Breaking News
Home / 2021 / ಮೇ / 17 (page 4)

Daily Archives: ಮೇ 17, 2021

ಕರೊನಾ ಮದ್ದು ನಾಳೆ ಬಿಡುಗಡೆ: ಕೆಲವು ಆಸ್ಪತ್ರೆಗಳಿಗೆ ಒಮ್ಮೆಗೆ 10 ಸಾವಿರ ಪ್ಯಾಕೆಟ್​ ವಿತರಣೆ

ನವದೆಹಲಿ: ಮದ್ದೇ ಇಲ್ಲದ ರೋಗ ಎನ್ನಲಾಗಿರುವ ಕರೊನಾಗೆ ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮದ್ದು ಕಂಡು ಹಿಡಿದಿದ್ದು, ಅದು ನಾಳೆಯೇ ಲೋಕಾರ್ಪಣೆ ಆಗಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಈ ಔಷಧದ ಹತ್ತು ಸಾವಿರ ಪ್ಯಾಕೆಟ್​ಗಳನ್ನು ಕೆಲವು ಆಸ್ಪತ್ರೆಗಳಿಗೆ ನೀಡಲಿದ್ದಾರೆ. ಒ2 ಡಿಜೆ ಎಂಬ ಹೆಸರಿನ ಈ ಔಷಧವು ದೇಹವನ್ನು ಸೇರಿಕೊಂಡ ವೈರಾಣುಗಳ ಬಲವನ್ನು ಕುಂದಿಸಿ, ಸೋಂಕು ಇತರ ಭಾಗಗಳಿಗೆ ಹರಡದಂತೆ …

Read More »

ಅರೆಸ್ಟ್ ಮಿ ಟೂ” : ಕೇಂದ್ರ ಸರ್ಕಾರಕ್ಕೆ ನನ್ನನ್ನೂ ಬಂಧಿಸಿ ಎಂದು ಕೇಳಿಕೊಂಡ ಗಾಂಧಿ

ನವ ದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸರಿಯಾಗಿ ನೀಭಾಯಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸಿ ಹಾಕಿದ್ದ ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ 17 ಮಂದಿಯನ್ನು ರಾಷ್ಟ್ರ ರಾಜಧಾನಿ ಪೊಲೀಸರು ಬಂಧಿಸಿದ್ದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಆ ವಿರೋಧದ ಧ್ವನಿಗೆ ತಮ್ಮ ಧ್ವನಿ ಸೇರಿಸಿದ್ದಾರೆ. ಈ ಕುರಿತಾಗಿ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ಗಾಂಧಿ …

Read More »

‘ನನ್ನನ್ನೂ ಬಂಧಿಸಿ’: ದೆಹಲಿ ಮುಖಂಡರ ಜೊತೆಗೆ ಧ್ವನಿಗೂಡಿಸಿದ ರಾಜ್ಯ ಕಾಂಗ್ರೆಸ್ ನಾಯಕರು

ಬೆಂಗಳೂರು: ಕೋವಿಡ್‌ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದ ದೆಹಲಿಯ ಕಾಂಗ್ರೆಸ್ ಮುಖಂಡರ ಜೊತೆಗೆ ಇದೀಗ ರಾಜ್ಯ ಕಾಂಗ್ರೆಸ್ ನಾಯಕರೂ ಕೂಡ ಧ್ವನಿಗೂಡಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಭಿತ್ತಿಪತ್ರ ಹಾಕಿದ್ದಕ್ಕಾಗಿ ಕನಿಷ್ಠ 25 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಲಾಗಿದೆ. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖಂಡರು ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿದ್ದಾರೆ. ಇದರಂತೆ ಕಾಂಗ್ರೆಸ್ …

Read More »

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು ಸಹ ಪ್ರಶ್ನಿಸುತ್ತೇವೆ. ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ಸವಾಲು ಹಾಕಿದ್ದರು. ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ, ‘ಕೋವಿಡ್‌ ಲಸಿಕೆ ರಫ್ತು ಮಾಡಿದ್ದನ್ನು ಪ್ರಶ್ನಿಸಿ ಪ್ರಧಾನಿ ಮೋದಿ ವಿರುದ್ಧ ಪೊಸ್ಟರ್‌ಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು. ನಿಮ್ಮ ವಿರುದ್ಧ ಭಿತ್ತಿಪತ್ರಗಳನ್ನು ಅಂಟಿಸಿದ ಕಾರಣಕ್ಕೆ ಬಡ ಜನರಿಗೆ ಕಿರುಕುಳ ನೀಡಬೇಡಿ’ ಎಂದು ಎಎಪಿ ಹೇಳಿದೆ. ‘ಪೊಲೀಸರ ಕ್ರಮಕ್ಕೆ ಎಎಪಿ ಹೆದರುವುದಿಲ್ಲ. ಈ ರೀತಿಯ ಭಿತ್ತಿಪತ್ರಗಳನ್ನು ರಾಷ್ಟ್ರ ರಾಜಧಾನಿ ಸೇರಿದಂತೆ ದೇಶದಾದ್ಯಂತ ಅಂಟಿಸುತ್ತಿವೆ’ ಎಂದು ಎಎಪಿ ಮುಖಂಡ ದುರ್ಗೇಶ್‌ ಪಾಠಕ್‌ ತಿಳಿಸಿದ್ದಾರೆ. ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಪೋಸ್ಟರ್‌ಗಳನ್ನು ಅಂಟಿಸಿದ್ದ ಆರೋಪದಡಿ ದೆಹಲಿ ಪೊಲೀಸರು 25 ಮಂದಿಯನ್ನು ಬಂಧಿಸಿದ್ದಾರೆ. ‘ಮೋದಿಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕಳುಹಿಸಿದ್ದೀರಾ?’ ಎಂದು ಬರೆದಿರುವ ಪೋಸ್ಟರ್‌ಗಳನ್ನು ದೆಹಲಿಯ ಹಲವೆಡೆ ಅಂಟಿಸಲಾಗಿತ್ತು. Dailyhunt

ನವದೆಹಲಿ: ಕೋವಿಡ್‌ ಲಸಿಕೆಯ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಟೀಕಿಸಿ ದೆಹಲಿಯಲ್ಲಿ ಭಿತ್ತಿಪತ್ರಗಳನ್ನು ಅಂಟಿಸಿದ್ದು ನಮ್ಮ ಪಕ್ಷದ ಕಾರ್ಯಕರ್ತರು ಎಂದು ಎಎಪಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಾವಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರನ್ನು ಟೀಕಿಸಿ ದೆಹಲಿಯ ಹಲವು ಭಾಗಗಳಲ್ಲಿ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಭಿತ್ತಿಪತ್ರಗಳನ್ನು ಅಂಟಿಸಿರುವ ಆರೋಪದಡಿ ದೆಹಲಿ ಪೊಲೀಸರು 25 ಜನರನ್ನು ಬಂಧಿಸಿದ್ದರು. ದೆಹಲಿ ಪೊಲೀಸರ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿತ್ತು. ‘ಲಸಿಕೆಗಳನ್ನು ರಫ್ತು ಮಾಡಿದ ಕ್ರಮವನ್ನು ನಾವು …

Read More »

ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕ ಜೀವನ್ಮರಣ ಹೋರಾಟ

ಬೆಳಗಾವಿ: ಗಡಿಜಿಲ್ಲೆ ಬೆಳಗಾವಿಯಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಎದುರಾಗಿದೆ. ಬ್ಲ್ಯಾಕ್ ಫಂಗಸ್‍ನಿಂದ 30 ವರ್ಷದ ಯುವಕನೊಬ್ಬ ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದ ಆನಂದ ಕುಲಾಲಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವ ಯುವಕ. ಅಥಣಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡುತ್ತಿದ್ದ ಆನಂದ ಕುಲಾಲಿ ಮೇ 5ರಂದು ಕೋವಿಡ್ ಟೆಸ್ಟ್ ಮಾಡಿಸಿದ್ದು, ಮೇ 7ರಂದು ಕೊರೊನಾ ದೃಢವಾಗಿತ್ತು. ಕೋವಿಡ್ ದೃಢಪಡುತ್ತಿದ್ದಂತೆಯೇ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಯುಕನನ್ನು …

Read More »

ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಮೇ 24ರ ಬಳಿಕವೂ ಲಾಕ್ ಲಾಕ್..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬಂದಿಲ್ಲ. ಕೇವಲ ಟೆಸ್ಟಿಂಗ್ ಕಡಿಮೆ ಮಾಡಿರೋ ಕಾರಣ ಕಡಿಮೆ ಸಂಖ್ಯೆ ಬರ್ತಿದೆ. ಆದರೆ ಸಕ್ರಿಯ ಕೇಸ್‍ಗಳ ಸಾಲಿನಲ್ಲಿ ಇಡೀ ದೇಶದಲ್ಲಿ ಕರ್ನಾಟಕವೇ ನಂಬರ್ 1. ಕರ್ನಾಟಕದಲ್ಲಿ ಭರ್ತಿ 6 ಲಕ್ಷ ಸಕ್ರಿಯ ಕೇಸ್‍ಗಳಿವೆ. ಪಾಸಿಟಿವಿಟಿ ರೇಟ್ 25ಕ್ಕಿಂತಲೂ ಹೆಚ್ಚಿದೆ. ಈ ನಿಟ್ಟಿನಲ್ಲಿ ಲಾಕ್‍ಡೌನ್‍ಗೆ ಸರ್ಕಾರದ ಸಚಿವರು, ತಜ್ಞರು ಕೂಡ ಒತ್ತಡ ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಇನ್ನೊಂದು ವಾರ ಅಂದರೆ ಮೇ 24ರ …

Read More »

ರಾಧೆ ನೋಡಿದ ಅಭಿಮಾನಿಗಳಿಗೆ ನಿರಾಸೆ; ತೆಲುಗು ಸಿನಿಮಾ ರಿಮೇಕ್​ ಮಾಡೋಕೆ ಮುಂದಾದ ಸಲ್ಲು

ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಮೊದಲ ದಿನ ಒಟಿಟಿಯಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡಿತ್ತು. ಆದರೆ, ವಿಮರ್ಶಕರಿಂದ ಸಿನಿಮಾಗೆ ಮೆಚ್ಚುಗೆ ಬಂದಿಲ್ಲ. ಇದು ಸಲ್ಮಾನ್​ ಖಾನ್​ ಅವರನ್ನು ಅಪ್ಸೆಟ್​ ಮಾಡಿದೆ. ಹೀಗಾಗಿ, ಅವರು ದಕ್ಷಿಣ ಭಾರತದ ಸಿನಿಮಾ ಮೇಲೆ ಕಣ್ಣಿಟ್ಟಿದ್ದಾರೆ. 2017ರಲ್ಲಿ ತೆರೆಕಂಡಿದ್ದ ‘ಟೈಗರ್ ಜಿಂದಾ ಹೇ’ ಚಿತ್ರವೇ ಕೊನೆ. ಅದಾದ ನಂತರದಲ್ಲಿ ಸಲ್ಲುಗೆ ಅಂಥ ಯಶಸ್ಸು ಸಿಕ್ಕಿಲ್ಲ. ‘ರೇಸ್​-3’, ‘ಭಾರತ್’​, ‘ದಬಾಂಗ್​ …

Read More »

ತಾಯಿನಾಡ ಜನರ ಸಂಕಷ್ಟಕ್ಕೆ ಮಿಡಿದ ಸಾಗರದಾಚೆ ಕನ್ನಡಿಗರು; ದುಬೈನಿಂದ ಕರ್ನಾಟಕಕ್ಕೆ ಹರಿದು ಬಂತು ಸಹಾಯ ಹಸ್ತ

ಬೆಂಗಳೂರು: ಕೊರೊನಾ ಎರಡನೇ ಅಲೆ ಭಾರತದಲ್ಲಿ ಬಹಳ ವೇಗದಲ್ಲಿ ಮತ್ತು ಬಹಳ ಅಪಾಯಕಾರಿಯಾಗಿ ಹರಡುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಕೊವಿಡ್ ಕಾರಣ ಸಾವು-ನೋವುಗಳು ಹೆಚ್ಚಾಗಿ ಸಂಭವಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಕರ್ನಾಟಕವನ್ನು ಲಾಕ್​ಡೌನ್ ಮಾಡಲಾಗಿದೆ. ಇದರಿಂದಾಗಿ ದಿನಗೂಲಿ ಜನರು ಮತ್ತು ನಿರ್ಗದಿಕರು ಸೇರಿ ಹಲವು ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ. ಕೆಲವರಿಗೆ ಒಂದೊತ್ತಿನ ಊಟಕ್ಕೆ ಸಹ ಇಲ್ಲದ ಪರಿಸ್ಥಿತಿ ಇದ್ದು, ಇಂತಹರವರ ನೆರವಿಗೆ ಈಗ ದುಬೈನ ಕನ್ನಡಿಗರು ನಿಂತಿದ್ದಾರೆ. ದುಬೈನಲ್ಲಿ ಕಾರ್ಯಾಚರಿಸುತ್ತಿರುವ …

Read More »

ಬಾದಾಮಿ ಕ್ಷೇತ್ರಕ್ಕೆ ಮೂರು ಆಂಬುಲೆನ್ಸ್ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಬಾದಾಮಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕರು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಮೂರು ಆಂಬುಲೆನ್ಸ್ ಗಳನ್ನು ನೀಡಿದ್ದಾರೆ. ಇಂದು ಮೂರು ವಾಹನಗಳನ್ನು ತಾಲೂಕು ಆಡಳಿತಕ್ಕೆ ಆಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು. ಈ ಆಂಬ್ಯುಲೆನ್ಸ್ ಗಳು ಬಾದಾಮಿ ಕ್ಷೇತ್ರದಲ್ಲಿ ಸಂಚರಿಸಲಿದ್ದು, ಕೋವಿಡ್ ಸೋಂಕಿತರಿಗೆ ನೆರವಾಗಲಿವೆ. ಇದೇ ವೇಳೆ ವೈದ್ಯರಿಗೆ N95 ಮಾಸ್ಕ್ ಗಳು, ಪಿಪಿಇ ಕಿಟ್ ಗಳನ್ನು ವಿತರಣೆ ಮಾಡಲಾಯಿತು. ಇನ್ನು ಕೊರೊನಾ ಸೋಂಕಿತರ ಅನುಕೂಲಕ್ಕಾಗಿ ಪಕ್ಷದ …

Read More »

ಮೇ 21 ರವರೆಗೆ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ ಸಾಧ್ಯತೆ

ಬೆಂಗಳೂರು: ‘ತೌಕ್ತೆ’ ಚಂಡಮಾರುತ ಪರಿಣಾಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೇ 21 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ 21 ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 90 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, 6.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು …

Read More »