Breaking News
Home / 2021 / ಏಪ್ರಿಲ್ / 14 (page 2)

Daily Archives: ಏಪ್ರಿಲ್ 14, 2021

ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್‍ಡೌನ್ ಬೇಡ. ಲಾಕ್‍ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ.:B.S.Y.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಪ್ರಾರಂಭವಾಗಿರುವುದರಿಂದ ಲಾಕ್‍ಡೌನ್ ಮಾಡಿ ಏನು ಪ್ರಯೋಜನ ಇಲ್ಲ. ಇದರ ಅವಶ್ಯಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಮಾತಾನಾಡಿದ ಡಿ.ಕೆ ಶಿವಕುಮಾರ್, ನನ್ನ ವೈಯುಕ್ತಿಕ ಅಭಿಪ್ರಾಯ ಲಾಕ್‍ಡೌನ್ ಬೇಡ. ಲಾಕ್‍ಡೌನ್ ಗಿಂತ ಜೀವ ಹಾಗೂ ಜೀವನ ಮುಖ್ಯ. ಸರ್ಕಾರ ಅವರದೇನೋ ಮುಚ್ಚಿಕೊಳ್ಳೋಕೆ ಲಾಕ್‍ಡೌನ್ ಮತ್ತೊಂದು ಎಂಬ ಸುದ್ದಿ ಹಬ್ಬಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನಮಗಿನ್ನು ಸರ್ವ ಪಕ್ಷಗಳ ಸಭೆಯ …

Read More »

ಅವ್ವ-ಅಜ್ಜಿ ಜತೆ ಮದುವೆ ಮಾತುಕತೆಗೆ ಬಂದವ ಅಕ್ಕ-ತಂಗಿ ಮೇಲೆ ಮಚ್ಚುಬೀಸಿದ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಹಾಸನ: ತಮ್ಮನನ್ನು ಮದುವೆಯಾಗಲು ಒಪ್ಪದ ಯುವತಿಯರಿಬ್ಬರ ಮೇಲೆ ವ್ಯಕ್ತಿಯೊಬ್ಬ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚಾವು ಗ್ರಾಮದಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹೋದರಿಯರಾದ ಯೋಗಿತಾ ಮತ್ತು ಪುಷ್ಪಿತಾ ಹಲ್ಲೆಗೊಳಗಾದವರು. ನಾಗರಾಜ್​ ಹಲ್ಲೆ ಮಾಡಿದವ. ಈತನ ಸೋದರ ಮಾವನ ಮಕ್ಕಳು ಯೋಗಿತಾ ಮತ್ತು ಪುಷ್ಪಿತಾ. ಏ.12ರಂದು ಯೋಗಿತಾಳ ಜತೆ ತನ್ನ ತಮ್ಮನ ಮದುವೆ ಮಾತುಕತೆಗೆಂದು ತಾಯಿ ಹಾಗೂ ಅಜ್ಜಿ ಜತೆ ಸೋದರ ಮಾವನ ಮನೆಗೆ ನಾಗರಾಜ್ …

Read More »

CBSE Board Exams 2021: ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ

ದೆಹಲಿ: ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಆದೇಶ ಹೊರಡಿಸಲಾಗಿದೆ. …

Read More »

ಕೊಪ್ಪಳದ ಕಿಷ್ಕಿಂದೆಯೇ ಹನುಮ ಹುಟ್ಟಿದ ಸ್ಥಳ; ಇಲ್ಲಿವೆ ಖಚಿತ ದಾಖಲೆಗಳು

ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ‌ ಹುಟ್ಟಿದ ಸ್ಥಳ ಎಂದು ಹೆಸರಾದ ಅಂಜನಾದ್ರಿ ಪರ್ವತ ಇದೀಗ ಸುದ್ದಿಯಲ್ಲಿದೆ. ಟಿಟಿಡಿ ಹನುಮ ಹುಟ್ಟಿದ್ದು ನಮ್ಮಲ್ಲಿ ಎಂದು ಹೇಳ್ತಿದೆ. ಇತ್ತ ಕೊಪ್ಪಳ ಇತಿಹಾಸಕಾರರು, ಹನುಮ ಹುಟ್ಟಿದ್ದು ನಮ್ಮಲ್ಲಿ ಎನ್ನುತ್ತಿದ್ದಾರೆ. ಅಷ್ಕಕ್ಕೂ ಹನುಮ ಹುಟ್ಟಿದ ವಿವಾದ ಏನು ಎಂಬ ಈ ಆಸಕ್ತಿಕರ ಸ್ಟೋರಿ ಇಲ್ಲಿದೆ. ಕೊಪ್ಪಳ ಜಿಲ್ಲೆ ಕಿಷ್ಕಿಂದೆ ಹನುಮ ಹುಟ್ಟಿದ ಸ್ಥಳ ಎಂದು ಹೆಸರುವಾಸಿಯಾದ ಪ್ರದೇಶ. ಕಿಷ್ಕಿಂದೆ ಎಂದರೆ ಸಂಸ್ಕೃತದಲ್ಲಿ ಇಕ್ಕಟ್ಟಿನ ಪ್ರದೇಶ …

Read More »

ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ’: ಯಶ್‌ಗೆ ಪತ್ರ ಬರೆದ ಸಾರಿಗೆ ನೌಕರರು?

ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಚಾಲಕರು ಮತ್ತು ನಿರ್ವಾಹಕರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಈ ಪ್ರತಿಭಟನೆಗೆ ನಟ ಯಶ್ ಅವರು ಬೆಂಬಲ ಕೊಡಬೇಕಾಗಿ ಸಾರಿಗೆ ನೌಕರರು ಒಕ್ಕೂಟ ಬರೆದಿದೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪತ್ರದಲ್ಲಿ ಯಾವುದೇ ಸಂಘಟನೆಯ ಅಧಿಕೃತ ಮುದ್ರೆ, ಸಹಿ, ದಿನಾಂಕ ಇಲ್ಲ. ಆದರೆ, ಯಶ್ ಅವರ ತಂದೆ …

Read More »

ಕಾಂಗ್ರೆಸ್​ನವರು ಬೆಲೆ ಏರಿಕೆಯನ್ನ ಇಶ್ಯೂ ಮಾಡುತ್ತಿದ್ದಾರೆ

ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನ ಬೆಂಬಲಿಸುತ್ತಿದ್ದಾರೆ ಯಾರೇ ಡಿಸ್ಟರ್ಬ್​ ಮಾಡಿದರೂ ಜನ ಡಿಸ್ಟರ್ಬ್​ ಆಗಲ್ಲ ಎಂದು ಸಚಿವ ಜಗದೀಶ್​ ಶೆಟ್ಟರ್​ ತಿಳಿಸಿದ್ದಾರೆ. ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್​ ಹಿನ್ನೆಲೆಯಲ್ಲಿ ಎಂಇಎಸ್​ ಅಭ್ಯರ್ಥಿ ಪರ ಶಿವಸೇನೆಯ ಸಂಜಯ್​ ರಾವುತ್​ ಪ್ರಚಾರ ವಿಚಾರವಾಗಿ ಮಾತನಾಡಿದ್ದಾರೆ. ಎಂಇಎಸ್​ಆಗಲಿ, ಬೇರೆ ಯಾರೇ ಏನೇ ಮಾಡಿದರೂ ಆ ಪ್ರಯತ್ನ ಫಲಿಸೋದಿಲ್ಲ. ಯಾಕೆಂದರೆ ಜನ ತುಂಬು ಹೃದಯದಿಂದ ಮೋದಿಯವರನ್ನ ಬೆಂಬಲಿಸುತ್ತಿದ್ದಾರೆ. ಇವತ್ತು ಅದೇ ಟ್ರೆಂಡ್​ಆಗಿದೆ, ಅದು …

Read More »

ಬೆಳಗಾವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ಯು.ಟಿ.ಖಾದರ್‌ ಅವರ ಕಾರಿಗೆ ಅಪಘಾತ

ದಾವಣಗೆರೆ: ಇಲ್ಲಿನ ಆನಗೋಡು ಬಸ್‌ ನಿಲ್ದಾಣದ ಬಳಿ ಮಾಜಿ ಸಚಿವ ಯು.ಟಿ.ಖಾದರ್‌ ಅವರ ಕಾರಿಗೆ ಅಪಘಾತವಾಗಿದೆ. ನಟ ಶಂಕರ್‌ ನಾಗ್‌ ಕಾರಿಗೆ ಅಪಘಾತವಾದ ಸ್ಥಳದಲ್ಲೇ ಈ ಘಟನೆ ನಡೆದಿದೆ. ಮುಂದೆ ಹೋಗುತಿದ್ದ ಕಂಟೇನರ್‌ಗೆ ಖಾದರ್‌ ಅವರ ಕಾರು ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮಾಜಿ ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಎಸ್‌ಪಿ ಹನಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಖಾದರ್‌ ಅವರು ಬೆಂಗಳೂರಿಗೆ …

Read More »

ಸ್ವಂತ ಚಾನೆಲ್ ‘ಐಎನ್‌ಸಿ ಟಿವಿ’ ಆರಂಭಿಸಲಿದೆ ಕಾಂಗ್ರೆಸ್

ನವದೆಹಲಿ, ಏಪ್ರಲ್ 14: ಕಾಂಗ್ರೆಸ್ ಪಕ್ಷವು ತನ್ನದೇ ಸ್ವಂತ ಡಿಜಿಟಿಲ್ ವೇದಿಕೆ ‘ಐಎನ್‌ಸಿ ಟಿವಿ’ಯನ್ನು ಏ. 14ರಂದು ಆರಂಭಿಸುತ್ತಿದೆ. ಪಕ್ಷದ ಸಂದೇಶಗಳು, ವಿಚಾರಗಳನ್ನು ನೇರವಾಗಿ ಜನರಿಗೆ ತಲುಪಿಸುವ ಉದ್ದೇಶದಿಂದ ಅದು ಈ ಚಾನೆಲ್ ಆರಂಭಿಸುತ್ತಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ತನ್ನ ಆನ್‌ಲೈನ್ ವೇದಿಕೆಯ ಹೆಚ್ಚಿನ ವಿವರಗಳನ್ನು ಅದು ನೀಡಲಿದೆ. ರಾಜ್ಯಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ, ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ಸುಷ್ಮಿತಾ …

Read More »

ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ

ಬೆಂಗಳೂರು, ಏಪ್ರಿಲ್ 14: 6ನೇ ವೇತನ ಶಿಫಾರಸ್ಸು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಅದು ಇದೀಗ 8ನೇ ದಿನಕ್ಕೆ ಕಾಲಿಟ್ಟಿದೆ. ನಮ್ಮ ಬೇಡಿಕೆಗಳು ಈಡೇರಿಕೆ ಆಗುವವರೆಗೂ ಮುಷ್ಕರ ನಿಲ್ಲುವುದಿಲ್ಲ ಎಂದು ಸಾರಿಗೆ ನೌಕರರರು ಪಟ್ಟು ಹಿಡಿದಿದ್ದು, ಇತ್ತ ಸಿಎಂ ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡ ಇನ್ನು ಒಂದು ತಿಂಗಳು ಮುಷ್ಕರ ಮಾಡಿದರೂ ಡೋಂಟ್ ಕೇರ್ ಎನ್ನುವಂತೆ ಇದ್ದಾರೆ. ಸಾರಿಗೆ …

Read More »

ಕೋವಿಡ್ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತಷ್ಟು ಬಿಗಿ ಕ್ರಮ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದು ಕೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಈಗಾಗಲೇ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.   ಇದೇ ತಿಂಗಳ 18 ರಂದು ಪ್ರತಿಪಕ್ಷ ನಾಯಕರ ಸಭೆ …

Read More »