ಬೆಂಗಳೂರು: ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರನ್ನು ದಾಖಲಿಸಲು ಬೆಡ್ಗಳಿಲ್ಲದೇ ಜನರೆಲ್ಲ ಸಾವಿಗೀಡಾಗುತ್ತಿರುವ ಪರಿಸ್ಥಿತಿ ಎದುರಾಗಿದೆ. ಕೊರೊನಾ ಮಹಾಮಾರಿಯ ಹಾವಳಿ ಅಷ್ಟರ ಮಟ್ಟಿಗೆ ದೇಶಾದ್ಯಂತ ಆವರಿಸಿಕೊಂಡಿದೆ. ಬೆಂಗಳೂರಿನಲ್ಲಿ ಹಲವು ಸೋಂಕಿತರು ಸೂಕ್ತ ವ್ಯವಸ್ಥೆ ಇಲ್ಲದೇ ಪ್ರಾಣಾಪಾಯಕ್ಕೆ ಸಿಲುಕುತ್ತಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ನಗರದಲ್ಲಿ ಕಳೆದ 3 ದಿನಗಳ ಹಿಂದೆ ಅನಾರೋಗ್ಯಕ್ಕೀಡಾದ ವ್ಯಕ್ತಿಯ ಕುಟುಂಬಸ್ಥರು ಅವರಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಗೆ ಅಲೆದಾಡಿ ಬೆಡ್ಗಾಗಿ ಹುಡುಕಾಟ ನಡೆಸುವಷ್ಟರಲ್ಲಿ ವ್ಯಕ್ತಿಯ …
Read More »Monthly Archives: ಏಪ್ರಿಲ್ 2021
ಕೊರೊನಾ ವರದಿ “ನೆಗೆಟಿವ್” ಬಂದಿದ್ದಕ್ಕೆ ವೈದ್ಯರನ್ನು ಹಿಗ್ಗಾಮುಗ್ಗ ಥಳಿಸಿದ ವ್ಯಕ್ತಿ
ಮುಂಬೈ, ಏಪ್ರಿಲ್ 16: ತನ್ನ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ವೈದ್ಯರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಮಹಾರಾಷ್ಟ್ರದ ಗೋಂಡಿಯಾ ಜಿಲ್ಲೆಯಲ್ಲಿ ನಡೆದಿದೆ. ಗೋಂಡಿಯಾದ ಆರೋಗ್ಯ ಕೇಂದ್ರದಲ್ಲಿ, ವ್ಯಕ್ತಿಯೊಬ್ಬ ಆತನ ಕುಟುಂಬದ ಮೂರು ಸದಸ್ಯರೊಂದಿಗೆ ಆರ್‌ಟಿಪಿಸಿಆರ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದ. ಪರೀಕ್ಷಾ ವರದಿಯಲ್ಲಿ ಕುಟುಂಬದ ಮೂವರದ್ದು ಪಾಸಿಟಿವ್ ಬಂದಿದ್ದು, ಈ ವ್ಯಕ್ತಿಯ ವರದಿ ಮಾತ್ರ ನೆಗೆಟಿವ್ ಬಂದಿದೆ. ಹೀಗಾಗಿ ಪರೀಕ್ಷೆಯ ವರದಿಯೇ …
Read More »ಒಂದೇ ಬೆಡ್ನಲ್ಲಿ ಇಬ್ಬರಿಗೆ ಚಿಕಿತ್ಸೆ, ಆಸ್ಪತ್ರೆ ಹೊರಗೆ ಹೆಣಗಳು; ಕೊರೊನಾದಿಂದ ಪರಿಸ್ಥಿತಿ ಭೀಕರ
ದೆಹಲಿ: ಹಾಸಿಗೆಗಳ ಕೊರತೆ, ಆಮ್ಲಜನಕದ ಕೊರತೆ.. ಒಂದೇ ಹಾಸಿಗೆಯಲ್ಲಿ ಆಕ್ಸಿಜನ್ ಮಾಸ್ಕ್ ಹಾಕಿಕೊಂಡು ಮಲಗಿರುವ ಇಬ್ಬರು ಕೊರೊನಾ ಸೋಂಕಿತರು. ಇದು ದೆಹಲಿಯ ಲೋಕ ನಾಯಕ ಜಯಪ್ರಕಾಶ್ ನಾರಾಯಣ ಆಸ್ಪತ್ರೆಯ ಕರುಣಾಜನಕ ಪರಿಸ್ಥಿತಿ. ಕೊವಿಡ್ ಸೋಂಕಿತರಿಗಾಗಿಯೇ ಸುಮಾರು 1500 ಹಾಸಿಗೆ ವ್ಯವಸ್ಥೆಯಿರುವ ದೆಹಲಿಯ ಸರ್ಕಾರಿ ಆಸ್ಪತ್ರೆ ಇದೀಗ ಕೊರೊನಾ ಸೋಂಕಿತರಿಂದ ತುಂಬಿ ತುಳುಕುತ್ತಿದೆ. ‘ನನಗೆ ಗೊತ್ತು, ನಮ್ಮ ಆಸ್ಪತ್ರೆಯಲ್ಲಿ ಮಿತಿಮೀರಿದ, ಹಿಡಿಯಲಾರದಷ್ಟು ಕೊರೊನಾ ಸೋಂಕಿತರು ತುಂಬಲಿದ್ದಾರೆ. ಈಗಲೇ ಹಾಸಿಗೆಯೂ ಸೇರಿ ನಮ್ಮಲ್ಲಿರುವ …
Read More »ಪೊಲೀಸರೇ ಈ ರೀತಿ ಮಾಡಿದರೆ ಕನ್ನಡ ಪರ ಸಂಘಟನೆಗಳು ಕನ್ನಡ ಉಳಿಸೋದು ಹೇಗೆ?’ ಕಪಾಳಮೋಕ್ಷ ಮಾಡಿದ ಪೊಲೀಸ್ಗೆ ಕರವೇ ಪ್ರಶ್ನೆ
ಬೆಂಗಳೂರು: ಚೀಟಿಂಗ್ ಪ್ರಕರಣವೊಂದರ ಆರೋಪಿಗಳಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಪೊಲೀಸರ ವಶದಲ್ಲಿದ್ದ ವ್ಯಕ್ತಿಗಳನ್ನು ಮಾತನಾಡಿಸಿದ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಉಪಾಧ್ಯಕ್ಷ ಉಮೇಶ್ಗೌಡಗೆ ನೆಲಮಂಗಲ ಟೌನ್ ಠಾಣೆಯ ಎಸ್ಐ ಸುರೇಶ್ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷಮಾಡಿರುವುದನ್ನು ಖಂಡಿಸಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಎದುರು ಕರವೇ ಕಾರ್ಯಕರ್ತರು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್ಐ ಸುರೇಶ್ರನ್ನು ಅಮಾನತು ಮಾಡುವಂತೆ …
Read More »ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ
ವಿಜಯಪುರ : ನಗರದ ಆಶ್ರಮ ರಸ್ತೆಯ ಪಾನ್‍ಶಾಪ್ ಮುಂದೆ ನಿಂತು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಟದಲ್ಲಿ ತೊಡಗಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ನಗದು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಆರಮ ರಸ್ತೆಯಲ್ಲಿನ ರಾಜು ಪಾನ್‍ಶಾಪ್ ಎದುರು ಕ್ರಿಕೆಟ್ ಬಟ್ಟಿಂಗ್ ನಡೆಯುವ ಕುರಿತು ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ವೇಳೆ ಕಾಳಿಕಾ ನಗರ …
Read More »ಉಪ ಚುನಾವಣೆ ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ ಘೋಷಣೆ
ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಏಪ್ರಿಲ್ 17 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಸೇವೆಯಲ್ಲಿರುವ …
Read More »ಎ. 17ರಂದು ಉಪ ಸಮರ : ಶುಭಾಶುಭ ಭವಿಷ್ಯ ಏನು?
ಬೆಂಗಳೂರು : ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಎ. 17ರಂದು ಮತದಾನ ನಡೆಯಲಿದೆ. ಇವುಗಳ ಫಲಿತಾಂಶ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲಾರದು. ಆದರೆ ಕೆಲವು ನಾಯಕರ ಶಕ್ತಿ, ಸಂಘಟನ ಕೌಶಲ, ದೌರ್ಬಲ್ಯಗಳನ್ನು ಒರೆಗೆ ಹಚ್ಚುವುದು ಖಚಿತ. ಬಿಜೆಪಿ ಗೆದ್ದರೆ : – ಉತ್ತರ ಕರ್ನಾಟಕದಲ್ಲಿ ಸಿಎಂ ಬಿಎಸ್‌ವೈ ಶಕ್ತಿ ವೃದ್ಧಿ. – ನಾಯಕತ್ವ …
Read More »ಎಂಇಎಸ್ ಬೆಂಬಲಿಸಿ ಮತ ವ್ಯರ್ಥ ಮಾಡಬೇಡಿ: ದೇವೇಂದ್ರ ಫಡ್ನವೀಸ್
ಬೆಳಗಾವಿ, ಎ.15: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ನಿಮ್ಮ ಮತಗಳನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್ ಮನವಿ ಮಾಡಿದ್ದಾರೆ. ಗುರುವಾರ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಡೆದ ಆಯೋಜಿಸಲಾಗಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ್ ಅಂಗಡಿ ಮತಯಾಚಿಸಿ ಮಾತನಾಡಿದ ಅವರು, ಶಿವಸೇನೆ ಮುಖಂಡ ಸಂಜಯ್ ರಾವತ್ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡಲು ನಿನ್ನೆ …
Read More »ಸಾರಿಗೆ ನೌಕರರಿಗೆ ಸಿಹಿ ಹಂಚಿದ ವಿಜುಗೌಡ
ವಿಜಯಪುರ: ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ ಅವರು ಮುಷ್ಕರ ನಿರತ ಸಾರಿಗೆ ನೌಕರರನ್ನು ಭೇಟಿ, ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದರು. ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಸಾರಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಕ್ರಮಕೈಗೊಳ್ಳಲಿದ್ದಾರೆ ಎಂದು ವಿಜುಗೌಡ ಪಾಟೀಲ ಭರವಸೆ ನೀಡಿದರು. ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ, ಯುಗಾದಿ ಹಬ್ಬದ …
Read More »ಬಿಜೆಪಿ ನಾಯಕನ ಮನೆಯಲ್ಲಿ ಪತ್ತೆಯಾಯ್ತಾ ರಾಶಿ ರಾಶಿ ಹಣ? ಫೋಟೋ ಹಿಂದಿನ ಸತ್ಯಾಂಶವೇ ಬೇರೆ!
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸದ್ಯ ಚುನಾವಣೆ ಭರಾಟೆ ಜೋರಾಗಿದೆ. ಇದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮತ್ತು ಪೋಸ್ಟ್ ವಾರ್ಗಳು ಸಹ ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ರಾಶಿ ರಾಶಿ ಹಣದ ಕಂತೆಗಳಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಹಣವನ್ನು ಬಂಗಾಳ ಬಿಜೆಪಿ ನಾಯಕರೊಬ್ಬರ ಮನೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಕೆಲವು ಪೊಲೀಸರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ. ಅನೇಕ ಫೇಸ್ಬುಕ್ …
Read More »