಕಾ ಚಿಕಾ ಎಂಬಲ್ಲಿ ಸುರಕ್ಷಿತವಾಗಿಯೇ ಇಳಿದಿತ್ತು. ಆದರೆ ಕಾಂಕ್ರೀಟ್ ಲ್ಯಾಂಡಿಂಗ್ ಪ್ಯಾಡ್ ಮೇಲೆ ಇಳಿದ ಎಂಟೇ ನಿಮಿಷಗಳಲ್ಲಿ ಸ್ಫೋಟದಿಂದ ಛಿದ್ರವಾಗಿದೆ. ರ್ಯಾಪ್ಟರ್ ಎಂಜಿನ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದೇ ಸ್ಫೋಟಕ್ಕೆ ಕಾರಣ ಎಂದು …
Read More »ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ: ಬೊಮ್ಮಾಯಿ
ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆಗಳ ವ್ಯಾಪ್ತಿಯನ್ನು ಶೀಘ್ರವೇ ಮರು ರಚಿಸಲಾಗುವುದು’ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಚ್.ಎಂ.ರಮೇಶ್‍ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಸಂಬಂಧ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸಮಿತಿಯಿಂದ ವರದಿ ಬರಲಿದ್ದು, ಪೊಲೀಸ್ ಠಾಣೆಗಳ ಗಡಿ ಪುನರ್‌ರಚಿಸಲಾಗುವುದು’ ಎಂದರು. ದಕ್ಷಿಣ ವಲಯ ರಚನೆಯಿಲ್ಲ: ‘ಸದ್ಯ, ಸಂಚಾರ ವಿಭಾಗಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೂರ್ವ, …
Read More »ಕಬ್ಬನ್ ಪಾರ್ಕ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ದಿನೇಶ್ ಕಲ್ಲಳ್ಳಿ’
ಬೆಂಗಳೂರು : ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಬಿಡುಗಡೆ ಪ್ರಕರಣ ಸಂಬಂಧ, ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ ಮುಂದೆ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ನಿನ್ನೆ ತಮಗೆ ಸೂಕ್ತ ರೀತಿಯಲ್ಲಿ ಭದ್ರತೆ ನೀಡುವುದಾದರೇ ಮಾತ್ರವೇ ಠಾಣೆಗೆ ಬಂದು ವಿಚಾರಣೆ ಹಾಜರಾಗುವುದುದಾಗಿ ಭದ್ರತೆಯ ಕಾರಣ ನೀಡಿ, ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ದಿನೇಶ್ ಕಲ್ಲಳ್ಳಿ ತಿಳಿಸಿದ್ದರು. ಇಂದು ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ತನಿಖಾಧಿಕಾರಿಗಳ …
Read More »