Breaking News
Home / 2021 / ಏಪ್ರಿಲ್ / 26 (page 2)

Daily Archives: ಏಪ್ರಿಲ್ 26, 2021

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ’ಯಿಂದಲೇ ‘ಕೊರೋನಾ ರೂಲ್ಸ್’ ಬ್ರೇಕ್ : ‘ಮಾಸ್ಕ್ ಧರಿಸದೇ’ ಮದುವೆ ಕಾರ್ಯಕ್ರಮದಲ್ಲಿ ಭಾಗಿ

ಕಾರವಾರ : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಆದ್ರೇ.. ಈ ನಿಯಮ ಮೀರಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರೇ, ಮಾಸ್ಕ್ ಧರಿಸದೇ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಟೋ ಶೇರ್ ಮಾಡಿ, ಸಾರ್ವಜನಿಕರು ಕಿಡಿಕಾರಿದ್ದಾರೆ. ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ನಿನ್ನೆಯ ಭಾನುವಾರದಂದು ಸಿದ್ದಾಪುರದಲ್ಲಿ ನಡೆದಂತ ಆಪ್ತರ ಮದುವೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದರು. …

Read More »

ಲಾಕ್‌ಡೌನ್‌ ಇದ್ದರೂ ‘ಎಣ್ಣೆ ಪಾರ್ಸ್‌ಲ್‌’ ತೆಗೆದುಕೊಳ್ಳಲು ಅವಕಾಶ

ಬೆಂಗಳೂರು: ನಾಳೆ ಸಂಜೆಯಿಂದ 14 ದಿನಗಳ ಕಾಲ ‘ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌’ ಮಾಡಲಾಗುವುದರ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್‌ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್‌ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್‌ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, …

Read More »

ತಾಲೂಕು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಶಿಫಾರಸ್ಸು

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು. ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ …

Read More »

ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿ

ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು. ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಆಗಲಿದೆ. ಬೆಳಗ್ಗೆ 6ರಿಂದ …

Read More »

ಕೊರೋನಾ ಹೆಸರಲ್ಲಿ ಉಚಿತ ಕೊಡುಗೆಗಳು ದೇಶಕ್ಕೆ ಗಂಡಾಂತರ – ವಿಜಯ ಸಂಕೇಶ್ವರ್

ಹುಬ್ಬಳ್ಳಿ: ಉಚಿತ ಆಹಾರ ವಿತರಣೆಯಂತಹ ಸ್ಕೀಂ ಗಳು ದೇಶದ ಉತ್ಪಾದನಾ ವಲಯದ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ ಎಂದು ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ 2 ನೇ ಅಲೆ ಅಬ್ಬರಿಸುತ್ತಿದೆ. ಜನ ಸಾಮಾನ್ಯರು ತೊಂದರೆಗೆ ಈಡಾಗ್ತಿದಾರೆ ಅಂತ ಪ್ರಧಾನಿ ನರೇಂದ್ರ ಮೋದಿ, ಅವರ ನರವಿಗೆ ಮುಂದಾಗಿದಾರೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಡೋದಾಗಿ ಪ್ರಧಾನಿ ಹೇಳಿದಾರೆ. ಇದರಿಂದ …

Read More »

ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಈಗಾಗಲೇ ಹಲವೆಡೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಏ. 29, 30 ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು …

Read More »

ಗದಗ: ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಗರದ ಬ್ಯಾಂಕ್ ರೋಡ್‌ನಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ್ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಹೆಸ್ಕಾಂ ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ …

Read More »

ಹುಬ್ಬಳ್ಳಿ: ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತನೆಯಾಗುತ್ತಿದೆ ರೈಲ್ವೆ ಬೋಗಿಗಳು; ಮಹತ್ವದ ಕಾರ್ಯಕ್ಕೆ ಮುಂದಾದ ರೈಲ್ವೆ ಇಲಾಖೆ

ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ಸೋಂಕಿನ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ಇದಕ್ಕೆ ಬೆಂಬಲವಾಗಿ ರೈಲ್ವೆ ಇಲಾಖೆಯೂ ಸಹ ಕೈ ಜೋಡಿಸಿದ್ದು, ರೈಲ್ವೆ ಬೋಗಿಗಳನ್ನು ಇದೀಗ ಮತ್ತೇ ಐಸೋಲೇಷನ್ ವಾರ್ಡ್​ಗಳಾಗಿ ಪರಿವರ್ತಿಸಲಾಗುತ್ತಿದೆ. ಇಡೀ ದೇಶವೇ ಆತಂಕಕ್ಕೆ ತಳ್ಳಿದ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ದೇಶದೆಲ್ಲೆಡೆ ಯಾವುದೇ ರೀತಿಯಲ್ಲಿ …

Read More »

ರೈಲು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಇಲ್ಲವೇ? ಹಿಂದೆ ಲಾಕ್‌ಡೌನ್‌ ವೇಳೆ ಇದ್ದ ನಿಯಮ ಈಗಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಾಡುತ್ತಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲವೇ? ಬೆಂಗಳೂರು ನಗರ ರೈಲ್ವೇ ನಿಲ್ದಾಣದ ಸ್ಥಿತಿ ನೋಡಿದರೆ ಹಾಗೆ ಅನ್ನಿಸದೇ ಇರದು. ಮಹಾರಾಷ್ಟ್ರ, ಕೇರಳ, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಿಂದ ರೈಲಿನಲ್ಲಿ ಬರುತ್ತಿರುವವರು ಕೊರೊನಾ ಪರೀಕ್ಷೆ, ಕೊರೊನಾ ನೆಗೆಟಿವ್‌ ಪ್ರಮಾಣಪತ್ರದ ಪರಿಶೀಲನೆ ಇಲ್ಲದೆ ರೈಲ್ವೇ ನಿಲ್ದಾಣದಿಂದ ಹೊರಬರುತ್ತಿದ್ದಾರೆ! ನೆರೆ ರಾಜ್ಯಗಳು, ದಿಲ್ಲಿ, ತ. ನಾಡು ಸೇರಿದಂತೆ 35-40 ರೈಲುಗಳು ಸಂಚರಿಸುತ್ತವೆ. ರಾಜ್ಯದ ನಾನಾ ಭಾಗಗಳಿಗೂ ಹತ್ತಾರು ರೈಲುಗಳು ಚಲಿಸುತ್ತವೆ. ಆದರೆ ಬರುವ …

Read More »

ಪಶ್ಚಿಮ ಬಂಗಾಳ ಚುನಾವಣೆ: ಏಳನೇ ಹಂತದ ಮತದಾನ, ಸಿಎಂ ತವರು ಕ್ಷೇತ್ರ ಭಬಾನಿಪುರ ಮೇಲೆ ಎಲ್ಲರ ಚಿತ್ತ

ಕೋಲ್ಕತ್ತ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆ, ಪಶ್ಚಿಮ ಬಂಗಾಳದ ಐದು ಜಿಲ್ಲೆಗಳ 34 ಕ್ಷೇತ್ರಗಳಲ್ಲಿ 7ನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಚುನಾವಣೆಯ ಈ ಹಂತದಲ್ಲಿ 37 ಮಹಿಳೆಯರು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಳನೇ ಹಂತವು ದಕ್ಷಿಣ ದಿನಾಜ್‌ಪುರದ ಆರು, ಮಾಲ್ಡಾದಲ್ಲಿ ಆರು, ಮುರ್ಷಿದಾಬಾದ್‌ನಲ್ಲಿ ಒಂಬತ್ತು, ಪಶ್ಚಿಮ ಬರ್ಧಮಾನ್‌ನಲ್ಲಿ ಒಂಭತ್ತು ಮತ್ತು ಕೋಲ್ಕತ್ತಾದ ನಾಲ್ಕು ಕ್ಷೇತ್ರಗಳಲ್ಲಿ …

Read More »