Breaking News
Home / 2021 / ಮೇ / 19

Daily Archives: ಮೇ 19, 2021

ಮಕ್ಕಳ ಮೇಲೆ ಅಪ್ಪಳಿಸಬಹುದಾದ ಕೊರೋನಾ 3ನೇ ಅಲೆ: ಕೆಎಲ್ಇ ಆಸ್ಪತ್ರೆಯಲ್ಲಿ ಸಕಲ ಸಿದ್ಧತೆ

ಬೆಳಗಾವಿ – ಜಗತ್ತಿನಾದ್ಯಂತ ವಿಶೇಷವಾಗಿ ಭಾರತವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕೋವಿಡ್ -೧೯ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರಿಸರ್ಚ್, ಡೀಮ್ಡ್ ವಿಶ್ವವಿದ್ಯಾಲಯ, ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಈ ಭಾಗದ ಜನರಿಗೆ ಸಕಲ ಸೇವೆ ನೀಡಲು ಬದ್ದವಾಗಿದ್ದು, ಗರ್ಭಿಣಿ ಮತ್ತು ಮಕ್ಕಳ ಆರೈಕೆಗಾಗಿ ೪೦ ಹಾಸಿಗೆಗಳನ್ನು ಮೀಸಲಿಟ್ಟು ಚಿಕಿತೆಗ್ಸೆ …

Read More »

ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ 65 ವೈದ್ಯಾಧಿಕಾರಿಗಳ ನೇಮಕಕ್ಕೆ ಆಹ್ವಾನ: ನಾಲ್ಕು ಲಕ್ಷ ರೂ. ಸಂಬಳ

ಕರೊನಾ ಸಾಂಕ್ರಾಮಿಕವನ್ನು ತಡೆಗಟ್ಟಲು ಹಾಗೂ ಕೋವಿಡ್​ ರೋಗಿಗಳಿಗೆ ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡುವ ಹಿನ್ನೆಲೆಯಲ್ಲಿ ಬಳ್ಳಾರಿಯ ಜಿಲ್ಲಾ ಆಡಳಿತ ಸಂಡೂರು ತಾಲೂಕಿನ ತೋರಣಗಲ್​ನಲ್ಲಿ 1000 ಹಾಸಿಗೆಯ ಕೋವಿಡ್​ ಆಸ್ಪತ್ರೆಯನ್ನು ತೆರೆದಿದೆ. ಸದರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು ವೈದ್ಯರು/ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು ಹುದ್ದೆಗಳು: 65 ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆರಂಭಿಸಿರುವ 1,000 ಹಾಸಿಗೆ ಕೋವಿಡ್​ ಆಸ್ಪತ್ರೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ …

Read More »

ಸೋಂಕಿತರಿಗೆ ಆಪತ್ಬಾಂಧವ ಸರಕಾರಿ ಆಸ್ಪತ್ರೆ

ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲವೊಂದಿತ್ತು. ಆದರೆ, ಕೊರೊನಾ ಮೊದಲ ಅಲೆ ಮತ್ತು ಎರಡನೇ ಅಲೆ ಕಾಲಿಟ್ಟಿದ್ದೇ ತಡ, ಬಡವರು-ಶ್ರೀಮಂತರೆನ್ನದೇ ಸರ್ಕಾರಿ ಆಸ್ಪತ್ರೆಯನ್ನೇ ಸ್ಮರಿಸುತ್ತಿದ್ದಾರೆ. ಸದ್ಯ ಇಡೀ ಜಿಲ್ಲೆಯ ಏಕೈಕ ದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಖ್ಯಾತಿ ಪಡೆದ ಜಿಲ್ಲಾ ಸರ್ಕಾರಿ ಆಸ್ಪತ್ರೆ ಕೊರೊನಾ ಸಂಕಷ್ಟದ ಕಾಲದಲ್ಲಿ ಸಾವಿರಾರು ಜನರಿಗೆ ಆಪತ್ಭಾಂದವ ಆಗಿದೆ. ಹೌದು. ಸದ್ಯ ಜಿಲ್ಲಾಸ್ಪತ್ರೆಗೆ ಎಲ್ಲಿಲ್ಲದ ಬೇಡಿಕೆ. ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಶ್ರೀಮಂತರು, ಗಣ್ಯರು, …

Read More »

ಕೋವಿಡ್-19 ಸಂಬಂಧಿತ ನೆರವಿಗೆ ‘ಬಿಎಂಸಿ 92’ ಉಚಿತ ವೈದ್ಯ ಸೇವೆ

ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ 2ನೇ ಅಲೆಗೆ ಜನರು ತತ್ತರಿಸಿ ಹೋಗಿರುವಂತೆಯೇ ಇತ್ತ ವೈದ್ಯರ ತಂಡವೊಂದು ಉಚಿತ ವೈದ್ಯಕೀಯ ಸೇವೆ ಆರಂಭಿಸಿದೆ. ಬೆಂಗಳೂರು ವೈದ್ಯಕೀಯ ಕಾಲೇಜಿನ 1992ರ ಬ್ಯಾಚ್‌ನ ಪದವೀಧರರ ಗುಂಪು ಬಿಎಂಸಿ-92 ಎಂಬ ಹೆಸರಿನಲ್ಲಿ ಪರ್ಯಾಯ ವೈದ್ಯಕೀಯ ಸೇವೆಯನ್ನು ಆರಂಭಿಸಿದ್ದು, ಸೋಂಕಿತರ ಚಿಕಿತ್ಸೆಗೆ ತಜ್ಞ ವೈದ್ಯರು, ಆಪ್ತ ಸಮಾಲೋಚಕರು, ಸಹಾಯವಾಣಿ, ಆಮ್ಲಜನಕ ಸಾಂದ್ರಕಗಳು, ಪಲ್ಸ್‌ ಆಕ್ಸಿಮೀಟರ್‌ಗಳು ಸೇರಿದಂತೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ. ಕೋವಿಡ್‌ ರೋಗಿಗಳು ಆಮ್ಲಜನಕದ ಹಾಸಿಗೆಯವರೆಗೂ …

Read More »

ಕೋರೋನ ಹತೋಟಿಗೆ ಬರದಿದಲ್ಲಿ ಲಾಕ್ ಡೌನ್ ಅನಿವಾರ್ಯ: ಉಮೇಶ್ ಕತ್ತಿ

ಬಾಗಲಕೋಟೆ : ರಾಜ್ಯದಲ್ಲಿ ದಿನದಿನವೂ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಜನರು ಅರ್ಥ ಮಾಡಿಕೊಂಡು ಮುನ್ನಡೆಯಬೇಕು. ಇಲ್ಲವಾದಲ್ಲಿ ಲಾಕ್‌ಡೌನ್ ಮುಂದುವರಿಸಲಾಗುತ್ತದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದರು. ಬಾಗಲಕೋಟೆಯಲ್ಲಿಂದು ಮಾತನಾಡಿದ ಸಚಿವ ಉಮೇಶ ಕತ್ತಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಸುಳಿವು ನೀಡಿದ್ದಾರೆ. ರಾಜ್ಯದಲ್ಲಿ 3 ದಿನ ಲಾಕ್ ಡೌನ್ ಮಾಡಬೇಕೆನ್ನುವ ವಿಚಾರ ಮಾಡಿದ್ದಾರೆ. ಸೋಮವಾರ, ಬುಧುವಾರ ಮತ್ತು ಶುಕ್ರವಾರ ಪುಲ್ ಲಾಕ್ ಡೌನ್ …

Read More »

ಮೋದಿ ಟೀಕಿಸುವ ಭರದಲ್ಲಿ ಭಾರತಕ್ಕೆ ಅಪಮಾನ- ಜೋಶಿ ಆಕ್ರೋಶ

ಹುಬ್ಬಳ್ಳಿ: ಕಾಂಗ್ರೆಸ್ ದೇಶದ ಜನತೆಯ ಆತ್ಮಬಲ ಕುಗ್ಗಿಸುವ ಹಾಗೂ ದೇಶಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ಮಾಡಿರುವ ಟೂಲ್ ಕಿಟ್ ವಿಚಾರಕ್ಕೆ ನಗರದಲ್ಲಿಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಜೋಶಿ, ಕೊರೊನಾ ವೈರಸ್ ಹುಟ್ಟಿದ್ದೇ ಚೀನಾದಲ್ಲಿ. ಆದರೆ ಕಾಂಗ್ರೆಸ್ ನಾಯಕರಾಗಲಿ, ಕಮ್ಯುನಿಸ್ಟ್ ನವರಾಗಲಿ ಅದನ್ನು ಚೀನಾ ವೈರಸ್ ಎನ್ನಲಿಲ್ಲ. ಬದಲಿಗೆ ಮೋದಿ ವೈರಸ್ ಎಂದು …

Read More »

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್‍ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ …

Read More »

ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ – ರೇವಣ್ಣ ಕಿಡಿ

ಹಾಸನ: ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ ಎಮದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಬಗ್ಗೆ ಆಕ್ರೋಶ ಹೊರಹಾಕಿದ ಅವರು, ಜಿಲ್ಲಾಧಿಕಾರಿಗಳನ್ನು ಕೂರಿಸಿಕೊಂಡು ಅವಮಾನ ಮಾಡಿದ್ದೀರಿ. ಯಾವ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೀರಿ. ದಯಮಾಡಿ ಪ್ರಧಾನಿಗಳು ಕೆಳಮಟ್ಟಕ್ಕೆ ಇಳಿಯಬೇಡಿ. ಪ್ರಧಾನಿಗಳು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಬೇಕಿತ್ತು. ಪ್ರಧಾನಿ ಸಭೆ ಮಾಡಿ ಈ ರಾಜ್ಯದ ಬಗ್ಗೆ ಏನು …

Read More »

ಪ್ರತಿ ಜಿಲ್ಲೆಯಲ್ಲೂ ಚಿಕ್ಕ ಮಕ್ಕಳ ಕೋವಿಡ್ ಕೇರ್ ಸ್ಥಾಪನೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಚಿಕ್ಕೋಡಿ: ಕೊರೊನಾ ಎರಡನೇ ಅಲೆಯ ನಡುವೆ ಚಿಕ್ಕ ಮಕ್ಕಳಿಗೂ ಮಹಾಮಾರಿ ಹಬ್ಬುವ ಭೀತಿ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಲ್ಲೂ ಮಕ್ಕಳಿಗೆ ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಚಿಕ್ಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದೆ. ಹೀಗಾಗಿ ಮಕ್ಕಳ ಕೊವಿಡ್ ಕೇರ್ ಸೆಂಟರ್ ನಿರ್ಮಾಣಕ್ಕಾಗಿ …

Read More »

ಕೋವಿಡ್ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಆಗಲ್ಲ-ಎಚ್.ಕೆ ಪಾಟೀಲ್

ಗದಗ: ಕೊರೊನಾದಿಂದಾಗಿ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಸಿಎಂ ಬಿಎಸ್‍ವೈ ನೀಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ ಫಾಸ್ಟ್ ಗೂ ಸಾಕಗಲ್ಲ ಎನ್ನುವ ಮೂಲಕ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಟೀಕೆ ಮಾಡಿದ್ದಾರೆ. ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಎಚ್.ಕೆ ಪಾಟೀಲ್, ಯಡಿಯೂರಪ್ಪ ಕೊರೊನಾ ಕಷ್ಟಕಾಲದಲ್ಲಿ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನ ಇಲ್ಲ. ಅದರಲ್ಲೂ ಕಲಾ ತಂಡದಲ್ಲಿ ಎಂಟತ್ತು ಜನರಿರುತ್ತಾರೆ ಅವರಿಗೆ 3 ಸಾವಿರ ಯಾವ ಲೆಕ್ಕ ಎಂದು …

Read More »