Home / 2021 / ಏಪ್ರಿಲ್ / 06 (page 4)

Daily Archives: ಏಪ್ರಿಲ್ 6, 2021

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ‘ಸೇವೆ ಖಾಯಂ

ಕುಷ್ಟಗಿ : ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವಂತ ನೌಕರರ ಸೇವೆಯನ್ನು ಹೊಸ ಹುದ್ದೆಗಳನ್ನು ಸೃಷ್ಠಿಸುವ ಮೂಲಕ ಖಾಯಂಗೊಳಿಸಲಾಗುವುದು ಎಂಬುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಈ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ …

Read More »

ಮಮತಾ ಬ್ಯಾನರ್ಜಿ ಮತ್ತೊಮ್ಮೆ ಸಿಎಂ ಆಗ್ತಾರೆ – ದೀದಿ ಬೆಂಬಲಕ್ಕೆ ನಿಂತ ಜಯಾ ಬಚ್ಚನ್

ಕೋಲ್ಕತ್ತಾ: ಟಿಎಂಸಿ ಮುಖ್ಯಸ್ಥೆ, ಸಿಎಂ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಮುಖ್ಯಮಂತ್ರಿ ಆಗ್ತಾರೆ ಎಂದು ನಟಿ, ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ. ಸಮಾಜವಾದಿ ಪಕ್ಷದ ನಾಯಕಿಯಾಗಿರುವ ಜಯಾ ಬಚ್ಚನ್ ಇವತ್ತು ಟಿಎಂಸಿ ಅಭ್ಯರ್ಥಿಗಳ ಪರವಾಗಿ ನಡೆದ ರೋಡ್ ಶೋನಲ್ಲಿ ಭಾಗಿಯಾಗಿ ಮತ ಯಾಚನೆ ಮಾಡಿದರು. ಟಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿಯಿಂದ ಅರುಣ್ ವಿಶ್ವಾಸ್ ಕಣಕ್ಕಿಳಿಸಿದ್ದಾರೆ. ಬಿಜೆಪಿ ಪರವಾಗಿ ಕೇಂದ್ರ …

Read More »

ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ; ಸಚಿವ ಈಶ್ವರಪ್ಪ ತಿರುಗೇಟು

ಶಿವಮೊಗ್ಗ, ಏಪ್ರಿಲ್ 6: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ಕದಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು. ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. “”ಮೈಸೂರು ಮೇಯರ್, ಉಪ …

Read More »

ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ಗಳ ಸಿಆರ್‌ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …

Read More »

ಚುನಾವಣಾ ಆಯೋಗ ಅನುಮತಿ ನೀಡಿದರೆ ಸಾರಿಗೆ ನೌಕರರ ಸಂಬಳ ಜಾಸ್ತಿ : ಸವದಿ

ಬೆಂಗಳೂರು : ಸಾರಿಗೆ ನೌಕರರು ದಿಢೀರ್ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು. ಒಕ್ಕೂಟದ ನೌಕರರು ಮತ್ತು ಟ್ರೇಡ್ ಯುನಿಯನ್ ಅವರು 9 ಬೇಡಿಕೆ ಮುಂದಿಟ್ಟರು. ನಾವು ಅವರ ಬೇಡಿಕೆಗಳ ಭರವಸೆ ಪತ್ರವನ್ನು ಲಿಖಿತ ರೂಪದಲ್ಲಿ ನೀಡಿ, ಎಂಟು ಬೇಡಿಕೆ ಈಡೆರಿಸಿ ಆದೇಶ ಹೊರಡಿಸಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಆರೋಗ್ಯ ಭಾಗ್ಯ ಸಂವೀಜಿವಿನಿ ಯೋಜನೆ, ಕೊರೊನಾ ಸೋಂಕಿನಿಂದ ನಿಧನ ಹೊಂದಿದರೆ …

Read More »

ಮಹಾರಾಷ್ಟ್ರದ ನೂತನ ಗೃಹ ಸಚಿವರಾಗಿ ಆಯ್ಕೆಯಾದ ದಿಲೀಪ್ ವಾಲ್ಸೆ ಪಾಟೀಲ್

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ರಾಜೀನಾಮೆಯನ್ನು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ರವಾನಿಸಿದರು ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಈಗ ರಾಜ್ಯ ಗೃಹ ಇಲಾಖೆಯ ಉಸ್ತುವಾರಿ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ದಿಲೀಪ್ ವಾಲ್ಸೆ ಪಾಟೀಲ್ ಪ್ರಸ್ತುತ ಮಹಾರಾಷ್ಟ್ರ ಕಾರ್ಮಿಕ ಮತ್ತು ಅಬಕಾರಿ ಸಚಿವರಾಗಿದ್ದಾರೆ. ಈಗಾಗಲೇ …

Read More »

ತಮಿಳುನಾಡು, ಕೇರಳ, ಅಸ್ಸಾಂ, ಪ. ಬಂಗಾಳ, ಪುದುಚೇರಿ ವಿಧಾನಸಭೆಯ 475 ಕ್ಷೇತ್ರಗಳಿಗೆ ಇಂದು ಮತದಾನ

ನವದೆಹಲಿ : ಏಪ್ರಿಲ್ 6, ಮಂಗಳವಾರ, ಪ್ರಸ್ತುತ ಚುನಾವಣಾ ಕ್ಯಾಲೆಂಡರ್ ನಲ್ಲಿ ಅತ್ಯಂತ ನಿರ್ಣಾಯಕ ಚುನಾವಣಾ ದಿನವಾಗಿದೆ. ತಮಿಳುನಾಡು ವಿಧಾನಸಭೆಯ 234 ಸ್ಥಾನಗಳು, ಕೇರಳ ವಿಧಾನಸಭೆಯ 140 ಸ್ಥಾನಗಳು, ಅಸ್ಸಾಂನ 40 ಕ್ಷೇತ್ರಗಳು, ಪಶ್ಚಿಮ ಬಂಗಾಳ ವಿಧಾನಸಭೆಯ 31 ಸ್ಥಾನಗಳು ಮತ್ತು ಪುದುಚೇರಿ ವಿಧಾನಸಭೆಯ ಎಲ್ಲಾ 30 ಸ್ಥಾನಗಳಿಗೆ ಇಂದು ಸ್ಪರ್ಧೆ ನಡೆಯಲಿದೆ. ವಿಧಾನಸಭಾ ಚುನಾವಣೆಗಳನ್ನು ಹೊರತುಪಡಿಸಿ, ಮಲಪ್ಪುರಂ ಮತ್ತು ಕನ್ಯಾಕುಮಾರಿ ಎಂಬ ಎರಡು ಲೋಕಸಭಾ ಸ್ಥಾನಗಳು ಸಹ ಒಂದೇ …

Read More »

5 ಸಾವಿರದ ಗಡಿ ದಾಟಿದ ಕೊರೊನಾ – ಬೆಂಗಳೂರಿನಲ್ಲಿ 3,728 ಜನಕ್ಕೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಒಂದೇ ದಿನ 5,278 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ರಾಜಧಾನಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, 3,728 ಜನಕ್ಕೆ ಸೋಂಕು ದೃಢವಾಗಿದೆ.ಇಂದು ಕೊರೊನಾಗೆ 32 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ. 42,483 ಸಕ್ರಿಯ ಪ್ರಕರಣಗಳ ಪೈಕಿ, 345 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ 10,20,434ಕ್ಕೇರಿಕೆಯಾಗಿದೆ.ಇಂದು 1,856 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಕೋವಿಡ್-19 ಖಚಿತ ಪ್ರಮಾಣ …

Read More »

ಎಪಿಎಂಸಿಗೆ ಭೂಮಿ ಕೊಟ್ಟ ರೈತನಿಗಿಲ್ಲ ಪರಿಹಾರ- ಕೋರ್ಟ್ ಆದೇಶ ಮೇರೆಗೆ ಎಪಿಎಂಸಿ ಕಚೇರಿ ಜಪ್ತಿ

ಗದಗ: ಅಡಿಕೆಗೆ ಹೋದ ಮಾನ ಆನೆ ಕೋಟ್ರು ಬಾರದು ಅಂತಾರೆ. ಅದರಂತಾಗಿದೆ ಗದಗ ಎಪಿಎಂಸಿ ಕಚೇರಿ ಕಥೆ. ಗದಗ ನಗರದ ಎಪಿಎಂಸಿ ಕಚೇರಿಯನ್ನ ಇಂದು ಜಪ್ತಿ ಮಾಡಲಾಗಿದೆ. ಕಾರಣ ಆರ್.ಆರ್.ಹೇಮಂತನವರ ಎಂಬವರು 4 ಎಕರೆ 35 ಗುಂಟೆ ಜಾಗೆಯನ್ನು 40 ವರ್ಷಗಳ ಹಿಂದೆ ಎಪಿಎಂಸಿಗಾಗಿ ಸ್ವಾದೀನಪಡಿಸಿಕೊಂಡಿತ್ತು. ಆಗ ಸುಮಾರು 76 ಲಕ್ಷ ರೂಪಾಯಿ ಪರಿಹಾರ ಹಣ ಬಿಡುಗಡೆ ಮಾಡಿದ ಎಪಿಎಂಸಿ, ಇನ್ನುಳಿದ 16.50 ಲಕ್ಷ ರೂಪಾಯಿ ಪಾವತಿಸಲು ವಿಳಂಬ ಮಾಡಿದೆ. …

Read More »

BMTC, KSRTC ಸಿಬ್ಬಂದಿ ಮುಷ್ಕರ – ಇಂದು ರಾತ್ರಿಯಿಂದಲೇ ಬಸ್ ಸಿಗೋದು ಡೌಟ್

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‍ಗಳ ಓಡಾಟ ಅನಿರ್ದಿಷ್ಟಾವಧಿಗೆ ಸ್ತಬ್ಧವಾಗಿರಲಿದೆ. ಇಂದು ರಾತ್ರಿಯಿಂದಲೇ ಮುಷ್ಕರ ಆರಂಭ ಆಗುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ತಬ್ಧ ಆಗುವ ಸಾಧ್ಯತೆಯೇ ಹೆಚ್ಚು. ಡಿಸೆಂಬರ್‍ನಲ್ಲಿ ಮುಷ್ಕರ ಕೈಗೊಂಡಿದ್ದ ವೇಳೆ ನೀಡಿದ್ದ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ತಿರುಗಿಬಿದ್ದಿದ್ದು, ನಾಳೆಯಿಂದ ರಾಜ್ಯಾದ್ಯಂತ ಮುಷ್ಕರ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬಸ್ ಸಿಗದೇ ಜನಸಾಮಾನ್ಯರು ಪರದಾಡಬೇಕಾಗುವುದು ನಿಶ್ಚಿತ. ಕೆಲವು ಬೇಡಿಕೆಗಳ …

Read More »