Breaking News
Home / 2021 / ಏಪ್ರಿಲ್ / 17 (page 3)

Daily Archives: ಏಪ್ರಿಲ್ 17, 2021

ಬೆಳಗಾವಿ ಉಪಚುನಾವಣೆ : ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ ಗ್ರಾಮಸ್ಥರು

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಶಾಂತಿಯುತವಾಗಿ ಆರಂಭವಾಗಿದ್ದು ಬೆಳಿಗ್ಗೆ 9 ಗಂಟೆಯವರೆಗೆ ಶೇ 5.47 ರಷ್ಟು ಮತದಾನವಾಗಿದೆ. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ತಮ್ಮ ಕುಟುಂಬ ಸಮೇತ ಮತಗಟ್ಟೆಗೆ ಬಂದು ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಶಾಂತಿಯುತ ಮತದಾನವಾಗುತ್ತಿರುವ ಮಧ್ಯೆ ತಮ್ಮ ಹಳ್ಳಿಯ ಸ್ಥಳಾಂತರಕ್ಕೆ ಒತ್ತಾಯಿಸಿ ರಾಮದುರ್ಗ‌ ತಾಲೂಕಿನ ಪ್ರವಾಹ ಪೀಡಿತ ಚಿಕ್ಕತಡಸಿ ಹಾಗೂ ಹಿರೇತಡಸಿ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದ್ದಾರೆ.‌ ಗ್ರಾಮದ ಸ್ಥಳಾಂತರ ವಿಷಯದಲ್ಲಿ ಅಧಿಕಾರಿಗಳ …

Read More »

ರಾಯಚೂರು: ಪೊಲೀಸರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಕಿಡಿ

ರಾಯಚೂರು: ಮಸ್ಕಿ ಕ್ಷೇತ್ರದ ಕುರುಕುಂದಾ ಗ್ರಾಮದಲ್ಲಿ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ ಪ್ರಸಂಗ ನಡೆಯಿತು. ಮತಗಟ್ಟೆಯ ನೂರು ಮೀಟರ್ ಒಳಗೆ ಇರಬಾರದು ಎಂಬ ನೀತಿ ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ ಮಾತ್ರ ಅನುಸರಿಲಾಗುತ್ತಿದೆ. ಬಿಜೆಪಿಯವರು ನಿಂತಿದ್ದರು ಕ್ಯಾರೆ ಎನ್ನದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಕಾಲರ್ ಹಿಡಿದು ಆಚೆ ಕಳುಹಿಸುತ್ತಿದ್ದಾರೆ. ಪೊಲೀಸರ ಬಿಜೆಪಿಯವರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಪಕ್ಷದ ಕಾರ್ಯಕರ್ತೆ ಪದ್ಮಾವತಿ ದೂರಿದರು. ಪೊಲೀಸರು ಹಾಗೂ …

Read More »

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್​ ಸೋಂಕಿನ ಪ್ರಸರಣ ದಿನೇದಿನೆ ಏರಿಕೆಯಾಗುತ್ತಿದ್ದು, ಸರ್ಕಾರ ಮತ್ತೊಮ್ಮೆ ಲಾಕ್​ಡೌನ್​ ಹೇರಬಹುದಾ ಎಂಬ ಪ್ರಶ್ನೆ ಕಾಡುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಯಾಗಿದ್ದು, ಏಪ್ರಿಲ್​ 20ರವರೆಗೆ ನೈಟ್​ ಕರ್ಫ್ಯೂ ಮುಂದುವರಿಯಲಿದೆ. ಮಂಗಳವಾರ ಇನ್ನೊಂದು ಸಭೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ನಿನ್ನೆ ತಿಳಿಸಿದ್ದಾರೆ. ಆದರೆ ಸರ್ಕಾರ ಕೊರೊನಾವನ್ನು ಮಣಿಸಲು ಇನ್ನೊಂದು ಹೊಸ ಪ್ಲ್ಯಾನ್​ ಮಾಡಿದೆ ಎನ್ನಲಾಗಿದೆ. ನೈಟ್​ ಕರ್ಫ್ಯೂ ಸಮಯ ಬದಲಿಸಲು ಮುಂದಾಗಿದೆ. ಬಹುತೇಕ …

Read More »

ದಾರಿ ತಪ್ಪಿ ದೆಹಲಿ ತಲುಪಿದ ವೃದ್ಧೆ;ಕರಳು ಬಳ್ಳಿಗೆ ಸೇರಿಸಿದ ಯೋಧ

ಬಾಗಲಕೋಟೆ: ಮೊಮ್ಮಗನ ಜತೆಗೆ ತಿರುಪತಿ ದರ್ಶನಕ್ಕೆ ಹೋಗಿದ್ದ ಜಿಲ್ಲೆಯ ವೃದ್ಧೆಯೊಬ್ಬರು ರೈಲು ಹತ್ತುವಾಗ ತಪ್ಪಿ ಬೇರೊಂದು ರೈಲು ಏರಿದ್ದರಿಂದ ದೆಹಲಿ ತಲುಪಿದ್ದು, ಆ ವೃದ್ಧೆಯನ್ನು ಸೈನಿಕರೊಬ್ಬರು ಕರಳು ಬಳ್ಳಿಗೆ ಕೂಡಿಸಲು ನೆರವಾಗಿದ್ದಾರೆ. ಹುನಗುಂದ ತಾಲೂಕಿನ ದಾಸಬಾಳ ಗ್ರಾಮದ ಶಿವಮ್ಮ ಪಾಟೀಲ ಎಂಬ ವೃದ್ಧೆ, ಕಳೆದ ಶನಿವಾರ ತಿರುಪತಿಗೆ ಹೋಗಿದ್ದರು. ತಿರುಪತಿ ದರ್ಶನ ಮುಗಿದ ಬಳಿಕ ರೈಲ್ವೆ ನಿಲ್ದಾಣದಲ್ಲಿ ಮೊಮ್ಮಗನೊಂದಿಗೆ ಇದ್ದ ವೃದ್ಧೆ ಗದ್ದಲದಲ್ಲಿ ಪ್ರತ್ಯೇಕಗೊಂಡಿದ್ದರು. ಮೊಮ್ಮಗ ರೈಲು ನಿಲ್ದಾಣದಲ್ಲಿ ವೃದ್ಧೆಗಾಗಿ …

Read More »

ಗೋಕಾಕ ನಲ್ಲಿ ಮತ ಚಲಾವಣೆ ಮಾಡಿದ ಸಂತೋಷ್ ಜಾರಕಿಹೊಳಿ ದಂಪತಿ…

ಗೋಕಾಕ: ಬೆಳಗಾವಿ ಸೇರಿದಂತೆ ಎಲ್ಲಾಕಡೆ ಮತದಾನ ಮಂದಗತಿಯಿಂದ ಪ್ರಾರಂಭ ವಾಗಿದ್ದು ಸಮಯ್ ಕಳೆದಂತೆ ಜೋರಾಗಿಯೇ ನಡಿತಿದೆ ಸುಮಾರು 20ರಿಂದ 30 ಶೇಕಡಾ ಮತದಾನ ಗೋಕಾಕ ಹಾಗೂ ಅರಭಾವಿ ಕ್ಷೇತ್ರದಲ್ಲಿ ಆಗಿದೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯ ವಾಗುತ್ತಿದೆ. ಇಂದು ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಅವರ್ ಸುಪುತ್ರ ಶ್ರೀ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಸೊಸೆ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಎಲ್ಲರಂತೆ ಸರಳ …

Read More »

ಕೆಂಪುಕೋಟೆ ಮೇಲೆ ಬಾವುಟ ಪ್ರಕರಣ- ನಟ ದೀಪ್ ಸಿಧುಗೆ ಜಾಮೀನು

ನವದೆಹಲಿ: ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ‍್ಯಾಲಿಯಲ್ಲಿ ಕೆಂಪು ಕೋಟೆ ಮೇಲೆ ಬಾವುಟ ಹಾರಿಸಿದ್ದ ನಟ ದೀಪ್ ಸಿಧುಗೆ ದೆಹಲಿ ಕೋರ್ಟ್ ಜಾಮೀನು ನೀಡಿದೆ. ಜನವರಿ 26 ರ ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ದೀಪ್ ಸಿಧುಗೆ ಜಾಮೀನು ನೀಡಿದೆ. ಕಳೆದ ವಿಚಾರಣೆಯ ವೇಳೆ, ಜನವರಿ 26 ರಂದು ಕೆಂಪು ಕೋಟೆಗೆ ಹೋಗುವಂತೆ ಆಂದೋಲನ ನಡೆಸುತ್ತಿರುವ ರೈತರಿಗೆ ಯಾವುದೇ ಕರೆ ನೀಡಿಲ್ಲ ಎಂದು ದೀಪ್ ಸಿಧು ನ್ಯಾಯಾಲಯಕ್ಕೆ ಮನವಿ …

Read More »

ಹೆಚ್‍ಡಿಕೆಗೆ ಕೊರೊನಾ ಸೋಂಕು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ತಮ್ಮ ಕೋವಿಡ್ ವರದಿ ಪಾಸಿಟಿವ್ ಬರುತ್ತಲೇ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ. ನಿನ್ನೆಯಷ್ಟೆ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೂ ಕೊರೊನಾ ದೃಢಪಟ್ಟ …

Read More »

ಆನ್‍ಲೈನ್ ಮೂಲಕ ಮಾವು ಮಾರಾಟ

ಬೆಂಗಳೂರು, – ಮಾವು ಬೆಳೆಗಾರರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಗ್ರಾಹಕರಿಗೆ ಬೆಳೆಗಾರರಿಂದ ನೇರವಾಗಿ ತಾಜ ಮತ್ತು ಸ್ವಾದಿಷ್ಟ ಮಾವಿನ ಹಣ್ಣುಗಳನ್ನು ಆನ್‍ಲೈನ್‍ನಲ್ಲಿ ಖರೀದಿಸುವ ವ್ಯವಸ್ಥೆ ಕಲ್ಪಿಸಿದೆ ಎಂದು ಮಾವು ನಿಗಮದ ಅಧ್ಯಕ್ಷ ಕೆ.ವಿ. ನಾಗರಾಜು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19ರ 2ನೆ ಅಲೆ ಹೆಚ್ಚುತ್ತಿರುವುದರಿಂದ ಹಿಂದಿನಂತೆ ಕಾರ್ಸಿರಿ ಮ್ಯಾಂಗೋಸ್ ಎಂಬ ಆನ್‍ಲೈನ್ ಪೋರ್ಟಲ್ (https://karsirimangoes.karnataka.gov.in) …

Read More »

ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್‌ ಬೂತ್‌’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. …

Read More »

ಉಪ‌ಚುನಾವಣೆ: ಬೆಳಗಾವಿ ಮತ್ತು ಮಸ್ಕಿ, ಬಸವಕಲ್ಯಾಣದಲ್ಲಿ ಮತದಾನ ಆರಂಭ

ಬೆಳಗಾವಿ/ರಾಯಚೂರು: ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಆರಂಭವಾಗಿದೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದ್ದು, ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ ಅಂಗಡಿ …

Read More »