ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ ರಾತ್ರಿಯಿಂದಲೇ ಜನತಾ ಕರ್ಫ್ಯೂ ಜಾರಿಗೆ ಸರಕಾರ ನಿರ್ಧರಿಸಿದೆ. ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದರು. ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಆಗಲಿದೆ. ಬೆಳಗ್ಗೆ 6ರಿಂದ …
Read More »Monthly Archives: ಏಪ್ರಿಲ್ 2021
ಕೊರೋನಾ ಹೆಸರಲ್ಲಿ ಉಚಿತ ಕೊಡುಗೆಗಳು ದೇಶಕ್ಕೆ ಗಂಡಾಂತರ – ವಿಜಯ ಸಂಕೇಶ್ವರ್
ಹುಬ್ಬಳ್ಳಿ: ಉಚಿತ ಆಹಾರ ವಿತರಣೆಯಂತಹ ಸ್ಕೀಂ ಗಳು ದೇಶದ ಉತ್ಪಾದನಾ ವಲಯದ ಮೇಲೆ ತೀವ್ರ ತರದ ಪರಿಣಾಮ ಬೀರಲಿದೆ ಎಂದು ಮಾಜಿ ಸಂಸದ, ಉದ್ಯಮಿ ವಿಜಯ ಸಂಕೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ 2 ನೇ ಅಲೆ ಅಬ್ಬರಿಸುತ್ತಿದೆ. ಜನ ಸಾಮಾನ್ಯರು ತೊಂದರೆಗೆ ಈಡಾಗ್ತಿದಾರೆ ಅಂತ ಪ್ರಧಾನಿ ನರೇಂದ್ರ ಮೋದಿ, ಅವರ ನರವಿಗೆ ಮುಂದಾಗಿದಾರೆ. 80 ಕೋಟಿ ಜನರಿಗೆ ಉಚಿತ ರೇಷನ್ ಕೊಡೋದಾಗಿ ಪ್ರಧಾನಿ ಹೇಳಿದಾರೆ. ಇದರಿಂದ …
Read More »ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಈಗಾಗಲೇ ಹಲವೆಡೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಏ. 29, 30 ರಂದು ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು …
Read More »ಗದಗ: ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ
ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಗರದ ಬ್ಯಾಂಕ್ ರೋಡ್‌ನಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ್ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಹೆಸ್ಕಾಂ ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ …
Read More »ಹುಬ್ಬಳ್ಳಿ: ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತನೆಯಾಗುತ್ತಿದೆ ರೈಲ್ವೆ ಬೋಗಿಗಳು; ಮಹತ್ವದ ಕಾರ್ಯಕ್ಕೆ ಮುಂದಾದ ರೈಲ್ವೆ ಇಲಾಖೆ
ಹುಬ್ಬಳ್ಳಿ: ದೇಶದಲ್ಲಿ ಕೊರೊನಾ ಎರಡನೇ ಅಲೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಲ್ಲದೆ ಸೋಂಕಿನ ನಿಯಂತ್ರಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹರಸಾಹಸ ಪಡುತ್ತಿವೆ. ಇದಕ್ಕೆ ಬೆಂಬಲವಾಗಿ ರೈಲ್ವೆ ಇಲಾಖೆಯೂ ಸಹ ಕೈ ಜೋಡಿಸಿದ್ದು, ರೈಲ್ವೆ ಬೋಗಿಗಳನ್ನು ಇದೀಗ ಮತ್ತೇ ಐಸೋಲೇಷನ್ ವಾರ್ಡ್ಗಳಾಗಿ ಪರಿವರ್ತಿಸಲಾಗುತ್ತಿದೆ. ಇಡೀ ದೇಶವೇ ಆತಂಕಕ್ಕೆ ತಳ್ಳಿದ ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನೇಕ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ದೇಶದೆಲ್ಲೆಡೆ ಯಾವುದೇ ರೀತಿಯಲ್ಲಿ …
Read More »ರೈಲು ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಇಲ್ಲವೇ? ಹಿಂದೆ ಲಾಕ್‌ಡೌನ್ ವೇಳೆ ಇದ್ದ ನಿಯಮ ಈಗಿಲ್ಲ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಾಡುತ್ತಿದ್ದರೂ ಸರಕಾರ ಎಚ್ಚೆತ್ತುಕೊಂಡಿಲ್ಲವೇ? ಬೆಂಗಳೂರು ನಗರ ರೈಲ್ವೇ ನಿಲ್ದಾಣದ ಸ್ಥಿತಿ ನೋಡಿದರೆ ಹಾಗೆ ಅನ್ನಿಸದೇ ಇರದು. ಮಹಾರಾಷ್ಟ್ರ, ಕೇರಳ, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಿಂದ ರೈಲಿನಲ್ಲಿ ಬರುತ್ತಿರುವವರು ಕೊರೊನಾ ಪರೀಕ್ಷೆ, ಕೊರೊನಾ ನೆಗೆಟಿವ್ ಪ್ರಮಾಣಪತ್ರದ ಪರಿಶೀಲನೆ ಇಲ್ಲದೆ ರೈಲ್ವೇ ನಿಲ್ದಾಣದಿಂದ ಹೊರಬರುತ್ತಿದ್ದಾರೆ! ನೆರೆ ರಾಜ್ಯಗಳು, ದಿಲ್ಲಿ, ತ. ನಾಡು ಸೇರಿದಂತೆ 35-40 ರೈಲುಗಳು ಸಂಚರಿಸುತ್ತವೆ. ರಾಜ್ಯದ ನಾನಾ ಭಾಗಗಳಿಗೂ ಹತ್ತಾರು ರೈಲುಗಳು ಚಲಿಸುತ್ತವೆ. ಆದರೆ ಬರುವ …
Read More »ಪಶ್ಚಿಮ ಬಂಗಾಳ ಚುನಾವಣೆ: ಏಳನೇ ಹಂತದ ಮತದಾನ, ಸಿಎಂ ತವರು ಕ್ಷೇತ್ರ ಭಬಾನಿಪುರ ಮೇಲೆ ಎಲ್ಲರ ಚಿತ್ತ
ಕೋಲ್ಕತ್ತ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಮಧ್ಯೆ, ಪಶ್ಚಿಮ ಬಂಗಾಳದ ಐದು ಜಿಲ್ಲೆಗಳ 34 ಕ್ಷೇತ್ರಗಳಲ್ಲಿ 7ನೇ ಹಂತದ ವಿಧಾನಸಭಾ ಚುನಾವಣೆಯ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು. ಪಶ್ಚಿಮ ಬಂಗಾಳ ಚುನಾವಣೆಯ ಈ ಹಂತದಲ್ಲಿ 37 ಮಹಿಳೆಯರು ಸೇರಿದಂತೆ ಒಟ್ಟು 268 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಳನೇ ಹಂತವು ದಕ್ಷಿಣ ದಿನಾಜ್‌ಪುರದ ಆರು, ಮಾಲ್ಡಾದಲ್ಲಿ ಆರು, ಮುರ್ಷಿದಾಬಾದ್‌ನಲ್ಲಿ ಒಂಬತ್ತು, ಪಶ್ಚಿಮ ಬರ್ಧಮಾನ್‌ನಲ್ಲಿ ಒಂಭತ್ತು ಮತ್ತು ಕೋಲ್ಕತ್ತಾದ ನಾಲ್ಕು ಕ್ಷೇತ್ರಗಳಲ್ಲಿ …
Read More »ಚೆನ್ನೈ ಅದ್ಭುತ ಆಟ, ಆರ್‌ಸಿಬಿಯ ಕೆಟ್ಟ ದಿನಗಳಲ್ಲಿ ಇದೂ ಒಂದು: ಕಿಚ್ಚ
ಬೆಂಗಳೂರು: ಐಪಿಎಲ್‍ನ ಹೈ ವೋಲ್ಟೇಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಜಡೇಜಾ ಮ್ಯಾಜಿಕ್‍ನಿಂದಾಗಿ 69 ರನ್ ಗಳಿಂದ ಚೆನ್ನೈ ಭರ್ಜರಿ ಜಯ ಸಾಧಿಸಿದೆ. ಈ ಬಗ್ಗೆ ನಟ ಕಿಚ್ಚ ಸುದೀಪ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೆಲ್ ಪ್ಲೇಯ್ಡ್ ಚೆನ್ನೈ ಸೂಪರ್ ಕಿಂಗ್ಸ್, ಇಲ್ಲಿಂದ ಇನ್ನೂ ಹೆಚ್ಚು ಆಸಕ್ತಿದಾಕವಾಗಿದೆ. ಅಲ್ಲದೆ ಆರ್ ಸಿಬಿಯ …
Read More »ವೀಕೆಂಡ್ ಕರ್ಫ್ಯೂ ಅಂತ್ಯ – ಬೆಂಗಳೂರು ತೊರೆಯುತ್ತಿರುವ ಜನ
ಬೆಂಗಳೂರು: 57 ಗಂಟೆಗಳ ವೀಕೆಂಡ್ ಕರ್ಫ್ಯೂ ಅಂತ್ಯವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಹಾ ವಲಸೆ ಆರಂಭವಾಗಿದೆ. ನಗರದ ಎಲ್ಲ ಫ್ಲೈ ಓವರ್ ಗಳಿಗೆ ಹಾಕಲಾಗಿದೆ ಬ್ಯಾರಿಕೇಡ್ ಗಳನ್ನು ತೆಗೆಯಲಾಗಿದೆ. ಇಂದು ಬೆಳ್ಳಂ ಬೆಳಗ್ಗೆ ಲಗೇಜು ಸಮೇತ ಬಸ್ ನಿಲ್ದಾಣಗಳಿಗೆ ಆಗಮಿಸುತ್ತಿರುವ ಜನರು ತವರಿನತ್ತ ಮುಖ ಮಾಡುತ್ತಿದ್ದಾರೆ. ಸಿಕ್ಕ ಬಸ್ ಗಳನ್ನು ಹತ್ತಿಕೊಂಡು ಮೊದಲು ಊರು ಸೇರಿಕೊಳ್ಳಬೇಕೆಂಬ ಅವಸರದಲ್ಲಿದ್ದಾರೆ. ಸರ್ಕಾರ ಬಿಎಂಟಿಸಿ ಬಸ್ ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಕರನ್ನ ಕರೆದುಕೊಂಡು ಹೋಗುವಂತೆ …
Read More »ಕೇಂದ್ರ ಸರ್ಕಾರದಿಂದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ನವದೆಹಲಿ : ವೇತನ ಸಂಹಿತೆ ಮಸೂದೆಯ ವ್ಯಾಪ್ತಿಯ ಅಡಿಯಲ್ಲಿ ಕೆಲಸದ ಸಮಯ, ವೇತನ ರಚನೆ, ಟೇಕ್-ಹೋಮ್ ವೇತನ, ಭವಿಷ್ಯ ನಿಧಿ ಮತ್ತು ಗ್ರಾಚ್ಯುಯಿಟಿಗೆ ಸಂಬಂಧಿಸಿದ ಹಲವಾರು ಬದಲಾವಣೆಗಳನ್ನು ಸರ್ಕಾರಿ ನೌಕರರಿಗೆ ಜಾರಿಗೆಗೊಳಿಸಿದೆ. ವೇತನ ಮಸೂದೆ 2019 ರ ಮಸೂದೆ /ಸಂಹಿತೆಯನ್ನು 2019 ರಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಸರ್ಕಾರವು ಹೊಸ ಕಾರ್ಮಿಕ ಸಂಹಿತೆಯಲ್ಲಿ ನಿಯಮಗಳ ಅನುಷ್ಠಾನವನ್ನು ಏಪ್ರಿಲ್ 1 ರಿಂದ ಜಾರಿಗೆ ತರಲು ಬಯಸಿದರೂ ಮುಂದೂಡಿತು, ಇದರಿಂದ ರಾಜ್ಯಗಳು ವೇತನ ನಿಯಮ …
Read More »