Breaking News
Home / 2021 / ಮೇ / 07 (page 4)

Daily Archives: ಮೇ 7, 2021

ಧಾರವಾಡ ಜಿಲ್ಲೆಯಲ್ಲಿ 4 ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪನೆಗೆ ಅನುಮೋದನೆ

ಹುಬ್ಬಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಚಿಕಿತ್ಸೆಗೆ ಆಮ್ಲಜನಕ ಕೊರತೆ ನೀಗಿಸುವುದಕ್ಕಾಗಿ ಕೇಂದ್ರ ಸ್ವಾಮ್ಯದ ಸಾರ್ವಜನಿಕ ಉದ್ಯಮಗಳಿಂದ ಧಾರವಾಡ ಜಿಲ್ಲೆಗೆ 4 ಆಮ್ಲಜನಕ ಉತ್ಪಾದನಾ ಘಟಕಗಳ ಸ್ಪಾಪನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಮ್ಲಜನಕ ಘಟಕ ಸ್ಥಾಪನೆ ಕುರಿತಾಗಿ ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್  ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪತ್ರ ಬರೆದು ಮನವಿ ಮಾಡಿದ್ದರು. ಜೋಶಿ ಪತ್ರಕ್ಕೆ ಸ್ಪಂದಿಸಿರುವ ಕೇಂದ್ರ ಸಚಿವ …

Read More »

ಸುವರ್ಣ ವಿಧಾನಸೌಧವನ್ನು ಕೊರೋನಾ ಕೇರ್ ಸೆಂಟರ್ ಆಗಿ ಪರಿವರ್ತಿಸಬೇಕು ಎಂದು ಶಾಸಕಿ ಅಂಜಲಿ ನಿಂಬಾಳಕರ್ B.S.Y. ಅವರಿಗೆ ಪತ್ರ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಪ್ರತಿನಿತ್ಯ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸುತ್ತಿದೆ. ಇದರಲ್ಲಿ ಸೋಂಕಿಗೆ ಒಳಗಾಗಿ ಉಸಿರಾಟ ಸೇರಿ ಮತ್ತಿತರ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಹೀಗಾಗಿ ಕಳೆದ ಎರಡು ವರ್ಷಗಳಿಂದ ಯಾವುದೇ ಅಧಿವೇಶನಗಳನ್ನು ನಡೆಸದೇ ವ್ಯರ್ಥವಾಗಿ ಕೋಟ್ಯಾಂತರ ರೂಪಾಯಿ ವೆಚ್ಛ ಮಾಡಿ ನಿರ್ವಹಣೆ ಮಾಡುತ್ತಿರುವ ಬೆಳಗಾವಿಯ ಸುವರ್ಣಸೌಧವನ್ನು ಇಂತಹ ಸಂದರ್ಭದಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ಎಂದು ಅವರು ಹೇಳಿದ್ದಾರೆ.             …

Read More »

ಹಳೆ ವೃತ್ತಿ ಗಾರೆ ಕೆಲಸಕ್ಕೆ ಮರಳಿದ ನಟ ಚಿಕ್ಕಣ್ಣ!

ನಟ ಚಿಕ್ಕಣ್ಣ ಕನ್ನಡ ಚಿತ್ರರಂಗದ ಬ್ಯುಸಿ ಹಾಸ್ಯನಟರಲ್ಲಿ ಒಬ್ಬರು. ಕುರಿಬಾಂಡ್ ಕಾರ್ಯಕ್ರಮದಿಂದ ನಟನೆ ಆರಂಭಿಸಿದ ಚಿಕ್ಕಣ್ಣ ಇಂದಿನ ಈ ಹಂತಕ್ಕೆ ಏರಲು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಸಾಮಾನ್ಯ ಕುಟುಂಬದಿಂದ ಬಂದಿರುವ ಚಿಕ್ಕಣ್ಣ ಮೊದಲು ಜೀವನಕ್ಕಾಗಿ ಗಾರೆ ಕೆಲಸ ಮಾಡುತ್ತಿದ್ದರು. ಮೇಸ್ತ್ರಿ ಕೈಕೆಳಗೆ ದಿನಗೂಲಿಗೆ ಮನೆಗಳ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಚಿಕ್ಕಣ್ಣ ನಟನಾಗುವ ಉದ್ದೇಶದಿಂದ ಬೆಂಗಳೂರಿಗೆ ಬಂದು ಹಲವು ಸುತ್ತು ಸೈಕಲ್ ಹೊಡೆದ ಬಳಿಕ ಇಂದಿನ ಸ್ಥಿತಿಗೆ ತಲುಪಿದ್ದಾರೆ. ಆದರೆ ಚಿಕ್ಕಣ್ಣ …

Read More »

ವೈದ್ಯರ ವಿರುದ್ಧ ಪೋಸ್ಟ್; ಕಾಮಿಡಿಯನ್ ಸುನಿಲ್ ಪಾಲ್ ವಿರುದ್ಧ ದೂರು ದಾಖಲು

ಖ್ಯಾತ ಕಮಿಡಿಯನ್ ಸುನಿಲ್ ಪಾಲ್ ವಿರುದ್ಧ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಮಿಡಿಯನ್ ಸುನಿಲ್ ಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ಕೋವಿಡ್ ಸನ್ನಿವೇಶದ ಬಗ್ಗೆ ವಿಡಿಯೋ ಮಾಡಿ ಮಾತನಾಡುತ್ತಾ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ರಾಕ್ಷಸರು, ಕಳ್ಳರು ಎಂದು ಕರೆದಿದ್ದರು. ಇದೇ ಕಾರಣಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ‘ಕೋವಿಡ್ ಸನ್ನಿವೇಶದಲ್ಲಿ ವೈದ್ಯರು ರೋಗಿಗಳಿಂದ ಹಣ ಕೀಳುತ್ತಿದ್ದಾರೆ. ಬಿಳಿ ಬಟ್ಟೆ ಧರಿಸಿದ ರಾಕ್ಷಸರಂತೆ ವರ್ತಿಸುತ್ತಿದ್ದಾರೆ. …

Read More »

ಶುಕ್ರವಾರ ಸಂಜೆ 6 ಗಂಟೆಗೆ ಸಿಎಂ ನಿವಾಸ ಕಾವೇರಿಯಲ್ಲಿ ಗಂಭೀರ ಚರ್ಚೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಫಿಕ್ಸ್?

ಜನತಾ ಕರ್ಫ್ಯೂ ವಿಫಲವಾಗಿದೆ ಎಂದು ಸಚಿವರು, ಆರೋಗ್ಯ ತಜ್ಞರು ಹೇಳಿಕೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರ ಸಭೆ ಕರೆದಿದ್ದು ಲಾಕ್ ಡೌನ್ ವಿಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಶುಕ್ರವಾರ ಸಂಜೆ ಮುಖ್ಯಮಂತ್ರಿ ಬಿಎಸ್ ವೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದು, ಕೋವಿಡ್ ನಿಯಂತ್ರಣ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ 300ಕ್ಕೂ ಅಧಿಕ ಕೊರೊನಾ ಸಾವು …

Read More »

ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ. ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು. ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, …

Read More »

ಇನ್ನೆರಡು ದಿನಗಳಲ್ಲಿ ಸಂಪೂರ್ಣ ಲಾಕ್ ಆಗಲಿದೆಯಾ ಕರುನಾಡು..?

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂ ಅಷ್ಟೇನೂ ಪರಿಣಾಮಕಾರಿಯಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ ಹೇಳುವ ಮೂಲಕ ಲಾಕ್ ಡೌನ್ ಹೇರುವ ಮುನ್ಸೂಚನೆ ಕೊಟ್ಟಿದ್ದಾರೆ. 12 ನೇ ತಾರೀಖಿನಂದು ಜಾರಿಯಲ್ಲಿರುವ ಕರ್ಫ್ಯೂ ಮುಕ್ತಾಯವಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂದಿನ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ. ಕೊರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸರ್ಕಾರದ …

Read More »

1 ಕೋಟಿ ಮಂದಿಗೆ ಲಸಿಕೆ! : ಲಸಿಕೆ ಪಡೆದವರಲ್ಲಿ ಸ್ತ್ರೀಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಂದು ಕೋಟಿ ಡೋಸ್‌ ಕೋವಿಡ್ ಲಸಿಕೆ ವಿತರಿಸಲಾಗಿದೆ. ಅಭಿಯಾನದಲ್ಲಿ ಒಟ್ಟು 84.6 ಲಕ್ಷ ಮಂದಿ ಲಸಿಕೆ ಪಡೆದಿದ್ದು, 18.5 ಲಕ್ಷ ಮಂದಿ ಎರಡೂ ಡೋಸ್‌ ಪೂರ್ಣಗೊಳಿಸಿದ್ದಾರೆ. ಲಸಿಕೆ ಅಭಿಯಾನ ಆರಂಭವಾಗಿ 110 ದಿನಗಳಾಗಿವೆ. ಗುರುವಾರದ ಅಂತ್ಯಕ್ಕೆ ಒಟ್ಟು 84.6 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ಈ ಪೈಕಿ 18.5 ಲಕ್ಷ ಮಂದಿ 2ನೇ ಡೋಸ್‌ ಪೂರ್ಣಗೊಳಿಸಿದ್ದಾರೆ. ಒಟ್ಟು 1,03,01,805 ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ …

Read More »

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬೇಸಿಗೆ ರಜೆಯಲ್ಲಿ ಬಿಸಿಯೂಟದ ಬದಲು ಪಡಿತರ ವಿತರಣೆ!

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಶಾಲಾ ಮಕ್ಕಳಿಗೆ ಶೈಕ್ಷಣಿಕ ವರ್ಷದ ಆರಂಭದಿಂದಲೂ ಬಿಸಿಯೂಟದ ಬದಲಿಗೆ ಆಹಾರ ಧಾನ್ಯವನ್ನೇ ನೀಡಲಾಗುತ್ತಿದ್ದು, ಬೇಸಿಗೆ ರಜೆಯಲ್ಲೂ ಬಿಸಿಯೂಟದ ಬದಲು ಪಡಿತರ ನೀಡಲು ನಿರ್ಧರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಇಲ್ಲದೇ ತೇರ್ಗಡೆ ಮಾಡಿ ಬೇಸಿಗೆ ರಜೆ ಪ್ರಕಟಿಸಿದೆ. …

Read More »

ಸರಕಾರದ ಆರೋಗ್ಯ ಇಲಾಖೆ ಕೊಟ್ಟ ಲೆಕ್ಕ ಸುಳ್ಳು :ಶಿವರಾಮ ಹೆಬ್ಬಾರ್

ಕಾರವಾರ  : ಕೋವಿಡ್-೧೯ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ವ್ಯಾಪಾರ-ವಹಿವಾಟಿಗೆ ಈ ಹಿಂದೆ ಮಾಡಲಾಗಿದ್ದ ಬೆಳಿಗ್ಗೆ ೬ ರಿಂದ ೧೨ರ ಸಮಯವನ್ನು ಮತ್ತೆ  ಮೇ. ೭ ರಿಂದ ಪ್ರತಿದಿನ ಬೆಳಿಗ್ಗೆ ೬ ರಿಂದ ೧೦ ರವರೆಗೆ ಮಾತ್ರ ಅವಕಾಶ ಕಲ್ಪಿಸಿ ಜಿಲ್ಲೆಯಲ್ಲಿ  ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ ತಿಳಿಸಿದ್ದಾರೆ. ಜೊತೆಗೆ ತಮ್ಮದೇ ಸರಕಾರದ ಆರೋಗ್ಯ ಇಲಾಖೆ ನೀಡಿದ ಒಂದೇ ದಿನ  …

Read More »