Home / 2021 / ಏಪ್ರಿಲ್ (page 92)

Monthly Archives: ಏಪ್ರಿಲ್ 2021

ಈಗ ಈಶ್ವರಪ್ಪನವರಿಗೆ ತಲೆಕೆಟ್ಟಿದೆ – ಸಿಎಂ ಬದಲಾಗದಿದ್ದರೆ ಇನ್ನೂ ಹಲವರಿಗೆ ತಲೆ ಕೆಡಲಿದೆ: ಯತ್ನಾಳ್

ವಿಜಯಪುರ: ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಶ್ವರಪ್ಪನವರ ಆರೋಪಕ್ಕೆ ಮಹತ್ವ ನೀಡಬೇಕು. ಅವರು ಮಾಡಿರುವ ತಪ್ಪಾದರೂ ಏನು ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರು ಈಶ್ವರಪ್ಪ. ನಿನ್ನೆ ಮೊನ್ನೆ ಬಂದವರು ಅವರ ಬಗ್ಗೆ ಕಮೆಂಟ್ ಮಾಡುವುದು ಸರಿಯಲ್ಲ. ನಾನು ಹಾಗೂ ಯಡಿಯೂರಪ್ಪ ಪಕ್ಷ ಬಿಟ್ಟು ಮತ್ತೆ ಬಂದವರು. ಆದರೆ ಈಶ್ವರಪ್ಪ ಬಿಜೆಪಿಯಲ್ಲೇ …

Read More »

ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ಪತ್ರ ಬರೆದಿದ್ದು ಸರಿಯಲ್ಲ: ಜಗದೀಶ ಶೆಟ್ಟರ್

ಬೆಳಗಾವಿ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಹಿರಂಗವಾಗಿ ಪತ್ರ ಬರೆಯುವುದು, ಅದನ್ನು ರಾಜ್ಯಪಾಲರಿಗಾಗಲಿ ಅಥವಾ ಪಕ್ಷದ ಮೇಲಿನವರಿಗಾಗಲಿ ಕಳುಹಿಸುವಂಥದು ಆಗಬಾರದಿತ್ತು. ಏನಿದ್ದರೂ ಮುಖ್ಯಮಂತ್ರಿ ಜೊತೆಯೇ ಚರ್ಚಿಸಬೇಕಿತ್ತು. ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಬೇಕಿತ್ತು. ಇದೆಲ್ಲವೂ ನಾಲ್ಕು ಗೋಡೆಗಳ ಒಳಗೆ ಆಗಬೇಕಾಗಿತ್ತು’ ಎಂದು ಪ್ರತಿಕ್ರಿಯಿಸಿದರು. ‘ನಾವೆಲ್ಲವೂ ಬಿ.ಎಸ್. ಯಡಿಯೂರಪ್ಪ ನಾಯಕತ್ವದಲ್ಲೇ …

Read More »

ಗದಗ ಮೂಲದ ಅಪ್ರಾಪ್ತೆಯ ಶವ ರಾಮದುರ್ಗದಲ್ಲಿ ಪತ್ತೆ :ಅತ್ಯಾಚಾರವೆಸಗಿ ಕೊಲೆ ಶಂಕೆ

ಬೆಳಗಾವಿ : ಗದಗ ಜಿಲ್ಲೆಯ ನರಗುಂದ ಪಟ್ಟಣ ಮೂಲದ ಅಪ್ರಾಪ್ತೆಯ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಬೆಳಗಾವಿ ಗಡಿಯಲ್ಲಿ ಮೃತದೇಹವನ್ನು ಬಿಸಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 15 ವರ್ಷದ ಬಾಲಕಿ ಮಾರ್ಚ್ 20 ರಂದು ಕೂಲಿ ಕೆಲಸಕ್ಕೆಂದು ಮನೆಯಿಂದ ಹೊರ ಹೋಗಿದ್ದಳು. ಈಕೆ ಮರಳಿ ಮನೆಗೆ ಬಾರದಿದ್ದಾಗ ಪೋಷಕರು ಮಾರ್ಚ್ 23 ರಂದು ನರಗುಂದ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ …

Read More »

ತಂದೆ-ತಾಯಿಯನ್ನು ಭೇಟಿ ಮಾಡಲ್ಲ ಎಂದ ಸಿಡಿ ಯುವತಿ!

 ಸಿಡಿ ಪ್ರಕರಣದಲ್ಲಿ ಹೆತ್ತವರ ಬೇಡಿಕೆಯನ್ನು ತಿರಸ್ಕರಿಸಿರುವ ಸಿಡಿ ಯುವತಿ, ಹೆತ್ತವರನ್ನು ಸದ್ಯಕ್ಕೆ ಭೇಟಿ ಮಾಡಲ್ಲ ಎಂದು ಹೇಳಿದ್ದಾಳೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪರ ವಕೀಲ ಜಗದೀಶ್, ಇವತ್ತು ಕೋರ್ಟ್ ಗೆ ರಜೆ ಇದೆ. ಆದ್ದರಿಂದ ತಂದೆ-ತಾಯಿಯನ್ನು ಭೇಟಿ ಮಾಡುವುದಾದರೆ ಮಾಡಿ ಎಂದು ಸಲಹೆ ನೀಡಿದೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಭೇಟಿ ಮಾಡಲ್ಲ ಅಣ್ಣ ಎಂದು ಹೇಳಿದ್ದಾರೆ ಎಂದರು. ಇವತ್ತು ಕೊರ್ಟ್ ಬೇರೆ ರಜೆ ಇದೆ. ಎಸ್ ಐಟಿಯವರು …

Read More »

ಯಡಿಯೂರಪ್ಪ ಸಂಪುಟದಲ್ಲಿ ಇನ್ನೂ ದೊಡ್ಡಮಟ್ಟದ ಸ್ಫೋಟವಾಗಲಿದೆ: ಮತ್ತೆ ಕಿಡಿಕಾರಿದ ಯತ್ನಾಳ್

ವಿಜಯಪುರ: ಸಚಿವ ಈಶ್ವರಪ್ಪ ಕೂಡ ಯಡಿಯೂರಪ್ಪ ಅವರಂತೆ ಪಕ್ಷ ಕಟ್ಡಿದ ಹಿರಿಯ ನಾಯಕ. ಅವರಿಗೆ ಇಲಾಖೆಯಲ್ಲಿ ಸಚಿವರಾಗಿ ಮುಕ್ತ ಸ್ವಾತಂತ್ರ್ಯ ಇಲ್ಲವಾಗಿದ್ದು, ತಾಳ್ಮೆ ಮೀರಿ ಸ್ಫೋಟಗೊಂಡಿದ್ದಾರೆ. ಸಂಪುಟದಲ್ಲಿ ಇನ್ನೂ ಸ್ಪೋಟಗಳಾಗುತ್ತದೆ ನೋಡ್ತಾ ಇರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ವಾರ್ಡ್ ನಂ22 ರಲ್ಲಿ ಏಕತಾ ನಗರದಲ್ಲಿ ಸಮುದಾಯ ಭವನದ ಕಾಮಗಾರಿ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೇ 2 …

Read More »

ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಪ್ರಾಂಶುಪಾಲೆ

ಹಾಸನ: ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರೊಬ್ಬರು ತಲೆ ತಗ್ಗಿಸುವಂತಹ ಕೆಲಸ ಮಾಡಿದ್ದು, ಗುರು-ಶಿಷ್ಯರ ಸಂಬಂಧಕ್ಕೆ ಮಸಿ ಬೆಳೆದಿದ್ದಾರೆ. ಉದ್ದೇಶ ಪೂರ್ವಕವಾಗಿಯೇ ವಿದ್ಯಾರ್ಥಿಯೊಬ್ಬನ ಉತ್ತರ ಪತ್ರಿಕೆಯ ಉತ್ತರಗಳನ್ನು ವಿರೂಪಗೊಳಿಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಹಾಸನ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿದೆ. ಈ ಸಂಬಂಧ ಪ್ರಾಂಶುಪಾಲೆ ಶೋಭಾದೇವಮಾನೆ ವಿರುದ್ಧ ಹಾಸನ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನೊಂದ ವಿದ್ಯಾರ್ಥಿ ಚನ್ನಯ್ಯ ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ. ಕಾಲೇಜಿನ …

Read More »

ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ : ಮರು ಮತದಾನಕ್ಕೆ ಆಯೋಗ ತೀರ್ಮಾನ

ಕರೀಂಗಂಜ್, ಏ.2- ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಯಂತ್ರ ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಅಸ್ಸಾಂನ ರತಬರಿ ವಿಧಾನಸಭಾ ಕ್ಷೇತ್ರದ ಒಂದು ಮತಕೇಂದ್ರಕ್ಕೆ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ.ಇಂದಿರಾ ಎಂ.ವಿ.ಶಾಲೆಯ ಮತ ಕೇಂದ್ರದಲ್ಲಿ ನಡೆದ ಮತದಾನದ ಇವಿಎಂ ಯಂತ್ರಗಳನ್ನು ಬಿಜೆಪಿ ಮುಖಂಡನ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಿ ಕೆಲವರು ಆರೋಪಿಸಿ ದಾಂಧಲೆ ನಡೆಸಿದ್ದರು. ಪರಿಸ್ಥಿತಿ …

Read More »

ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗ ಹೊಸ ದಾಖಲೆ

ಹುಬ್ಬಳ್ಳಿ, ಏ.2- ದೇಶದಲ್ಲಿ ಕೊರೊನಾ ಸೋಂಕಿನ ಆರ್ಭಟ ಮತ್ತು ಆರ್ಥಿಕ ಹಿಂಜರಿತದ ಪರಿಣಾಮದ ಹೊರತಾಗಿಯೂ ನೈಋತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗ ಸರಕು ಸಾಗಣೆ ಮೂಲಕ ಉತ್ತಮ ಆದಾಯ ಗಳಿಸಿದೆ. ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಸುಮಾರು 3.45 ಮಿಲಿಯನ್ ಟನ್ ಸರಕು ಸಾಗಣೆ ಮಾಡುವ ಹೊಸ ದಾಖಲೆ ಮಾಡಿದ್ದು, ಇದು ಕಳೆದ 4 ವರ್ಷಗಳಲ್ಲಿ ಗರಿಷ್ಠ ಮಾಸಿಕ ಸರಕು ಸಾಗಣೆ ಆಗಿದೆ. ಮಾರ್ಚ್ 31 ರಂದು 2286 ವ್ಯಾಗನ್ …

Read More »

ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್‍ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್‍ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. …

Read More »

ಸಿದ್ದಗಂಗಾ ಶ್ರೀಗಳ ಸ್ಮರಿಸಿದ ಪ್ರಧಾನಿ ಮೋದಿ.. ಉದಾತ್ತ ಆಲೋಚನೆಗಳ ಸ್ವಾಮೀಜಿಗೆ ಶಿರಬಾಗಿ ನಮಿಸುವೆ ಎಂದ್ರು

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಜಯಂತಿ ಪ್ರಯುಕ್ತ ಅವರನ್ನು ಸ್ಮರಿಸಿರುವ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಅಧಿಕೃತ ಟ್ವಿಟರ್​ ಖಾತೆಯ ಮುಖೇನ ಸ್ವಾಮೀಜಿಗಳಿಗೆ ನಮನ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, …

Read More »