Breaking News

Daily Archives: ಮೇ 2, 2021

ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ.

ಸವದತ್ತಿ – ಹಂಚಿನಾಳ ಬಳಿ ಸಿಡಿಲು ಬಡಿದು ಇಬ್ಬರು ಯುವಕರು ಸಾವಿಗೀಡಾಗಿದ್ದಾರೆ. ಯರಗಟ್ಟಿ ತಾಲೂಕಿನ ಕೊಡ್ಲಿವಾಡದ ಹನುಮಂತ ಕಾರಬಾರಿ (19) ಹಾಗೂ ಮಾಡಮಗೇರಿ ಗ್ರಾಮದ ಹೊನ್ನಪ್ಪ ಮಬನೂರ (14) ಮೃತರು. ವಿಧಾನಸಭಾ ಉಪಾಧ್ಯಕ್ಷ ಆನಂದ ಮಾಮನಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ಸರಕಾರದಿಂದ ಪರಿಹಾರ ಕೊಡಿಸಲು ಕ್ರಮ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

Read More »

ಕರ್ನಾಟಕದ ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ಕಾರ್ಯ ಕೂಡ ಆರಂಭವಾಗಿದೆ.

ಬೆಳಗಾವಿ – ದೇಶಾದ್ಯಂತ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಗೆ ಅಧಿಕೃತವಾಗಿ ಆರಂಭವಾಗಿದೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದ್ದು, ನಂತರ ಇವಿಎಂ ತೆರೆಯಲಾಗುತ್ತದೆ. ಈ ಬಾರಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕಿರುವುದರಿಂದ ಪ್ರತಿಬಾರಿಯಷ್ಟು ವೇಗವಾಗಿ ಫಲಿತಾಂಶ ಸಿಗುವುದು ಕಷ್ಟ. ಪಶ್ಚಿಮ ಬಂಗಾಳ ಫಲಿತಾಂಶ ಎಲ್ಲಕ್ಕಿಂತ ಹೆಚ್ಚು ಕುತೂಹಲ ಮೂಡಿಸಿದ್ದು, ತಮಿಳುನಾಡು, ಕೇರಳ, ಆಸ್ಸಾಂ, ಪುದುಚೆರಿ ವಿಧಾನಸಭೆ ಚುನಾವಣೆ ಫಲಿತಾಂಶವೂ ಇಂದೇ ಪ್ರಕಟವಾಗಲಿದೆ. …

Read More »