Breaking News
Home / 2021 / ಏಪ್ರಿಲ್ (page 2)

Monthly Archives: ಏಪ್ರಿಲ್ 2021

ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ

ಬೆಳಗಾವಿ-ಮಹಾಮಾರಿ ಕೊರೊನಾ ಅಟ್ಟಹಾಸ ಬೆಳಗಾವಿಯಲ್ಲಿ ಮುಂದುರೆದಿದ್ದು ಕೋವೀಡ್ ಮರಣ ಮೃದಂಗ ಮುಂದುರೆದಿದೆ,ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ 11 ಜನ ಶವಸಂಸ್ಕಾರ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಈವರೆಗೂ 11 ಜನರು ಮೃತಪಟ್ಟಿದ್ದು, ಈ ಹನ್ನೊಂದು ಶವಗಳನ್ನುಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿದೆ.ಸದಾಶಿವನಗರ ಸ್ಮಶಾನದಲ್ಲಿ ಇಂದು ಒಂದೇ ದಿನ 11 ಜನರ ಅಂತ್ಯಕ್ರಿಯೆ ನಡೆದಿದೆ. ಸದಾಶಿವ ನಗರ ಸ್ಮಶಾನದ ಬಳಿ ನಿಯೋಜಿತ ಮಹಾನಗರ ಪಾಲಿಕೆ ಸಿಬ್ಬಂದಿಯಿಂದ ಬೆಚ್ಚಿ ಬೀಳಿಸುವ ಮಾಹಿತಿ …

Read More »

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕೆಎಂಎಫ್

ಕೋವಿಡ್ ಎರಡನೇ ಅಲೆ ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ …

Read More »

ಮೇ 1ರಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಾರ್ಕಿಂಗ್ ಶುಲ್ಕ ಏರಿಕೆ : ಅದಾನಿ ಕಂಪೆನಿ

ಮಂಗಳೂರು :ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆ ಪಡೆದಿರುವ ಖಾಸಗಿ ಕಂಪೆನಿ ವಿಮಾನ ನಿಲ್ದಾಣದಲ್ಲಿನ ವಾಹನ ನಿಲುಗಡೆ ಶುಲ್ಕವನ್ನು ಗರಿಷ್ಠ ಪ್ರಮಾಣದಲ್ಲಿ ಏರಿಸಿರುವುದು ವಾಹನ ಚಾಲಕರ ಹಾಗೂ ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ವಿಮಾನ ನಿಲ್ದಾಣವನ್ನು ಗುತ್ತಿಗೆ ಪಡೆದಿರುವ ಅದಾನಿ ಕಂಪೆನಿ ಮೇ 1, ರಿಂದ ಹೊಸ ಪಾರ್ಕಿಂಗ್ ದರವನ್ನು ವಿಧಿಸುವುದಾಗಿ ಪ್ರಕಟಿಸಿದೆ. ವಿಮಾನ ನಿಲ್ದಾಣದಲ್ಲಿ ದಿಢೀರ್ ಪಾರ್ಕಿಂಗ್ ಶುಲ್ಕ ಏರಿಸಿರುವುದು ಕೊರೋನ ಸಂಕಷ್ಟದ ಕಾಲದಲ್ಲಿ ಜನರ ಗಾಯದ ಮೇಲೆ ಇನ್ನೊಂದು …

Read More »

ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ

ವಿಜಯಪುರ: ದೇಶದ ಎಲ್ಲ ನಾಗರಿಕರು ಕೋವಿಡ್ ಲಸಿಕೆ ಪಡೆದು, ಕೋವಿಡ್ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಶುಕ್ರವಾರ ವಿಜಯಪುರ ನಗರದ ವಾರ್ಡ ನಂ-3 ರಲ್ಲಿ ಗ್ಯಾಂಗ್ ಬಾವಡಿ ಸರಕಾರಿ ಶಾಲೆ ನಂ-10 ರಲ್ಲಿ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಬಳಿಕ ಜನರಿಗೆ ಲಸಿಕೆ ಪಡೆಯುವ ಅಗತ್ಯ ಹಾಗೂ ಮಹತ್ವದ ಕುರಿತು ವಿವರಿಸಿದರು. ಭಾರತದಲ್ಲೇ ಅಭಿವೃದ್ಧಿ ಪಡಿಸಿದ, ಅತ್ಯಂತ …

Read More »

ಕೋವಿಡ್ ನಿಯಂತ್ರಣ ವೈಫಲ್ಯ: ವಿಜಯಪುರ ಡಿಎಚ್‌ಒ ಡಾ.ಯರಗಲ ಕಡ್ಡಾಯ ರಜೆ

ವಿಜಯಪುರ: ಕೋವಿಡ್ ಎರಡನೇ ಅಲೆಯ ವೇಗ ಹೆಚ್ಚಿದ್ದು, ಸೋಂಕು ನಿಯಂತ್ರಣ ವಿಷಯದಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪದಲ್ಲಿ ವಿಜಯಪುರ ಡಿಎಚ್‌ಒ ಡಾ.ರಾಜಕುಮಾರ ಯರಗಲ ಅವರನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಯ. ಶಿವಶಂಕರ ಅವರು, ತಕ್ಷಣದಿಂದಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಡಾ.ರಾಜಕುಮಾರ ಅವರನ್ನು ಕಡ್ಡಾಯ ರಜೆ ಮೇಲೆ …

Read More »

ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!

ಬೆಂಗಳೂರು: ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ನಂಬಿಸಿ ವಂಚಿಸಿದ್ದ ಆ‌ರೋಪದಲ್ಲಿ ಬಂಧಿತನಾಗಿರುವ ಯುವರಾಜ್‌ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ. ಅಲ್ಲದೆ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರೇ ರಾಜ್ಯಪಾಲರ ಹುದ್ದೆಗಾಗಿ ಅರ್ಜಿದಾರನಿಗೆ ಲಂಚ ನೀಡಿರುವುದು ದುರದೃಷ್ಟಕರ, ಇದರಿಂದ ನ್ಯಾಯಮೂರ್ತಿಯ ಹುದ್ದೆಯ ಘನತೆ ಕುಗ್ಗಿರುವುದಲ್ಲದೆ, ರಾಜ್ಯಪಾಲರ ಹುದ್ದೆಯ ಘನತೆಗೂ ಕುಂದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಪೊಲೀಸರು …

Read More »

ಕೋವಿಡ್ ರೋಗಿಗಳ ಪಾಲಿಗೆ ‘ಹೀರೋ’ : ಆಯಂಬುಲೆನ್ಸ್ ಚಾಲಕನಾದ ಖಳನಟ ಅರ್ಜುನ್ ಗೌಡ

ಬೆಂಗಳೂರು: ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ದೇಶ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ, ಇಲ್ಲೊಬ್ಬ ಚಂದನವನದ ನಟ ಆಯಂಬುಲೆನ್ಸ್ ಚಾಲಕನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿರುವ ಅರ್ಜುನ್, ಈಗ ರಿಯಲ್ ಲೈಫಿನಲ್ಲಿ ಹೀರೋ ಆಗಿದ್ದಾನೆ. ಇವರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಆಯಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ …

Read More »

18 ವರ್ಷ ಮೇಲ್ಪಟ್ಟವರು ನಾಳೆ ಲಸಿಕೆಗಾಗಿ ಆಸ್ಪತ್ರೆಗೆ ಬರಬೇಡಿ: ಸಚಿವ ಸುಧಾಕರ್

ಬೆಂಗಳೂರು: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೇ.1ರಿಂದಲೇ ಕೋವಿಡ್ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ಪಡೆಯಲು ನಾಳೆ ಆಸ್ಪತ್ರೆಗಳಿಗೆ ಬರಬೇಡಿ. ನಮಗೆ ಕಂಪೆನಿಯಿಂದ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬೇಕಾದಷ್ಟು ಲಸಿಕೆ ತಲುಪಿಲ್ಲ. ಯಾವಾಗ ಲಸಿಕೆ ಬರುತ್ತಿದೆ ಎಂಬ ಮಾಹಿತಿಯೂ ಇಲ್ಲ ಎಂದರು. ಹೀಗಾಗಿ ಲಸಿಕೆ ಪಡೆಯಲು 18ರಿಂದ 45 ವರ್ಷದವರೆಗಿನವರು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡವರು …

Read More »

ಗಮನಿಸಿ: ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ

ಬೆಂಗಳೂರು: ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ರೊಳಗಾಗಿ …

Read More »

ಕೋವಿಡ್-19: ಪರೀಕ್ಷಾ ವರದಿ ವಿಳಂಬ, ಆತಂಕದಲ್ಲಿಯೇ ದಿನ ದೂಡುತ್ತಿರುವ ಬೆಂಗಳೂರು ಜನತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಹರಡುತ್ತಿದ್ದು, ಈ ನಡುವೆ ಅಲ್ಪ ಸ್ವಲ್ಪ ಲಕ್ಷಣಗಳು ಕಂಡು ಬಂದರೂ ಆತಂಕಕ್ಕೊಳಗಾಗುತ್ತಿರುವ ಜನರು ಸ್ಥಳೀಯ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳಿಗೆ ತೆರಳಿ ಪರೀಕ್ಷೆಗೊಳಗಾಗುತ್ತಿದ್ದಾರೆ. ಈ ನಡುವೆ ಲ್ಯಾಬ್ ಗಳ ವರದಿ ತಡವಾಗಿ ಬರುತ್ತಿದ್ದು, ಇದು ಜನತೆಯ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತಿದೆ. ನಗರದಲ್ಲಿ ಸೋಂಕು ಹೆಚ್ಚಾದಂತೆ ಲ್ಯಾಬ್ ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಹಲವು ಲ್ಯಾಬ್ ಗಳು ಪರೀಕ್ಷಾ …

Read More »