Breaking News
Home / 2021 / ಏಪ್ರಿಲ್ / 03 (page 2)

Daily Archives: ಏಪ್ರಿಲ್ 3, 2021

ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಒಬ್ಬರು ಶನಿವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರೆಸಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯ. ಹೆರಿಗೆ ಶಸ್ತ್ರಕ್ರಿಯೆಗೆ ಒಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲಕ …

Read More »

ಮಗಳ ಅತ್ಯಾಚಾರದ ಆರೋಪಕ್ಕೆ ಮನನೊಂದ ತಂದೆ ನೇಣಿಗೆ ಶರಣು

ಮಡಿಕೇರಿ: ಡೆತ್‌ನೋಟ್ ಬರೆದಿಟ್ಟು ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮರಗೋಡುನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಪುದಿಯೊಕ್ಕಡ ಭರತ್(55) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಪತ್ನಿ, ಮಗಳೇ ಕಾರಣವೆಂದು ಡೆತ್‌ನೋಟ್​ನಲ್ಲಿ ಭರತ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೊಂದು ಅಪರೂಪದ ಪ್ರಕರಣವಾಗಿದ್ದು ಈ ಹಿಂದೆ ಸ್ವಂತ ಅಪ್ಪನ ಮೇಲೆಗೆ ಮಗಳು ಅತ್ಯಾಚಾರದ ಆರೋಪ ಹೊರಿಸಿದ್ದಳು. ಹಾಗೂ ಹೆಂಡತಿ, ಮಗಳು ಸೇರಿಕೊಂಡು ಭರತ್​ನಿಗೆ ಚಿತ್ರ ಹಿಂಸೆ …

Read More »

ವೀಡಿಯೊ ಮಾಡಿದ್ದು ನಾನೇ: ಕಾರಣ ಬಿಚ್ಚಿಟ್ಟ ಸಿಡಿ ಯುವತಿ

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆಗಿನ ರಾಸಲೀಲೆಯ ವೀಡಿಯೊ ಮಾಡಿದ್ದು ನಾನೆ‌ ಆದರೆ ಬ್ಲಾಕ್ ಮೇಲ್ ಮಾಡುವ ಉದ್ದೇಶ ಇರಲಿಲ್ಲ ಎಂದು ಸಿಡಿ ಯುವತಿ ಒಪ್ಪಿಕೊಂಡಿದ್ದಾಳೆ. ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಬೆಂಗಳೂರಿನ ಎಸ್ ಐಟಿ ಮುಂದೆ ಶನಿವಾರ ಹಾಜರಾದ ಸಿಡಿ ಯುವತಿ ಘಟನೆಯನ್ನು ವಿವರಿಸಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಶನಿವಾರ  ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಯುವತಿಗೆ ನೊಟೀಸ್ ನೀಡಲಾಗಿತ್ತು. ಈ …

Read More »

60 ಸಾವಿರ ಬೆಲೆಯ ಎರಡು ಬೈಕ್ ವಶ

ಬೆಂಗಳೂರು, ಏ.3- ಕದ್ದ ಬೈಕ್‍ಗಳನ್ನು ಮಾರಾಟ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ 60 ಸಾವಿರ ಬೆಲೆಯ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿಲ್ಸನ್ ಗಾರ್ಡನ್ ನಿವಾಸಿ ಶೋಯಬ್ ಫಜಲ್ (19) ಬಂಧಿತ ಆರೋಪಿ. ನಿನ್ನೆ ಕಲಾಸಿಪಾಳ್ಯ ಠಾಣಾ ವ್ಯಾಪ್ತಿಯ ಎಎಂ ರಸ್ತೆಯಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದಾಗ ದ್ವಿಚಕ್ರ ವಾಹನವನ್ನು ಮಾರಾಟ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿ ದ್ದಾನೆಂಬ ಮಾಹಿತಿ ಮೇರೆಗೆ ಸ್ಥಳಕ್ಕೆ …

Read More »

ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು …

Read More »

ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅಬ್ಬರದ ಪ್ರಚಾರ

ಸವದತ್ತಿ ವಿಧಾನಸಭಾ ಮತಕ್ಷೇತ್ರದ ಮಬನೂರ, ಬೆನಕಟ್ಟಿ, ಮುನವಳ್ಳಿ ಗ್ರಾಮಗಳಲ್ಲಿ ಇಂದು ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕೈಗೊಂಡು, ಮತಯಾಚನೆ ಮಾಡಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು. ಇದೇ ವೇಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. “ರಾಜ್ಯ ಹಾಗೂ ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಜನರು ಒಂದಾಗಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿ, ಜನವಿರೋಧಿ ಸರ್ಕಾರಗಳಿಗೆ ತಕ್ಕ ಉತ್ತರ ನೀಡಬೇಕು” ಎಂದು ಮನವಿ …

Read More »

Zoom App ಅಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಿದ ಶ್ರೀ ಅಶೋಕ ಚಂದರಗಿ ಅವರು

ಬೆಳಗಾವಿಯ ನಡೆದಾಡುವ ಲೈಬ್ರರಿ ಎಂದೇ ಪ್ರಸಿದ್ಧರಾಗಿರುವ ಶ್ರೀ ಅಶೋಕ ಚಂದರಗಿ ಅವರಿಗೆ ಕನ್ನಡಪರ ಹೋರಾಟಗಳ ಬಗ್ಗೆ ಅಪಾರ ಜ್ಞಾನವಿದ್ದು, ಅದನ್ನಾ ಇಂದಿನ ಯುವಪೀಳಿಗೆಗೆ ಮುಟ್ಟಿಸುವ ಕೆಲಸ ನಾವು ಮಾಡುತ್ತಿದ್ದೇವೆ. ಇಂದಿನ ಯುವಕರು ಕನ್ನಡಪರ ಕೆಲಸಗಳಲ್ಲಿ ಅಪಾರ ಆಸಕ್ತಿ ತೋರತ್ತಿದ್ದು, ಇದರಲ್ಲಿ ಅನೇಕರಿಗೆ ಇತಿಹಾಸದ ಬಗ್ಗೆ ಕೊಂಚ ಮಾಹಿತಿ ಕಡಿಮೆಯಿದೆ. ನಾವು ಇತಿಹಾಸ ತಿಳಿದುಕೊಳ್ಳದೇ ಇತಿಹಾಸವನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ಹೀಗಾಗಿ ನಾಳೆ ನಾವು Zoom App ಅಲ್ಲಿ ಒಂದು ಸಂವಾದ …

Read More »

ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ ಯುವತಿಯ ಪೋಷಕರು

ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಮತ್ತೊಮ್ಮೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸುತ್ತಾರಾ ಅನ್ನೋ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ. ಇತ್ತ ಯುವತಿಯ ಪೋಷಕರು ಮತ್ತೊಮ್ಮೆ ಮಗಳ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಯುವತಿ ಹೇಳಿಕೆ ದಾಖಲಿಸುವಾಗ ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಜೊತೆಯಲ್ಲಿದ್ರು ಎಂದು ಸಂತ್ರಸ್ತೆಯ ಪೋಷಕರು ಆರೋಪಿಸಿದ್ದಾರೆ. ಆರೋಪದ ಬೆನ್ನಲ್ಲೇ 164 ಸ್ಟೇಟ್ ಮೆಂಟ್ ಮಾಡುವಾಗ ನ್ಯಾಯಾಧೀಶರು, ಸಂತ್ರಸ್ತೆ ಮತ್ತು …

Read More »

ಹಳ್ಳಿಯಲ್ಲಿ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಹೊಡೆಸಿದ ಶಿಕ್ಷಕರು

ಚಿಕ್ಕಮಗಳೂರು: ಸರ್ಕಾರಿ ಶಾಲೆ ಇಂದೋ, ನಾಳೆಯೋ ಎನ್ನುತ್ತಿದೆ ಹೀಗೆ ಬಿಟ್ಟರೆ ಆಗುವುದಿಲ್ಲ ಎಂದು ಹಳ್ಳಿಗರ ಸಹಕಾರದಲ್ಲಿ ಶಿಕ್ಷಕರು ಗ್ರಾಮಸ್ಥರ ನೆರವಿನಿಂದ ಪ್ರತಿ ಮನೆಯಿಂದ ಚಂದಾ ಎತ್ತಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಿದ್ದಾರೆ. ತಾಲೂಕಿನ ಗಡಿಗ್ರಾಮ ಸಿರಿಬಡಿಗೆ ಶಾಲೆಯೇ ಶಿಕ್ಷಕರಿಂದ ಮರುಜನ್ಮ ಪಡೆದ ಶಾಲೆ. 1 ರಿಂದ 7ನೇ ತರಗತಿವರೆಗಿನ ಈ ಶಾಲೆಯಲ್ಲಿ ಪ್ರಸ್ತುತ 48 ಮಕ್ಕಳಿದ್ದಾರೆ. ಕೊರೊನಾ ಬಳಿಕ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಸುಮಾರು 20 ಮಕ್ಕಳು ಈಗ …

Read More »

LSD ಡ್ರಗ್ಸ್ ಡೀಲ್ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಸಿಸಿಬಿ ಬಲೆಗೆ

ಬೆಂಗಳೂರು, ಏಪ್ರಿಲ್ 03: ವಿದೇಶದಿಂದ ಡ್ರಗ್ ತರಿಸಿ ಡೀಲಿಂಗ್ ಮಾಡುತ್ತಿದ್ದ ಇಬ್ಬರು ಡ್ರಗ್ ಡೀಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮತ್ತು ಜಯನಗರ ಸುತ್ತಮುತ್ತ ಡ್ರಗ್ ವಹಿವಾಟು ನಡೆಸುತ್ತಿದ್ದ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು, ಹತ್ತು ಲಕ್ಷ ರೂ. ಮೌಲ್ಯದ ಎಕ್ಸ್ ಟಸಿ ಪಿಲ್ಸ್ ಮತ್ತು ಎಲ್‌ಎಸ್ ಡಿ ಸ್ಟ್ರಿಪ್ಸ್ ವಶಪಡಿಸಿಕೊಂಡಿದ್ದಾರೆ. ಜಯನಗರದ ನಿವಾಸಿ ಜೇಡನ್ ಸೌದ್ ಮತ್ತು ಬನಶಂಕರಿ ನಿವಾಸಿ ನಾಗರಾಜ್ ರಾವ್ ಬಂಧಿತ ಅರೋಪಿಗಳು. …

Read More »