Breaking News
Home / 2021 / ಏಪ್ರಿಲ್ / 09 (page 2)

Daily Archives: ಏಪ್ರಿಲ್ 9, 2021

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಖರ್ಚು ಮಾಡಿದ ಹಣದ ಲೆಕ್ಕ ಸರ್ಕಾರ ಹೇಳಲಿ -ಸಿದ್ದರಾಮಯ್ಯ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯವೈಖರಿ ಕುರಿತು ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿದ ಬಿಜೆಪಿ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೆ ಈ ವರೆಗೆ ನಯಾಪೈಸೆ ಖರ್ಚು ಮಾಡಿಲ್ಲ ಎಂದು ಆಕ್ರೋಶಗೊಂಡಿದ್ದಾರೆ ಈ ವಿಚಾರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ. ಹಣ ಖರ್ಚು ಮಾಡಿದ್ದರೆ ಲೆಕ್ಕ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ‌ …

Read More »

ಸಚಿವಾಲಯದ ಅಧಿಕಾರಿ, ನೌಕರ’ರಿಗೆ ಬಹುಮುಖ್ಯ ಮಾಹಿತಿ : ಏ.12ರಂದು ’45 ವರ್ಷ’ ಮೇಲ್ಪಟ್ಟವರಿಗೆ ‘ಬ್ಯಾಂಕ್ವೆಟ್ ಹಾಲ್’ನಲ್ಲಿ’ಕೊರೋನಾ ಲಸಿಕೆ’

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.   ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) …

Read More »

ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ‘ಉಚ್ಛಾಟನೆ’ : ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್

ಬೆಳಗಾವಿ : ಬಿಜೆಪಿಯಲ್ಲಿ ಇದ್ದುಕೊಂಡು ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಬಸನಗೌಡ ಯತ್ನಾಳ್‌ ಅವರು ತಮ್ಮದೇ ಪಕ್ಷದ ನಾಯಕರ ವಿರುದ್ದ ಕಿಡಿಕಾರುತ್ತಿರುವುದು ಈಗ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿದ್ದು, ಬಹಿರಂಗವಾಗಿಯೇ ಯತ್ನಾಳು ಅವರು ಸಿಎಂ ಸೇರಿದಂತೆ ನಾನಾ ಮಂದಿಯ ವಿರುದ್ದ ಕಿಡಿಕಾರುತ್ತಿದ್ದಾರೆ. ಈ ನಡುವೆ ಶಾಸಕ ಯತ್ನಾಳ್‌ ಶೀಘ್ರದಲ್ಲಿ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗುವುದು ಅಂತ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ನಾಳೆಯಿಂದ ಕೊರೊನಾ ಕಫ್ರ್ಯೂ : ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಕಂಪ್ಲಿಟ್ ಡಿಟೇಲ್ಸ್..!

ಬೆಂಗಳೂರು,ಏ.9- ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕೊರೊನಾ ಕಫ್ರ್ಯೂ ನಾಳೆ ರಾತ್ರಿಯಿಂದ ಜಾರಿಯಾಗಲಿದ್ದು, ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ , ಪಬ್, ಸಿನಿಮಾ ಮಂದಿರ ಬಂದ್ ಆಗಲಿವೆ. ನಾಳೆ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ರಾಜಧಾನಿ ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಕಲಬುರಗಿ, ತುಮಕೂರು, ಕಲಬುರಗಿ ಜಿಲ್ಲೆಗಳಲ್ಲಿ ನಗರಕ್ಕೆ ಮಾತ್ರ ಸೀಮಿತವಾಗುತವಂತೆ ಕಫ್ರ್ಯೂ ಜಾರಿಯಾಗಲಿದೆ. ಒಟ್ಟು 10 ದಿನಗಳ ಕಾಲ …

Read More »

ಅಮೆರಿಕಾದಲ್ಲಿ ಭಾರತೀಯ ದಂಪತಿ ಅನುಮಾನಾಸ್ಪದ ಸಾವು

ಮುಂಬೈ,ಏ.9-ಅಮೆರಿಕಾದಲ್ಲಿ ಭಾರತೀಯ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ದಂಪತಿಯ ನಾಲ್ಕು ವರ್ಷದ ಮಗಳು ಬಾಲ್ಕನಿಯಲ್ಲಿ ನಿಂತು ಆಳುತ್ತಿದ್ದದನ್ನು ಕಂಡ ಅಕ್ಕಪಕ್ಕದ ನಿವಾಸಿಗಳು ಮನೆಗೆ ಬಂದು ನೋಡಿದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಮೂಲಗಳು ತಿಳಿಸಿವೆ. ಬಾಲಾಜಿ ಭರತ್ ರುದ್ರಾವರ್(32) ಹಾಗೂ ಆತನ ಪತ್ನಿ ಆರತಿ ಬಾಲಾಜಿ ರುದ್ರಾವರ್(30) ಅಮೆರಿಕಾದಲ್ಲಿ ಮೃತಪಟ್ಟಿರುವ ಭಾರತೀಯ ಮೂಲದ ದಂಪತಿ ನ್ಯೂಜೆರ್ಸಿಯಲ್ಲಿರುವ ನಿವಾಸದಲ್ಲಿ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಮಗು ಬಾಲ್ಕನಿಯಲ್ಲಿ ನಿಂತು ಆಳುತ್ತಿರುವುದನ್ನು …

Read More »

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ʼಕೊರೊನಾʼ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅರ್ಜುನ್ ಜನ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅರ್ಜುನ್, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ನನಗೆ ಹೇಗೆ ಕೊರೊನಾ ವೈರಸ್ ತಗುಲಿತು ಎಂಬುದು …

Read More »

ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …

Read More »

ಸತೀಶ್ ಜಾರಕಿಹೊಳಿಯವರಿಗೆ ಡಿಎಸ್ಎಸ್ ಬೆಂಬಲ..!

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಶೋಷಿತ ಸಮಾಜಗಳು ಮತ್ತು ಕಡುಬಡವರ ವಿರೋಧಿಯಾಗಿದ್ದು, ಅದನ್ನು ಕಿತ್ತೊಗೆಯಲು ನಾವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಮುತ್ಸದ್ದಿ ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಲಿದ್ದೇವೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕರಾದ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು. ಶುಕ್ರವಾರ ದಂದು ಬೆಳಗಾವಿಯ ಕಮ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ರೈತರು ಕಾರ್ಮಿಕರು …

Read More »

ಕೊರೊನಾ ಲಸಿಕೆ ಪಡೆದ ನಂತರ ನಟಿ ನಗ್ಮಾಗೆ ಪಾಸಿಟಿವ್

ನಟಿ-ರಾಜಕಾರಣಿ ನಗ್ಮಾ ಅವರಿಗೆ ಕೊರೊನಾ ವೈರಸ್ ತಗುಲಿದೆ ಎಂದು ವಿಚಾರ ಹೊರಬಿದ್ದಿದೆ. ಇತ್ತೀಚಿಗಷ್ಟೆ ನಗ್ಮಾ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಮೊದಲ ಲಸಿಕೆ ಪಡೆದ ನಂತರ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ನಗ್ಮಾ ”ಕೊರೊನಾ ಮೊದಲ ಲಸಿಕೆ ಪಡೆದ ಬಳಿಕವೂ ನನಗೆ ಕೋವಿಡ್ ಸೋಂಕು ತಗುಲಿದೆ. ಲಸಿಕೆ ಪಡೆದ ನಂತರವೂ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಸದ್ಯ ನಾನು ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ನೀವು ಸುರಕ್ಷತೆಯಿಂದಿರಿ” ಎಂದು ತಿಳಿಸಿದ್ದಾರೆ. …

Read More »

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ

ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …

Read More »