Breaking News
Home / 2021 / ಮೇ / 18 (page 2)

Daily Archives: ಮೇ 18, 2021

ಡಿಸಿಪಿ ಕೈಗೆ ಸಿಕ್ಕಿಬಿದ್ದ ನಕಲಿ ಪತ್ರಕರ್ತ- ಬೈಕ್ ಸೀಜ್, ಕೇಸ್ ದಾಖಲು

ಹುಬ್ಬಳ್ಳಿ: ಲಾಕಡೌನ್ ವೇಳೆ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ಬಳಸಿ ಪೊಲೀಸರನ್ನ ಯಮಾರಿಸುತ್ತಿದ್ದ ನಕಲಿ ಪತ್ರಕರ್ತನನ್ನ ಹುಬ್ಬಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ. ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ  ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. ಜಾನ್ ನಿಕೋಲಸ್ ಹಲವು ವರ್ಷಗಳ ಹಿಂದೇಯೇ ಬಂದ್ …

Read More »

ಕೋವಿಡ್ ಹಿನ್ನೆಲೆಯಲ್ಲಿ ಅನಾಥ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ಧ: ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ

ಬೆಂಗಳೂರು ಮೇ.18 – ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ. ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು …

Read More »

ಗ್ರಾಮೀಣರಿಗೆ ಆಘಾತ ತಂದ ಕೋವಿಡ್ ಸೋಂಕು

ಗುಳೇದಗುಡ್ಡ: ತಾಲೂಕಿನಲ್ಲಿ ಕೊರೊನಾ ತೀವ್ರಗತಿಯಲ್ಲಿ ಹರಡುತ್ತಿದ್ದು, ಗುಳೇ ಹೋಗಿಬಂದವರಿಗೆ ಹಾಗೂ ಮೃತಪಟ್ಟವರ ಮನೆಗೆ ಸಾಂತ್ವನ ಹೇಳಲು ಹೋದವರಿಗೆ ಕೊರೊನಾ ವಕ್ಕರಿಸಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ವಕ್ರದೃಷ್ಟಿ ಬೀರಿದೆ. ಕಳೆದ ಎರಡು ತಿಂಗಳು ಹಿಂದೆ ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಕೊರೊನಾ ಕೇಸ್‌ಗಳಿಲ್ಲದೇ ಸ್ವತ್ಛಂದವಾಗಿದ್ದವು. ಆದರೆ, ಏಪ್ರಿಲ್‌ ಮೊದಲ ವಾರದಿಂದ ಕೊರೊನಾದಿಂದ ಪ್ರತಿ ಗ್ರಾಮದಲ್ಲಿಯೂ ಈಗ ಕೊರೊನಾ ರೋಗಿಗಳು ಕಂಡುಬರುತ್ತಿದ್ದಾರೆ. ಗುಳೇದಗುಡ್ಡ ತಾಲೂಕಿನಲ್ಲಿ ಒಟ್ಟು 35 ಗ್ರಾಮಗಳಿದ್ದು, ಎರಡು ಪ್ರಾಥಮಿಕ ಆರೋಗ್ಯ …

Read More »

ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ  ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ  ಸ್ಥಾಪನೆಯಾದಲ್ಲಿ ಸುಮಾರು 50 …

Read More »

ವೈದ್ಯರನ್ನೇ ಕಂಗೆಡಿಸಿದ ಮಾರಣಾಂತಿಕ Covid 2ನೇ ಅಲೆ.ಈವರೆಗೆ ಸಾವನ್ನಪ್ಪಿರುವ ವೈದ್ಯರೆಷ್ಟು

ಕೋವಿಡ್ ಒಂದನೇ ಮತ್ತು ಎರಡನೇ ಅಲೆಗೆ ದೇಶದಲ್ಲಿನ ಜನರು ತತ್ತರಿಸಿ ಹೋಗಿದ್ದು, ಎರಡನೇ ಅಲೆಯಲ್ಲಿ ಮಧ್ಯವಯಸ್ಕರು, ಯುವಕರು ಸಾವಿಗೀಡಾಗುತ್ತಿರುವುದು ಮತ್ತಷ್ಟು ಗಾಬರಿಗೆ ಕಾರಣವಾಗಿದೆ. ಈ ಮಾರಣಾಂತಿಕ ಕೋವಿಡ್ ಸೋಂಕು ಜನಸಾಮಾನ್ಯರಷ್ಟೇ ವೈದ್ಯರನ್ನು ಕಂಗೆಡಿಸಿದೆ ಎಂಬುದಕ್ಕೆ ಈ ವರದಿ ಸಾಕ್ಷಿ. ದೆಹಲಿಯ ಗುರು ತೇಜ್ ಬಹದ್ದೂರ್ ಆಸ್ಪತ್ರೆಯ ಕಿರಿಯ ರೆಸಿಡೆಂಟ್ ಡಾಕ್ಟರ್ ಅನಾಸ್ ಮುಜಾಹಿದ್(26ವರ್ಷ) ಕೋವಿಡ್ ನಿರ್ವಹಣೆಯ ತಜ್ಞರಾಗಿದ್ದರು. ಆದರೆ ಕೋವಿಡ್ ಪಾಸಿಟಿವ್ ಬಂದ ಗಂಟೆಯೊಳಗೆ ಡಾ.ಅನಾಸ್ ಕೊನೆಯುಸಿರೆಳೆದಿದ್ದರು. ಈ ವರ್ಷದ …

Read More »

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ

ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …

Read More »

ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ

ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು‌ ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು‌ ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು‌ ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ …

Read More »

ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಿಸದೇ ಹೋದಲ್ಲಿ ಅನಾಹುತ ಕಾದಿದೆ: ಮಾಜಿ ಸಿಎಂ ಹೆಚ್​ಡಿಕೆ

ರಾಜ್ಯದಲ್ಲಿ ಸದ್ಯ ಲಾಕ್​ಡೌನ್​ ವಿಸ್ತರಣೆಯದ್ದೇ ಚರ್ಚೆ. ಟ್ವಿಟರ್​ನಲ್ಲಿ ಸದಾ ಲಾಕ್​ಡೌನ್​ ವಿಸ್ತರಣೆಯ ಆಗ್ರಹ ಮಾಡುತ್ತಿದ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಇದೀಗ ಮತ್ತೆ ತಮ್ಮ ಹೇಳಿಕೆಯನ್ನ ಪುನರುಚ್ಛರಿಸಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಲಾಕ್​ಡೌನ್​ ವಿಸ್ತರಣೆ ಮಾಡದೇ ಹೋದಲ್ಲಿ ದೊಡ್ಡ ಅನಾಹುತವೇ ಕಾದಿದೆ ಎಂದು ಹೇಳಿದ್ರು. ರಾಜ್ಯದ ಸದ್ಯದ ಪರಿಸ್ಥಿತಿಯನ್ನ ನೋಡ್ತಿದ್ರೆ ಲಾಕ್​ಡೌನ್​ ವಿಸ್ತರಣೆ ಮಾಡದೇ ಬೇರೆ ವಿಧಿ ಇಲ್ಲ ಎಂದೆನಿಸುತ್ತಿದೆ. ಹೀಗಾಗಿ ಜನರ ಜೀವದ ಜೊತೆ ಆಟವಾಡಬೇಡಿ. …

Read More »

ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರ ಕಾರಣ : ಡಿ.ಕೆ.ಶಿವಕುಮಾರ್

ಬೆಂಗಳೂರು : ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗಲು ಸರ್ಕಾರವೇ ಕಾರಣವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಸರ್ಕಾರ ಆರ್ಥಿಕ ಪ್ಯಾಕೇಜ್ ಘೋಷಿಸಲೇಬೇಕು. ಈ ಕಾಯಿಲೆ ಸರ್ಕಾರ ಕೊಟ್ಟಿದ್ದು, ಹಳ್ಳಿಗಳಲ್ಲೂ ಕೊರೊನಾ ಬರಲು ಸರ್ಕಾರವೇ ನೇರ ಕಾರಣ ಎಂದು ಕಿಡಿಕಾರಿದರು. ಇನ್ನು ಹಳ್ಳಿಗಳಲ್ಲಿ ಕೃಷಿ ಮಾಡ್ತಿದ್ದವರಿಗೂ ಕೊರೊನಾ ಬಂದಿದೆ. ಬೆಳಿಗ್ಗೆ ನನ್ಮ ತೀರ ಆತ್ಮಿಯರು …

Read More »

ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ: ಕಾಂಗ್ರೆಸ್ ಟೀಕೆ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ರಾಜ್ಯಕ್ಕೆ ‘ಕುಂಟು ಕುದುರೆಯ ಮೇಲೆ ಕುರುಡನ ಸವಾರಿ’ಯಂತಾಗಿದೆ. ಎಲ್ಲಿ ಹಾರುತ್ತದೋ, ಎಲ್ಲಿ ಬೀಳುತ್ತದೋ ತಿಳಿಯದೆ ಕಣ್ಮುಚ್ಚಿಕೊಂಡು ‘ದೇವರೇ ಗತಿ’ ಎನ್ನುವ ಸ್ಥಿತಿಗೆ ಬಂದಿದ್ದಾರೆ ಜನ. ಹಪಹಪಿಯಿಂದ ವಾಮಮಾರ್ಗದಲ್ಲಿ ಅಧಿಕಾರ ಹಿಡಿದವರಿಂದ ರಾಜ್ಯಕ್ಕೆ ನಿರಂತರ ಸಂಕಷ್ಟವೇ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಾಗ ನೆರೆ ಹಾವಳಿ, ಆ ಸಂದರ್ಭದಲ್ಲಿ ಸಂಪುಟವೇ …

Read More »