ಹಾಸನ, ಏಪ್ರಿಲ್ 4: “ತಾಂಬೂಲ ತಂದಿದ್ದೇವೆ, ದೇವೇಗೌಡ್ರೇ ನಿಮ್ಮ ಕಾಲಿಗೆ ಬೀಳುತ್ತೇವೆ, ಕುಮಾರಸ್ವಾಮಿಯವರೇ ನಿಮ್ಮ ಕಾಲಿಗೆ ಬೀಳುತ್ತೇವೆ, ನೀವೇ ಮುಖ್ಯಮಂತ್ರಿಯಾಗ ಬೇಕೆಂದು ಗೋಗರೆದರು, ಅದಕ್ಕೆ ಗೌಡ್ರು ಒಪ್ಪಿಕೊಂಡರು” ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ, ಹೇಳಿದರು. “ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಈ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ ಏನೂ ಮಾಡಬೇಕಾಗಿಲ್ಲ”ಎಂದು ರೇವಣ್ಣ ಅಭಿಪ್ರಾಯ ಪಟ್ಟರು. ‘ “ನಮ್ಮ ಬಳಿ …
Read More »Monthly Archives: ಏಪ್ರಿಲ್ 2021
ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ತಗ್ಗುತ್ತದೆ; ಪೆಟ್ರೋಲಿಯಂ ಸಚಿವ
ಕೋಲ್ಕತ್ತಾ, ಏಪ್ರಿಲ್ 5: ದೇಶದ ತೈಲ ಬೆಲೆಯಲ್ಲಿ ಈಚೆಗಷ್ಟೆ ಸ್ವಲ್ಪ ಇಳಿಕೆಯಾಗಿದ್ದು, ಮುಂದೆ ಪೆಟ್ರೋಲ್, ಡೀಸೆಲ್ ಬೆಲೆ ಇನ್ನಷ್ಟು ಇಳಿಕೆಯಾಗಬಹುದು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೂರನೇ ಹಂತದ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, ಭಾನುವಾರ ಭೇಟಿ ನೀಡಿದ್ದ ಧರ್ಮೇಂದ್ರ ಪ್ರಧಾನ್, ಬೆಲೆ ಇಳಿಕೆಯಾಗುವ ಭರವಸೆ ನೀಡಿದ್ದಾರೆ. ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣೆ ಘೋಷಣೆ ಮಾಡಿದ ನಂತರ …
Read More »ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ: ಕಮಲ್ ಹಾಸನ್
ಕೊಯಮತ್ತೂರು, ಏಪ್ರಿಲ್ 5: ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. “ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ಸದ್ಯಕ್ಕಿರುವ ಎಲ್ಲಾ ಪ್ರಾಜೆಕ್ಟ್‌ಗಳನ್ನು ಮುಗಿಸಿ ಸಿನಿಮಾ ರಂಗವನ್ನು ಬಿಡುತ್ತೇನೆ” ಎಂದು ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರವೇಶ ಐತಿಹಾಸಿಕ ಎಂದು ಹೇಳಿರುವ ಅವರು, ರಾಜಕೀಯದಿಂದ ದೂರ ಉಳಿಯಲು ಬಯಸುವ ಶೇ 30ರಷ್ಟು ಮಂದಿಯಲ್ಲಿ ನಾನೂ …
Read More »ಹಿಂದುಳಿದ ಸಮಾಜಗಳ ಅಭಿವೃದ್ದಿಗೆ ಬಿಜೆಪಿ ಬದ್ಧ : B.S.Y.
ದಾವಣಗೆರೆ : ರಾಜ್ಯ ಬಿಜೆಪಿ ಸರ್ಕಾರ ಎಲ್ಲಾ ಹಿಂದುಳಿದ ಸಮಾಜಗಳ ಅಭಿವೃದ್ದಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹರಿಹರ ತಾಲೂಕಿನ ಬೆಳ್ಳೂಡಿ ಸಮೀಪದ ಕಾಗಿನಲೆ ಕನಕ ಗುರು ಶಾಖಾ ಮಠದ 5ನೇ ವಾರ್ಷಿಕೋತ್ಸವ ನಿಮಿತ್ತ ಭಾನುವಾರ ಪೀಠದ ಆವರಣದಲ್ಲಿ ನೂತನ ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಎಲ್ಲಾ ಸಮುದಾಯಗಳ ಅಭಿವೃದ್ದಿಗೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ಶೇ.50ರ ಮೀಸಲಾತಿ ಮಿತಿಯನ್ನು ಹೆಚ್ಚಿಸಲು ಸರ್ವೋಚ್ಛ ನ್ಯಾಯಾಲಯಕ್ಕೆ …
Read More »ರಾಜ್ಯ ಸಾರಿಗೆ ನೌಕರರಿಗೆ ಗರಿಷ್ಠ ವೇತನ ಪರಿಷ್ಕರಣೆ ಕೊಡುಗೆ?
ಬೆಂಗಳೂರು: ಗರಿಷ್ಠ ಪ್ರಮಾಣದ ವೇತನ ಪರಿಷ್ಕರಣೆ ಪ್ರಸ್ತಾವವನ್ನು ಮುಷ್ಕರ ನಿರತ ಸಾರಿಗೆ ನೌಕರರ ಮುಂದಿರಿಸಿ ಮನವೊಲಿಸಲು ಸರಕಾರ ಚಿಂತನೆ ನಡೆಸಿದೆ. ಶೇ. 15ರಿಂದ ಶೇ. 18ರ ವರೆಗೂ ವೇತನ ಹೆಚ್ಚಳದ ಬಗ್ಗೆ ಲೆಕ್ಕಾಚಾರ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. 6ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸಿದರೆ ಆರ್ಥಿಕ ಹೊರೆ ಆಗಲಿದ್ದು, ಪರ್ಯಾಯವಾಗಿ ಈ ಕ್ರಮ ಅನುಸರಿಸುವ ಚಿಂತನೆ ಇದೆ. ಪ್ರಸ್ತುತ 4 ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಮಾಡಲಾಗುತ್ತಿದೆ. 2020ರ …
Read More »ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ: ಬಿ.ವೈ ವಿಜಯೇಂದ್ರ ಟಾಂಗ್
ರಾಯಚೂರು: ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಯಾರಿಗೆ ಯೋಗ್ಯತೆ ಇದೆ ಅವರಿಗೆ ಚುನಾವಣಾ ಉಸ್ತುವಾರಿ ಕೊಡುತ್ತಾರೆ. ಉಸ್ತುವಾರಿ ಕೊಡುವ ಜವಾಬ್ದಾರಿ ರಾಜ್ಯಧ್ಯಕ್ಷರದ್ದು ಎಂದು ಪರೋಕ್ಷವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಮಸ್ಕಿ ಚುನಾವಣಾ ಉಸ್ತುವಾರಿ ವಹಿಸಿರುವ ಬಿ.ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿರಿಯರಿದ್ದಾರೆ. ಶಾಸಕ ಯತ್ನಾಳ್ ಸಹ ಎಲ್ಲಿಗೆ ಬೇಕಾದರೂ ಹೋಗಬಹುದು. ಎಲ್ಲ ಕಡೆಯೂ ಕಾರ್ಯಕರ್ತರು ಯತ್ನಾಳ್ರನ್ನ ಸ್ವಾಗತಿಸುತ್ತಾರೆ. ಕೆ.ಆರ್ …
Read More »ಶಾಸಕ ಜಮೀರ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ
ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅಹಮ್ಮದ್ ಮನೆಯ ಪ್ರವೇಶ ದ್ವಾರದ …
Read More »ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು: ಯತ್ನಾಳ್
ವಿಜಯಪುರ: “ಅಶ್ಲೀಲ ಸಿಡಿ ಇಟ್ಟುಕೊಂಡು ಮಂತ್ರಿಯಾಗಲು, ಎಂಎಲ್ ಸಿ ಆಗಲು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾಗಿರುವುದು ಏನೂ ಇಲ್ಲ” ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು” ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ನಾನು ಮಂತ್ರಿ ಆಗಲು ಯಾರಿಗೂ ಹಣ …
Read More »ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್ ಕುಮಾರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ. ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ …
Read More »ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ
ಬೆಳಗಾವಿ– ವಿಧಾನಪರಿಷತ್ ಸರಕಾರದ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಈ ಕುರಿತು ಅವರು ಫೋಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದು, ಇಂದು ಬೆಳಗ್ಗೆ ಟೆಸ್ಟ್ ಮಾಡಿದಾಗಿ ಕೊರೋನಾ ದೃಢಪಟ್ಟಿದೆ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅವರು ಕೋರಿದ್ದಾರೆ. ಕೊರೋನಾದಿಂದಾಗಿ ಅವರು ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿಯುವಂತಾಗಿದೆ.
Read More »