Breaking News
Home / 2021 / ಏಪ್ರಿಲ್ / 15 (page 2)

Daily Archives: ಏಪ್ರಿಲ್ 15, 2021

ರಿಮಿಡೆಸಿವಿರ್ ಔಷಧ ದುರ್ಬಳಕೆ ಮಾಡಿದರೆ ಹುಷಾರ್ : ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಡಕ್ ಎಚ್ಚರಿಕೆ

ಹುಮ್ನಾಬಾದ್ : ದೇಹದಲ್ಲಿ ಕೋವಿಡ್ ವೈರಾಣು ಪ್ರಮಾಣ ಹೆಚ್ಚಾದಾಗ ನೀಡಲಾಗುವ ರಿಮಿಡೆಸಿವಿರ್ ( Remidesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುವವರ ವಿರುದ್ಧ ಕೋವಿಡ್ ನಿಯಂತ್ರಣ ಕಾಯ್ದೆ ಅಡಿ ಕಠಿಣ ಕ್ರಮ ಜರುಗಿಸುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಮ್ನಾಬಾದ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಮಿಡೆಸಿವಿರ್ ಔಷಧ ಕೊರತೆ ಇಲ್ಲ …

Read More »

ಸರಕಾರಿ ಶಾಲೆಗಳಿಗೆ ಬಣ್ಣ , ಚಿತ್ತಾರ : ಕ್ಯಾಂಪಸ್‌ ಟು ಕಮ್ಯೂನಿಟಿ ಬಳಗದ ಯುವಕರ ಸಾಧನೆ

ಬೆಂಗಳೂರು: ಸರಕಾರಿ ಶಾಲೆಯ ಸೌಂದರ್ಯ ಹೆಚ್ಚಿಸುವ ಜತೆಗೆ ಗುಣಾತ್ಮಕ ಕಲಿಕೆಗೂ ಯೋಗದಾನ ನೀಡುತ್ತಿರುವ ಯುವಕರ ದಂಡು. “ಕ್ಯಾಂಪಸ್‌ ಟು ಕಮ್ಯೂನಿಟಿ’ ಬಳಗದ ಸದಸ್ಯರು “ಸ್ಕೂಲ್‌ ಬೆಲ್‌’ ಹೆಸರಿನಲ್ಲಿ ಈ ಕಾರ್ಯ ನಡೆಸುತ್ತಿದ್ದಾರೆ. ಈ ಬಳಗದಲ್ಲಿ ಬಹುತೇಕ ಮಂದಿ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವ ಉದ್ಯೋಗಿಗಳು. ಇವರು ವಾರಾಂತ್ಯದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಸ್ಥಳೀಯರು, ಎಸ್‌ಡಿಎಂಸಿಗಳ ಸಹಕಾರ ಪಡೆದು ಬಣ್ಣ ಬಳಿದು, ಧನಾತ್ಮಕ ಚಿಂತನೆಯ ಕಲಾಕೃತಿಗಳನ್ನು ಚಿತ್ರಿಸುತ್ತಾರೆ. ಗ್ರಾಮೀಣ ಶಾಲೆಗಳನ್ನು ಆಯ್ದುಕೊಂಡು …

Read More »

ಕರೋನಾ ಮಾರ್ಗಸೂಚಿ ಪಾಲಿಸಲು ವಿಫಲ: ಕುಂಭಮೇಳ ಇಂದೇ ಅಂತ್ಯಗೊಳ್ಳುವ ಸಾಧ್ಯತೆ!

ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕುರಿತಂತೆ ಉತ್ತರಾಖಂಡ್‌ ಸರ್ಕಾರ ಮತ್ತು ಧಾರ್ಮಿಕ ನೇತಾರರ ನಡುವೆ ಚರ್ಚೆ ನಡೆದಿದ್ದು, ಚರ್ಚೆಯ ಬಳಿಕ, ಇದೀಗ ಕುಂಭಮೇಳವನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಕೋವಿಡ್‌ ಎರಡನೇ ಅಲೆ ವಿಪರೀತವಾಗುತ್ತಿದ್ದರೂ ಕುಂಭಮೇಳದಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ, ಯಾವುದೇ ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿಕೊಳ್ಳುತ್ತಿದ್ದಾರೆ. ಗಂಗಾನದಿಯ ತೀರದಲ್ಲಿ ಪವಿತ್ರ ಸ್ನಾನದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಕೋವಿಡ್ …

Read More »

ವಿಮಾನ ನಿಲ್ದಾಣ ಹೆಸರು ಬದಲಾಯಿಸದಿದ್ದರೆ ಉಗ್ರ ಹೋರಾಟ: ಐವಾನ್ ಡಿಸೋಜಾ

ಮಂಗಳೂರು; ಏಪ್ರಿಲ್ 14: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿನ ಫಲಕದಲ್ಲಿ ಅದಾನಿ ಹೆಸರನ್ನು ತೆಗೆಯದಿದ್ದರೆ ಫಲಕಕ್ಕೆ ಮಸಿ ಬಳಿದು ಪ್ರತಿಭಟನೆ ನಡೆಸುವುದಾಗಿ ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜಾ ಸವಾಲು ಹಾಕಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಐವಾನ್ ಡಿಸೋಜಾ, ಮಂಗಳೂರು ವಿಮಾನ‌ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಕಡಿಮೆಯಾಗಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಬಜ್ಪೆ ವಿಮಾನ‌ ನಿಲ್ದಾಣದಲ್ಲಿ ಪ್ರಗತಿ ಕುಂಠಿತವಾಗಿದೆ. ದೆಹಲಿ, ಮುಂಬೈ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಗಿದೆ. …

Read More »

ಅದಾನಿಗೆ ಆಘಾತ, ಯುಎಸ್ ಷೇರುಪೇಟೆಯಿಂದ ಹೊರಕ್ಕೆ

ನ್ಯೂಯಾರ್ಕ್: ಗಲಭೆ ಪೀಡಿತ ಮ್ಯಾನ್ಮಾರ್ ದೇಶದ ಮಿಲಿಟರಿ ಪಡೆ ಜೊತೆ ಸಂಪರ್ಕ, ವ್ಯವಹಾರ ಹೊಂದಿರುವ ಕಾರಣಕ್ಕೆ ಭಾರತ ಮೂಲದ ಅದಾನಿ ಅವರ ಅದಾನಿ ಪೋರ್ಟ್ಸ್ ಸಂಸ್ಥೆಯನ್ನು ನ್ಯೂಯಾರ್ಕ್ ಷೇರುಪೇಟೆ ಪಟ್ಟಿಯಿಂದ ಹೊರ ಹಾಕಲಾಗಿದೆ. ಅದಾನಿ ಬಂದರುಗಳು ಮತ್ತು ಭಾರತದ ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಂಸ್ಥೆಗೆ ಯುಎಸ್ ಷೇರುಪೇಟೆ ಎಸ್ & ಪಿ ಡೌ ಜೋನ್ಸ್ ಭಾರಿ ಆಘಾತ ನೀಡಿದೆ. ಮಾನವ ಹಕ್ಕು ಉಲ್ಲಂಘನೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಿರುವ …

Read More »

ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ

ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ …

Read More »

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಜ್ವರ ಮತ್ತು ಸುಸ್ತು ಆಗಿದ್ದು ರಾತ್ರಿ ಕೆಎಲ್‌ಇ ಆಸ್ಪತ್ರೆಯ ಇಬ್ಬರು ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಸಿಎಂಗೆ ಮಾತ್ರೆ ನೀಡಿದ್ದು ಸಿಎಂ ತಮ್ಮ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಅವರ ಆರೋಗ್ಯ ತಪಾಸಣೆಗೆ …

Read More »

ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಸರ್ಕಾರ ಅದರತ್ತ ಹೆಜ್ಜೆ ಇಡಬಾರದು: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ; ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಹೆಜ್ಜೆ ಇಡಬಾರದು ಎಂದು ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣ ಹೆಚ್ಚುತ್ತಿದೆ. ಹಾಗೆಂದು ಸದ್ಯಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಅವಶ್ಯಕತೆ ಇಲ್ಲ. ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. 17 ರ ನಂತರ ರಾಜ್ಯದಲ್ಲಿ ಲಾಕ್ …

Read More »

ಸಿದ್ದರಾಮಯ್ಯ ಮತ್ತು ಯತ್ನಾಳ್ ಇಬ್ಬರೂ ವಿಜಯೇಂದ್ರ ವಿರುದ್ದ ಒಂದೇ ರೀತಿಯ ಆರೋಪ ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಮಸ್ಕಿಗೆ ಬಂದಿದ್ದಾರೆ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಿಜೆಪಿಯ ಒಂದು ವರ್ಗದಲ್ಲೇ ಅಸಮಾಧಾನ ಇರಬೇಕಾದರೆ ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇರದೇ ಇರಲು ಸಾಧ್ಯವೇ? ಆದರೆ, ಯಾವುದೇ ಆರೋಪ ಅಥವಾ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳದ ವಿಜಯೇಂದ್ರ ಅವರು ಪಕ್ಷ ತಮಗೆ ವಹಿಸಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಕಳೆದ ಶಿರಾ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದ ನಂತರ ಇವರನ್ನು ಬೈಎಲೆಕ್ಷನ್ ಸ್ಪೆಷ್ಟಲಿಸ್ಟ್ ಎಂದೇ ಪಕ್ಷದಲ್ಲಿ ಕರೆಯಲಾಗುತ್ತಿದೆ.   ಮಸ್ಕಿ …

Read More »

ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೆಟ್ಟರ ಅವರಿಗೆ ಜನಸಾಮಾನ್ಯರ ಕಷ್ಟದ ಬಗ್ಗೆ ಗೊತ್ತಿಲ್ಲ. ಕೇವಲ ಭಾಷಣ ಮಾಡೋದನ್ನೇ ಸಾಧನೆ ಅಂದುಕೊಂಡಿದ್ದಾರೆ ಎಂದು ಟೀಕಿಸಿದರು. ವಿಧಾನಸಭೆ ಸಭೆಯಲ್ಲಿ ಸತೀಶ್ ಜಾರಕಿಹೊಳಿ‌ ಒಮ್ಮೆಯೂ …

Read More »