Breaking News
Home / 2021 / ಏಪ್ರಿಲ್ / 12 (page 3)

Daily Archives: ಏಪ್ರಿಲ್ 12, 2021

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಅಂಟಿಕೊಂಡ ಸೋಂಕು!

ರಾಯಚೂರು : ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಅವರಿಗೆ ಸೋಂಕು ಮೆತ್ತಿಕೊಂಡಿದೆ. ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ …

Read More »

ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕರಾದ ಯು.ಟಿ. ಖಾದರ್ ಮತ್ತಿತರ ಮುಖಂಡರ ವಿರುದ್ಧ ಬಿಜೆಪಿ ವತಿಯಿಂದ ಇಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣದ ಗಾಂಧಿವೃತ್ತದಲ್ಲಿ ಭಾಷಣ ಮಾಡುವ ವೇಳೆ “ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ” ಎಂದು ಮತದಾರರಿಗೆ ಆಮಿಷ ತೋರಿರುತ್ತಾರೆ. ಇದು ಚುನಾವಣಾ …

Read More »

ಮೇ 24ರಿಂದ PUC, ಜೂನ್ 20ರಿಂದ SSLC ಪರೀಕ್ಷೆಗಳು ಆರಂಭ: ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮೇ 24ರಿಂದ ಪಿಯುಸಿ ಹಾಗೂ ಜೂನ್ 20ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳು ಸುರಕ್ಷತಾ ಕೇಂದ್ರಗಳು ಆಗಿರುತ್ತೆ. ಎಸ್‍ಎಸ್‍ಎಲ್‍ಸಿಗೆ 8,75,798 ಜನ ವಿದ್ಯಾರ್ಥಿಗಳ ನೋಂದಣಿಯಾಗಿದೆ. ಪಿಯುಸಿಗೆ 7,01,651 ಮಂದಿ ವಿದ್ಯಾರ್ಥಿಗಳನ್ನು ನೋಂದಣಿ ಮಾಡಲಾಗಿದೆ ಎಂದು ವಿವರಿಸಿದರು. ಸಿಲೇಬಸ್ ನಲ್ಲಿ ಶೇ.30ರಷ್ಟು …

Read More »

6ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಯುಗಾದಿ ಹಬ್ಬಕ್ಕ ಹೋಗೋರಿಗೆ ಬಸ್ ಸಿಗೋದು ಡೌಟ್.!

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. 6ನೇ ವೇತನ ಆಯೋಗದ ಶಿಫಾರಸ್ಸಿಗೆ ಒತ್ತಾಯಿಸಿ ನಡೆಸುತ್ತಿರುವಂತ ಮುಷ್ಕರ ಇಂದು ತಾರಕ್ಕಕ್ಕೂ ಏರವಿದೆ. ಇಂದಿನಿಂದ ಸಾರಿಗೆ ನೌಕರರು ಬೀದಿಗೆ ಇಳಿಯಲಿದ್ದು, ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗಳ ಮುಂದೆ ತಟ್ಟೆ, ಜಾಗಟೆ ಬಾರಿಸುವ ಮೂಲಕ, ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಿದ್ದಾರೆ. ಇದರ ನಡುವೆ ಇಂದು ಯುಗಾದಿ ಹಬ್ಬದ ಮುನ್ನಾದಿನವಾದ್ದರಿಂದ ಸಾರಿಗೆ ನೌಕರರ ಮುಷ್ಕರದ ಬಿಸಿ, ಊರಿಗೆ ಹೋಗೋ …

Read More »

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು : ಇಂದು ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿದು ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ನಾ ಕೊಡೆ, ನಾ ಬಿಡೆ ಎನ್ನುವ ಸಂಘರ್ಷ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತರನ್ನು ಮನವೊಲಿಸೋ ಪ್ರಯತ್ನಕ್ಕೆ ಇಳಿದಯಂತ ರಾಜ್ಯ ಸರ್ಕಾರ, ವಿವಿಧ ತಂತ್ರಗಾರಿಕೆ ಮೂಲಕ ನೌಕರರನ್ನು ಮುಷ್ಕರದಿಂದ ಸೇವೆಗೆ ಮರಳೋದಕ್ಕೆ ಪ್ರಯತ್ನಕ್ಕಿಳಿದಿದೆ. ಇದರ ಮಧ್ಯೆ ಇಂದಿನಿಂದ ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ …

Read More »

ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆ

ಬೆಳಗಾವಿ –  ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆಯನ್ನು ವಿಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ|| ಕೆ. ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುವರ್ಣ ವಿಧಾನ ಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ, ಚಿಕ್ಕಪುಟ್ಟ ವಿಷಯಗಳಿಗೆ …

Read More »

ಸತೀಶ್ ಜಾರಕಿಹೊಳಿ ಅವರನ್ನು ಲೋಕಸಭೆಗೆ ಪ್ರಚಂಡ ಬಹುಮತಗಳಿಂದ ಆರಿಸಿ ತರೋಣ​: ಎಂದು ಹೇಬ್ಬಾಳಕರ್

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮರಿ ಗ್ರಾಮದ ವಿವಿಧ ಸಂಘಟನೆಗಳ ಜೊತೆ ಬೆಳಗಾವಿ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಯವರ ಪರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಪ್ರಚಾರ ನಡೆಸಿದರು. ​ದೇಶದ​ ​ಈ‌ಗಿನ​ ಪರಿಸ್ಥಿತಿಯಲ್ಲಿ ಜನ ಸಾಮಾನ್ಯರ ಬಗ್ಗೆ ರಾಜ್ಯ ಹಾಗೂ​ ಕೇಂದ್ರದ​ ಬಿಜೆಪಿ ಸರ್ಕಾರಗಳಿಗೆ ಕಿಂಚಿ​ತ್ತೂ​​ ಕಾಳಜಿ‌ ಇ​ಲ್ಲ. ಪ್ರತಿಯೊಬ್ಬರೂ ಮತ​ದ ಮೂಲಕ​ ​ಈ ಸರಕಾರಗಳಿಗೆ ತಕ್ಕ ಉತ್ತರ ನೀಡಬೇಕಿದೆ. ಈ ಸರ್ಕಾರಗಳು ಅಚ್ಛೇ ದಿ​ನ್ ಎನ್ನುತ್ತ ತಮ್ಮ  ಬೇಳೆ​ ಬೇಯಿಸಿಕೊಳ್ಳುವುದರಲ್ಲಿ​ ನಿರತವಾಗಿವೆ​.​ ​ ಅಗತ್ಯ …

Read More »

ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಇನ್ನೆರಡು ದಿನಗಳಲ್ಲಿ ಪಾಲ್ಗೊಳ್ಳುವುದಾಗಿ ತಮಗೆ ತಿಳಿಸಿದ್ದಾರೆಂದ ಉಮೇಶ್ ಕತ್ತಿ

ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಮತದಾರರಲ್ಲಿ ಮನವಿ ಮಾಡಿದರು. ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥ ಸಭೆಯಲ್ಲಿ …

Read More »

ಬಾಲಚಂದ್ರ ಜಾರಕಿಹೊಳಿ ಅವರು ತಮ್ಮೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಕೆಲವೊಂದು ಕಾರಣಾಂತರಗಳಿಂದ ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ: ಕಟೀಲ

ಮೂಡಲಗಿ: ಕಾಂಗ್ರೇಸ್ ಪಕ್ಷ ಮೂರು ಹೋಳಾಗಿ ಅದೋಗತಿಗೆ ಬಂದಿಳಿದಿದೆ, ತಮ್ಮ ರಾಜಕೀಯ ಬೇಳೆಯನ್ನು ಬೆಳೆಸಿಕೊಳ್ಳುವಗೋಸ್ಕರ ಪಕ್ಷದಲ್ಲಿ ಪ್ರಭಾವಿಯಾಗಿರುವ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಸತೀಶ ಅವರ ರಾಜಕೀಯ ಮುಗಿಸಲು ಇದೊಂದು ಡಿಕೆಶಿ ಹೂಡಿರುವ ಸಂಚು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಹೇಳಿದರು.           ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ರವಿವಾರ ಸಂಜೆ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ …

Read More »