ಬೆಂಗಳೂರು: 6ನೇ ವೇತನ ಆರೋಗ ಶಿಫಾರಸುಗಳನ್ನು ಜಾರಿ ಮಾಡುವಂತೆ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 10ನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ 11ನೇ ದಿನದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಮುಂದುವರಿಯುತ್ತದೆ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಈಗ ಇಲಾಖೆ ಅವರು ಸಾರಿಗೆ ನೌಕರರಿಗೆ ಸಂಬಳ ಕೊಟ್ಟಿಲ್ಲ ಅಂತ ಹೇಳಿದರೆ ನಮ್ಮ ದೂರನ್ನ ಪರಿಗಣಿಸಿ ಸಂಬಳ ಕೊಡಿಸುವ ಕೆಲಸ ಮಾಡಬೇಕಿತ್ತು. ಆದರೆ ಕಾರ್ಮಿಕರ …
Read More »Monthly Archives: ಏಪ್ರಿಲ್ 2021
ರಸ್ತೆ ಅಪಘಾತದ ಪರಿಹಾರ ನೀಡುವಲ್ಲಿ ವಿಳಂಬ- KSRTC ಕಚೇರಿ ವಸ್ತುಗಳು ಜಪ್ತಿ
ಗದಗ: ಅಪಘಾತದಿಂದ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಿದಕ್ಕೆ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯ ವಸ್ತುಗಳನ್ನು ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ. ನಗರದ ಮುಳಗುಂದ ನಾಕಾ ಬಳಿ ಇರುವ ವಾಯುವ್ಯ ಸಾರಿಗೆ ವಿಭಾಗೀಯ ಕಚೇರಿಯಲ್ಲಿನ ಕಂಪ್ಯೂಟರ್, ಮಾನಿಟರ್, ಸಿಪಿಯು ಸೇರಿದಂತೆ ಹಲವಾರು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಪಾಟೀಲ್ ಅವರ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ. ಏನಿದು ಪ್ರಕರಣ? 2009ರಲ್ಲಿ …
Read More »ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ …
Read More »ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರೊಂದಿಗೆ ಸಂಪರ್ಕ ಹೊಂದಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಕೊರೊನಾ ದೃಢಪಟ್ಟಿದೆ. ಉಪಚುನಾವಣಾ ಪ್ರಚಾರಕ್ಕಾಗಿ ಸಿಎಂ ಬಿಎಸ್ ಯಡಿಯೂರಪ್ಪನವರು ಕಳೆದ ನಾಲ್ಕು ದಿನಗಳಿಂದ ಬೆಳಗಾವಿ, ಬಸವ ಕಲ್ಯಾಣ, ಮಸ್ಕಿಗೆ ಪ್ರವಾಸ ಬೆಳೆಸಿದ್ದರು. ಈ ವೇಳೆ ಸಿಎಂ ಬಿಎಸ್‍ವೈರನ್ನು ಭೇಟಿ ಮಾಡಿದ್ದ ಸವದತ್ತಿ ಶಾಸಕ ಆನಂದ ಮಾಮನಿಗೆ ಇಂದು ಕೊರೊನಾ ಪಾಸಿಟಿವ್ ವರದಿ ಬಂದಿದೆ. ಸೋಮವಾರದಿಂದ ಜ್ವರದಲ್ಲಿ ಬಳಲುತ್ತಿರುವ ಸಿಎಂ ಬಿಎಸ್‍ವೈ ಮಾತ್ರೆಗಳನ್ನು ಸೇವಿಸಿ ಚುನಾವಣೆ ಪ್ರಚಾರ …
Read More »ವಿಜಯಪುರ: ಐತಿಹಾಸಿಕ ಗೋಳಗುಮ್ಮಟ ಪ್ರವೇಶಕ್ಕೆ ಮೇ 15ರವರೆಗೆ ನಿರ್ಬಂಧ
ವಿಜಯಪುರ, ಎ.16: ರಾಜ್ಯ ಹಾಗೂ ವಿಜಯಪುರ ಜಿಲ್ಲಾದ್ಯಂತ ಕೊರೋನ ಸೋಂಕು ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಮೇ 15ರ ವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಗೋಳಗುಮ್ಮಟಕ್ಕೆ ಪ್ರವೇಶ ನಿರ್ಬಂಧಿಸಿ ಭಾರತೀಯ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗೋಳಗುಮ್ಮಟ ಪ್ರವೇಶ ದ್ವಾರದ ಬಾಗಿಲಿಗೆ ಬೀಗ ಹಾಕಲಾಗಿದೆ.
Read More »ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೈಕ್ರೋ ಕಂಟೋನ್ಮೆಂಟ್ ಹೆಚ್ಚಳ ಮಾಡುತ್ತೇವೆ ಎಂದರು. ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ …
Read More »ಬಸ್ ಗೆ ಕಲ್ಲು ಎಸೆದ ಕಿಡಿಗೇಡಿಗಳು: ಸಾರಿಗೆ ನೌಕರರ ಮುಷ್ಕರಕ್ಕೆ ಚಾಲಕ ಬಲಿ
ಬಾಗಲಕೋಟೆ: 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ಹೋರಾಟ ತೀವ್ರಗೊಂಡಿದ್ದು, ಮುಷ್ಕರದ ವೇಳೆಯೂ ಸೇವಾನಿರತವಾಗಿದ್ದ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಬಲಿಯಾಗಿದ್ದಾನೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗೀಯ ಜಮಖಂಡಿ ಘಟಕದ ಚಾಲಕ ನಭಿರಸೂಲ ಅವಟಿ (59) ಶುಕ್ರವಾರ ಮೃತಪಟ್ಟಿದ್ದಾರೆ. ಚಾಲಕ ನಭಿರಸೂಲ ಅವರು ಬೆಳಗ್ಗೆ ಸೇವೆಗೆ ಹಾಜರಾಗಿದ್ದರು. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಘತ್ತರಗಿಯಿಂದ ಜಮಖಂಡಿಗೆ ಮರಳುತ್ತಿದ್ದ ವೇಳೆ ಜಮಖಂಡಿ …
Read More »ಕಾಂಗ್ರೆಸ್ ಶಾಸಕಿ ʼಲಕ್ಷ್ಮಿ ಹೆಬ್ಬಾಳ್ಕರ್ʼ ಮತ್ತವರ ಕುಟುಂಬದ 8 ಸದಸ್ಯರಿಗೆ ʼಕೊರೊನಾ ಪಾಸಿಟಿವ್ʼ
ರಾಜ್ಯದಲ್ಲಿ ಕೊರೊನಾದ 2ನೇ ಅಲೆ ಉಲ್ಭಣವಾಗ್ತಿದ್ದು, ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವ್ರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆತಂಕಕಾರಿ ಅಂಶವೆಂದ್ರೆ ಶಾಸಕಿ ಮತ್ತವ್ರ ಕುಟುಂಬದ 8 ಮಂದಿಗೆ ಹೆಮ್ಮಾರಿ ಕೊರೊನಾ ವಕ್ಕರಿಸಿದೆ ಎಂದು ಹೇಳಲಾಗ್ತಿದೆ. ಬೆಳಗಾವಿ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಕುಟುಂಬದ 8 ಜನರಿಗೆ ಸೋಂಕು ದೃಢಪಟ್ಟಿದ್ದು, ಅವ್ರ ಕಾರು ಚಾಲಕ ಮತ್ತು ಮನೆಯ ಅಡುಗೆ ಭಟ್ಟರಿಗೂ ಸೋಂಕು ತಗುಲಿದೆ ಎನ್ನುವ …
Read More »8 ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಕೋವಿಡ್ ಸಲಹಾ ಸಮಿತಿ ತಜ್ಞರ ಜೊತೆ ತುರ್ತು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈಗ ಜಾರಿಯಲ್ಲಿರುವ 8 ನಗರಗಳ ನೈಟ್ ಕರ್ಫ್ಯೂ ಏಪ್ರಿಲ್ 20ರವರೆಗೂ ಮುಂದುವರೆಯಲಿದೆ. 20ರಂದು ಮತ್ತೊಮ್ಮೆ ಸಭೆ ನಡೆಸಿ ಮುಂದೆ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್
ಬೆಳಗಾವಿ :ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಅವರ ಸಹೋದರ, ಹರ್ಷಾ ಶುಗರ್ಸ್ ಎಂ.ಡಿ. ಚನ್ನರಾಜ ಹಟ್ಟಿಹೊಳಿ ಅವರಿಗೆ ಕೊರೆನಾ ಪಾಸಿಟಿವ್ ಬಂದಿದೆ. ಶುಕ್ರವಾರ ಬೆಳಗ್ಗೆ ಪರೀಕ್ಷೆ ಮಾಡಿಸಿಕೊಂಡಿದ್ದು, ಪಾಸಿಟಿವ್ ಬಂದಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದಾರೆ. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳುವಂತೆ ಮತ್ತು ಆದಷ್ಟು ಜಾಗರೂಕತೆಯಿಂದ ಇರುವಂತೆ ಲಕ್ಷ್ಮಿ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ವಿನಂತಿಸಿದ್ದಾರೆ.
Read More »