Breaking News
Home / 2021 / ಏಪ್ರಿಲ್ (page 22)

Monthly Archives: ಏಪ್ರಿಲ್ 2021

ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಕೊರೊನಾ ನಿರ್ವಹಣೆ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ; ಸೂಕ್ತ ಯೋಜನೆಯೂ ಇಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಟೀಕಿಸಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೊರೊನಾ 2ನೇ ಅಲೆ ಹರಡುವ ಬಗ್ಗೆ ತಜ್ಞರು ಹಿಂದೆಯೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಹಾಸಿಗೆಗಳು, ವೈದ್ಯಕೀಯ ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ವ್ಯವಸ್ಥೆ ಮತ್ತು ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ …

Read More »

ಸರ್ಕಾರದಿಂದ ಜನರ ಕೊಲೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

ಬೆಂಗಳೂರು: ತಜ್ಞರ ವರದಿಯನ್ನು ರಾಜ್ಯದ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದ ಪರಿಣಾಮವಾಗಿ ಜನರು ಕೋವಿಡ್‌ನಿಂದ ಬೀದಿಯ ಮೇಲೆ ಸಾಯುತ್ತಿದ್ದಾರೆ. ಈ ಸಾವುಗಳು ಕೋವಿಡ್‌ನಿಂದ ಆಗುತ್ತಿವೆ ಎನ್ನುವುದಕ್ಕಿಂತ ಬಿಜೆಪಿ ಸರ್ಕಾರದ ಅದಕ್ಷತೆ ಮತ್ತು ಉಡಾಫೆಯಿಂದ ಆದ ಕೊಲೆಗಳು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೋವಿಡ್‌ ಎರಡನೇ ಅಲೆ ಸ್ಫೋಟಗೊಂಡಿರುವ ಸಂದರ್ಭದಲ್ಲಿ ಸೋಂಕಿತರ ಚಿಕಿತ್ಸೆಗೆ ನೆರವಾಗುವಂತೆ ಕಾಂಗ್ರೆಸ್‌ನ ಎಲ್ಲ ಶಾಸಕರಿಗೂ ಶುಕ್ರವಾರ ಬರೆದಿರುವ ಪತ್ರದಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಅವರು, …

Read More »

ಶಾಶ್ವತವಾಗಿ ಬಾಗಿಲು ಹಾಕಿದ ಮೈಸೂರಿನ ಹಳೆಯ ಚಿತ್ರಮಂದಿರ

ಮಲ್ಟಿಫ್ಲೆಕ್ಸ್‌ಗಳ ವಿರುದ್ಧ ಹಾಗೋ ಹೀಗೋ ಹೋರಾಡಿ ಜೀವ ಹಿಡಿದುಕೊಂಡಿದ್ದ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಕೊರೊನಾ ಹೊಡೆತಕ್ಕೆ ಸಂಪೂರ್ಣ ತಲೆಕೆಳಗಾಗಿವೆ. ರಾಜ್ಯದಲ್ಲಿ ಹಲವು ಸಿಂಗಲ್ ಸ್ಕ್ರೀನ್‌ ಚಿತ್ರಮಂದಿರಗಳು ಕಳೆದ ಒಂದು ವರ್ಷದಲ್ಲಿ ಬಾಗಿಲು ಮುಚ್ಚಿವೆ. ಇದೀಗ ಮೈಸೂರಿನಲ್ಲಿ ಮತ್ತೊಂದು ಚಿತ್ರಮಂದಿರ ಶಾಶ್ವತವಾಗಿ ಬಾಗಿಲು ಹಾಕಿದೆ. ಮೈಸೂರಿನ ಮಂಡಿ ಮೊಹಲ್ಲದಲ್ಲಿದ್ದ ‘ಶ್ರೀ ಟಾಕೀಸ್’ ಶಾಶ್ವತವಾಗಿ ಬಾಗಿಲು ಹಾಕಿದೆ. ಐದು ದಶಕಕ್ಕೂ ಹಳೆಯದಾದ ಈ ಚಿತ್ರಮಂದಿರ ಕೊರೊನಾ ಸಮಯದಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತಾದ್ದರಿಂದ ಟಾಕೀಸ್‌ …

Read More »

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ನಿಗದಿ, ಮಾರ್ಗಸೂಚಿ ಪ್ರಕಟ

ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪ್ರತಿ ದಿನ ಪರೀಕ್ಷೆ ಮುಗಿದ ನಂತರ‌ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್​ಲೈನ್​ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ …

Read More »

ಮೇ ಮಧ್ಯದಲ್ಲಿ ದೇಶದಲ್ಲಿ ದಿನದಲ್ಲಿ 5 ಸಾವಿರ ಜನ ಕೊರೋನಾಗೆ ಬಲಿಯಾಗಲಿದ್ದಾರೆ : ಶಾಕಿಂಗ್ ವರದಿ ನೀಡಿದ ಅಧ್ಯಯನ

ನವದೆಹಲಿ : ಕೊರೊನಾ ವೈರಸ್ ಪ್ರೇರಿತ ಸಾವುಗಳ ಭಾರತದ ದೈನಂದಿನ ಸಂಖ್ಯೆ ಮೇ ಮಧ್ಯಭಾಗದಲ್ಲಿ 5,600 ಕ್ಕೆ ಏರಬಹುದು ಎಂದು ಅಮೆರಿಕದ ಅಧ್ಯಯನವು ಎಚ್ಚರಿಸಿದೆ. ಇದರರ್ಥ ಏಪ್ರಿಲ್ ಮತ್ತು ಆಗಸ್ಟ್ ನಡುವೆ ದೇಶದಲ್ಲಿ ಸುಮಾರು ಮೂರು ಲಕ್ಷ ಜನರು ಕೋವಿಡ್-19 ಗೆ ಪ್ರಾಣ ಕಳೆದುಕೊಳ್ಳಬಹುದು. COVID-19 projections’ ಎಂಬ ಶೀರ್ಷಿಕೆಯ ಈ ಅಧ್ಯಯನವನ್ನು ವಾಷಿಂಗ್ಟನ್ ವಿಶ್ವವಿದ್ಯಾಲಯದ ಆರೋಗ್ಯ ಮೆಟ್ರಿಕ್ಸ್ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್ ಎಂಇ) ನಡೆಸಿತು. ಈ ವರ್ಷದ …

Read More »

ರೈಲು ಪ್ರಯಾಣಿಕರೇ ಗಮನಿಸಿ : ‘ವೇಟಿಂಗ್ ಲಿಸ್ಟ್’ ಪ್ರಯಾಣಿಕರಿಗೆ ಅವಕಾಶವಿಲ್ಲ

ಬೆಂಗಳೂರು : ದೇಶಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯ ಅರ್ಭಟ ಜೋರಾಗಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ರೈಲ್ವೆ ಇಲಾಖೆ ಕೂಡ ಕೊರೋನಾ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದು, ಅಂತರ್ ರಾಜ್ಯ ರೈಲುಗಳ ವೇಟಿಂಗ್ ಲೀಸ್ಟ್ ಟಿಕೇಟ್ ಹೊಂದಿರುವ ಪ್ರಯಾಣಿಕರಿಗೆ ರೈಲು ಹತ್ತೋದಕ್ಕೆ ನಿರ್ಬಂಧ ವಿಧಿಸಲಾಗಿದೆ. …

Read More »

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ- ಧರೆಗುರುಳಿದ ಮರಗಳು, ಮನೆಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿ: ಮಹಾನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಇಂದು ಸಂಜೆ ಭಾರೀ ಮಳೆಯಾಗಿದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಒಂದು ಗಂಟೆಗೂ ಅಧಿಕ ಕಾಲ ಸುರಿದ ಮಳೆಗೆ ಸಾಕಷ್ಟು ಹಾನಿ ಸಂಭವಿಸಿದೆ. ಹಲವು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಮರಗಳು ಧರೆಗುರುಳಿವೆ. ಬೇಸಿಗೆಯ ಧಗೆಗೆ ಸುರಿದ ಮಳೆ ತಂಪನ್ನೆರೆಯಿತು. ಆದರೆ ವೀಕೆಂಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಾರುಕಟ್ಟೆಗೆ ಆಗಮಿಸಿದ್ದ ಜನತೆ ಏಕಾಏಕಿ ಮಳೆಯಿಂದಾಗಿ ಪರದಾಡುವಂತಾಯಿತು. ಸಂಜೆ 6 ಗಂಟೆ …

Read More »

ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಅಲ್ಲ.

ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ. ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು …

Read More »

ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ.

ಉಡುಪಿ ಡಿಸಿ ಅವರು ಉತ್ತರಿಸಲೇ ಬೇಕು… ಮೆಹಂದಿಯಲ್ಲಿ ಭಾಗವಹಿಸಿ, ಮಾಸ್ಕ್ ಹಾಕದೇ‌ ಇರೋ ವ್ಯಕ್ತಿ ನೀವೇ ಆಗಿದ್ದರೆ… ಖಂಡನೀಯ!! ಮದುವೆಗೆ ಮಾತ್ರ ಅವಕಾಶ, ಮೆಹಂದಿಗೆ ಇಲ್ಲ ಈ‌ ನಿಯಮ ಜನ ಸಾಮಾನ್ಯರಿಗೆ ಮಾತ್ರವಾ? ಅದೂ ಅಲ್ಲದೆ ಮೊನ್ನೆ ಬಸ್ ನಿಂದ‌ ಇಳಿಸಿ ಕೇಸ್ ಹಾಕಿಸಿದ್ರಿ! ಇವತ್ತು ನೋಡಿದ್ರೆ ನೀವೇ ಮಾಸ್ಕ್ ಹಾಕಿಲ್ಲ… ತಪ್ಪಲ್ವಾ ಸರ್… ನಾವು ಇಂಥ ತಪ್ಪು ಮಾಡೋದಿಲ್ಲ ಅಂಥಲ್ಲಾ.. ಆದರೆ ನೀವೇ ಮಾಡಿದ್ರೆ ಹೇಗೆ? ಬಡವರಿಗೊಂದು ನ್ಯಾಯ, …

Read More »

ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …

Read More »