Breaking News

Daily Archives: ಏಪ್ರಿಲ್ 6, 2021

ಗೋಕಾಕ ಆಸ್ಪತ್ರೆ ಬಳಿ ಗಲಾಟೆ: ನ್ಯಾಯವಾದಿ ಗಿಡ್ಡನವರ ಸೇರಿ ಮೂವರ ಬಂಧನ, ಹಿಂಡಲಗಾ ಜೈಲಿಗೆ ರವಾನೆ

ಗೋಕಾಕ ತಾಲೂಕು ಆಸ್ಪತ್ರೆ ಬಳಿ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ವಕೀಲರ ನಡುವೆ ನಿನ್ನೆ ನಡೆದ ಘರ್ಷಣೆಗೆ ಸಂಬಂಧಿಸಿ ಜಾರಕಿಹೊಳಿ ಪರವಾಗಿ ನೀಡಿದ ದೂರನ್ನು ಪೊಲೀಸರು ದಾಖಲಿಸಿಕೊಂಡು ನ್ಯಾಯವಾದಿ ಚೆನ್ನಬಸು ಗಿಡ್ನವರ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ. ಗೋಕಾಕ ತಾಲೂಕು ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯುನಲ್ಲಿ ದಾಖಲಾಗಿದ್ದಾರೆ ಎನ್ನಲಾದ ರಮೇಶ ಜಾರಕಿಹೊಳಿ ಅವರನ್ನು ಕಾಣಲು ನ್ಯಾಯವಾದಿ ಚೆನ್ನಬಸವ ಚಂದನ ಗಿಡ್ಡನವರ ಮತ್ತು …

Read More »

ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ

ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು.   ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ,   ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …

Read More »

ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು

ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …

Read More »

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ – ಮಾಜಿ ಸಂಸದ ವಿಎಸ್ ಉಗ್ರಪ್ಪ ವಾಗ್ದಾಳಿ

ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಕ್ರಮ ನಡೆದ್ರೂ ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ. ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, …

Read More »

ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್‌ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.

Read More »

ಮುಷ್ಕರಕ್ಕೆ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ; ಹುಬ್ಬಳ್ಳಿಯಲ್ಲಿ ಸಾರಿಗೆ ನೌಕರರ ಎಚ್ಚರಿಕೆ

ಹುಬ್ಬಳ್ಳಿ(ಏ.06):  ನಾಳೆಯಿಂದ ಮುಷ್ಕರ ಮಾಡಿಯೇ ತೀರುತ್ತೇವೆ. ಅದಕ್ಕೂ ಬಗ್ಗದಿದ್ದಲ್ಲಿ ಕುಟುಂಬ ಸಮೇತ ಜೈಲ್ ಭರೋ ಚಳುವಳಿ ನಡೆಸೋದಾಗಿ ಕರ್ನಾಟಕ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಷ್ಕರದ ನಿರ್ಧಾರ ಅಚಲ. 6 ನೇ ವೇತನ ಆಯೋಗದ ಶಿಫಾರಸ್ಸು ಜಾರಿ ಮಾಡಲೇ ಬೇಕು. ವೇತನ ಆಯೋಗದ ಶಿಫಾರಸ್ಸು ಜಾರಿ ವಿಚಾರದಲ್ಲಿ ಸರ್ಕಾರದಿಂದ ಮೊಂಡುತನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಹಿಂದೆ ಮುಷ್ಕರ ನಡೆಸಿದಾಗ ಒಂಬತ್ತು …

Read More »

ಮಾತು ಬಾರದ ಮಹಿಳೆಯ ಮೇಲೆ ಅತ್ಯಾಚಾರ

ಮಂಡ್ಯ: ಮಾತು ಬಾರದ ಮಹಿಳೆಯ ಮೇಲೆ ಮೂವರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಜುರುಗಿದೆ. ಹೊನಗನಹಳ್ಳಿ ಗ್ರಾಮದ ಮಾತು ಬಾರದ 48 ವರ್ಷದ ಮಹಿಳೆಯ ಮೇಲೆ ಅದೇ ಗ್ರಾಮದ ಮೂವರು ಯುವಕರು ಅತ್ಯಾಚಾರವೆಸಗಿದ್ದಾರೆ. ಏಪ್ರಿಲ್ 1 ರಂದು ಈ ಮಹಿಳೆ ತನ್ನ ಹೊಲದಲ್ಲಿ ಹಸು ಮೇಯಿಸಲು ಹೋಗಿದ್ದಾರೆ. ಸಂಜೆ ನಾಲ್ಕು ಗಂಟೆಯ ವೇಳೆಯಲ್ಲಿ ಮಹಿಳೆ ಇದ್ದ ಹೊಲಕ್ಕೆ ಹೊನಗನಹಳ್ಳಿ ಗ್ರಾಮದ …

Read More »

ಸತೀಶಣ್ಣ ಜಾರಕಿಹೊಳಿಯವರಿಗೆ ಸಂಪೂರ್ಣ ಬೆಂಬಲ:ಜಾತ್ಯತೀತ ಜನತಾದಳಪಕ್ಷ

  ಬೆಳಗಾವಿ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಬೆಳಗಾವಿ ಪಾರ್ಲಿಮೆಂಟ್ ಚುನಾವಣೆಯ ಮರುಚುನಾವಣೆಯ ಆಗುತ್ತಿದೆ ಜಾತ್ಯತೀತ ಜನತಾದಳದ ಪಕ್ಷ ಎಲ್ಲಾ ಪದಾಧಿಕಾರಿಗಳು ಸಮಾವೇಶದಿಂದ ಪಕ್ಷ ಬಿಟ್ಟು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಸಯ್ಯದ್ ಮನಸೂರ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯ ಅಧ್ಯಕ್ಷರು 20ವರ್ಷ ಸೇವೆ ಸಲ್ಲಿಸಿದರು . ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಭದ್ರವಾಗಿ ಕಟ್ಟಬೇಕಾದರೆ ಜಿಲ್ಲಾ ಅಧ್ಯಕ್ಷರನ್ನು ಬದಲು ಮಾಡಿ ಎಂದು ಮನವಿ ಮಾಡಿದರು. ಜೆಡಿಎಸ್ …

Read More »

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪ್ರಚಾರ ಫಿರೋಜ್ ಹಾಗೂ ರಾಜು ಸೆಟ ಸಾಥ್

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ” ಇಲ್ಲಿನ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಸೋಮವಾರ ವಿವಿಧ ಬಡಾವಣೆಗಳಲ್ಲಿ ಮತಯಾಚನೆ ನಡೆಸಲಾಯಿತು. ಬೆಲೆ ಏರಿಕೆಯಿಂದ ಕೆಳವರ್ಗದ ಜನತೆಗೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಕ್ಷೇತ್ರದ ಜನತೆ ಸುಗಮವಾಗಿ ಜೀವನ ಸಾಗಿಸಬೇಕೆಂದರೆ, ದಿನಸಿ ಬೆಲೆ ಕಡಿಮೆಯಾಗಬೇಕಿದೆ ಇದರ ವಿರುದ್ಧ ಧ್ವನಿ ಎತ್ತುವ ಕಾಲಾವಕಾಶ ಕೂಡಿ ಬಂದಿದೆ ಕ್ಷೇತ್ರದ ಮತಪ್ರಭುಗಳು ಕೈ ಜೋಡಿಸಿ ಎಂದು ಮನವಿ ಮಾಡಿಕೊಳ್ಳಲಾಯಿತು.

Read More »

ರಾಮದುರ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಅವರ ಅಬ್ಬರದ ಪ್ರಚಾರ

ರಾಮದುರ್ಗ ವಿಧಾನಸಭಾ ಮತಕ್ಷೇತ್ರದ ಗೊಡಚಿ, ಕಡಕೋಳ, ಉಜ್ಜಿನಕೊಪ್ಪ, ಚುಂಚನೂರ, ತೋರನಗಟ್ಟಿ, ಹಲಗತ್ತಿ, ಇಡಗಲ್, ಮುದಕವಿ, ಮುದೇನೂರ ಗ್ರಾಮಗಳಲ್ಲಿ ಮಂಗಳವಾರ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮತಯಾಚಿಸಲಾಯಿತು. ಇದೇ ಸಂದರ್ಭದಲ್ಲಿ ಗೊಡಚಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಾಯಿತು. ಮಾಜಿ ಸಚಿವರಾದ ಎಂ.ಬಿ. ಪಾಟೀಲ, ಪ್ರಕಾಶ ಹುಕ್ಕೇರಿ, ಮಾಜಿ ಶಾಸಕ ಅಶೋಕ ಪಟ್ಟಣ, ವೀಣಾ ಕಾಶಪ್ಪನವರ ಸೇರಿ ಇನ್ನಿತರರು ಇದ್ದರು. “ಕಾಂಗ್ರೆಸ್ ಸದಾ ಬಡವರ ಪರವಾಗಿರುವ ಪಕ್ಷವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸ್ …

Read More »