Breaking News
Home / 2021 / ಏಪ್ರಿಲ್ / 20 (page 2)

Daily Archives: ಏಪ್ರಿಲ್ 20, 2021

ರಂಜಾನ್‌ವರೆಗೆ ತೊಂದರೆ ಕೊಡಬೇಡಿ: ಜಮೀರ್ ಅಹ್ಮದ್ ಮನವಿ

ಬೆಂಗಳೂರು, ಏಪ್ರಿಲ್ 19: “ಸರಕಾರದ ಏನು ಮಾರ್ಗಸೂಚಿಯಿದೆಯೋ ಅದನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಆದರೆ, ದಯವಿಟ್ಟು ರಂಜಾನ್ ಹಬ್ಬದವರೆಗೆ ನಮಗೆ ತೊಂದರೆ ಕೊಡಬೇಡಿ ಎಂದು ಸಭೆಯಲ್ಲಿ ಮನವಿ ಮಾಡಿದ್ದೇನೆ”ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದರು. “ಜಾಮಿಯಾ ಮೈದಾನದಲ್ಲಿ ಇಪ್ಪತ್ತು ಸಾವಿರ ಜನ ನಮಾಜ್ ಮಾಡಬಹುದು. ಆದರೆ, ಸಾಮಾಜಿಕ ಅಂತರ ಕಾಯ್ದುಕೊಂಡು ಬರೀ ಐದು ಸಾವಿರ ಜನ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನೈಟ್ ಕರ್ಫ್ಯೂನಿಂದಾಗಿ ರಾತ್ರಿ 10.30ಗೆ ಮಾಡಬೇಕಾಗಿರುವ ನಮಾಜ್ …

Read More »

ಬಸ್ಸಿನಿಂದ ಕೆಳಗಿಳಿಸಿದ ಉಡುಪಿ ಡಿಸಿ: ವಿದ್ಯಾರ್ಥಿನಿಯ ಆಕ್ರೋಶ; ವಿಡಿಯೋ ವೈರಲ್

ಉಡುಪಿ, ಏಪ್ರಿಲ್ 20: ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರನ್ನು ಕೆಳಗಿಳಿಸಿದ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ಹೊರಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿಯ ಸಂತೆಕಟ್ಟೆ ಬಳಿ ಬಸ್ ಅಡ್ಡಗಟ್ಟಿ ತಪಾಸಣೆ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ವಿಪರೀತ ಪ್ರಯಾಣಿಕರನ್ನು ತುಂಬಿದ್ದಕ್ಕೆ ಸ್ಥಳದಲ್ಲೇ ಚಾಲಕನಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿ, ಮಣಿಪಾಲ ನಗರದಲ್ಲಿ ಪ್ರತಿನಿತ್ಯ ನೂರಕ್ಕೂ …

Read More »

ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಲಾಠಿ ಚಾರ್ಜ್ ಮಾಡಲಾಗಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಂಗೊಂಡಹಳ್ಳಿ ಬಳಿ ಪ್ರತಿಭಟನೆ ಮಾಡುತ್ತಿದ್ದ ನೌಕರರನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಪೊಲೀಸರ ಕ್ರಮ ಖಂಡಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮಂಗಳವಾರ ಬೆಳಗ್ಗೆ ಯತ್ನಿಸಿದ ಸಾರಿಗೆ ನೌಕರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಕೋವಿಡ್​ ಹಿನ್ನೆಲೆಯಲ್ಲಿ ಗುಂಪು ಸೇರುವಿಕೆ, ಪ್ರತಿಭಟನೆ, ಸಭೆ, ಸಮಾರಂಭಕ್ಕೆ ಅವಕಾಶ ಇಲ್ಲ. ಇಲ್ಲಿಂದ …

Read More »

ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ : ರಾಜ್ಯಾಧ್ಯಂತ 12 ಗಂಟೆಯ ವೇಳೆ ಸಂಚಾರ ಆರಂಭಿಸಿದ ಸಾರಿಗೆ ಬಸ್ ಎಷ್ಟು ಗೊತ್ತಾ.?

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 14ನೇ ದಿನಕ್ಕೆ ಕಾಲಿಟ್ಟಿದೆ. ಸಾರಿಗೆ ನೌಕರರ ಮುಷ್ಕರದ ನಡುವೆಯೂ, ನಿಧಾನ ಗತಿಯಲ್ಲಿ ಸಾರಿಗೆ ಬಸ್ ಸಂಚಾರ ಆರಂಭಗೊಳ್ಳುತ್ತಿದೆ. ಇಂದು ಮಧ್ಯಾಹ್ನ 12 ಗಂಟೆಯ ವೇಳೆ ರಾಜ್ಯಾಧ್ಯಂತ 5,629 ಸಾರಿಗೆ ಬಸ್ ಸಂಚಾರ ಆರಂಭಿಸಿವೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ರಾಜ್ಯಾಧ್ಯಂತ KSRTC 2340 ಬಸ್, BMTC 1159 ಬಸ್, …

Read More »

ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಅಸ್ತ್ರವೇನು..? ಇಂದು ಮಹತ್ವದ ನಿರ್ಧಾರ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಿಸಿಲು ಸರ್ಕಾರ ಪರದಾಡುತ್ತಿದ್ದು, ಕೋವಿಡ್​ ವಿಚಾರದಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಿದ್ದಾರೆ. ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯಿ​ ವಾಲ ಅವರ ನೇತೃತ್ವದಲ್ಲಿ ಇಂದು ಸಂಜೆ 4.30ಕ್ಕೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಇಂದಿನ ವರ್ಚುವಲ್​ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್​​, ಆರೋಗ್ಯ ಸಚಿವ ಕೆ.ಸುಧಾಕರ್​, ಸಚಿವ ಬಸವರಾಜ್​ ಬೊಮ್ಮಾಯಿ, …

Read More »

ದೆಹಲಿಯಲ್ಲಿ ಲಾಕ್ ಡೌನ್ :ರಾಜ್ಯಸಭಾ ನೌಕರರಿಗೆ ವರ್ಕ್ ಫ್ರಮ್ ಹೋಂ

ನವದೆಹಲಿ : ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ ರಾಷ್ಟ್ರ ರಾಜಧಾನಿಯಲ್ಲಿ ಲಾಕ್‌ಡೌನ್ ಹೇರಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಎಲ್ಲಾ ನೌಕರಿಗೆ ಶುಕ್ರವಾರದವರೆಗೆ ವರ್ಕ್​ ಫ್ರಮ್​ ಹೋಂ ನೀಡಲಾಗಿದೆ. “ಈ ಅವಧಿಯಲ್ಲಿ ಕಚೇರಿಯ ಸುಗಮ ಕಾರ್ಯನಿರ್ವಹಣೆಗೆ ಮನೆಯಿಂದ ಕೆಲಸ ಮಾಡುವವರು ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಲಭ್ಯವಿರಬೇಕು. ರಾಜ್ಯಸಭಾ ಸಚಿವಾಲಯದ ಎಲ್ಲಾ ವರ್ಗದ ನೌಕರರು, ಕಚೇರಿಯಲ್ಲಿ ಕೆಲಸ ಮಾಡುವ ಅವಶ್ಯಕತೆಗಳಿಗೆ ಒಳಪಟ್ಟು, 20.04.2021 ರಿಂದ 23.04.2021 ರವರೆಗೆ ಮನೆಯಿಂದ ಕೆಲಸ ಮಾಡಬಹುದು. ಆಡಳಿತಾತ್ಮಕ ತುರ್ತು …

Read More »

ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನದ ಆಧಾರದಲ್ಲಿ ಪಾಸ್ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು,1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಶಿಕ್ಷಣ ಇಲಾಖೆ …

Read More »

ಕರ್ನಾಟಕದಲ್ಲಿ ಕರೋನ ರಣಕೇಕೆ, ವಿವಾದಕ್ಕೆ ಕಾರಣವಾಗಿದೆ ರಾಜ್ಯಪಾಲ ವಜೂಬಾಯಿ ವಾಲಾರ ಈ ನಡೆ

ಬೆಂಗಳೂರು: ಕರ್ನಾಟಕದಲ್ಲಿ ಕರ್ನಾಟಕದಲ್ಲಿ ಕರೋನ ರಣಕೇಕೆ ಹಾಕುತ್ತಿದ್ದು, ಈ ನಡುವೆ ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜ್ಯದ ಕರೋನಾ ಮಾಹಿತಿ ನೀಡಿದರು. ಈ ವೇಳೇ ರಾಜ್ಯಪಾಲರು ಹಾಗೂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್ ಅವರು ಚರ್ಚೆ ನಡೆಸುತ್ತಿರುವ ವೇಳೆಯಲ್ಲಿ ಗುಜರಾತ್ ನ ಕರೋನಾ ಸ್ಥಿತಿಗತಿ ಪ್ರಸಾರವಾಗುತ್ತಿರುವ ಖಾಸಗಿ ಮಾಧ್ಯಮವೊಂದರ ವರದಿಯ ಫೋಟೋ …

Read More »

ಬೆಂಗಳೂರಿಗೆ ಉಸ್ತುವಾರಿ ಸಚಿವರೇ ಇಲ್ಲದಂತಾಗಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬೆಂಗಳೂರಿಗೆ ಸೇರಿದ ಹಲವು ಸಚಿವರು ಇದ್ದರೂ ಬೆಂಗಳೂರು ಉಸ್ತುವಾರಿ ಯಾರು ಎನ್ನುವುದೇ ಈಗಿರುವ ಪ್ರಶ್ನೆ. ಮಹತ್ವವಾದ ಬೆಂಗಳೂರು ಉಸ್ತುವಾರಿ ಖಾತೆಯನ್ನು ಮುಖ್ಯಮಂತ್ರಿ ಹೊಂದಿದ್ದು, ಅವರಿಗೆ ಬೇರೆ ಹೊಣೆಯೇ ಹೆಚ್ಚಿರಬೇಕಾದರೆ ಮತ್ತು ಅವರಿಗೆ ಎರಡು ಬಾರಿ ಕೊವಿಡ್ ಬಂದು ಆಸ್ಪತ್ರೆ ಸೇರಿರಬೇಕಾದರೆ ಈ ಮಹಾಸಮರದ ವಿರುದ್ಧದ ನೇತೃತ್ವ ವಹಿಸಬೇಕಾದ ನಾಯಕರೇ ಇಲ್ಲವಾಗಿದ್ದಾರೆ ಎಂಬ ಅಂಶವನ್ನು ತಮ್ಮ ಸಲಹಾ ಪಟ್ಟಿಯಲ್ಲಿ ಸೇರಿಸುವ ಮೂಲಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಟಾಂಗ್ …

Read More »

ಕೊರೊನಾ ಸೋಂಕು ಮತ್ತು ಬಸ್ ಮುಷ್ಕರ: ಬೆಂಗಳೂರು ವಿವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು, ಏಪ್ರಿಲ್ 19: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ಪ್ರಕರಣಗಳ ಹೆಚ್ಚಳದಿಂದಾಗಿ ಏ.19, 20 ಮತ್ತು 21ರಿಂದ ನಡೆಯಬೇಕಿದ್ದ ಪದವಿ ಮತ್ತು ಸ್ನಾತಕೋತ್ತರ ಪದವಿಯ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮುಂದೂಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಪದವಿ ಕೋರ್ಸ್‌ಗಳ ಮೊದಲ, ಮೂರನೇ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು, ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಂ.ಎ, ಎಂ.ಎಸ್ಸಿ ಮತ್ತು ಎಂಕಾಮ್ ಸೇರಿದಂತೆ …

Read More »