Breaking News
Home / 2021 / ಏಪ್ರಿಲ್ (page 8)

Monthly Archives: ಏಪ್ರಿಲ್ 2021

ಕೊರೊನಾಗೆ ಪುಟ್ಟಣ್ಣ ಕಣಗಾಲ್ ಮಗ ರಾಮು ಕಣಗಾಲ್ ಬಲಿ

ಬೆಂಗಳೂರು, ಎಪ್ರಿಲ್ 28: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ರಾಮು ಕಣಗಾಲ್ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದಾಗ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ರವರ ಆರೋಗ್ಯ ಕಳೆದ ಐದು ದಿನಗಳಿಂದ ತುಂಬಾ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ರಾಮು ಕಣಗಾಲ್ ನಿಧನರಾಗಿದ್ದಾರೆ. ಚೆನ್ನೈನಲ್ಲಿ ವಿದ್ಯಾಭ್ಯಾಸ ಪಡೆದಿದ್ದ ರಾಮು ಅವರು …

Read More »

ಕೊರೊನಾ ನಿಯಂತ್ರಣ, ಚಿಕಿತ್ಸೆ: ಮುಖ್ಯಮಂತ್ರಿ ಯಡಿಯೂರಪ್ಪಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ …

Read More »

ಕೋವಿಡ್ ಗೆದ್ದು ಬಂದ ನಟ ಕೋಮಲ್ : ವೈದ್ಯರ, ನರ್ಸ್ ಗಳ ಪಾದಗಳಿಗೆ ನಮಿಸಿದ ಜಗ್ಗೇಶ್

ಬೆಂಗಳೂರು: ಕನ್ನಡದ ಕಾಮಿಡಿ ನಟ ಕೋಮಲ್ ಅವರು ಮಹಾಮಾರಿ ಕೋವಿಡ್ ವಿರುದ್ಧ ಹೋರಾಡಿ ಗೆಲುವು ಸಾಧಿಸಿ, ಸಂಪೂರ್ಣ ಗುಣಮುಖರಾಗಿದ್ದಾರೆ. ಕೋಮಲ್ ಆರೋಗ್ಯ ಸ್ಥಿತಿ ಸೀರಿಯಸ್ ಆಗಿರುವ ವಿಚಾರವನ್ನು ನಟ ಜಗ್ಗೇಶ್ ಇಷ್ಟು ದಿನ ಬಹಿರಂಗ ಪಡಿಸಿರಲಿಲ್ಲ. ಈಗ ಕೋಮಲ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಮನದಾಳದ ಮಾತುಗಳನ್ನು ಜಗ್ಗೇಶ್ ಹಂಚಿಕೊಂಡಿದ್ದಾರೆ. ಜೊತೆಗೆ ಸಾವಿನ ದವಡೆಯಿಂದ ಕೋಮಲ್‌ರನ್ನ ಪಾರು ಮಾಡಿದ ರಾಯರಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಜಗ್ಗೇಶ್ ಧನ್ಯವಾದ …

Read More »

ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ:

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿರುವ ಕೊರೊನಾ ಸೋಂಕನ್ನು ನಿಯಂತ್ರಣ ಮಾಡಲು ಮತ್ತು ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುವ ಸಂಬಂಧ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು 11 ಸಲಹೆಗಳನ್ನು ನೀಡಿದ್ದಾರೆ. ಸಿಎಂ ಬಿಎಸ್‌ವೈಗೆ 11 ಸಲಹೆ ನೀಡಿದ ಸಿದ್ದರಾಮಯ್ಯ: ರಾಜ್ಯದ ಜನರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿರುವ ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ. 50ರಷ್ಟು ಕೊವಿಡ್‌ಗೆ ಬೆಡ್ …

Read More »

ಒತ್ತಡ: ವೈದ್ಯನಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ನರ್ಸ್; ವಿಡಿಯೋ ವೈರಲ್

ರಾಮ್ ಪುರ: ನರ್ಸ್ ಒಬ್ಬರು ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾಮ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಮರಣ ಪ್ರಮಾಣ ಪತ್ರದ ವಿಷಯವಾಗಿ ವಾಗ್ವಾದ ನಡೆದ ಪರಿಣಾಮವಾಗಿ ನರ್ಸ್ ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ವರದಿಗಳ ಪ್ರಕಾರ ಅದಾಗಲೇ ರೋಗಿಗಳಿಂದ ತುಂಬಿದ್ದ ವೈದ್ಯರಿದ್ದ ಕೋಠಡಿಗೆ ಬಂದ ನರ್ಸ್ ಮೃತರೋರ್ವರ ಮರಣ ಪ್ರಮಾಣಪತ್ರ ನೀಡುವಂತೆ ಕೇಳಿದರು. ತಕ್ಷಣವೇ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಯಿತು. …

Read More »

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.   ಎರಡು ದಿನಗಳಿಂದ ಕೆಮ್ಮು-ಜ್ವರದಿಂದ ಬಳಲುತ್ತಿದ್ದ ಹೊರಟ್ಟಿ ಅವರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. ವೈದ್ಯರ ಸಲಹೆ ಮೇರೆಗೆ ಹೊರಟ್ಟಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Read More »

ಮನೆಗೆ ನುಗ್ಗಿ ಒಂಟಿ ಮಹಿಳೆಯ ಹತ್ಯೆಗೆ ಯತ್ನಿಸಿ ಮನೆ ದರೋಡೆ

ಮಡಿಕೇರಿ: ಮನೆಗೆ ನುಗ್ಗಿ ಒಂಟಿ ಮಹಿಳೆಯ ಕತ್ತು ಹಿಸುಕಿ ಹತ್ಯೆಗೆ ಯತ್ನಿಸಿ, ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹಾರ್ತಿಬೈಲ್ ಬಳಿ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯನ್ನು ಸರೋಜಿನಿ(60) ಎಂದು ಗುರುತಿಸಲಾಗಿದೆ. ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ. ಸಂಜೀವಿನಿ ಒಬ್ಬರೇ ರಾತ್ರಿ ಸಮಯದಲ್ಲಿ ಮನೆಯಲ್ಲಿ ಇದ್ದರು. ಇದೇ ಸಂದರ್ಭದಲ್ಲಿ ಬಂದ ಮುಸುಕುಧಾರಿಗಳು ಮಹಿಳೆಗೆ ಹಲ್ಲೆ ಮಾಡಿ ಕತ್ತು ಹಿಸುಕಿದ್ದಾರೆ. …

Read More »

ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ

ನವದೆಹಲಿ: ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಪಡೆಯುವರಿಗೆ ಆನ್ ಲೈನ್ ನಲ್ಲಿ ನೋಂದಿಣಿಗೆ ಇಂದಿನಿಂದ ಅವಕಾಶ ನೀಡಲಾಗಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ವ್ಯಾಕ್ಸಿನ್ ಪಡೆಯಲು ಇಚ್ಛಿಸುವವರು ಕೋವಿನ್ ವೆಬ್ ಸೈಟ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು. * www,cowin.gov.in ವೆಬ್ ಸೈಟ್ ಗೆ ಭೇಟಿ ನೀಡಿ …

Read More »

ಮಾಸ್ಕ್ ಧರಿಸದೆ ವಿವಾಹದಲ್ಲಿ ಭಾಗವಹಿಸಿದ್ದ ಕಾಗೇರಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಕೊರೊನಾ ಸೋಂಕು ದೃಢ

ಕಾರವಾರ: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಶಿರಸಿಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿ ಪಾಸಿಟಿವ್ ಬಂದಿದೆ. ಸೋಂಕು ಪತ್ತೆಯಾಗಿದ್ದರೂ ಯಾವುದೇ ರೀತಿಯ ಲಕ್ಷಣಗಳು ಇಲ್ಲ ಹಾಗೂ ಆರೋಗ್ಯವಾಗಿದ್ದಾರೆ. ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ  ತಿಳಿಸಿದ್ದಾರೆ. ಸಧ್ಯ ಕಾಗೇರಿಯವರು ಹೋಮ್ ಐಸೋಲೇಶನ್‍ನಲ್ಲಿದ್ದು, ಕೋವಿಡ್ ಆಸ್ಪತ್ರೆಗೆ ದಾಖಲಾಗಿಲ್ಲ. ಇತ್ತೀಚಿಗೆ ಸಭಾಧ್ಯಕ್ಷರ ಸಂಪರ್ಕಕ್ಕೆ ಬಂದವರು ಸ್ವಯಂ ಪ್ರೇರಿತವಾಗಿ …

Read More »

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ …

Read More »