Breaking News
Home / 2021 / ಏಪ್ರಿಲ್ / 09 (page 3)

Daily Archives: ಏಪ್ರಿಲ್ 9, 2021

ಪಾರ್ಶ್ವವಾಯುಗೆ ತುತ್ತಾಗಿದ್ದ ವಿದ್ಯಾರ್ಥಿನಿಗೆ ಚಿನ್ನದ ಪದಕ

ದಾವಣಗೆರೆ: ಬ್ರೈನ್‌ ಸ್ಟ್ರೋಕ್‌ (ಮೆದುಳಿನ ಪಾರ್ಶ್ವವಾಯು) ಆಗಿದ್ದ ವಿದ್ಯಾರ್ಥಿನಿ ಹಾಸಿಗೆಯಲ್ಲಿ ಮಲಗಿದ್ದರೂ ಛಲ ಬಿಡದೇ ಓದಿ ಸ್ನಾತಕೋತ್ತರ ಪದವಿಯಲ್ಲಿ (ಇಂಗ್ಲಿಷ್‌) ಚಿನ್ನದ ಪದಕ ಪಡೆದಿದ್ದಾರೆ. ದಾವಣಗೆರೆ ವಿದ್ಯಾನಗರದ ನಿಸರ್ಗ ಕೆ.ಪಿ. ಈ ಸಾಧಕ ವಿದ್ಯಾರ್ಥಿನಿ. ಸಿವಿಲ್‌ ಕಂಟ್ರಾಕ್ಟರ್‌ ಪಂಚಾಕ್ಷರಿ-ಬಸಮ್ಮ ದಂಪತಿಯ ಮಗಳಾಗಿರುವ ನಿಸರ್ಗ ಅವರಿಗೆ 2020ರ ಏಪ್ರಿಲ್‌ನಲ್ಲಿ ಬ್ರೈನ್‌ ಸ್ಟ್ರೋಕ್‌ ಆಗಿತ್ತು. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಕಾರಣದಿಂದ ತಡವಾಗಿ ಅಂದರೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ …

Read More »

ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ 7 ಲಕ್ಷಕ್ಕೂ ಹೆಚ್ಚಿನ ಮತಗಳು ಸಿಕ್ಕಿ ಗೆಲ್ಲುತ್ತೇನೆ.: ಸತೀಶ್ ಜಾರಕಿಹೊಳಿ

ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು ಅಲ್ಲಿ ಚುನಾವಣೆ ನಡೆಯುತ್ತಿದೆ, ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಜೊತೆಗೆ ಮಾತನಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ವಿರುದ್ಧ ಗೆದ್ದು 7 ಲಕ್ಷಕ್ಕೂ ಅಧಿಕ ಮತಗಳು ಸಿಗುವ ವಿಶ್ವಾಸವಿದೆ ಎಂದು …

Read More »

ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?

ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …

Read More »

ಯಾವುದೇ ಕಾರಣದಿಂದ ಈ ಬಾರಿ ಬೆಳಗಾವಿಯನ್ನು ಬಿಜೆಪಿಗೆ ಬಿಟ್ಟುಕೊಡಬಾರದು.: ಕಾಂಗ್ರೆಸ್

ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿರುವ ಕಾಂಗ್ರೆಸ್, ಈ ಕುರಿತು ತಂತ್ರಗಾರಿಕೆಗೆ ಗುರುವಾರ ರಾತ್ರಿ ಖಾಸಗಿ ಹೊಟೆಲ್ ನಲ್ಲಿ ಸಭೆ ನಡೆಸಿತು. ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ರಾಮಲಿಂಗಾರೆಡ್ಡಿ, ಎಂ.ಬಿ. ಪಾಟೀಲ್ ಮೊದಲಾದವರು ಸಭೆಯಲ್ಲಿದ್ದರು. ಡಿ.ಕೆ.ಶಿವಕುಮಾರ ಬುಧವಾರ ರಾತ್ರಿಯಿಂದ ಬೆಳಗಾವಿಯಲ್ಲಿದ್ದು, ಹಲವಾರು ಗಣ್ಯರನ್ನು ಭೇಟಿ ಮಾಡಿದ್ದಾರೆ. …

Read More »

ಅನ್ಯಾಯದ ಬ್ರಹ್ಮಾಸ್ತ್ರ ಬೇಡ: ಮಾತುಕತೆಗೆ ಮುಂದಾಗಿ -ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …

Read More »

ರಾಜ್ಯ ಸರಕಾರದ ಪಾಪದ ಫಲವನ್ನು ಜನತೆ ಅನುಭವಿಸಬೇಕಿದೆ: ಸಾರಿಗೆ ಮುಷ್ಕರದ ಬಗ್ಗೆ ಸಿದ್ದರಾಮಯ್ಯ

ಬೆಂಗಳೂರು: `ರಾಜ್ಯ ಸರಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ಸೇರಿದಂತೆ ರಸ್ತೆ ಸಾರಿಗೆ ಸಂಸ್ಥೆಗಳ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು’ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ. ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, `ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿತಪ್ಪಿರುವ ರಾಜ್ಯದ ಬಿಜೆಪಿ ಸರಕಾರದ ಪಾಪದ …

Read More »

ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ: ಕುಮಾರಸ್ವಾಮಿ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ‘ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ ಇವೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ ಗೊತ್ತಾಗುತ್ತಿಲ್ಲ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ಕುತಂತ್ರದ ಮೂಲಕ ಹಣ ಉಪಯೋಗ ಮಾಡಿ ಸರ್ಕಾರ ರಚಿಸಿದರು. ಈಗ ಆ ಹಣ ಹೇಗೆ ಸಂಪಾದನೆ ಮಾಡಬೇಕು, ಕಿಸೆ ತುಂಬಿಸಿಕೊಳ್ಳಬೇಕು ಎನ್ನುವ ವಿಚಾರದಲ್ಲಿದ್ದಾರೆ’ ಎಂದು ಮುಖಂಡರ ಹೆಸರು ಪ್ರಸ್ತಾಪ …

Read More »

ಏಪ್ರಿಲ್‌ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್‌ವೈ

ಬೆಂಗಳೂರು: ಕೋವಿಡ್‌ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …

Read More »

ಲಾಕ್‌ಡೌನ್ ಭೀತಿ: ಪ್ರಮುಖ ನಗರಗಳನ್ನು ತೊರೆಯುತ್ತಿರುವ ವಲಸೆ ಕಾರ್ಮಿಕರು

ಅಹಮದಾಬಾದ್: ಗುಜರಾತ್‌ನಲ್ಲಿ ಮತ್ತೆ ಲಾಕ್‌ಡೌನ್ ಹೇರಬಹುದು ಎಂಬ ಭೀತಿಯಿಂದ ವಲಸೆ ಕಾರ್ಮಿಕರು ರಾಜ್ಯದಿಂದ ಹೊರನಡೆಯುತ್ತಿದ್ದಾರೆ. ಅಹಮದಾಬಾದ್ ಮತ್ತು ಸೂರತ್‌ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮತ್ತು ಬಿಹಾರದ ವಲಸೆ ಕಾರ್ಮಿಕರು, ತಮ್ಮ ಊರುಗಳಿಗೆ ವಾಪಸಾಗುತ್ತಿದ್ದಾರೆ. ಎರಡೂ ನಗರಗಳಲ್ಲಿ ಕೋವಿಡ್‌ನ ಹೊಸ ಪ್ರಕರಣಗಳ ಸಂಖ್ಯೆ ತೀವ್ರಮಟ್ಟದಲ್ಲಿ ಏರಿಕೆಯಾದ ಕಾರಣ, ಲಾಕ್‌ಡೌನ್ ಏಕೆ ಹೇರಬಾರದು ಎಂದು ಗುಜರಾತ್ ಹೈಕೋರ್ಟ್ ಈಚೆಗೆ ಸರ್ಕಾರವನ್ನು ಕೇಳಿತ್ತು. ಇದರ ಬೆನ್ನಲ್ಲೇ ಲಾಕ್‌ಡೌನ್ ಹೇರಿಕೆಯಾಗುವ ಭೀತಿ ಎದುರಾಗಿದೆ. ಒಮ್ಮೆ ಲಾಕ್‌ಡೌನ್ …

Read More »

Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …

Read More »