Breaking News
Home / 2021 / ಮೇ / 06 (page 2)

Daily Archives: ಮೇ 6, 2021

ಎಲೆಕ್ಷನ್ ಡ್ಯೂಟಿಗೆ ಹಾಜರಾಗಿದ್ದ 2 ಸಾವಿರ ಜನರು ಕೊರೊನಾಗೆ ಬಲಿ – 700ಕ್ಕೂ ಹೆಚ್ಚು ಶಿಕ್ಷಕರು

ಲಕ್ನೊ: ಚುನಾವಣೆ ಡ್ಯೂಟಿಗೆ ಹಾಜರಾಗಿದ್ದ ಸುಮಾರು ಎರಡು ಸಾವಿರ ಉದ್ಯೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ಇದರಲ್ಲಿ 700ಕ್ಕೂ ಹೆಚ್ಚು ಜನರು ಶಿಕ್ಷಕರಿದ್ದಾರೆ ಎಂದು ಪತ್ರಿಕೆಯೊಂದು ವರದಿಯಾಗಿದೆ. ಕೊರೊನಾ ಎರಡನೇ ಅಲೆಯ ನಡುವೆಯೂ ಉತ್ತರ ಪ್ರದೇಶದಲ್ಲಿ ಪಂಚಾಯ್ತಿ ಚುನಾವಣೆ ನಡೆದಿದೆ. ಆದ್ರೆ ಡ್ಯೂಟಿಗೆ ಹಾಜರಾಗಿದ್ದ ಬಹುತೇಕ ನೌಕರರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 706 ಶಿಕ್ಷಕರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದ್ದು, ಈ ಸಂಖ್ಯೆ ಸಾವಿರದ ಗಡಿ ದಾಟುವ ಆತಂಕವನ್ನ ಶಿಕ್ಷಣ ಇಲಾಖೆ ಹೊರ …

Read More »

ಬೆಡ್ ಸಿಗದೇ ವಿಧಾನಸೌಧಕ್ಕೇ ಸೋಂಕಿತೆಯನ್ನು ಕರೆತಂದ ಕುಟುಂಬಸ್ಥರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸ್ಥಿತಿ ಕೇಳುವವರಿಲ್ಲದಂತಾಗಿದೆ. ಒಂದೆಡೆ ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗುತ್ತಿಲ್ಲ, ಇನ್ನೊಂದೆಡೆ ಸಾವನ್ನಪ್ಪಿದರೆ ಚಿತಾಗಾರವೂ ಸಿಗದ ಘೋರ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಬೆಡ್ ಸಿಗದ ಕಾರಣ ಸೋಂಕಿತ ಮಹಿಳೆಯೊಬ್ಬರು ಆಂಬುಲೆನ್ಸ್ ನಲ್ಲಿ ವಿಧಾನಸೌಧಕ್ಕೆ ಆಗಮಿಸಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಕಳೆದ ಎರಡುದಿನಗಳಿಂದ ಬೆಂಗಳೂರಿನ ಎಲ್ಲಾ ಆಸ್ಪತ್ರೆಗಳಿಗೂ ಅಲೆದಾಡಿದರೂ ಬೆಡ್ ವ್ಯವಸ್ಥೆ ಸಿಕ್ಕಿಲ್ಲ. ಇದರಿಂದ ಬೇಸತ್ತ ಕುಟುಂಬದವರು ಸೋಂಕಿತ ಮಹಿಳೆಯನ್ನು …

Read More »

ಕೊರೊನಾ `ನಿಯಮ ಗಾಳಿಗೆ ತೂರಿ ಲಸಿಕೆಗೆ ಕ್ಯೂ’ ನಿಂತ ಜನ

ಕೋಲಾರ : ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿದೆ. ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಅಂತಾ ಹೇಳುತ್ತಲೆ ಇದೆ. ಆದ್ರೆ ಸರ್ಕಾರಿ ಕಚೇರಿಗಳಲ್ಲೇ ಇದರ ಪಾಲನೆ ಆಗುತ್ತಿಲ್ಲ. ಲಸಿಕಾ ಕೇಂದ್ರಗಳಲ್ಲೂ ಕೂಡ ಜನರು ಸಾಮಾಜಿಕ ಅಂತರ ಮರೆತು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇದನ್ನ ತಡೆಯಬೇಕಿದ್ದ ಅಧಿಕಾರಿಗಳು ಮಾತ್ರ ಎಸಿ ರೂಮಿನಲ್ಲಿ ತಂಪಾಗಿ ಕುಳಿತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಕೋಲಾರದ ಲಸಿಕಾ ಕೇಂದ್ರ..! ಹೌದು..! ಇಲ್ಲಿನ ಇಟಿಸಿಎಂ ಆಸ್ಪತ್ರೆ …

Read More »

ನನ್ನ ಹೆಂಡತಿಗೆ ವೆಂಟಿಲೇಟರ್​ ಕೊಡಿಸೋಕೆ ಆಗ್ತಿಲ್ಲ- ಮೈಸೂರು ಡಿಹೆಚ್​ಓ

ಮೈಸೂರು: ಕೊರೊನಾ ಸೋಂಕಿತರಿಗೆ ಬೆಡ್ ಹಂಚಿಕೆ ವಿಚಾರದಲ್ಲಿ​ ಮೈಸೂರು ಡಿಹೆಚ್​ಓ ಅಸಹಾಯಕರಾಗಿ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ. ಕೊರೊನಾ ಸೋಂಕಿತರ ಸಂಬಂಧಿಕರೊಡನೆ ಮಾತನಾಡಿರುವ ಮೈಸೂರು ಡಿಹೆಚ್​ಓ, ನನ್ನ ಕೈ ಸೋತೋಗಿದೆ. ನನ್ನ ಹೆಂಡತಿಗೆ ವೆಂಟಿಲೇಟರ್ ಕೊಡಿಸಲು ನನಗೆ ಯೋಗ್ಯತೆ ಇಲ್ಲ. ನೀವು ಯಾರಿಗೆ ಬೇಕಾದ್ರು ಕಂಪ್ಲೇಂಟ್ ಕೊಡಿ‌. ಇವತ್ತೇ ಮನೆಗೆ ಕಳುಹಿಸಿದರು ನಾನು ಹೋಗಲು ರೆಡಿ. ದಯವಿಟ್ಟು ನನ್ನನ್ನು ಕ್ಷಮಿಸಿಬಿಡಿ ನನ್ನಿಂದ ವೆಂಟಿಲೇಟರ್ ಅರೆಂಜ್ ಮಾಡಲು ಆಗಲ್ಲ ಎಂದು ಬೇಸರ …

Read More »

ಚಾಮರಾಜನಗರ ದುರಂತ :ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿಲ್ಲ.- ಸಚಿವ ಸುರೇಶ್ ಕುಮಾರ್

ಚಾಮರಾಜನಗರ : ಚಾಮರಾಜನಗರದಲ್ಲಿ ನಿನ್ನೆ ಬುಧವಾರ ಬೆಳಿಗ್ಗೆ 9 ಗಂಟೆಯಿಂದ ಇಂದು ಗುರುವಾರ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ 15 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಇದಲ್ಲದೆ ಕೋವಿಡ್ ಅಲ್ಲದ ಆದರೆ ಕೋವಿಡ್ ಲಕ್ಷಣವುಳ್ಳ 5 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದರು. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಇವರ್ಯಾರೂ ಸಹ ಆಕ್ಸಿಜನ್ ಕೊರತೆಯಿಂದ ಸತ್ತಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ಕೊರೋನಾ ರೋಗಿಗಳು ಸತ್ತಿದ್ದಾರೆ. …

Read More »

ಸಂಪೂರ್ಣ ಲಾಕ್ ಡೌನ್ ಅನಿವಾರ್ಯ; ಶೋಭಾ ಕರಂದ್ಲಾಜೆ

ಉಡುಪಿ, ಮೇ 06; “ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಉಡುಪಿ ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನತಾ ಲಾಕ್ ಡೌನ್ ನಿಂದ ನಿಯಂತ್ರಣ ಕಷ್ಟ ಅನಿಸುತ್ತಿದೆ. ಕಳೆದ ಬಾರಿಯಂತೆ ಸಂಪೂರ್ಣ ಲಾಕ್ ಡೌನ್ ಮಾಡಬೇಕು” ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ಉಡುಪಿಯಲ್ಲಿ ಮಾತನಾಡಿದ ಅವರು, “ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡಬೇಕು. ಜನ ಈಗಿನಂತೆ …

Read More »

ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ

ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು. ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ …

Read More »

ಕೇರಳದಲ್ಲಿ ಮೇ16ರವರೆಗೆ ಲಾಕ್‌ಡೌನ್ : ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರ: ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ದೇವರನಾಡು ಕೇರಳದಲ್ಲಿ ಇದೀಗ ಲಾಕ್ ಡೌನ್ ‍ಘೋಷಣೆಯಾಗಿದೆ. ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ16ರವರೆಗೆ ಕೇರಳ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುತ್ತಿರುವುದಾಗಿ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ಬುಧವಾರ ಕೇರಳದಲ್ಲಿ 41,953 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದೇ ಕಾರಣವಾಗಿದೆ. ಇದು ಇದುವರೆಗಿನ ದೈನಂದಿನ ದಾಖಲೆಯಾಗಿದೆ. ಲಾಕ್‌ಡೌನ್ ವೇಳೆ ಯಾವುದಕ್ಕೆಲ್ಲ ವಿನಾಯತಿ ಇರಲಿದೆ ಎಂಬುದು ಮಾರ್ಗಸೂಚಿಯಲ್ಲಿ …

Read More »

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ ನಟಿಸಿದ್ದ ಅಭಿಲಾಶಾ ಪಾಟೀಲ್ ಕೊರೊನಾಕ್ಕೆ ಬಲಿಯಾಗಿದ್ದಾರೆ. ವರದಿ ಪ್ರಕಾರ, ಅಭಿಲಾಶಾ ಪಾಟೀಲ್, ವಾರಣಾಸಿಯಲ್ಲಿ ಸಿನಿಮಾ ಶೂಟಿಂಗ್ ಮಾಡ್ತಿದ್ದರು. ಶೂಟಿಂಗ್ ಮುಗಿಸಿ ಮುಂಬೈಗೆ ವಾಪಸ್ ಆದವರಿಗೆ ಕೊರೊನಾ ಕಾಣಿಸಿಕೊಂಡಿದೆ. ಆರಂಭಿಕ ರೋಗಲಕ್ಷಣ ಕಾಣಿಸಿಕೊಂಡ ನಂತ್ರ ಪರೀಕ್ಷೆ ಮಾಡಲಾಗಿತ್ತು. ಮನೆಯಲ್ಲಿಯೇ ನಟಿ ಚಿಕಿತ್ಸೆ …

Read More »

ನಾನು ಈಗಾಗಲೇ ರಾಜೀನಾಮೆ ಕೊಟ್ಟೆ ಇಲ್ಲಿಗೆ ಬಂದಿರೋದು.. ರೇಣುಕಾಚಾರ್ಯಗೆ ಡಾ. ಕೆ. ಸುಧಾಕರ್ ತಿರುಗೇಟು

ಬೆಂಗಳೂರು: ಶಾಸಕ ಎಂಪಿ ರೇಣುಕಾಚಾರ್ಯ ಅವರು ಇತ್ತೀಚೆಗೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ರಾಜೀನಾಮೆಗೆ ಒತ್ತಾಯ ಮಾಡಿದ್ದರು. ಈ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಾ. ಕೆ. ಸುಧಾಕರ್ ಅವರು ರೇಣುಕಾಚಾರ್ಯ ವಿರುದ್ದ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ನಾನು ಈಗಾಗಲೇ ರಾಜೀನಾಮೆ ಕೊಟ್ಟೆ ಇಲ್ಲಿಗೆ ಬಂದಿರೋದು. ರಾಜೀನಾಮೆ ಕೊಟ್ಟು ಕಷ್ಟ ಅನುಭವಿಸಿ ಇಲ್ಲಿಗೆ ಬಂದಿದ್ದೇನೆ. ಸರ್ಕಾರ‌ನೂ ಬಂದಿದೆ. ಈ ಸಮಯದಲ್ಲಿ ನಾನು ರಾಜಕೀಯ ಮಾತಾಡಿಲ್ಲ ಎಂದಿದ್ದಾರೆ. ನಾನು …

Read More »