Breaking News
Home / 2021 / ಏಪ್ರಿಲ್ / 26 (page 3)

Daily Archives: ಏಪ್ರಿಲ್ 26, 2021

ಚೆನ್ನೈ ಅದ್ಭುತ ಆಟ, ಆರ್‌ಸಿಬಿಯ ಕೆಟ್ಟ ದಿನಗಳಲ್ಲಿ ಇದೂ ಒಂದು: ಕಿಚ್ಚ

ಬೆಂಗಳೂರು: ಐಪಿಎಲ್‍ನ ಹೈ ವೋಲ್ಟೇಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಜಡೇಜಾ ಮ್ಯಾಜಿಕ್‍ನಿಂದಾಗಿ 69 ರನ್ ಗಳಿಂದ ಚೆನ್ನೈ ಭರ್ಜರಿ ಜಯ ಸಾಧಿಸಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೆಲ್ ಪ್ಲೇಯ್ಡ್ ಚೆನ್ನೈ ಸೂಪರ್ ಕಿಂಗ್ಸ್, ಇಲ್ಲಿಂದ ಇನ್ನೂ ಹೆಚ್ಚು ಆಸಕ್ತಿದಾಕವಾಗಿದೆ. ಅಲ್ಲದೆ ಆರ್ ಸಿಬಿಯ …

Read More »

ವೀಕೆಂಡ್ ಕರ್ಫ್ಯೂ ಅಂತ್ಯ – ಬೆಂಗಳೂರು ತೊರೆಯುತ್ತಿರುವ ಜನ

ಬೆಂಗಳೂರು: 57 ಗಂಟೆಗಳ ವೀಕೆಂಡ್ ಕರ್ಫ್ಯೂ ಅಂತ್ಯವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾ ವಲಸೆ ಆರಂಭವಾಗಿದೆ. ನಗರದ ಎಲ್ಲ ಫ್ಲೈ ಓವರ್ ಗಳಿಗೆ ಹಾಕಲಾಗಿದೆ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಲಗೇಜು ಸಮೇತ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿರುವ ಜನರು ತವರಿನತ್ತ ಮುಖ ಮಾಡುತ್ತಿದ್ದಾರೆ. ಸಿಕ್ಕ ಬಸ್ ಗಳನ್ನು ಹತ್ತಿಕೊಂಡು ಮೊದಲು ಊರು ಸೇರಿಕೊಳ್ಳಬೇಕೆಂಬ ಅವಸರದಲ್ಲಿದ್ದಾರೆ. ಸರ್ಕಾರ ಬಿಎಂಟಿಸಿ ಬಸ್ ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನ ಕರೆದುಕೊಂಡು ಹೋಗುವಂತೆ …

Read More »

ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ : ವೇತನ ಸಂಹಿತೆ ಮಸೂದೆಯ ವ್ಯಾಪ್ತಿಯ ಅಡಿಯಲ್ಲಿ ಕೆಲಸದ ಸಮಯ, ವೇತನ ರಚನೆ, ಟೇಕ್-ಹೋಮ್ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಯಿಟಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಸರ್ಕಾರಿ ನೌಕರರಿಗೆ ಜಾರಿಗೆಗೊಳಿಸಿದೆ. ವೇತನ ಮಸೂದೆ 2019 ರ ಮಸೂದೆ /ಸಂಹಿತೆಯನ್ನು 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಸರ್ಕಾರವು ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಯಮಗಳ ಅನುಷ್ಠಾನವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ಬಯಸಿದರೂ ಮುಂದೂಡಿತು, ಇದರಿಂದ ರಾಜ್ಯಗಳು ವೇತನ ನಿಯಮ …

Read More »

ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ.

HUBLI#NEWS#RAILWAT#

ಹುಬ್ಬಳ್ಳಿ: ರೈಲ್ವೆ ಇಲಾಖೆ ಹುಬ್ಬಳ್ಳಿ ವಿಭಾಗದಿಂದ ಪಾರ್ಸೆಲ್ ಸಾಗಣೆಗೆ ಎನ್.ಎಂ.ಜಿ ರೇಕ್ ಗಳ ಬಳಕೆಗೆ ನಿರ್ಧರಿಸಿದೆ. ಭಾರತೀಯ ರೈಲ್ವೆಯಲ್ಲಿಯೇ ಮೊಟ್ಟ ಮೊದಲ ಬಾರಿಗೆ ಹುಬ್ಬಳ್ಳಿ ವಿಭಾಗವು ಬಳಕೆಯಾಗದ ಸಾಮಾನ್ಯ ದ್ವಿತಿಯ ದರ್ಜೆಯ ಕೋಚ್ ಗಳನ್ನು ಪಾರ್ಸೆಲ್ ಸಾಗಣೆಗೆ ಬಳಸಿಕೊಂಡಿತ್ತು. ಇದೀಗ ಬಳಕೆಯಾಗದ ಎನ್.ಎಂ.ಜಿ ರೇಕ್ ಗಳನ್ನು ಪಾರ್ಸೆಲ್ ಸಾಗಣೆಗೆ ಉಪಯೋಗಿಸಿದೆ. ಎನ್.ಎಂ.ಜಿ ರೇಕ್ ಗಳನ್ನು ಸಾಮಾನ್ಯವಾಗಿ ವಾಹನಗಳ ಸಾಗಾಣಿಕೆಗೆ ಬಳಸಲಾಗುತ್ತದೆ. 25 ಎನ್.ಎಂ. ವ್ಯಾಗನ್ ಗಳ ಮೂಲಕ 210 ಟನ್ …

Read More »

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಏಪ್ರಿಲ್ 28ರಿಂದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿತ್ತು. ಆದ್ರೇ ಕೊರೋನಾ ಸೋಂಕಿನ 2ನೇ ಅಲೆಯ ಹೆಚ್ಚಳದ ಹಿನ್ನಲೆಯಲ್ಲಿ, ಇದೀಗ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷಾ ದಿನಾಂಕವನ್ನು ಮುಂದೂಡಿಕೆ ಮಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ …

Read More »

ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು: ಅಶೋಕ ಪೂಜಾರಿ

ಗೋಕಾಕ: ದೇಶಾದ್ಯಂತ ಹಬ್ಬಿರುವ ಕೋರೋನಾ ವೈರಸ್ ಪ್ರಖರತೆ ಕಳೆದ ಬಾರಿಗಿಂತ ನಾಲ್ಕು ಪಟ್ಟು ಹೆಚ್ಚು ತೀಕ್ಷಣತೆಯನ್ನು ಹೊಂದಿರುವ ಈ ಸಂದರ್ಭದಲ್ಲಿ ಸರಕಾರದ ನಿಷ್ಕ್ರೀಯತೆಯಿಂದ ಉಂಟಾಗಿರುವ ಆಕ್ಸಿಜನ್ ಕೊರತೆ ಹಾಗೂ ರೆಮಿಡಿಸಿಯರ್ ಇಂಜಕ್ಷನಗಳ ಅಭಾವದಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಪ್ರತಿನಿತ್ಯ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಕೂಡಲೇ ಆಕ್ಸಿಜನ್ ಪೂರೈಕೆ ಹಾಗೂ ಜೀವರಕ್ಷಕ ರೆಮಿಡಿಸಿವಿಯರ್ ಇಂಜಕ್ಷನಗಳ ಲಭ್ಯತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ …

Read More »

ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಸಭೆ ಮುಂದಿನ 15 ದಿನ ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ. ರಾಜ್ಯದ …

Read More »