Breaking News
Home / 2021 / ಮಾರ್ಚ್ (page 99)

Monthly Archives: ಮಾರ್ಚ್ 2021

ಚೀನದಿಂದ ಸೈಬರ್‌ ದಾಳಿ ಯತ್ನ: ನಿಗಾ ಅನಿವಾರ್ಯ

ಭಾರತದ ನಿರಂತರ ಒತ್ತಡ ಮತ್ತು ಪರಿಣಾಮಕಾರಿ ರಾಜತಾಂತ್ರಿಕ ನಡೆಗಳಿಗೆ ಮಣಿದಿದ್ದ ಚೀನ ಸರಕಾರ ಲಡಾಖ್‌ ಗಡಿಯಲ್ಲಿ ಭಾರೀ ಸಂಖ್ಯೆಯಲ್ಲಿ ನಿಯೋಜಿಸಿದ್ದ ತನ್ನ ಸೇನಾ ತುಕಡಿಗಳನ್ನು ವಾಪಸು ಕರೆಸಿ ಕೊಳ್ಳುವ ಮೂಲಕ ಗಡಿಯಲ್ಲಿ ಸೃಷ್ಟಿಯಾಗಿದ್ದ ಸಂಘರ್ಷದ ವಾತಾವರ ಣವನ್ನು ತಿಳಿಗೊಳಿಸಿತ್ತು. ಇದರಿಂದಾಗಿ ಗಡಿಯಲ್ಲಿ 10 ತಿಂಗಳುಗಳಿಂದ ಇದ್ದ ಸಮರ ಭೀತಿ ದೂರವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು. ಇದರ ನಡುವೆ ಚೀನ ಹ್ಯಾಕರ್‌ಗಳು ದೇಶದ ವಿದ್ಯುತ್‌ ವಿತರಣ ಜಾಲದ ಮೇಲೆ ಸೈಬರ್‌ …

Read More »

ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಪ್ರಯತ್ನ

ಬೆಂಗಳೂರು: ಮೈಸೂರು ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಗಿನ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಪ್ರಕರಣವನ್ನು ಕೆಪಿಸಿಸಿ ಶಿಸ್ತು ಸಮಿತಿಗೆ ವಹಿಸುವುದರೊಂದಿಗೆ ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್‌ ಮುಂದಾಗಿದೆ. ಶಿಸ್ತು ಸಮಿತಿ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ರೆಹಮಾನ್‌ ಖಾನ್‌ ಅವರು ಮಾಜಿ ಸಚಿವ ತನ್ವೀರ್‌ ಸೇಠ್ ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಮೈಸೂರು ಪ್ರಕರಣದ …

Read More »

ಸಿಂಹಗಳಿಗೆ ಗೋಮಾಂಸ ಬದಲಿಗೆ ಕೋಳಿ ಮಾಂಸ

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ಮೃಗಾಲಯಕ್ಕೆ ಕೆಲವು ದಿನಗಳ ಹಿಂದೆ ಮೂರು ಸಿಂಹಗಳನ್ನು ತರಿಸಲಾಗಿದ್ದು, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಪರಿಣಾಮ ಅವುಗಳಿಗೆ ಗೋಮಾಂಸದ ಬದಲಿಗೆ ಕೋಳಿ ಮಾಂಸವನ್ನು ಆಹಾರವಾಗಿ ನೀಡಲಾಗುತ್ತಿದೆ. ‘ಬನ್ನೇರಘಟ್ಟ ಜೈವಿಕ ಉದ್ಯಾನದಿಂದ ತರಲಾಗಿರುವ ‘ನಕುಲ’, ‘ಕೃಷ್ಣ’ ಹಾಗೂ ‘ನಿರುಪಮಾ’ ಹೆಸರಿನ 11 ವರ್ಷದ ಸಿಂಹಗಳಿಗೆ ದಿನಕ್ಕೆ ತಲಾ 7ರಿಂದ 9 ಕೆ.ಜಿ. ದನದ ಮಾಂಸ ಬೇಕು. ಆದರೆ, ಕಾಯ್ದೆ ಜಾರಿ ಪರಿಣಾಮ ಆ ಮಾಂಸ …

Read More »

ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್!

ತುಮಕೂರು : ಈಗಾಗಲೇ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ತೂಕದಲ್ಲಿ ಮೋಸ ನಡೆಯುತ್ತಿದ್ದು, ತೂಕ ಪರೀಕ್ಷಿಸಿ ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಿರಾ ತಾಲೂಕಿನಲ್ಲಿ ಹಾಡಹಾಗಲೇ ಕಡಿಮೆ ತೂಕದ ಅಡುಗೆ ಅನಿಲ ಪೂರೈಸುತ್ತಿರುವುದನ್ನು ಖುದ್ದು ಗ್ರಾಹಕರೇ ಪತ್ತೆ ಹಚ್ಚಿದ್ದಾರೆ. ಕಡಿಮೆ ತೂಕ ಹೊಂದಿದ್ದ ಅಡುಗೆ ಅನಿಲ ಸಿಲಿಂಡರ್ ಗಳೊಂದಿಗೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ. ಶಿರಾ ನಗರದ ಸಿಲಿಂಡರ್ ವಿತರಕರಿಂದ ಗ್ರಾಹಕರಿಗೆ …

Read More »

ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭ: ಕಲಾಪಕ್ಕೆ ಸಜ್ಜಾಗುತ್ತಿವೆ ವಿಪಕ್ಷಗಳು..!

ಬೆಂಗಳೂರು:  ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ …

Read More »

ದಾಖಲೆ ಪ್ರಮಾಣಕ್ಕೇರಿದ ಬಿಟ್‌ ಕಾಯಿನ್‌ ಮೌಲ್ಯ

ದಶಕಗಳ ಹಿಂದಷ್ಟೇ ಚಾಲ್ತಿಗೆ ಬಂದಿರುವ ಬಿಟ್‌ ಕಾಯಿನ್‌ (ಕ್ರಿಪ್ಟೋ ಕರೆನ್ಸಿ) ಮೌಲ್ಯ ಕೆಲವು ದಿನಗಳ ಹಿಂದೆ 38 ಲಕ್ಷ ರೂ. ದಾಟಿದೆ. ಈ ಬೆನ್ನಲ್ಲೇ ಬಿಟ್‌ ಕಾಯಿನ್‌ಗಳಿಗೆ ಬೇಡಿಕೆಯೂ ವಿಪರೀತವಾಗಿ ಹೆಚ್ಚಾಗಿದೆ. ಹೀಗಾಗಿ ಇಡೀ ಜಗತ್ತೇ ಈ ಬಿಟ್‌ ಕಾಯಿನ್‌ಗಳ ಹಿಂದೆ ಬಿದ್ದಿರುವಾಗ ಇವೂ ಸಾಮಾನ್ಯ ಹಣದಂತೆಯೇ ವ್ಯವಹಾರಗಳಲ್ಲಿ ಚಾಲ್ತಿಗೆ ಬರಲು ಹೆಚ್ಚು ಸಮಯವಿಲ್ಲ ಎಂಬುದು ಹೂಡಿಕೆದಾರರ ಲೆಕ್ಕಾಚಾರವಾಗಿದೆ. ಬಿಟ್‌ ಕಾಯಿನ್‌ಗಳಿಗೆ ಅದೃಷ್ಟ ಖುಲಾಯಿಸಿರುವ ಹಿನ್ನೆಲೆಯಲ್ಲಿ ಹೂಡಿಕೆದಾರರು ಇದರತ್ತ ಆಕರ್ಷಿತರಾಗಿದ್ದಾರೆ. …

Read More »

ಮಾ.4 ರಿಂದ ವಿಧಾನ ಪರಿಷತ್ ಅಧಿವೇಶನ: ಬಸವರಾಜ ಹೊರಟ್ಟಿ

ಬೆಂಗಳೂರು, : ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನವು ಮಾ.4 ರಿಂದ 31ರವರೆಗೆ ನಡೆಯಲಿದ್ದು, ಮಾ.8ರಂದು ಮುಖ್ಯಮಂತ್ರಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಜಾ ದಿನಗಳನ್ನು ಹೊರತುಪಡಿಸಿ ಒಟ್ಟಾರೆ 19 ದಿನಗಳು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಮಂಡಿಸುವ ಸಲುವಾಗಿ ಒಟ್ಟು 496 ಪ್ರಶ್ನೆಗಳು ಬಂದಿವೆ. 45 ಚುಕ್ಕೆ ಗುರುತಿನ ಪ್ರಶ್ನೆಗಳು, 265 …

Read More »

ಬಸವಕಲ್ಯಾಣ ಉಪ ಚುನಾವಣೆ: ಬಿಜೆಪಿ ಆಕಾಂಕ್ಷಿಗಳ ಪ್ರತ್ಯೇಕ ಚಟುವಟಿಕೆ ಬಂದ್?

ಬಸವಕಲ್ಯಾಣ: ಈ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪ್ರತ್ಯೇಕ ಚಟುವಟಿಕೆಗೆ ವರಿಷ್ಠರು ಕಡಿವಾಣ ಹಾಕಿದ್ದು ಏನೇ ಕಾರ್ಯಕ್ರಮ ಆಯೋಜಿಸಿದರೂ ಪಕ್ಷದ ಬ್ಯಾನರ್ ಅಡಿಯಲ್ಲಿ ಒಗ್ಗಟ್ಟಾಗಿಯೇ ಹಮ್ಮಿಕೊಳ್ಳಿ ಎಂದಿದ್ದರಿಂದ ಇನ್ನುಮುಂದೆ ಶಕ್ತಿ ಪ್ರದರ್ಶನಕ್ಕೆ ಯಾರಿಗೂ ಅವಕಾಶ ಇಲ್ಲದಂತಾಗಿದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಈ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ವಿ.ಸೋಮಣ್ಣ, ಪ್ರಭು ಚವಾಣ್ ಅವರು ಇನ್ನು ಮುಂದೆ ಕಾರ್ಯಕರ್ತರು …

Read More »

ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …

Read More »

ಬೆಳಗಾವಿ ಝೂದಲ್ಲಿ ಸಿಂಹ ,ಶೀಘ್ರವೇ ಮೃಗಾಲಯದಲ್ಲಿ ಹುಲಿ ಸಫಾರಿ : ಸತೀಶ್ ಜಾರಕಿಹೊಳಿ

ಬೆಳಗಾವಿ – : ರಾಣಿ ಚನ್ನಮ್ಮ ಕಿರು ಮೃಗಾಲಯ ಉತ್ತರ ಕರ್ನಾಟಕದ ಹೆಮ್ಮೆಯಾಗಿದೆ. ಅದರ ಅಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಯಮಕನಮರಡಿ ಶಾಸಕರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯಕ್ಕೆ ಮಂಗಳವಾರ (ಮಾ.೦೨) ಭೇಟಿ ನೀಡಿ ಮಾಧ್ಯಮಗೋಷ್ಠಿ ನಡೆಸಿದರು.   ಈಗಾಗಲೇ ಮೃಗಾಲಯಕ್ಕೆ 3 ಸಿಂಹಗಳು ಆಗಮಿಸಿವೆ. ಮುಂಬರುವ ದಿನಗಳಲ್ಲಿ ಹುಲಿ,ಚಿರತೆ, ಕರಡಿ ಮುಂತಾದ ಪ್ರಾಣಿಗಳನ್ನು ಕರೆತರುವ ಯೋಜನೆ ಇದ್ದು, ಅವುಗಳಿಗೆ …

Read More »