Breaking News
Home / 2021 / ಏಪ್ರಿಲ್ (page 3)

Monthly Archives: ಏಪ್ರಿಲ್ 2021

ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

ಬೆಂಗಳೂರು: ಕೊರೊನಾ ಪ್ರಕರಣಗಳಲ್ಲಿ ದೇಶದ ಟಾಪ್ 3 ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ಹೀಗಿದ್ರೂ ರಾಜ್ಯದ ಜನಕ್ಕೆ ಸ್ವಲ್ಪವೂ ಸೀರಿಯಸ್‍ನೆಸ್ ಬಂದಿಲ್ಲ. ಮೊದಲ ದಿನ ಜನತಾ ಕರ್ಫ್ಯೂ ಸಕ್ಸಸ್ ಮಾಡಿದ ಜನ, ಎರಡನೇ ದಿನ ಕ್ಯಾರೆ ಅನ್ಲಿಲ್ಲ. ಹಾಗಾದ್ರೆ ರಾಜ್ಯದಲ್ಲಿ ಜನತಾ ಲಾಕ್‍ಡೌನ್ ಮುಂದುವರಿಯುತ್ತಾ..? ಹೀಗೊಂದು ಸುಳಿವನ್ನ ಸರ್ಕಾರವೇ ನೀಡಿದೆ. ರಾಜ್ಯದಲ್ಲಿ ಜನತಾ ಕರ್ಫ್ಯೂ ಇಷ್ಟಕ್ಕೆ ಮುಗಿಯುವ ಲಕ್ಷಣ ಕಾಣಿಸ್ತಿಲ್ಲ. ಮೇ 12ಕ್ಕೆ ಅಂತ್ಯವಾಗಬೇಕಿರುವ ಜನತಾ ಲಾಕ್‍ಡೌನ್ ಅನ್ನು ಮೇ 19ವರೆಗೆ …

Read More »

ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕೆಲಸಕ್ಕೆ ಬರುತ್ತಿದ್ದ ಫಾರ್ಮಾಸಿಸ್ಟ್; ಜಿಲ್ಲಾಧಿಕಾರಿಯಿಂದ ಅಮಾನತು ಆದೇಶ

ಬಾಗಲಕೋಟೆ: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ತೀವ್ರತೆ ವೈದ್ಯಕೀಯ ವ್ಯವಸ್ಥೆಗೆ ಸವಾಲೊಡ್ಡಿದ್ದು ಸೋಂಕು ಹರಡದಂತೆ ತಡೆಗಟ್ಟುವುದಕ್ಕೆ ಸರ್ಕಾರ ಕಠಿಣ ನಿಯಮಾವಳಿಗಳ ಮೊರೆ ಹೋಗಿದೆ. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಾಗಿದ್ದ ವ್ಯಕ್ತಿಯೇ ಬೇಜವಾಬ್ದಾರಿತನದಿಂದ ವರ್ತಿಸಿರುವ ಘಟನೆ ನಡೆದಿದೆ. ಜಿಲ್ಲೆಯ ಮುಧೋಳ ತಾಲ್ಲೂಕು ಆಸ್ಪತ್ರೆಯ ಮುಖ್ಯ ಫಾರ್ಮಾಸಿಸ್ಟ್ ನಂದಕುಮಾರ ಬೋನಗೇರಿ ಎಂಬುವವರು ಕೊರೊನಾ ಪಾಸಿಟಿವ್ ಇದ್ದರೂ ವಿಷಯ ಮುಚ್ಚಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಲ್ಲರನ್ನೂ ಅಪಾಯಕ್ಕೆ ಸಿಲುಕಿಸಿದ್ದಾರೆ. …

Read More »

ಪ್ರಾಣ ಉಳಿಸಬೇಕಾದವನೇ ರೆಮಿಡಿಸಿವಿರ್ ಬ್ಲಾಕ್ ಮಾಡಿ ಅರೆಸ್ಟ್ ಆದ

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗೆ ಪರಿಣಾಮಕಾರಿಯಾಗಿರುವ ರೆಮಿಡಿಸಿವಿರ್​​​ಅನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯಲಹಂಕ ಆಸ್ಪತ್ರೆಯ ಸ್ಟಾಪ್ ನರ್ಸ್ ಮತ್ತು ಆಯುರ್ವೇದ ಆಸ್ಪತ್ರೆಯ ವೈದ್ಯನೊಬ್ಬನ ಸೇರಿದಂತೆ ಆರು ಮಂದಿಯ ಬಂಧನವಾಗಿದ್ದು, ಒಟ್ಟು 18 ರೆಮಿಡಿಸಿವಿರ್ ಇಂಜಕ್ಷನ್​​ಗಳನ್ನು ಸಿಸಿಬಿ ಅಧಿಕಾರಿಗಳು ಸೀಜ್​ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ಸುನಾಮಿ ದಿನೇ ದಿನೇ ವ್ಯಪಿಸುತ್ತಿದ್ದು, ವೈದ್ಯರು, ರೋಗಿಗಳು ರೆಮ್ಡೆಸಿವಿರ್ ಪಡೆಯಲು ಪರದಾಡುವಂತಾಗಿದೆ. ವಾರಗಳ ಕಾಲ ಅಲೆದರೂ ಔಷಧಿ …

Read More »

ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥ ,ಫಲಿತಾಂಶಕ್ಕೂ ಮುನ್ನವೇ ಮಂದಹಾಸ ಬೀರಿದ ಸತೀಶ್ ಜಾರಕಿಹೊಳಿ!

ಪಳಗಿದ ರಾಜಕಾರಣಿಗಳಿಗೆ ಮತದಾನದ ದಿನವೇ ಜನರ ನಾಡಿಮಿಡಿತ ಅರ್ಥವಾಗುತ್ತದೆ ಎನ್ನುವ ಮಾತಿದೆ. ಒಂದು ಲೋಕಸಭಾ ಮತ್ತು ಎರಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿನ್ನೆ (ಏ 17) ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಮತದಾನದ ಪ್ರಮಾಣ ಹೆಚ್ಚಾದರೆ ಒಂದು ಪಕ್ಷಕ್ಕೆ ಗೆಲುವು, ಕಮ್ಮಿಯಾದರೆ ಇನ್ನೊಂದು ಪಕ್ಷಕ್ಕೆ ಸೋಲು ಎನ್ನುವ ಲೆಕ್ಕಾಚಾರ ಇತ್ತೀಚಿನ ದಿನಗಳಲ್ಲಿ ಅಷ್ಟಾಗಿ ವರ್ಕೌಟ್ ಆಗುತ್ತಿಲ್ಲ. ಇದಕ್ಕೆ, ಕೊಡಬಹುದಾದ ಉದಾಹರಣೆ, ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರದ …

Read More »

ಚುನಾವಣೋತ್ತರ ಸಮೀಕ್ಷೆ; ಬೆಳಗಾವಿಯಲ್ಲಿ ಯಾರಿಗೆ ಗೆಲುವು?

ಬೆಳಗಾವಿ, ಏಪ್ರಿಲ್ 29; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಚುನಾವಣೋತ್ತರ ಫಲಿತಾಂಶ ಪ್ರಕಟವಾಗಿದೆ. ಏಪ್ರಿಲ್ 17ರಂದು ಮತದಾನ ನಡೆದಿದ್ದು, ಮೇ 2ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಗುರುವಾರ ಟಿವಿ 9 ವಾಹಿನಿ ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ವರದಿ ಪ್ರಕಟವಾಗಿದೆ. ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರು ಕೋವಿಡ್‌ಗೆ ಬಲಿಯಾದ ಕಾರಣ ಉಪ ಚುನಾವಣೆ ಎದುರಾಗಿದೆ.   ಬಿಜೆಪಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿ ಅವರಿಗೆ ಟಿಕೆಟ್ …

Read More »

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ಗ್ರಾಮೀಣ ಪ್ರತಿಭೆ

ಯಲಬುರ್ಗಾ: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ನೌಕರಿ ಪಡೆಯುವುದು ಕಷ್ಟ. ಅಂಥದ್ದರಲ್ಲಿ ತಾಲೂಕಿನ ಚಿಕ್ಕಮನ್ನಾಪುರದ ಯುವಕ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಬರೆದು 8 ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದಾನೆ. ತಾಲೂಕಿನ ಬೋದುರು ಗ್ರಾಪಂ ವ್ಯಾಪ್ತಿಯ ಚಿಕ್ಕಮನ್ನಾಪುರ ಗ್ರಾಮದ ಸಂಗನಗೌಡ ಮಾಲಿಪಾಟೀಲ ಎಂಬಾತನೇ ಈ ಸಾಧನೆ ಮಾಡಿದ ಯುವಕ. ಪ್ರಯತ್ನ: ಸಂಗನಗೌಡ ಮಾಲಿಪಾಟೀಲ 2016ರಿಂದ ಸರ್ಕಾರಿ ನೌಕರಿಗಾಗಿ ಅರ್ಜಿ ಹಾಕಲು ಪ್ರಾರಂಭಿಸಿದ್ದಾರೆ. ಅಂದಿನಿಂದ ಸರ್ಕಾರ ಕರೆದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದಿದ್ದಾರೆ. ಪ್ರಾರಂಭದಲ್ಲಿ …

Read More »

ಕಿಮ್ಸ್‌ನಲ್ಲಿ 66 ಬೆಡ್‌ಗಳ ತಾತ್ಕಾಲಿಕ ಚಿಕಿತ್ಸಾ ಕೇಂದ್ರ

ಹುಬ್ಬಳ್ಳಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಸೌಲಭ್ಯ ಒಳಗೊಂಡ 66 ಬೆಡ್‌ಗಳ ತಾತ್ಕಾಲಿಕ ತುರ್ತು ಚಿಕಿತ್ಸಾ ಕೇಂದ್ರ ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕಿಮ್ಸ್‌ನಲ್ಲಿರುವ ಪಿಎಂಎಸ್‌ಎಸ್‌ವೈ ಸೂಪರ್ ಸ್ಟೆಷಾಲಿಟಿ ಸಮೀಪದ ಜಾಗದಲ್ಲಿಯೇ ಕೇಂದ್ರ ತಯಾರಾಗಲಿದೆ. ಈ ಜಾಗವನ್ನು ಗುರುವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ನಿರ್ಮಿತಿ ಕೇಂದ್ರದಿಂದ ₹66 ಲಕ್ಷ …

Read More »

ಆಸ್ಪತ್ರೆಯಲ್ಲೇ ರೆಮಿಡಿಸಿವಿರ್‌ ಬಳಸಿ

ಹೊಸದಿಲ್ಲಿ: ದೇಶದಲ್ಲಿ ಸೋಂಕು ಪರಿಸ್ಥಿತಿ ಬಿಗಡಾಯಿಸುತ್ತಿರುವಂತೆ ಕೇಂದ್ರ ಸರಕಾರ ಹೋಮ್‌ ಐಸೊಲೇಶನ್‌ನ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ವಿಶೇಷವಾಗಿ ರೋಗಲಕ್ಷಣ ರಹಿತ ಮತ್ತು ಅಲ್ಪ ಪ್ರಮಾಣದ ಲಕ್ಷಣಗಳು ಇರುವವರಿಗೆ ಇದರಿಂದ ಅನುಕೂಲವಾಗಲಿದೆ. ಮನೆಯಲ್ಲಿ ರೆಮಿಡಿಸಿವಿರ್‌ ಇಂಜೆಕ್ಷನ್‌ ಪಡೆಯುವುದನ್ನು ನಿಷೇಧಿಸಲಾಗಿದ್ದು, ಆಸ್ಪತ್ರೆಯಲ್ಲಿ ಮಾತ್ರ ಪಡೆಯಬೇಕು ಎಂದು ಸಲಹೆ ಮಾಡಲಾಗಿದೆ. ಮತ್ತೂಂದು ಗಮನಾರ್ಹ ಅಂಶವೆಂದರೆ ಸೋಂಕು ದೃಢಪಟ್ಟವರು ಮನೆಯಲ್ಲಿರುವಾಗ ಕೂಡ ಮೂರು ಪದರಗಳ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಲಾಗಿದೆ. ಇನ್ನಿತರ ಸಲಹೆಗಳು …

Read More »

1.31 ಲಕ್ಷ ಪಡಿತರ ಚೀಟಿಗಳೇ ಅನರ್ಹ: ಉಮೇಶ ಕತ್ತಿ, ಆಹಾರ ಸಚಿವ

ಬೆಂಗಳೂರು: ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಬಿಪಿಎಲ್‌ (ಆದ್ಯತಾ) ಪಡಿತರ ಚೀಟಿಗಳ ಪರಿಶೀಲನಾ ಕಾರ್ಯ ಆರಂಭಿಸಿರುವ ಆಹಾರ ಇಲಾಖೆ, ಮೂರೇ ತಿಂಗಳಲ್ಲಿ 1,31,082 ಅನರ್ಹ ಪಡಿತರ ಚೀಟಿಗಳನ್ನು ಪತ್ತೆಹಚ್ಚಿದೆ. ಇವುಗಳಿಗೆ ಮೇ ತಿಂಗಳಿಂದ ಆಹಾರಧಾನ್ಯ ವಿತರಣೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಅಲ್ಲದೆ, ಕಂದಾಯ ಇಲಾಖೆಯ ಪಿಂಚಣಿದಾರರ ಪರಿಶೀಲನೆ ವೇಳೆ ಮೃತಪಟ್ಟಿದ್ದಾರೆಂದು ಗುರುತಿಸಿದ, ಆದರೆ ಇನ್ನೂ ಪಡಿತರ ಚೀಟಿಗಳಲ್ಲಿ ಹೆಸರು ಇರುವ 4,42,935 ಫಲಾನುಭವಿಗಳ ಆಹಾರಧಾನ್ಯ ಹಂಚಿಕೆಯನ್ನೂ ಸ್ಥಗಿತಗೊಳಿಸಲು ಇಲಾಖೆ …

Read More »

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಮೇ ತಿಂಗಳಿಂದ ರೇಷನ್ ಸ್ಥಗಿತ

ಬೆಂಗಳೂರು: ಆಹಾರ ಇಲಾಖೆ ವತಿಯಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳ ಪರಿಶೀಲನೆ ಕಾರ್ಯ ಆರಂಭಿಸಿದ್ದು, 1.31 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಗುರುತಿಸಿದೆ. ಇಂತಹ ಕಾರ್ಡ್ ಗಳಿಗೆ ಮೇ ತಿಂಗಳಿನಿಂದ ಪಡಿತರ ವಿತರಣೆ ನಿಲ್ಲಿಸಲು ತೀರ್ಮಾನಿಸಲಾಗಿದೆ. ರೇಷನ್ ಪಡೆಯುವ ಅರ್ಹರ ಪಟ್ಟಿಯಲ್ಲಿ ಮೃತಪಟ್ಟ 4.43 ಲಕ್ಷ ಫಲಾನುಭವಿಗಳು ಇರುವುದು ಕಂಡುಬಂದಿದೆ. ಬಿಪಿಎಲ್ ಮತ್ತು ಅಂತ್ಯೋದಯ ಅನ್ನ ಯೋಜನೆ ಅಡಿ ಕಾರ್ಡ್ ಪಡೆದುಕೊಂಡಿರುವ ಅನರ್ಹರನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. …

Read More »