Breaking News
Home / 2021 / ಏಪ್ರಿಲ್ / 13 (page 3)

Daily Archives: ಏಪ್ರಿಲ್ 13, 2021

ಸೌಲಭ್ಯ ಪಾವತಿ ಬಾಕಿ; ಮತ್ತೆ ಬಸ್‌ ಏರಲು ನಿವೃತ್ತರ ಹಿಂದೇಟು

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿವೃತ್ತ ನೌಕರರ ಮೊರೆಹೋಗಿದ್ದು, ಓರ್ವ ನಿವೃತ್ತನೌಕರ ಕೂಡ ಕರ್ತವ್ಯಕ್ಕೆ ಬರಲುಮುಂದೆ ಬಂದಿಲ್ಲ. ನಿವೃತ್ತಿನಂತರದ ಆರೋಗ್ಯ ಸಮಸ್ಯೆಒಂದೆಡೆಯಾದರೆ, ನಿವೃತ್ತರಿಗೆ ಆರ್ಥಿಕ ಸೌಲಭ್ಯ ಪಾವತಿ ಮಾಡದಿರುವುದು ಹಿಂದೇಟಿಗೆ ಕಾರಣವಾಗಿದೆ. 62 ವರ್ಷ ಮೀರದ ನಿವೃತ್ತ ಚಾಲಕ,ನಿರ್ವಾಹಕರು ಕರ್ತವ್ಯಕ್ಕೆ ಆಹ್ವಾನ ನೀಡಲಾಗಿತ್ತು.ದಿನಕ್ಕೆ ಚಾಲಕರಿಗೆ 800, ನಿರ್ವಾಹಕರಿಗೆ 700ರೂ. ನೀಡುವುದಾಗಿ ಸೂಚಿಸಲಾಗಿತ್ತು. ಆದರೆಮೂರ್‍ನಾಲ್ಕು ದಿನ ಕಳೆದರೂ ಒಬ್ಬನಿವೃತ್ತ ನೌಕರ ಕೂಡ ಸೇವೆಗೆಬರಲು …

Read More »

ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿ ವಿಸ್ತರಿಸಿದ ಸರಕಾರ

ಬೆಂಗಳೂರು, ಎ.12: ಸಾರಿಗೆ ನೌಕರರು ಮುಷ್ಕರ ನಿರತರಾಗಿರುವುದರಿಂದ ಖಾಸಗಿ ವಾಹನ ಮಾಲಕರು ಸರಕಾರದ ಕೋರಿಕೆಗೆ ಸ್ಪಂದಿಸಿ ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲು ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯಿದೆ 1957ರ ಕಲಂ4(1) ನಿಯಮಗಳನ್ನು ಸಡಿಲಗೊಳಿಸಿ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15ರೊಳಗಾಗಿ …

Read More »

7 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಮಾತನಾಡಿರುವ …

Read More »

ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಯುಗಾದಿ ಹಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಹೂವು, ಹಣ್ಣು, ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ಯುಗಾದಿ ಪ್ರಯುಕ್ತ ನಗರದ ಕೆ.ಆರ್. ಮಾರ್ಕೆಟ್, ಮಲ್ಲೇಶ್ವರಂ ಮಾರುಕಟ್ಟೆಯಲ್ಲಿ ಗ್ರಾಹಕರು ಹೂ, ಹಣ್ಣು ಖರೀದಿಯಲ್ಲಿ ಬ್ಯುಸಿಯಾಗಿದ್ರು, ಹಬ್ಬಕ್ಕೆ ತಳಿರು-ತೋರಣ ಸೇರಿದಂತೆ ಬೇವು ಬೆಲ್ಲ ಖರೀದಿಸಿದ್ದಾರೆ. ಈ ಬಾರಿ ಹೂವು, ಹಣ್ಣಿನ ಬೆಲೆ ಭಾರೀ ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕನಕಾಂಬರ ಹೂವು …

Read More »

ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.

ನವದೆಹಲಿ : ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ. ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು, ಮುಂಬರುವ ವರ್ಷ ಅದ್ಭುತಬವಾಗಲಿ, ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ, ಎಲ್ಲೆಡೆ ಸಮೃದ್ಧಿ ಹಾಗೂ ಸಂತೋಷ ಪಸರಿಸಲಿ ಎಂದು ಶುಭಕೋರಿದ್ದಾರೆ. ದೇಶಾದ್ಯಂತ ಇಂದು ಯುಗಾದಿ ಹಬ್ಬದ ಸಂಭ್ರಮ. ಕೊರೊನಾ ನಡುವೆಯೂ ನಿಯಮಗಳನ್ನು ಪಾಲಿಸುವ ಮೂಲಕ …

Read More »

ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿಯಾಗುವ ಹುಚ್ಚು ಹಿಡಿದಿದೆ: ಈಶ್ವರಪ್ಪ

ಧಾರವಾಡ: ನೋಟು ಕೌಂಟಿಂಗ್ ಮಷಿನ್ ಇಟ್ಟುಕೊಳ್ಳುವದರಲ್ಲಿ ತಪ್ಪಿಲ್ಲ, ಒಬ್ಬ ಮಾಜಿ ಮುಖ್ಯಮಂತ್ರಿಯಾದವರು ಹುಚ್ಚರ ರೀತಿಯಲ್ಲಿ ಮಾತನಾಡುವುದು ಶೋಭೆ ತರಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ವ್ಯಾಪಾರ ಮಾಡುವವರ ಮನೆಯಲ್ಲಿ ನೋಟು ಕೌಂಟಿಂಗ್ ಮಷಿನ್ ಇರುತ್ತದೆ. ಇದನ್ನು ಹೊರತು ನೋಟು ಪ್ರಿಂಟ್ ಮಷಿನ್ ಇಲ್ಲವಲ್ಲಾ ಎಂದರು. ಸಿದ್ದರಾಮಯ್ಯ ಭ್ರಷ್ಟಾಚಾರ ಮಾಡಿ ಬಂದವರು. ಹೀಗಾಗಿ ಏನೇನೂ ಮಾತನಾಡುತ್ತಾರೆ. …

Read More »

ಮಸ್ಕಿಯಲ್ಲಿ ಮಾಜಿ ಶಾಸಕ ಎನ್.ಎಸ್.ನಂದೀಶ್ ಹಣ ಹಂಚಿಕೆ

ರಾಯಚೂರು: ಮಸ್ಕಿ ಉಪ ಚುನಾವಣಾ ಸಮರ ದಿನೇ ದಿನೇ ರಂಗೇರುತ್ತಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮತ ನೀಡುವಂತೆ ಬಿಜೆಪಿ ಮಾಜಿ ಶಾಸಕ ಎನ್.ಎಸ್. ನಂದೀಶ್ ಹಣ ಹಂಚಿಕೆ ಮಾಡಿದ್ದಾರೆ. ಹಣ ಹಂಚಿಕೆ ಮಾಡಿದವರ ಹಾಗೂ ಹಣ ಪಡೆದವರ ವಿರುದ್ಧ ಮಸ್ಕಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತ ಅಮಿತ್, ಚಿಟ್ಟಿಬಾಬು, ಹಣ ಪಡೆದ ವೃದ್ದೆ ತಾಯಮ್ಮ ಮೂವರನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Read More »

ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರ ಮತಬೇಟೆ

ಬೆಳಗಾವಿ: ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಬೇಟೆಗೆ ಅಖಾಡಕ್ಕೆ ಇಳಿದಿದ್ದು, ರಕ್ಷಾ ರಾಮಯ್ಯ ನೇತೃತ್ವದಲ್ಲಿ ಮೊದಗಾ ಗ್ರಾಮದಲ್ಲಿ ಬೈಕ್ ರ್ಯಾಲಿ ಕೈಗೊಳ್ಳುವ ಮುಖೇನ ಸತೀಶ್ ಜಾರಕಿಹೊಳಿ ಪರ ಮತ ಪ್ರಚಾರ ನಡೆಸಲಾಯಿತು. ಈ ವೇಳೆ ಮಾತನಾಡಿದ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯನವರು ಯುವ ಕಾಂಗ್ರೆಸ್ ಶಕ್ತಿಯಿಂದಾಗಿಯೇ ಭಾರತವು ಇಂದು …

Read More »

ಬಾಲಚಂದ್ರ ಜಾರಕಿಹೊಳಿ ಉಪಚುನಾವಣಾ ಅಖಾಡಕ್ಕೆ ,ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್

ಬೆಳಗಾವಿ: ಕೆಲಸದ ಒತ್ತಡಗಳಿಂದಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಿರಲಿಲ್ಲ. ಇಂದಿನಿಂದ ಉಪಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಮಂಗಳಾ ಅಂಗಡಿ ಪರ ಪ್ರಚಾರ ನಡೆಸುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಸೋಂಕು ಇರುವುದರಿಂದ ಪ್ರಚಾರದಲ್ಲಿ ಭಾಗಿಯಾಗಲು ಸಾಧ್ಯವಾಗಿಲ್ಲ. ಇಂದು ವರದಿಯಲ್ಲಿ ಏನು ಬರಲಿದೆ ಎಂಬುದನ್ನು ನೋಡಿಕೊಂಡು ಪ್ರಚಾರದಲ್ಲಿ ಪಾಲ್ಗೊಳ್ಳುವ ಬಗ್ಗೆ ನಿರ್ಧರಿಸುತ್ತಾರೆ. ಬೆಳಗಾವಿ ಕ್ಷೇತ್ರದಿಂದ ಮಂಗಲಾ ಅಂಗಡಿಯವರನ್ನು ಗೆಲ್ಲಿಸಿ ಸಂಸತ್ …

Read More »

ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಬೆಳಗಾವಿಗೆ ಮತ್ತೆ ಸಿಎಂ B.S.Y.

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕದಲ್ಲಿರುವ ಭಾರತೀಯ ಜನತಾ ಪಾರ್ಟಿ ಈಗ ಗೋಕಾಕ ಮತ್ತು ಅರಬಾವಿ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದೆ.                       ಗೋಕಾಕ ಮತ್ತು ಅರಬಾವಿ ಕ್ಷೇತ್ರದಲ್ಲಿ ಜಾರಕಿಹೊಳಿ ಕುಟುಂಬದ ಮತಗಳು ಹೆಚ್ಚಿದ್ದು, ಆ ಮತಗಳು ಸತೀಶ್ ಜಾರಕಿಹೊಳಿಗೆ ಹೋದಲ್ಲಿ ಬಿಜೆಪಿ ಬೆಳಗಾವಿ ಕ್ಷೇತ್ರವನ್ನು ಕಳೆದುಕೊಳ್ಳುವ ಆತಂಕ ಉಂಟಾಗಿದೆ. ರಮೇಶ …

Read More »