Breaking News
Home / 2021 / ಏಪ್ರಿಲ್ (page 38)

Monthly Archives: ಏಪ್ರಿಲ್ 2021

ಜೀವ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ರೈಲ್ವೆ ನೌಕರ: ಮೈ ನವಿರೇಳಿಸುವ ವಿಡಿಯೋ

ಮುಂಬೈ, ಏಪ್ರಿಲ್ 19: ರೈಲಿನಡಿ ಸಿಕ್ಕಿ ಛಿದ್ರವಾಗುವಂತಿದ್ದ ಮಗುವನ್ನು ಕಣ್ರೆಪ್ಪೆ ಮಿಟುಕಿಸುವುದರೊಳಗೆ ರಕ್ಷಿಸಿದ ಕೇಂದ್ರ ರೈಲ್ವೆಯ (ಮುಂಬೈ ವಿಭಾಗ) ಪಾಯಿಂಟ್ಸ್‌ಮ್ಯಾನ್ ಮಯೂರ್ ಶೆಲ್ಖೆ ಅವರು ‘ಹೀರೋ’ ಆಗಿ ಹೊರಹೊಮ್ಮಿದ್ದಾರೆ. ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಪುಟಾಣಿಯ ಜೀವ ಉಳಿಸಿದ ಮಯೂರ್ ಅವರ ಶೌರ್ಯವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ವಾಂಗಾನಿ ಉಪನಗರ ರೈಲ್ವೆ ನಿಲ್ದಾಣದಲ್ಲಿ ನಡೆದ ಈ ರೋಮಾಂಚನಕಾರಿ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶನಿವಾರ ಸಂಜೆ 5 ಗಂಟೆ ಸುಮಾರಿಗೆ …

Read More »

ಆರೋಗ್ಯ ಕ್ಷೇತ್ರಕ್ಕೆ ₹30 ಸಾವಿರ ಕೋಟಿ ಮೀಸಲಿಡಬೇಕು : ಡಿ.ಕೆ. ಶಿವಕುಮಾರ್

ಬೆಂಗಳೂರು : ಕೊರೋನಾ ಎರಡನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ 30 ಸಾವಿರ ಕೋಟಿ ರುಪಾಯಿ ಮೀಸಲಿಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ದಿನೇ ದಿನೇ ಗಂಭೀರವಾಗುತ್ತಿದೆ. ಸೋಂಕಿತರಿಗೆ ಬೆಡ್ ಗಳು ಸಿಗುತ್ತಿಲ್ಲ. ಐಸಿಯು, ರೆಮ್ ಡಿಸಿವಿಯರ್ ಲಸಿಕೆ, ಆಮ್ಲಜನಕ ಅಭಾವ ಸೃಷ್ಟಿಯಾಗಿವೆ. ಪ್ರತಿ ವಿಚಾರದಲ್ಲೂ ಪರಿಸ್ಥಿತಿ ಬಿಗಡಾಯಿಸುತ್ತಿದ್ದು, ಸರ್ಕಾರ ಕೂಡಲೇ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿ, ಆ …

Read More »

ವೆಂಟಿಲೇಟರ್ ಸಿಗದೆ ಸಚಿವರ ಪಿಎ ಕೊರೆನಾಗೆ ಬಲಿ

ಬೆಂಗಳೂರು – ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿದೆ. ಇಂದು ಶಿಕ್ಷಣ ಸಚಿವ ಸುರೇಶ ಕುಮಾರ ಅವರ ಪಿಎ ರಮೇಶ್ ಕೊರೋನಾದಿಂದ ಬಲಿಯಾಗಿದ್ದಾರೆ. ರಮೇಶ ಒಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪರಿಸ್ಥಿತಿ ಗಂಭೀರವಾದರೂ ವೆಂಟಿಲೇಟರ್ ಸಿಗದೆ ಸಾವನ್ನಪ್ಪಿದ್ದಾರೆ. ರಮೇಶ 8 ವರ್ಷದಿಂದ ಸಚಿವರ ಜೊತೆ ಕೆಲಸ ಮಾಡುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಸಚಿವರ ಪಿಎಗೇ ವೆಂಟಿಲೇಟರ್ ಸಿಗದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತಿದೆ.

Read More »

ರಾಜಸ್ಥಾನದಲ್ಲಿ ಲಾಕ್ ಡೌನ್ ತರಹದ ನಿರ್ಬಂಧ:ಇಲ್ಲಿದೆ ನೋಡಿ ಮಾರ್ಗಸೂಚಿ

ಜೈಪುರ : ಕೊರೊನಾ ಎರಡನೇ ಅಲೆ ಆತಂಕದ ಹಿನ್ನೆಲೆ ಮೇ 3 ರ ವರೆಗೆ ಶಾಲೆಗಳನ್ನು ಬಂದ್​ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮಾರ್ಗಸೂಚಿಯ ಪ್ರಕಾರ, ಮನೆಯಿಂದ ಕೆಲಸ ಮಾಡಲು ಶಿಕ್ಷಕರಿಗೆ ಸೂಚಿಸಲಾಗಿದ್ದು, ವರ್ಕ್​ ಫ್ರಮ್​ ಹೋಮ್​ ನೀಡಲಾಗಿದೆ. ಇದರ ಜತೆ ಶಿಕ್ಷಕರು ಕೊರೊನಾ ವಾರಿಯರ್ಸ್​ ಆಗಿಯೂ ಕಾರ್ಯ ನಿರ್ವಹಿಸಬೇಕಿದೆ. ಶಿಕ್ಷಣ ಇಲಾಖೆ ನಿರ್ದೇಶಕ ಸೌರಭ್ ಸ್ವಾಮಿ ಈ ಆದೇಶ ಹೊರಡಿಸಿದ್ದಾರೆ. ಕೊರೊನಾ ವೈರಸ್‌ ಪ್ರಕರಣಗಳ ಬಗ್ಗೆ ಆತಂಕಗೊಂಡ …

Read More »

ಸಾರಿಗೆ ನೌಕರರಿಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಬಿಎಂಟಿಸಿ

ಬೆಂಗಳೂರು, ಏ.19-ಮುಷ್ಕರದಲ್ಲಿ ಭಾಗಿಯಾಗಿರುವ ಕೆಲವು ಉದ್ಯೋಗಿಗಳ ಅಮಾನತು ಆದೇಶಗಳನ್ನು ಹಿಂತೆಗೆದುಕೊಳ್ಳುವ ಮತ್ತು ಭವಿಷ್ಯದಲ್ಲಿ ವಜಾಗೊಳಿಸಿದ ಆದೇಶಗಳನ್ನು ರದ್ದುಗೊಳಿಸುವಂತಹ ಯಾವುದೇ ನಿಬಂಧನೆ ಅಥವಾ ಆಲೋಚನೆ ಸರ್ಕಾರದ ಮಟ್ಟದಲ್ಲಿ ಇಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ಪಷ್ಟಪಡಿಸಿದೆ. ಮುಷ್ಕರವನ್ನು ಪ್ರೋತ್ಸಾಹಿಸುವ ಮತ್ತು ಕರ್ತವ್ಯಕ್ಕೆ ಗೈರುಹಾಜರಾದವರ ವಿರುದ್ಧ ಬಿಎಂಟಿಸಿ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಮಾನತು ಅಥವಾ ವಜಾಗೊಳಿಸಿದ ನಂತರ ಅನೇಕ ಉದ್ಯೋಗಿಗಳು ಯೂನಿಯನ್ ಭಯದಿಂದಾಗಿ ಕೆಲಸಕ್ಕೆ ಬರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕೆಲಸಕ್ಕೆ ಮರಳುವ …

Read More »

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡಿಕೆ..?

ಬೆಂಗಳೂರು,ಏ.19-ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಮುಂದೂಡುವುದು ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಸುಳಿವು ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಮ್ಮ ನಿರೀಕ್ಷೆಗೂ ಮೀರಿ …

Read More »

ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ

ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ. ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೋವಿಡ್‌ಗೆ ಬಲಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕಮಾರ್‌ ಅವರ ಆಪ್ತ ಸಹಾಯಕ ಎಚ್‌.ಜೆ. ರಮೇಶ್‌ ಅವರು ಕೋವಿಡ್‌ಗೆ ಸೋಮವಾರ ಬೆಳಿಗ್ಗೆ ಬಲಿಯಾಗಿದ್ದಾರೆ. ರಮೇಶ್‌ ಅವರಿಗೆ ಏ. 13ರಂದು ಕೋವಿಡ್‌ ದೃಢಪಟ್ಟಿತ್ತು. ಅವರನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ, ಸೋಮವಾರ ಬೆಳಿಗ್ಗೆ 9.30ಕ್ಕೆ ಸಾವನ್ನಪ್ಪಿದ್ದಾರೆ. ‘ರಮೇಶ್‌ ಅವರು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ರಮೇಶ್‌ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, …

Read More »

ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ಇನ್ನಿಲ್ಲ!

ಬೆಂಗಳೂರು: ಕನ್ನಡ ನಿಘಂಟು ತಜ್ಞ, ಶತಾಯುಷಿ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 108 ವರ್ಷದ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. 1913ರ, ಆಗಸ್ಟ್ 23ರಂದು ಮೈಸೂರಿನಲ್ಲಿ ಜನಿಸಿದ ಪ್ರೊ| ಜಿ. ವೆಂಕಟಸುಬ್ಬಯ್ಯ ಕನ್ನಡದ ಅಪ್ರತಿಮ ಭಾಷಾ ತಜ್ಞರು, ಸಂಶೋಧಕರು, ಬರಹಗಾರರು ಹಾಗೂ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. …

Read More »

‘ಮಠ’ ನಿರ್ದೇಶಕನಿಗೆ ಕೋವಿಡ್ ದೃಢ : ಸರ್ಕಾರದ ವಿರುದ್ಧ ‘ಗುರ್’ ಎಂದ ಗುರು ಪ್ರಸಾದ್

ಬೆಂಗಳೂರು : ಕೋವಿಡ್ ಸೋಂಕು ದೃಢಪಟ್ಟಿರುವ “ಮಠ” ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ ರಾಘವೇಂದ್ರ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಫುಲ್ ಗರಂ ಆಗಿದ್ದಾರೆ. ಇಂದು ಫೇಸ್‌ಬುಕ್ ಲೈವ್ ನಲ್ಲಿ ಆಕ್ರೋಶ ಹೊರಹಾಕಿರುವ ಅವರು, ‘ಒಂದು ವೇಳೆ ನಾನು ಕೋವಿಡ್‍ದಿಂದ ಸತ್ತರೆ ಅದಕ್ಕೆ ಈ ಸರ್ಕಾರದ ಮಂತ್ರಿಗಳೇ ಹೊಣೆ ಎಂದು ಎಚ್ಚರಿಸಿದ್ದಾರೆ. ಪ್ರಧಾನಿ ಮೋದಿ ಪ್ರಾಮಾಣಿಕ, ಹಾಗಂತ ಬಿಜೆಪಿಯವರೆಲ್ಲ ಪ್ರಾಮಾಣಿಕರಲ್ಲ. ಒಂದು ವರ್ಷ ಟೈಮ್ …

Read More »