Breaking News
Home / 2021 / ಏಪ್ರಿಲ್ / 22 (page 2)

Daily Archives: ಏಪ್ರಿಲ್ 22, 2021

ಆಕಸ್ಮಿಕ ಬೆಂಕಿಗೆ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮ

ಹಾವೇರಿ: ಆಕಸ್ಮಿಕ ಬೆಂಕಿಗೆ ರಾಶಿ ಮಾಡಲು ಹಾಕಿದ್ದ ಮೆಕ್ಕೆಜೋಳದ ತೆನೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಕಡೂರು ಗ್ರಾಮದ ಎಂಟು ಜನ ರೈತರಿಗೆ ಸೇರಿದ ಮೆಕ್ಕೆಜೋಳ ರಾಶಿಯಾಗಿದ್ದು, 20 ಎಕರೆ ಜಮೀನಿನಲ್ಲಿ ಬೆಳೆದಿದ್ದರು. ರಾಶಿ ಮಾಡಲು ಹಾಕಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಕರಕಲಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ …

Read More »

ಗಾಳಿ, ಮಳೆಯಿಂದ ಬೀದಿಗೆ ಬಿದ್ದ ಹಾವೇರಿ ಜನರ ಬದುಕು; ಶಾಶ್ವತ ಸೂರಿಗೆ ಸ್ಥಳೀಯರ ಆಗ್ರಹ

ಹಾವೇರಿ: ಜಿಲ್ಲೆಯ ಹಂದಿಗನೂರು, ಯಲಗಚ್ಚ, ಮೇಲ್ಮುರಿ ಸೇರಿದಂತೆ ಕೆಲವೆಡೆ ಬಿರುಗಾಳಿ ಸಮೇತ ಸುರಿದ ಮಳೆಗೆ ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿವೆ. ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದರಿಂದ ಮನೆಯಲ್ಲಿದ್ದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ರಟ್ಟೀಹಳ್ಳಿ ತಾಲೂಕಿನ ಮಾಸೂರು ಗ್ರಾಮದಲ್ಲಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಕಟ್ಟಡದ ಮೇಲೆ ಮರವೊಂದು ಉರುಳಿ ಬಿದ್ದಿದೆ. ಶಾಲಾ ಆವರಣದಲ್ಲಿದ್ದ ಮರ ಉರುಳಿ ಬಿದ್ದಿದ್ದರಿಂದ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದೆ. ಶಾಲೆಯಲ್ಲಿ …

Read More »

ಧಾರವಾಡ; ರಾತ್ರಿ ಕರ್ಫ್ಯೂ ತಹಶೀಲ್ದಾರ್‌ ನಗರ ಪ್ರದಕ್ಷಿಣೆ

ಧಾರವಾಡ, ಏಪ್ರಿಲ್ 22; ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹರಡುವಿಕೆ ತಡೆಯಲು ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಧಾರವಾಡದಲ್ಲಿಯೂ ಕರ್ಫ್ಯೂ ಜಾರಿಯಲ್ಲಿದೆ. ಧಾರವಾಡ ತಹಶೀಲ್ದಾರ್ ಸಂತೋಷ್ ಬಿರಾದಾರ್ ಮತ್ತು ಜಿಲ್ಲಾಧಿಕಾರಿ ನಿತೇಶ ಪಾಟೀಲ ರಾತ್ರಿ ಕರ್ಪ್ಯೂ ಜಾರಿ ಬಗ್ಗೆ ನಗರದಲ್ಲಿ ಪರಿಶೀಲನೆ ನಡೆಸಿದರು.   ಸೆಕ್ಷನ್ 144 ಅನ್ವಯ ಜಾರಿಗೊಳಿಸಿರುವ ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಗೊಳಿಸಿರುವ …

Read More »

ಮುಖ ಕಾಣದ ಹಾಗೆ ಮಾಸ್ಕ್ ಹಾಕ್ಕೊಂಡು ಸರ್ಕಾರವನ್ನು ಟೀಕಿಸಿದ ಸಿ.ಟಿ. ರವಿ

ಬೆಂಗಳೂರು, ಏಪ್ರಿಲ್ 22: ಕೊರೋನಾ ನಿಯಂತ್ರಣ ಬಗ್ಗೆ ಸರ್ಕಾರ ಸೀರಿಯಸ್ ಆಗಿ ಆಲೋಚನೆ ಮಾಡಿಲ್ಲ ಎಂಬುದು ಎದ್ದು ಕಾಣುತ್ತದೆ. ಸಿನಿಮಾ , ಥಿಯೇಟರ್ ಬಂದ್ ಮಾಡುವ ಬಗ್ಗೆ ತಜ್ಞರು ವರದಿ ನೀಡಿದರೂ ಅದನ್ನು ಅನುಷ್ಠಾನ ಮಾಡಲಿಲ್ಲ ಸರ್ಕಾರ. ಯಾವುದೋ ಧಮ್ಕಿಗಳಿಗೆ ಮಣಿದು ಇದೀಗ ಅದಕ್ಕೆ ತಕ್ಕ ಬೆಲೆ ತೆತ್ತುವಂತಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸುಮ್ಮನಹಳ್ಳಿ …

Read More »

ರಾಯಚೂರು: ಅಗತ್ಯವಸ್ತುಗಳ ಮಳಿಗೆಗಳು ಮಾತ್ರ ಓಪನ್

ರಾಯಚೂರು: ನಗರದಲ್ಲಿ ಅಗತ್ಯ ವಸ್ತು ಮಾರಾಟದ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದವುಗಳನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಕೆಲವು‌ ಮಳಿಗೆಗಳ‌ ಮಾಲೀಕರು ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದು, ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರಕ್ಕೆ ಅವಕಾಶ‌ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ರಾಯಚೂರು ನಗರದಲ್ಲಿಯೇ ಕೊರೊನಾ ಸೋಂಕು ವೇಗವಾಗಿ ಹರಡಿಕೊಳ್ಳುತ್ತಿರುವುದರಿಂದ ಬಿಗಿಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮನವರಿಕೆ ಮಾಡುತ್ತಿದ್ದಾರೆ. ಜಿಲ್ಲೆಯ ಇತರೆ ತಾಲ್ಲೂಕು ಕೇಂದ್ರಗಳಾದ ಸಿಂಧನೂರು, ಲಿಂಗಸುಗೂರು, ಮಾನ್ವಿ, ದೇವದುರ್ಗ, ಸಿರವಾರ ಹಾಗೂ ಮಸ್ಕಿಯಲ್ಲಿ ಎಂದಿನಂತೆ ವ್ಯಾಪಾರ …

Read More »

ಮೆಡಿಕಲ್ ಆಕ್ಸಿಜನ್ ಕೊರತೆ: ಉಕ್ಕಿನ ಕಾರ್ಖಾನೆಗಳ ಜೊತೆ ಶೆಟ್ಟರ್- ಮುರುಗೇಶ್ ನಿರಾಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಆಮ್ಲಜನಕ ಕೊರತೆ ಸರಿದೂಗಿಸಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಗೂ ಗಣಿ ಸಚಿವ ಮುರುಗೇಶ್ ನಿರಾಣಿ ಬುಧವಾರ ಉಕ್ಕು ತಯಾರಿಕಾ ಕಾರ್ಖಾನೆಗಳ ಜೊತೆ ಸಭೆ ನಡೆಸಿದ್ದಾರೆ. ಜೆಎಸ್ ಡಬ್ಲ್ಯೂ ಮಂಗಳವಾರ ಪ್ರತಿದಿನ 400 ಟನ್ ಆಕ್ಸಿಜನ್ ಪೂರೈಕೆ ಮಾಡುವುದಾಗಿ ತಿಳಿಸಿದ ನಂತರ, ಬಲ್ದೋಟಾ, ಜಿಂದಾಲ್ ಸೇರಿದಂತೆ ಹಲವು ಉಕ್ಕಿನ ಕಾರ್ಖಾನೆಗಳು ಮೆಡಿಕಲ್ ಆಕ್ಸಿಜನ್ ಉತ್ಪಾದನೆ ಮಾಡುವುದಾಗಿ ತಿಳಿಸಿವೆ. ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ಸಂಬಂಧ ರಾಜ್ಯ …

Read More »

ಅಕ್ರಮ ಗಣಿಗಾರಿಕೆ ದಂಡ ಪ್ರಮಾಣ ಇಳಿಕೆ: ನಿರಾಣಿ

ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ‌ಮೂಲಕ‌ ಸಮೀಕ್ಷೆ ‌ನಡೆಸಿ‌ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು. ‘ಕಾನೂನುಬಾಹಿರ ಗಣಿಗಾರಿಕೆ ‌ನಡೆಯುವ …

Read More »

ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …

Read More »

ಆಮ್ಲಜನಕವನ್ನು ಎಲ್ಲಿಂದಲಾದರೂ ತಂದು ಸರಬರಾಜು ಮಾಡಿ ; ಸರ್ಕಾರಕ್ಕೆ ಕೋರ್ಟ್‌ ತಾಕೀತು

ನವದೆಹಲಿ, : ಆಮ್ಲಜನಕವನ್ನು ಭಿಕ್ಷೆ ಬೇಡುತ್ತೀರೋ, ಸಾಲಕ್ಕೆ ತರುತ್ತೀರೋ, ಕದ್ದು ತರುತ್ತೀರೋ ತನ್ನಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ. ದೇಶದ ಜನರು ಆಕ್ಸಿಜನ್ ಸಿಗದೆ ಸಾಯುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿಜಕ್ಕೂ ಖೇದದ ಸಂಗತಿ. ಜನರ ಜೀವಕ್ಕೆ ಬೆಲೆ ಇಲ್ಲವೆ? ನೀವು ದೊಡ್ಡ ದುರಂತದತ್ತ ಸಾಗುತ್ತಿದ್ದೀರಿ ಎಂದು ನ್ಯಾಯಾಧೀಶರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ …

Read More »

ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ

ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ಜನವರಿ ತಿಂಗಳಿನಿಂದ ಇಂದಿನವರೆಗೂ ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ವರದಿಯಿಂದ ತಿಳಿದು ಬಂದಿದೆ. ತಮಿಳುನಾಡಿನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿನ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಲ್ಲಿ ಶೇ.12, ಹರಿಯಾಣ ಶೇ.9.74, ಪಂಜಾಬ್ ಶೇ.8.12 ಮಣಿಪುರ ಶೇ.7.8 ಮತ್ತು ತೆಲಂಗಾಣ ಶೇ.7.55ರಷ್ಟು ಲಸಿಕೆಯನ್ನು ವ್ಯರ್ಥವಾಗಿ ಖರ್ಚು ಮಾಡಲಾಗಿದೆ ಎಂದು …

Read More »