Breaking News
Home / 2021 / ಏಪ್ರಿಲ್ / 02 (page 3)

Daily Archives: ಏಪ್ರಿಲ್ 2, 2021

96 ದಿನ ಜೈಲಿಗೆ ಹೋಗಿ ಬಂದಿದ್ದರಂತೆ ವೈಲ್ಡ್​ ಕಾರ್ಡ್​ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ! ಕಾರಣ?

ಬಿಗ್​ ಬಾಸ್​ ಐದನೇ ವಾರದಲ್ಲಿ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪ್ರಶಾಂತ್​ ಸಂಬರಗಿ ಆಪ್ತ ಚಕ್ರವರ್ತಿ ಚಂದ್ರಚೂಡ ಅನ್ನೋದು ವಿಶೇಷ. ಬಂದ ದಿನವೇ ಮನೆಯಲ್ಲಿ ತುಂಬಾನೇ ವಿಚಿತ್ರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತುಂಬಾನೇ ಚರ್ಚೆಗೂ ಕಾರಣವಾಗಿದ್ದಾರೆ. ಪತ್ರಿಕೋದ್ಯಮದಿಂದ ತಮ್ಮ ವೃತ್ತಿ ಆರಂಭಿಸಿದ ಚಕ್ರವರ್ತಿ ಚಂದ್ರಚೂಡ ನಂತರ ಕಾಲಿಟ್ಟಿದ್ದು ಚಿತ್ರರಂಗಕ್ಕೆ. ಇವರು ಸಿನಿಮಾ ನಿರ್ದೇಶನಕ್ಕೆ ಇಳಿದರು. ಈಗ ನೇರವಾಗಿ ಬಿಗ್​ ಬಾಸ್​ ಮನೆಗೆ ಪ್ರವೇಶ ಪಡೆದುಕೊಂಡಿದ್ದಾರೆ. ಕವಿತೆ ಬರೆಯುವುದರ ಜತೆಗೆ ಸಾಮಾಜಿಕ …

Read More »

ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ತನ್ನ ನಟನೆಯಷ್ಟೇ, ತನ್ನ ಮಾದಕ ಮೈಮಾಟದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರತಿಭೆ. ಇತ್ತೀಚೆಗಷ್ಟೇ ಈ ನಟಿಯ ಸೈನಾ ಸಿನಿಮಾ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಕಂಡಿದೆ. ಈಗ ಪರಿಣಿತಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಖ್ಯಾತ ಫೋಟೊಗ್ರಾಪರ್ ಡಬ್ಬು ರತ್ನಾನಿ ಕೈಚಳಕದಲ್ಲಿ ಸೆರೆಯಾಗಿರುವ ಪರಿಣಿತಿಯ ಹೊಸ ಫೋಟೊ ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ. ಕಸದ ಗಾಡಿಯೊಂದಲ್ಲಿ …

Read More »

ಸೈಕಲ್‌ನಲ್ಲೇ ಕಚೇರಿಗೆ ಹೋಗಿ ಮಾದರಿಯಾದ ಎಸಿಪಿ ಸಂದೇಶ್‌ಕುಮಾರ್‌ ವರ್ಗ

ಮೈಸೂರು: 17 ತಿಂಗಳು ಮೈಸೂರಿನಲ್ಲಿ ಸೇವೆ ಸಲ್ಲಿಸಿ ಜನಸ್ನೇಹಿ ಪೊಲೀಸ್‌ ಎಂದೇ ಖ್ಯಾತರಾಗಿದ್ದ ಸಹಾಯಕ ಪೊಲೀಸ್‌ ಆಯುಕ್ತ (ಸಂಚಾರ) ಎಸ್‌.ಎನ್‌. ಸಂದೇಶ್‌ ಕುಮಾರ್‌ ಅವರು ವರ್ಗಾವಣೆಗೊಂಡಿದ್ದಾರೆ. ಸಂದೇಶ್‌ ಕುಮಾರ್‌ ಅವರು ಶ್ರೀರಂಗಪಟ್ಟಣದ ಉಪ ವಿಭಾಗ, ಮಂಡ್ಯ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಫಿಟ್‌ನೆಸ್‌ ಪ್ರಿಯರಾಗಿದ್ದ ಸಂದೇಶ್‌ ಕುಮಾರ್‌ ಅವರು ತಮ್ಮ ಕಚೇರಿಗೆ ಸೈಕಲ್‌ನಲ್ಲೇ ಹೋಗಿ ಬರುತ್ತಿದ್ದರು. ಪೆಟ್ರೋಲ್‌ ಬೆಲೆ ಏರಿಕೆಯಾಗಿರುವ ಸಮಯದಲ್ಲಿ ಸೈಕಲ್‌ ಬಳಸುವಂತೆ ಯುವ ಜನರಿಗೆ ಅವರು ಸಂದೇಶ ಕೊಟ್ಟರು. ಸಂದೇಶ್‌ …

Read More »

ಸತೀಶ ಜಾರಕಿಹೊಳಿ 3 ದಶಕಗಳ ಸಾಧನೆ ನೋಡಿ ಮತ ಹಾಕಿ : ಶಾಸಕಿ ಲಕ್ಷ್ಮಿ ಹೆಬ್ಟಾಳಕರ

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಟಾಳಕರ ಮತ್ತು ಅಭ್ಯರ್ಥಿ ಸತೀಶ ಜಾರಕಿಹೊಳಿ ಪ್ರಚಾರ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಟಾಳಕರ, ನಮ್ಮ ಅಭ್ಯರ್ಥಿ ಸತೀಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿ. ಕಳೆದ 30 ವರ್ಷಗಳಿಂದ ಹಲವಾರು ಅಭಿವೃದ್ಧಿ ಕಾರ್ಯಗಳು ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಸಮಾಜದ …

Read More »

ವಿವಿಧೆಡೆ ಯುವತಿ ಜತೆಗೆ ಸ್ಥಳ ಮಹಜರು

ಬೆಂಗಳೂರು: ಸಿ.ಡಿ. ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಯುವತಿಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದೆ. ಜತೆಗೆ ಒಂದೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ರಮೇಶ್‌ ಜಾರಕಿಹೊಳಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎಂದು ತಿಳಿದು ಬಂದಿದೆ. ಗುರುವಾರ ಬೆಳಗ್ಗೆ ತಮ್ಮ ಪರ ವಕೀಲರ ಜತೆ ಆಗಮಿಸಿದ ಸಂತ್ರಸ್ತೆಯನ್ನು ತನಿಖಾಧಿಕಾರಿ ಕವಿತಾ ನೇತೃತ್ವದ ತಂಡ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆರ್‌.ಟಿ.ನಗರದ ಗಂಗಾನಗರದಲ್ಲಿರುವ ಪಿ.ಜಿ.ಗೆ ಕರೆದೊಯ್ದು 11 ಗಂಟೆಯಿಂದ ಮಧ್ಯಾಹ್ನ …

Read More »

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ದುಷ್ಕರ್ಮಿಗಳು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ದಳವಾಯಿ ಕೋಡಿಹಳ್ಳಿ ಗ್ರಾಮದ ಮಧು(30) ಹತ್ಯೆಯಾದ ವ್ಯಕ್ತಿ. ಮಧು ನಿನ್ನೆ (ಬುಧವಾರ ಮಾ .31 ) ರಾತ್ರಿ ಗುಂಡಾಪುರದ ಕೊಂಡೋತ್ಸವ ಕಾರ್ಯಕ್ರಮಕ್ಕೆ ತೆರಳಲು ಗ್ರಾಮದ ತನ್ನ ಸ್ನೇಹಿತರ ಜತೆ ಮಾತನಾಡುತ್ತ ನಿಂತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿ, ಬಳಿಕ ಆತನ ಕತ್ತಲ್ಲಿದ್ದ …

Read More »

1ರಿಂದ 9 ತರಗತಿ : ಮೇ ತಿಂಗಳಲ್ಲಿ ಬೇಸಗೆ ರಜೆ ಸಾಧ್ಯತೆ

ಬೆಂಗಳೂರು: ರಾಜ್ಯದ 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೇ ತಿಂಗಳಲ್ಲಿ ಬೇಸಗೆ ರಜೆ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ. ಬಿಸಿಲಿನ ತಾಪಮಾನ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್‌ ಅಂತ್ಯದೊಳಗೆ 9ನೇ ತರಗತಿ ವರೆಗಿನ ಎಲ್ಲ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ, ಮೌಲ್ಯಮಾಪನ ಪ್ರಕ್ರಿಯೆ ನಡೆಸಿ ರಜೆ ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ವಿಳಂಬವಾಗಿ ಆರಂಭವಾಗಿದ್ದರಿಂದ ಬೇಸಗೆ ರಜೆ ಕಡಿತ ಮಾಡುವ ಬಗ್ಗೆ ಈ …

Read More »

ಅಂಬೇಡ್ಕರ್‌ ಜಯಂತಿ ಸಾಂಕೇತಿಕ ಆಚರಣೆಗೆ ಡಿ.ಸಿ ಸೂಚನೆ; ಪ್ರತಿಭಟನೆ

ಕಲಬುರ್ಗಿ: ಕೋವಿಡ್‌ ಹಾವಳಿ ಹೆಚ್ಚಿರುವ ಕಾರಣ ಅಂಬೇಡ್ಕರ್‌ ಜಯಂತಿಯನ್ನು ಸರಳವಾಗಿ ಆಚರಿಸಬೇಕು ಎಂಬ ಜಿಲ್ಲಾಧಿಕಾರಿ ಮನವಿಗೆ ವಿರೋಧ ವ್ಯಕ್ತಪಡಿಸಿದ ಕೆಲ ಸಂಘಟನೆಗಳವರು, ‘ಕೋವಿಡ್‌ ಬಂದು ಜೀವ ಹೋದರೂ ಚಿಂತೆಯಿಲ್ಲ. ಜಯಂತಿ ಆಚರಿಸದೇ ಬಿಡುವುದಿಲ್ಲ’ ಎಂದು ಪಟ್ಟು ಹಿಡಿದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಏ. 5ರಂದು ಡಾ.ಬಾಬು ಜಗಜೀವನರಾಂ ಜಯಂತಿ ಹಾಗೂ 14ರಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತ್ಯುತ್ಸವ ಸಂಬಂಧ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ಗುರುವಾರ ಇಲ್ಲಿ ವಿವಿಧ ಸಂಘಟನೆಗಳ ಸಭೆ …

Read More »