Home / 2021 / ಮೇ / 10

Daily Archives: ಮೇ 10, 2021

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »

ಜಗತ್ತಿನ ಅತಿ ದೊಡ್ಡ ನೆಟ್ವರ್ಕ್ ಈ ಒಂದು ಪ್ರದೇಶ ದಲ್ಲಿಲ್ಲ…?

ಜಮಖಂಡಿ: ಏರ್ಟೆಲ್ ಹಾಗೂ ಜಿಯೋ. ಜಗತ್ತಿನ ಅತ್ಯಂತ ದೊಡ್ಡ ನೆಟ್ವರ್ಕ್ ಅಂತ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಜಾಹೀರಾತು ಹಾಗೂ ಇನ್ನಿತರ ಮೂಲದ ಮೂಲಕ ಜನರಿಗೆ ತಲುಪಿಸುವ ಹಾಗೆ ದೃಶ್ಯ ಮಾಧ್ಯಮ, ಪ್ರಿಂಟ್ ಮೀಡಿಯಾ, ಹಾಗೂ ಡಿಜಿಟಲ್ ಮೀಡಿಯಾ ಮೂಲಕ ತಮ್ಮ ಪ್ರಚಾರ ಮಾಡ್ತೀರಿ, ಇದನ್ನ ಲಕ್ಷಾಂತರ ಜನ ಕೂಡ ವೀಕ್ಷಣೆ ಮಾಡುತ್ತಾರೆ ಆದ್ರೆ ಇವತ್ತು ಕಳೆದ ವರ್ಷ ದಿಂದ ಶಾಲೆ ಮಕ್ಕಳಿಗೆ ರಜೆ ಕೊಟ್ಟ ಹಾಗೆ ನಮ್ಮ ರಾಜ್ಯ …

Read More »

ಪ್ಲೀಸ್ ಲಸಿಕೆ ಕೊಡಿ- ಆಸ್ಪತ್ರೆ ಮುಂದೆ ಸಾಲು ನಿಂತ 800ಕ್ಕೂ ಹೆಚ್ಚು ಜನ

ಬೆಂಗಳೂರು: ನಗರ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಲಸಿಕೆ ಹಾಕಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸಿಗಲಿದೆ ಎಂದು ಪ್ರಕಟಿಸಿದ ಬೆನ್ನಲ್ಲೇ ಒಂದೇ ಬಾರಿಗೆ 800ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ಲಗ್ಗೆ ಇಟ್ಟಿದ್ದಾರೆ. ಕೆಲವರು ಆನ್‍ಲೈನ್ ಮೂಲಕ ನೋಂದಣಿ ಮಾಡಿದ್ದರೆ ಇನ್ನು ಕೆಲವರು ಎರಡನೇ ಡೋಸ್ ಪಡೆಯಲು ಆಸ್ಪತ್ರೆಗೆ ಸೇರಿದ್ದರು. ಬೆಳಗ್ಗಯಿಂದಲೂ ಜನ ಲಸಿಕೆ ಹಾಕಿಸಿಕೊಳ್ಳಲು ಸರದಿಯಲ್ಲಿ ನಿಂತಿದ್ದರು. ಈ ಸಾಲಿನಲ್ಲಿ  45 …

Read More »

ತಮಿಳುನಾಡು ಮಾದರಿ ಪರಿಹಾರ ನೀಡಲಿ:   ಸತೀಶ ಜಾರಕಿಹೊಳಿ

ಬೆಳಗಾವಿ –  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಚರ್ಚೆ ನಡೆಸಿದರು. ಸತೀಶ ಅವರೊಂದಿಗೆ ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್, ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ ಅವರು ನೇರವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳು, ಸದ್ಯದ ಸ್ಥಿತಿಗತಿ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದರು. …

Read More »

ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿ ,ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ

ಹುಬ್ಬಳ್ಳಿ ಬೆಳಗಾವಿ: ಎರಡನೇ ಹಂತದ ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಸಂಚಾರ ಕೂಡ ಕಡಿಮೆಯಾಗಿದೆ. ವಿನಾಕಾರಣ ರಸ್ತೆಗಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ. ಬೆಳಿಗ್ಗೆ 7:೦೦ ಗಂಟೆಯಿಂದಲೇ ಪೊಲೀಸರು ರಸ್ತೆಗಿಳಿದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ತಂದಿದ್ದ ಸುಮಾರು 87 ವಾಹನಗಳನ್ನು ಜಪ್ತಿ ಮಾಡಲಾಗಿದೆ. 10 ಗಂಟೆಯ ನಂತರ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾಲ್ನಡಿಗೆಯಲ್ಲಿ …

Read More »

ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆ

ದೆಹಲಿ:ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರವೂ(ಮೇ 10) ಹೆಚ್ಚಳವಾಗಿದ್ದು, ಮಹಾರಾಷ್ಟ್ರದಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ನೂರು ರೂಪಾಯಿ ದಾಟಿರುವುದಾಗಿ ವರದಿ ತಿಳಿಸಿದೆ. ಕಳೆದ ಒಂದು ವಾರದಲ್ಲಿ ತೈಲ ಬೆಲೆ ಐದು ಬಾರಿ ಏರಿಕೆಯಾಗಿದ್ದು, ಮಹಾರಾಷ್ಟ್ರದ ಪರ್ಭಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.20 ರೂಪಾಯಿಗೆ ಏರಿಕೆಯಾಗಿದೆ. ಭೋಪಾಲ್ ನಲ್ಲಿ ಪೆಟ್ರೋಲ್ ಬೆಲೆ 99.55 ರೂಪಾಯಿಗೆ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ. ರಾಜಸ್ಥಾನದ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ …

Read More »

ವಾಹನವಿಲ್ಲದೆ ಪರದಾಟ: 7 ಕಿ.ಮೀ ನಡೆದ ತುಂಬು ಗರ್ಭಿಣಿ!

ಕೊಪ್ಪಳ: ನಗರದಲ್ಲಿ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ತುಂಬು ಗರ್ಭಿಣಿಯು ಆಸ್ಪತ್ರೆಗೆ ತೆರಳಲು ಪರದಾಡಿದ ಪ್ರಸಂಗ ಸೋಮವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ನರೇಗಲ್ ಗ್ರಾಮದ ಲಕ್ಷ್ಮೀ ಪೂಜಾರ ಅವರು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ಚೆಕಪ್ ಗೆ ಹೋಗಬೇಕಿತ್ತು. ಆದರೆ ಪೊಲೀಸರು ಎಲ್ಲ ವಾಹನಗಳನ್ನ ಹಿಡಿದು ಜಪ್ತಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಎಲ್ಲ ವಾಹನ ಚಾಲಕರು ಪೊಲೀಸರಿಗೆ ಹೆದರಿ ಗರ್ಭಿಣಿಯನ್ನ ಆಸ್ಪತ್ರೆಗೆ ಕರೆ ತರಲು ನಿರಾಕರಿಸಿದ್ದರು. ಇದರಿಂದ ಗ್ರಾಮದಿಂದ 7 …

Read More »

ವೆಂಟಿಲೇಟರ್ ಸಿಗದೇ ಮುಂಡರಗಿಯಲ್ಲಿ ಮೂವರು ಸಾವು

ಮುಂಡರಗಿ (ಗದಗ): ಜಿಲ್ಲೆಯಲ್ಲಿ ವೆಂಟಿಲೇಟರ್ ಸಮಸ್ಯೆ ಉಲ್ಭಣಿಸಿದೆ. ವೆಂಟಿಲೇಟರ್ ಸಿಗದೇ ಮೂವರು ಕೋವಿಡ್ ಸೋಂಕಿತರು ಮೃತಪಟ್ಟಿರುವ ಘಟನೆ ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ. ತಾಲೂಕಿನ ಬೂದಿಹಾಳ ಗ್ರಾಮದ ಕನಕಪ್ಪ ತಳವಾರ (87 ವ), ಬಿದರಹಳ್ಳಿಯ ಕಸ್ತೂರೆವ್ವ ವಿ.ಪುತ್ತೂರು ಹಾಗೂ ಕೊಪ್ಪಳ ಜಿಲ್ಲೆಯ ಭೈರಾಪುರ ಗ್ರಾಮದ ನೀಲಮ್ಮ ಮೇಟಿ (48 ವ) ಮೃತಪಟ್ಟಿದ್ದಾರೆ. ಕೋವಿಡ್ ಸೋಂಕಿತರು ಮುಂಡರಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿತರಿಗೆ ರವಿವಾರ ಸಂಜೆಯಿಂದ ಉಸಿರಾಟದಲ್ಲಿ …

Read More »

10 ಸಾವಿರ ರೂ. ಪರಿಹಾರ ನೀಡಲು ನಾವು ದುಡ್ಡು ಪ್ರಿಂಟ್ ಮಾಡ್ತೀವಾ?: ಸಚಿವ ಈಶ್ವರಪ್ಪ

ಶಿವಮೊಗ್ಗ: ದುಡಿಯುವ ವರ್ಗಕ್ಕೆ 10 ಸಾವಿರ ರೂ. ಪರಹಾರ ನೀಡಬೇಕೆಂಬ ವಿಪಕ್ಷಗಳ ಬೇಡಿಕೆಗೆ ಗರಂ ಆದ ಸಚಿವ ಕೆ.ಎಸ್.ಈಶ್ವರಪ್ಪ “ಪ್ರಿಂಟ್ ಮಾಡ್ತೀವಾ” ಎಂದು ವಿವಾದಾತ್ಮಕ ಹೇಳಿಕೆ ನೀಡಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ, ಕುಮಾರಸ್ವಾಮಿ 14 ದಿನ ಬಾಯಿಗೆ ಬೀಗ ಹಾಕಿಕೊಳ್ಳಬೇಕು. ನೀವು ಬಾಯಿಗ ಬೀಗ ಹಾಕಿಕೊಂಡರೆ ಲಾಕ್‌ಡೌನ್ ಯಶಸ್ವಿಯಾಗುತ್ತದೆ. ಅದಾದ ಮೇಲೆ ನಾವು, ನೀವು ಯಾವ ಭಾಷೆಯಲ್ಲಿ ಬೇಕಾದರೂ ಮಾತನಾಡಿಕೊಳ್ಳೋಣ ಎಂದರು.   ರಾಜ್ಯದ ಜನ …

Read More »

ಕೊರೋನಾ ವಿರುದ್ಧ ಹೋರಾಟಕ್ಕೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ

ಬೆಂಗಳೂರು: ನಿರಂತರವಾಗಿ ಹೆಚ್ಚುತ್ತಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ 100 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕಳೆದ ವರ್ಷವೂ ಸಹ ಸುಧಾ ಮೂರ್ತಿಯವರು 100 ಕೋಟಿ ರೂ ದೇಣಿಗೆಯನ್ನು ನೀಡಿದ್ದರು. ಈ ಬಾರಿಯ ದೇಣಿಗೆಯನ್ನು ಕೋವಿಡ್ ರೋಗಿಗಳಿಗೆ ಆಮ್ಲಜನಕ, ವೆಂಟಿಲೇಟರ್ ಮತ್ತು ಇತರ ಔಷಧಿ ಖರೀದಿಗೆ ಬಳಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ಮಂಗಳೂರು, ಹೈದರಾಬಾದ್, ಪುಣೆ, ನಾಗ್ಪುರ, ನವದೆಹಲಿ ಮತ್ತು ತಿರುವನಂತಪುರಂಗೆ …

Read More »