Breaking News
Home / 2021 / ಮೇ / 18 (page 5)

Daily Archives: ಮೇ 18, 2021

ಅತ್ತೆಯ ಒಡವೆ ಅಳಿಯ ದಾನ ಮಾಡಿದಂತೆ ಪ್ರಧಾನಿ ನಡೆ: ದಿನೇಶ್ ಗುಂಡೂರಾವ್

ಬೆಂಗಳೂರು, : ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟ ಮಾದರಿಯಲ್ಲಿಯೇ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯನ್ನು ವಿದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಟೀಕಿಸಿದರು. ಸೋಮವಾರ ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ. ಇದು ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಆಗಿದೆ ಎಂದರು. ವಿದೇಶಗಳಲ್ಲೂ ಕೋವಿಡ್ ಲಸಿಕೆ …

Read More »

ಪ್ರತಿಯೊಬ್ಬರಿಗೂ 10 ಸಾವಿರ ಸಹಾಯಧನ ಕೊಡಿ, ಏನು ನಿಮ್ಮಪ್ಪನ ಮನೆಯ ಗಂಟು ಕೊಡುತ್ತಿರಾ?: ಸಿದ್ದರಾಮಯ್ಯ ;

ಕೋಲಾರ; ಜಿಲ್ಲೆಯ ಕೆಜಿಎಫ್​ನಲ್ಲಿ ಕೊರೋನಾ ವಾರಿಯರ್ಸ್​ಗೆ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮಕ್ಕೆ, ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಚಾಲನೆ ನೀಡಿದರು. ಕೆಜಿಎಫ್​ ನಗರದ ನಗರಸಭೆ ಕ್ರೀಡಾಂಗಣದಲ್ಲಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ, ವಿಆರ್ ಸುದರ್ಶನ್, ವಲ್ಲಾಲ್ ಮುನಿಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ …

Read More »

ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಯತ್ನಾಳ್ ಬಿಎಸ್ ವೈ ವಿರುದ್ಧ ಮತ್ತೆ ವೈಲೆಂಟ್

ವಿಜಯಪುರ: ಹೆಮ್ಮಾರಿ ಕೊರೊನಾ ರಾಜ್ಯವನ್ನೇ ಹಿಂಡಿ ಹಿಪ್ಪೆ ಮಾಡುತ್ತಿರುವ ಬೆನ್ನಲ್ಲೆ ಮತ್ತೆ ರಾಜಕೀಯ ಗುದ್ದಾಟ ಶುರುವಾಗಿದೆ. ವಿಜಯಪುರದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವೈಲೆಂಟ್ ಆಗಿದ್ದು, ಎಂದಿನಂತೆ ಸಿಎಂ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ. (ಸೋಮವಾರ) ಆರೋಗ್ಯ ಸಚಿವರ ಭೇಟಿ ಬಳಿಕ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ವಿಚಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾರ್ಯ ನಮಗೆ ತೃಪ್ತಿ ತಂದಿಲ್ಲ ಎಂದು ನೇರವಾಗಿ ಆರೋಪಿಸಿದ್ದಾರೆ. ರಾಜ್ಯದಲ್ಲಿ …

Read More »

ʼಲಾಕ್​ ಡೌನ್ʼ​ ವಿಸ್ತರಣೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಚಿವ ಮುರುಗೇಶ್​ ನಿರಾಣಿ

ರಾಜ್ಯದಲ್ಲಿ ಲಾಕ್​ಡೌನ್​ ಆದೇಶದ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಲಾಕ್​ಡೌನ್​​ ಆದೇಶವನ್ನ ಮುಂದುವರಿಸಲಿದ್ಯಾ ಅನ್ನೋ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕಾಡುತ್ತಿದೆ. ಇದೇ ವಿಚಾರವಾಗಿ ಕಲಬುರಗಿಯಲ್ಲಿ ಮಾತನಾಡಿದ ಸಚಿವ ಮುರುಗೇಶ್​ ನಿರಾಣಿ ಲಾಕ್​ಡೌನ್​ ಮುಂದುವರಿಕೆ ಬಗ್ಗೆ ಸೂಚನೆ ನೀಡಿದ್ರು. ಕಳೆದ ಮೂರು ದಿನಗಳಿಂದ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡುಬರ್ತಿದೆ. ಆದರೆ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕನ್ನ …

Read More »