Breaking News

Daily Archives: ಏಪ್ರಿಲ್ 19, 2021

ಮುಂಬೈನಲ್ಲಿ ಕರ್ಫ್ಯೂ: ಬಾಯ್ ಫ್ರೆಂಡ್ ಜೊತೆ ಮಾಲ್ಡೀವ್ಸ್‌ಗೆ ಹಾರಿದ ನಟಿ ಆಲಿಯಾ ಭಟ್

ಕೊರೊನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಯಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಈಗಾಗಲೇ ಅನೇಕ ಕಡೆ ಕರ್ಫ್ಯೂ ಜಾರಿ ಮಾಡಲಾಗಿದೆ. ಮುಂಬೈನಲ್ಲಿ ಕರ್ಫ್ಯೂ ಜಾರಿಯಾಗಿದ್ದು, ಅನೇಕ ಬಾಲಿವುಡ್ ಕಲಾವಿದರು ಮುಂಬೈ ತೊರೆದಿದ್ದಾರೆ. ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದ ಪರಿಣಾಮ ಸಮಯ ಕಳೆಯಲು ಸಿನಿ ತಾರೆಯರು ತಮ್ಮ ನೆಚ್ಚಿನ ಸ್ಥಳಕ್ಕೆ ಹೋಗುತ್ತಿದ್ದಾರೆ. ಇತ್ತೀಚಿಗಷ್ಟೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ದಂಪತಿ ಮುಂಬೈ ತೊರೆದು ಬೆಂಗಳೂರಿಗೆ ಬಂದಿದ್ದಾರೆ. ಅನೇಕರು ಮುಂಬೈನಿಂದ …

Read More »

ಸ್ವತಃ ಲಾಕ್ ಡೌನ್ ಹೇರಿಕೊಂಡ ಗ್ರಾಮಸ್ಥರು

ಬೀದರ್ : ಕೊರೊನಾ ಅಟ್ಟಹಾಸಕ್ಕೆ ಗಡಿ ಜಿಲ್ಲೆ ನಲುಗಿ ಹೋಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರವು ಸಾಕಷ್ಟು ರೂಲ್ಸ್ ಜಾರಿಗೊಳಿಸುತ್ತಿದೆ. ಸದ್ಯ ಗ್ರಾಮಸ್ಥರೇ ಇಲ್ಲಿ ಸ್ವಯಂ ಲಾಕ್ ಡೌನ್ ಘೋಷಿಸಿಕೊಳ್ಳುತ್ತಿದ್ದಾರೆ. ಹೌದು! ಜಿಲ್ಲೆಯಲ್ಲಿ ಪ್ರತಿ ದಿನ 400ರ ಆಸುಪಾಸಿನಲ್ಲಿ ಕೇಸ್ ಗಳು ದಾಖಲಾಗುತ್ತಿವೆ. ಇದರಿಂದ ಭಯಗೊಂಡ ಗ್ರಾಮಸ್ಥರು ಸ್ವಯಂ ಲಾಕ್ ಡೌನ್ ಹೇರಿಕೊಳ್ಳುತ್ತಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಸೇರಿಕೊಂಡು ಮಹಾಮಾರಿಗೆ ಕಡಿವಾಣ ಹಾಕಲು ಈ ನಿರ್ಧಾರ …

Read More »

ಸಿಎಂ ಆಸ್ಪತ್ರೆಯಲ್ಲಿದ್ದಾರೆ, ಬಿಜೆಪಿ ಸರ್ಕಾರ ಐಸಿಯುನಲ್ಲಿದೆ – ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಸಿಎಂ ಬಿಎಸ್ ವೈ ಆಸ್ಪತ್ರೆಯಲ್ಲಿದ್ದಾರೆ, ರಾಜ್ಯ ಬಿಜೆಪಿ ಸರ್ಕಾರ ಐಸಿಯುನಲ್ಲಿದ್ದಾರೆ ಎಂದು ಸಾಲುಸಾಲಾಗಿ ಟ್ವೀಟ್ ಮಾಡುವ ಮೂಲವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಬಿಜೆಪಿ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ. ಕೊರೊನಾ ಸೋಂಕಿತರಿಗೆ ಸರ್ಕಾರಿ …

Read More »

ಲಾಕ್‍ಡೌನ್ ಮಾಡಿದ್ರೆ ಜನ ಸಾಯ್ತಾರೆ, ಸೆಕ್ಷನ್ 144 ತನ್ನಿ: ಸಿ.ಎಂ.ಇಬ್ರಾಹಿಂ

ಬೆಂಗಳೂರು: ಲಾಕ್‍ಡೌನ್ ಮಾಡಿದ್ರೆ ಜನರು ಸಾಯ್ತಾರೆ. ಅದರ ಬದಲಾಗಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿಗೆ ತರಬೇಕು. ಎಲ್ಲದಕ್ಕೂ ಲಾಕ್‍ಡೌನ್ ಪರಿಹಾರ ಅಲ್ಲ ಎಂದು ಕಾಂಗ್ರೆಸ್ ಎಂಎಲ್‍ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸಿಎಂ, ಸಚಿವರು, ಬೆಂಗಳೂರಿನ ಶಾಸಕರ ಜೊತೆಗಿನ ಸಭೆ ಬಳಿಕ ಸಿಎಂ ಇಬ್ರಾಹಿಂ ಮಾಧ್ಯಮಗಳ ಜೊತೆ ಮಾತನಾಡಿದರು. ಸರ್ಕಾರ ಸಂಪೂರ್ಣವಾಗಿ ಗೊಂದಲದಲ್ಲಿದ್ದು, ಗಂಟು ಹಾಕಿ ಹೊಳೆಯಲ್ಲಿ ಬಿಟ್ಟಂತಾಗಿದೆ. ರಾಜ್ಯದಲ್ಲಿ ಬೆಡ್, ಆಕ್ಸಿಜನ್, ಇಂಜೆಕ್ಷನ್, ಲಸಿಕೆ ಮತ್ತು ಔಷಧಿಗಳ ಕೊರತೆ ಇದೆ. ಈ …

Read More »

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕೆಎಲ್‍ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದ 32 ವಿದ್ಯಾರ್ಥಿಗಳು

ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿಪೂರ್ವ ಮಹಾವಿದ್ಯಾಲಯದ 32 ವಿದ್ಯಾರ್ಥಿಗಳು ಪದವಿಪೂರ್ವ ಮಹಾವಿದ್ಯಾಲಯಗಳ ಇಲಾಖಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಸತ್ಕರಿಸಲಾಯಿತು. ಬಾಲಕರ ವಿಭಾಗ ಖೋಖೋ: ಸುನೀಲ ಹಳ್ಳೂರ, ಪರಮೇಶ್ವರ ಬಬಲೇನ್ನವರ, ಗೋಪಾಲ ಪರಮೋಜಿ, ಲಕ್ಷ್ಮೀಕಾಂತ ದಂಡಿನ. ಬಾಸ್ಕೇಟ್ ಬಾಲ್ ಕಾರ್ತಿಕ ಹೂಲಿ, ಶಿವಕುಮಾರ ನವನೇರ, ರೋಹಿತ ಕುಂದರಗಿ, ಮಾಸುಮ್ ಮುಲ್ಲಾ, ವಿಕಾಸ ಪಟವಾರಿ. …

Read More »

ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್

ಬೆಳಗಾವಿ: ಹೊರಗಡೆಯಿಂದ ಬಂದು ವಾರಕ್ಕಿಂತ ಹೆಚ್ಚು ಕಾಲ ಇಲ್ಲಿಯೇ ವಾಸಿಸುವ ನಾಗರಿಕರು ಅಥವಾ ಕುಟುಂಬಗಳು ಸ್ವಯಂಪ್ರೇರಣೆಯಿಂದ ತಮ್ಮ ಸಮೀಪದ ತಾಲ್ಲೂಕು ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್ ಸೋಂಕು ಕೆಲವೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ತಮ್ಮ ಕುಟುಂಬ ಹಾಗೂ ಸಮಾಜದ ಆರೋಗ್ಯದ ದೃಷ್ಟಿಯಿಂದ ನಾಗರಿಕರು ಸ್ವಯಂಪ್ರೇರಣೆಯಿಂದ ತಪಾಸಣೆ ಮಾಡಿಕೊಳ್ಳಬೇಕು. ಒಂದು ವೇಳೆ ಸೋಂಕು ಕಂಡುಬಂದರೆ ಸಕಾಲಕ್ಕೆ‌ ಸೂಕ್ತ ಚಿಕಿತ್ಸೆ ಪಡೆಯಲು …

Read More »

ನಮಗಿದು ತುಂಬಾ ಭಯಾನಕ ಸಮಯ; ಆತಂಕ ವ್ಯಕ್ತಪಡಿಸಿದ್ದೇಕೆ ನಟ ಅರ್ಜುನ್ ರಾಂಪಾಲ್

ಬಾಲಿವುಡ್ ಖ್ಯಾತ ನಟ ಅರ್ಜುನ್ ರಾಂಪಾಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ಅರ್ಜುನ್ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನ ಬಹುತೇಕ ಕಲಾವಿದರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾ ಎರಡನೇ ಅಲೆ ದೇಶದಲ್ಲಿ ಮತ್ತೆ ಆತಂಕ ಸೃಷ್ಟಿಸಿದೆ. ನಟ ಸೋನು ಸೂದ್ ಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ನಟ ಅರ್ಜುನ್ ರಾಂಪಾಲ್ ಕೊರೊನಾ ವೈರಸ್ ಗೆ ತುತ್ತಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ …

Read More »

ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ : ಮೋದಿ ಟ್ವೀಟ್

ಬೆಂಗಳೂರು : ಕನ್ನಡದ ಖ್ಯಾತ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ (108) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನಿಧನರಾಗಿದ್ದಾರೆ. ಇವರ ಸಾವಿಗೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಅವರ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಸಾಧನೆಯನ್ನು ಹೊಗಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಪ್ರೊ. ಜಿ.ವೆಂಕಟಸುಬ್ಬಯ್ಯ ಅವರ ನಿಧನವು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಸಿದೆ. ಖ್ಯಾತ ಬರಹಗಾರ …

Read More »

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಮುಂಬೈ: ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ. ಹೌದು…ಕೇರಳ, ಗೋವಾ, ರಾಜಸ್ಥಾನ, ದೆಹಲಿ, ಗುಜರಾತ್ ಮತ್ತು ಉತ್ತರಾಖಂಡ ಈ ಆರು ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ …

Read More »

ಇಂದಿನಿಂದ ಮೇ 3 ರವರೆಗೆ ರಾಜಸ್ಥಾನ ಲಾಕ್

ಜೈಪುರ್: ರಾಜಸ್ಥಾನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಅಲ್ಲಿಯ ರಾಜ್ಯ ಸರ್ಕಾರ, ಇವತ್ತಿಂದ ಮೇ. 3 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಲಾಕ್ ಡೌನ್ ಅವಧಿಯನ್ನು ‘ಜನ ಅನುಷನ್ ಪಖ್ವಾರ’ (ಸಾರ್ವಜನಿಕ ಶಿಸ್ತಿನ ಹದಿನೈದು ದಿನಗಳ) ಎಂದು ಹೇಳಲಾಗಿದ್ದು, ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕಚೇರಿಗಳು ಮತ್ತು ಮಾರುಕಟ್ಟೆಗಳು ಮುಚ್ಚಿರುತ್ತವೆ. ಆದರೆ ಅಗತ್ಯ ಸೇವೆಗಳಿಗೆ ಲಾಕ್ ಡೌನ್ ನಿಂದ ರಿಯಾಯಿತಿ ನೀಡಲಾಗಿದೆ. ಬ್ಯಾಂಕುಗಳು, …

Read More »