Breaking News
Home / 2021 / ಏಪ್ರಿಲ್ / 20 (page 3)

Daily Archives: ಏಪ್ರಿಲ್ 20, 2021

ಮೇ 1ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಬಹುದು

ನವದೆಹಲಿ, ಏಪ್ರಿಲ್ 19: ದೇಶದಲ್ಲಿ ಮೂರನೇ ಹಂತದ ಕೊರೊನಾ ಲಸಿಕಾ ಅಭಿಯಾನವು ಮೇ 1ರಿಂದ ಆರಂಭಗೊಳ್ಳಲಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಪಡೆಯಲು ಅರ್ಹ ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ದೇಶದಲ್ಲಿ ಒಂದು ವರ್ಷದಿಂದಲೂ ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಸರ್ಕಾರ ಪರಿಶ್ರಮ ಪಡುತ್ತಿದೆ. ಅತಿ ಕಡಿಮೆ ಅವಧಿಯಲ್ಲಿ ಹೆಚ್ಚೆಚ್ಚು ಭಾರತೀಯರು ಲಸಿಕೆ ಪಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದು ಪ್ರಧಾನಿ ನರೇಂದ್ರ …

Read More »

ನೀತಿಪಾಠ ಹೇಳುವ ಮೋದಿ, ಕೊರೊನಾ ಸಂದಿಗ್ಧತೆಯಲ್ಲೂ ಬಂಗಾಳದಲ್ಲಿ ಜನ ಕಂಡು ಖುಷಿಪಟ್ಟಿದ್ದೇಕೆ?

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕಾರಣಿಗಳು ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ನ್ಯಾಯಾಲಯ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿತು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕೊರೊನಾ ಸೋಂಕಿನ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ. ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಉಪದೇಶ ನೀಡುವ ಪ್ರಧಾನಿ ನರೇಂದ್ರ ಮೋದಿಯವರೇ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದಲ್ಲಿ ಹೆಚ್ಚು …

Read More »

21 ಸಾರಿಗೆ ನೌಕರರ ಅಮಾನತು :ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ

ವಿಜಯಪುರ: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಜಿಲ್ಲೆಯಲ್ಲಿ ಮುಷ್ಕರ ನಿರತ ನೌಕರರ ಪೈಕಿ ಸೋಮವಾರ 21 ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ತಿಳಿಸಿದ್ದಾರೆ. ಕರ್ತವ್ಯಕ್ಕೆ ಗೈರುಹಾಜರು ಆಗಿರುವುದು ಮತ್ತು ಕರ್ತವ್ಯಕ್ಕೆ ಬರುವವರಿಗೆ ತೊಂದರೆ ಮಾಡಿ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ ಎಂಬ ಆರೋಪದ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಮುದ್ದೇಬಿಃಆಳ …

Read More »

ಈ ಊರಿಗೆ 2 ಸಂಸದರು, 2 ಶಾಸಕರು : ಆಸ್ಪತ್ರೆಗೆ ಹೋಗಬೇಕಾದರೆ 25 ಕಿ.ಮೀ. ಸಂಚರಿಸಬೇಕು!

ಕುಂದಾಪುರ: ಈ ಪಂಚಾಯತ್‌ ಎರಡು ಲೋಕಸಭಾ ಕ್ಷೇತ್ರ, ಎರಡು ವಿಧಾನಸಭಾ ಕ್ಷೇತ್ರ, ಇಬ್ಬರು ಸಂಸದರು, ಇಬ್ಬರು ಶಾಸಕರ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಊರು ಸರ್ವ ಸೌಲಭ್ಯಗಳನ್ನೂ ಹೊಂದಿರಬೇಕಿತ್ತು. ಆದರೆ ಇಲ್ಲಿನ ಜನರಿಗೆ ಏನಾದರೂ ಅನಾರೋಗ್ಯ ತಲೆದೋರಿದರೆ ತುರ್ತು ಚಿಕಿತ್ಸೆಗೆ 20-25 ಕಿ.ಮೀ. ದೂರ ಬರಬೇಕು; ಅದೂ ಸಣ್ಣ ಆಸ್ಪತ್ರೆಗೆ. ದೊಡ್ಡ ಆಸ್ಪತ್ರೆ ಆಗಬೇಕೆಂದರೆ 45 ಕಿ.ಮೀ. ದೂರ ಹೋಗಬೇಕು. ಇದು ಉಡುಪಿ – ಚಿಕ್ಕಮಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರ, ಕುಂದಾಪುರ, …

Read More »

ಖಾತೆದಾರರಿಗೆ ಕೆವೈಸಿ ಸಮಸ್ಯೆ : ಬ್ಯಾಂಕ್‌ಗಳಲ್ಲಿ ವಿವರ ಅಪ್‌ಡೇಟ್‌ಗೆ ತಾಕೀತು

ಹೊಸದಿಲ್ಲಿ/ಮುಂಬಯಿ: “ನಿಮ್ಮ ಗ್ರಾಹಕರನ್ನು ಅರಿಯಿರಿ’ (ಕೆವೈಸಿ) ವಿವರಗಳನ್ನು ಅಪ್‌ಡೇಟ್‌ ಮಾಡಲಾಗಿಲ್ಲ ಎಂಬ ಕಾರಣಕ್ಕೆ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಜತೆಗೆ ಹಿರಿಯ ನಾಗರಿಕರಿಗೆ ಸಿಗಬೇಕಾಗಿದ್ದ ಪಿಂಚಣಿ ಪಾವತಿ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಿದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರಿಗೆ ಇಂಥ ಅನುಭವವಾಗುತ್ತಿದೆ. ಕಳೆದ ವರ್ಷದ ಲಾಕ್‌ಡೌನ್‌ ಅವಧಿಯಲ್ಲಿ ಖಾಸಗಿ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದ ವ್ಯಕ್ತಿಗೆ ತತ್‌ಕ್ಷಣವೇ ಕೆವೈಸಿ ವಿವರ ಅಪ್‌ಡೇಟ್‌ ಮಾಡಬೇಕು. …

Read More »

2ನೇ ಅಲೆಯ ಸೋಂಕಿತರಲ್ಲಿ ಯುವಜನರೇ ಹೆಚ್ಚು! 63 ಯುವಕರು ಸಾವು ; ನಿರ್ಲಕ್ಷ್ಯವೇ ಕಾರಣ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಸೋಂಕಿತರಲ್ಲಿ ಹೆಚ್ಚು ಕಡಿಮೆ ಅರ್ಧಕ್ಕರ್ಧದಷ್ಟು ಯುವಜನರೇ ಇದ್ದು, ಈ ಪೈಕಿ 63 ಮಂದಿ ಸಾವಿಗೀಡಾಗಿದ್ದಾರೆ. ಕೊರೊನಾ ವಯಸ್ಸಾದವರಲ್ಲಿ ಹೆಚ್ಚಾಗಿರುತ್ತದೆ ಹಾಗೂ ಬೇರೆ ಕಾಯಿಲೆಗಳು ಇದ್ದವರು ಮತ್ತು ವಯಸ್ಸಾದವರು ಮಾತ್ರ ಸಾವಿಗೀಡಾಗುತ್ತಾರೆ ಎಂಬ ಭಾವನೆ ಜನರಲ್ಲಿದೆ. ಅದಕ್ಕೆ ವಿರುದ್ಧವಾದ ವಿದ್ಯಮಾನ ಈಗ ಕಂಡು ಬರುತ್ತದೆ. ಎರಡನೇ ಅಲೆಗೆ ಹೆಚ್ಚು 20ರಿಂದ 40 ವರ್ಷದ ಯುವಜನರೇ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅಲ್ಲದೆ, ಯಾವುದೇ ಆನಾರೋಗ್ಯ ಇಲ್ಲದಿದ್ದವರೂ ತೀವ್ರ …

Read More »

ಭಾರತದಲ್ಲಿ ಒಂದೇ ದಿನದಲ್ಲಿ 73,600 ಕೋವಿಡ್ ಲಸಿಕೆ ಕೇಂದ್ರಗಳ ಕಾರ್ಯಾಚರಣೆ

ನವದೆಹಲಿ : ಭಾರತದಲ್ಲಿ ಸೋಮವಾರ ಒಂದೇ ದಿನದಲ್ಲಿ 73,600 ಕೊರೋನಾ ಲಸಿಕೆ ಕೇಂದ್ರಗಳು ಕಾರ್ಯನಿರ್ವಹಿಸುವ ಮೂಲಕ ಇಲ್ಲಿವರೆಗಿನ ಅತ್ಯಂತ ಹೆಚ್ಚಿನ ಲಸಿಕಾ ಕೇಂದ್ರ ಕಾರ್ಯಾಚರಣೆಗೆ ಸಾಕ್ಷಿಯಾಯಿತು. ಇದು ಒಂದು ದಿನದಲ್ಲಿ ದೇಶಾದ್ಯಂತ ಸರಾಸರಿ 45,000 ಕ್ರಿಯಾತ್ಮಕ ಸಿವಿಸಿಗಳಿಗಿಂತ 28,600 ಹೆಚ್ಚಾಗಿದೆ. ಸೋಮವಾರ ರಾತ್ರಿ 8 ಗಂಟೆಯವರೆಗೆ ಭಾರತದಲ್ಲಿ 31 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ ಗಳನ್ನು ನೀಡಲಾಯಿತು. ಫಲಾನುಭವಿಗಳಲ್ಲಿ ಸುಮಾರು 21.7 ಲಕ್ಷ ಜನರು ತಮ್ಮ ಮೊದಲ ಡೋಸ್ ಪಡೆಯುತ್ತಿದ್ದರು …

Read More »

ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಗೆ ಮುಗಿಬಿದ್ದ ಮದ್ಯಪ್ರಿಯರು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ನಿಯಂತ್ರಣಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 6 ದಿನ ಲಾಕ್ ಡೌನ್ ಘೋಷಿಸಿದೆ. ಸೋಮವಾರ ರಾತ್ರಿಯಿಂದಲೇ ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ಲಾಕ್ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯಪ್ರಿಯರು ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯಗಳು ಕಂಡು ಬಂದಿವೆ. ದೆಹಲಿಯಲ್ಲಿ ಪರಿಸ್ಥಿತಿ ಕೈ ಮೀರಿದ್ದು, ಸೋಂಕು ತಡೆಗೆ ಲಾಕ್ಡೌನ್ ಜಾರಿಮಾಡಲಾಗಿದೆ. ಸಿಎಂ ಕೇಜ್ರಿವಾಲ್ ಅವರು, ಇದು ಸಣ್ಣ ಪ್ರಮಾಣದ ಲಾಕ್ ಡೌನ್ ಆಗಿದ್ದು, …

Read More »

ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ” ಲಕ್ಷ್ಮಣ ಸವದಿ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಆ ರೀತಿಯ ಯಾವುದೇ ಸಂಧಾನದ ಪ್ರಕ್ರಿಯೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ. ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು …

Read More »

ಮೋಯಿನ್ ಅಲಿ ಮೋಡಿ- ರಾಜಸ್ಥಾನ ವಿರುದ್ಧ ಚೆನ್ನೈಗೆ 45 ರನ್‍ಗಳ ಭರ್ಜರಿ ಜಯ

ಮುಂಬೈ: ಚೆನ್ನೈ ತಂಡದ ಸಿನ್ಪರ್ ಮೋಯಿನ್ ಅಲಿಯವರ ಮೋಡಿಗೆ ತಲೆ ಬಾಗಿದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ವಿರುದ್ಧ 45 ರನ್‍ಗಳ ಸೋಲು ಕಂಡಿದೆ. ಚೆನ್ನೈ ಪರ ಬಿಗುವಿನ ದಾಳಿ ಸಂಘಟಿಸಿದ ಮೋಯಿನ್ ಅಲಿ 3 ಓವರ್ ಎಸೆದು 7 ರನ್ ನೀಡಿ ಡೇವಿಡ್ ಮಿಲ್ಲರ್, ರಿಯಾನ್ ಪರಾಗ್ ಮತ್ತು ಕ್ರಿಸ್ ಮೋರಿಸ್ ಅವರ ಪ್ರಮುಖ 3 ವಿಕೆಟ್ ಪಡೆಯುವ ಮೂಲಕ ಚೆನ್ನೈ ಗೆಲುವಿನ ರೊವಾರಿಯಾದರು. ಚೆನ್ನೈ ನೀಡಿದ 189 …

Read More »