Breaking News
Home / 2021 / ಮೇ / 20 (page 3)

Daily Archives: ಮೇ 20, 2021

ಜನಾಕ್ರೋಶಕ್ಕೆ ಮಣಿದ ಆರೋಗ್ಯ ಇಲಾಖೆ: ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್​ ಪುನಾರಂಭ

ಮಾಸ್ಕ್​ ಇಲ್ಲದೇ ಕೊರೊನಾ ಟ್ರೀಟ್​ಮೆಂಟ್​ ಕೊಡುತ್ತಾರೆಂಬ ಕಾರಣಕ್ಕೆ ಬಂದ್‌ ಆಗಿದ್ದ ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್​ ಇಂದಿನಿಂದ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ. ಡಾ. ರಾಜು ಕೃಷ್ಣಮೂರ್ತಿ ಬೆಂಗಳೂರಿನ ಮೂಡಲಪಾಳ್ಯದಲ್ಲಿ ನಡೆಸುತ್ತಿದ್ದ ಸಾಗರ್​ ಕ್ಲಿನಿಕ್​ನಲ್ಲಿ ಮಾಸ್ಕ್​ ಹಾಕಿಕೊಳ್ಳದೇ ಇರೋದು, ಸಾಮಾಜಿಕ ಅಂತರ ಪಾಲನೆ ಮಾಡದಿರೋದು ಸೇರಿದಂತೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಜಿಲ್ಲಾ ಆರೋಗ್ಯ ಅಧಿಕಾರಿಗಳು ನೋಟಿಸ್​ ನೀಡಿದ್ದರು. ಇದಾದ ಬಳಿಕ ಸಾಗರ್​ ಕ್ಲಿನಿಕ್​ ಬಂದ್​ ಆಗಿತ್ತು. ಡಾ. ರಾಜು ಕೃಷ್ಣಮೂರ್ತಿ …

Read More »

ಇಂದು ಮತ್ತೆ 10 ರಾಜ್ಯಗಳ ಜಿಲ್ಲಾಧಿಕಾರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ

ನವದೆಹಲಿ, ಮೇ 20: ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸಿದೆ.‌ ಪ್ರತಿ ದಿನ ಮೂರು ಲಕ್ಷದಷ್ಟು ಜನ ಸೋಂಕು ಪೀಡಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಕೊರೋನಾದಿಂದ ಸಾಯುತ್ತಿದ್ದಾರೆ. ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಗತ್ಯ ಇರುವಷ್ಟು ಕೊರೋನಾ ಲಸಿಕೆ ಪೂರೈಕೆ ಮಾಡುತ್ತಿಲ್ಲ. ಇದರಿಂದ ಮೂರನೇ ಹಂತದ ಕೊರೋನಾ ಲಸಿಕೆ ಹಾಕುವ ಕಾರ್ಯಕ್ರಮ ವಿಫಲವಾಗಿದೆ. ಇನ್ನೊಂದೆಡೆ ಆಮ್ಲಜನಕದ …

Read More »

24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದು ಇದು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ.24ರ ನಂತ್ರ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಕುರಿತಂತೆ ಅಂದೇ ನಿರ್ಧಾರ ಪ್ರಕಟಿಸೋದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತಂತೆ ಸಚಿವರೊಂದಿಗೆ ಸಭೆ ನಡೆಸಿದ ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೋವಿಡ್ 19 ಸಾಂಕ್ರಾಮಿಕ 2ನೇ ಅಲೆಯ ತೀವ್ರತೆಯಿಂದಾಗಿ ಹೆಚ್ಚುತ್ತಿರುವಂತ ಸೋಂಕಿತರ ಸಂಖ್ಯೆ ನಿಯಂತ್ರಿಸುವ ಸಲುವಾಗಿ ಮೇ.24ರವರೆಗೆ ವಾಣಿಜ್ಯ ಮತ್ತು ಇತರೆ …

Read More »

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡರ ಮೇಲೆಯೂ ನಮಗೆ ನಂಬಿಕೆ ಹೋಗಿದೆ. ಹಳೆಯ ಪ್ಯಾಕೇಜ್​ನ ಪರಿಹಾರ ಧನವನ್ನ ಸರಿಯಾಗಿ ನೀಡಿದ್ರೆ ಮಾತ್ರ ಈ ಪ್ಯಾಕೇಜ್​ನ್ನು ನಂಬಬಹುದು: ಸತೀಶ್​ ಜಾರಕಿಹೊಳಿ

ರಾಜ್ಯ ಸರ್ಕಾರ ಘೋಷಣೆ ಮಾಡಿದ ಕೊರೊನಾ ವಿಶೇಷ ಪ್ಯಾಕೇಜ್​​ಗೆ ವಿರೋಧ ಪಕ್ಷದ ನಾಯಕರು ಒಬ್ಬರಾದ ಮೇಲೆ ಒಬ್ಬರಂತೆ ಅಸಮಾಧಾನ ಹೊರಹಾಕ್ತಿದ್ದಾರೆ. ಇದೀಗ ಈ ಸಾಲಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಸಹ ಸೇರಿದ್ದು ಇದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕಾಟಾಚರಕ್ಕೆ ತಂದ ಪ್ಯಾಕೇಜ್​ ಆಗಿದೆ ಎಂದು ವ್ಯಂಗ್ಯವಾಡಿದ್ರು. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮೊದಲು ನೀವು ನಿಮ್ಮ ಹಳೆಯ ಪ್ಯಾಕೇಜ್​ನ ಲೆಕ್ಕಾಚಾರವನ್ನ ಕೊಡಿ. ಕಳೆದ ಬಾರಿ ನೀವು ಆಟೋ …

Read More »

ಪೇಚಿಗೆ ಸಿಲುಕಿದ ಪತ್ನಿ ಐಡಿ ಕಾರ್ಡ್ ಬಳಸಿ ತಿರುಗುತ್ತಿದ್ದ ಗ್ರಾ.ಪಂ. ಸದಸ್ಯೆ ಪತಿ!

ಪತ್ನಿಯ ಐಡಿ ಕಾರ್ಡ್ ಬಳಸಿಕೊಂಡು ಲಾಕ್ ಡೌನ್ ಸಂದರ್ಭದಲ್ಲಿ ರಾಜಾರೋಷವಾಗಿ ತಿರುಗಾಡುತಿದ್ದ ಪತಿರಾಯ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಪೇಚಿಗೆ ಸಿಲುಕಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ನಾಲ್ಕು ದಿನಗಳ ಕಾಲ ಯಾದಗಿರಿ ಜಿಲ್ಲೆಯನ್ನು ಸಂಪೂರ್ಣ ಲಾಕ್ ಮಾಡಲಾಗಿದೆ. ಇದರಿಂದಾಗಿ ಫೀಲ್ಡಿಗಿಳಿದ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ್ ಹುಗಿಬಂಡಿ ಹಾಗೂ ಹಾಗೂ ಕಮೀಷನರ್ ರಮೇಶ ಪಟ್ಟೆದಾರ್ ಕೈಗೆ ಪತ್ನಿಯ ಗುರುತು ಪತ್ರ ತೋರಿಸಿಕೊಂಡು ತಿರುಗುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯ …

Read More »

ಕರೆ ಮಾಡಿ ಸಹಾಯ ಕೇಳಿದ ಮಹಿಳೆ, ಮಂಚಕ್ಕೆ ಕರೆದ ಭೂಪ

ಗದಗ: ಗಂಡನಿಗೆ ಕೆಲಸ ಕೊಡಿಸುವಂತೆ ಸಹಾಯ ಕೇಳಿದ ಮಹಿಳೆಯನ್ನು ಮುಖಂಡನೊಬ್ಬ ಮಂಚಕ್ಕೆ ಆಹ್ವಾನಿಸಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿ ವಿರುದ್ಧ ಇಂತಹ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿಯಲ್ಲಿ 18 ವರ್ಷಗಳಿಂದ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಎರಡು ತಿಂಗಳ ಹಿಂದೆ ಕೈಗೆ ಪೆಟ್ಟಾಗಿ ವಿಶ್ರಾಂತಿ ಪಡೆದಿದ್ದ. ಆತ ಸರಿಯಾಗಿ ಕೆಲಸ ಮಾಡದ ಕಾರಣ ಪಂಚಾಯಿತಿಯವರು ಕೆಲಸಕ್ಕೆ ಸರಿಯಾಗಿ ಬರದಿದ್ದ ಬರಬೇಡ ಎಂದು ಹೇಳಿದ್ದಾರೆ. …

Read More »

ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ.

ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಓಟ ನಿಲ್ಲುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಬುಧವಾರ ಜಿಲ್ಲೆಯಲ್ಲಿ 2234 ಜನರಿಗೆ ಸೋಂಕು ಪತ್ತೆಯಾಗುವ ಮೂಲಕ ಹಳೆಯ ದಾಖಲೆಗಳನ್ನೆಲ್ಲ ಮುರಿದಿದೆ. ಇದೇ ವೇಳೆ ಒಂದೇ ದಿನ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟೂ 34281 ಜನರಿಗೆ ಬುಧವಾರ ಸೋಂಕು ಪತ್ತೆಯಾಗಿದೆ. 49953 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 468 ಜನರು ಸಾವಿಗೀಡಾಗಿದ್ದಾರೆ. ಪಾಸಿಟಿವಿಟಿ …

Read More »

ಕೊರೊನಾ ವಾರಿಯರ್ಸ್ ಅಂತ ಖಾಸಗಿ ಶಿಕ್ಷಕರ ಕಿವಿಗೆ ಹೂವು ಇಟ್ಟ “ಸಿಎಂ”

ಬೆಂಗಳೂರು, : ಶಿಕ್ಷಕರನ್ನು ಕೊರೊನಾ ವಾರಿಯರ್ಸ್ ಅಂತ ಪರಿಗಣಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಬುಧವಾರ ಘೋಷಣೆ ಮಾಡಿದ ವಿಶೇಷ ಪ್ಯಾಕೇಜ್ ನಲ್ಲಿ ಖಾಸಗಿ ಶಾಲಾ ಶಿಕ್ಷಕರು ಶಿಕ್ಷಕೇತರರನ್ನು ಪರಿಗಣಿಸಿಲ್ಲ. ಇಡೀ ಶಿಕ್ಷಣ ವ್ಯವಸ್ಥೆ ನಿರ್ನಾಮಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಾಂದಿ ಹಾಡಿದ್ದಾರೆ ಎಂದು ಆರೋಪಿಸಿರುವ ಖಾಸಗಿ ಶಾಲೆಗಳ ಶಿಕ್ಷಣ ಸಂಸ್ಥೆ ಪ್ರತಿನಿಧಿಗಳು ಅವರ ರಾಜೀನಾಮೆಗೆ ಆಗ್ರಹಿಸಿವೆ. ರಾಜ್ಯದಲ್ಲಿ 3.5 ಲಕ್ಷ ಮಂದಿ ಶಿಕ್ಷಕರು ಇದ್ದಾರೆ. ಕೊರೊನಾ ಲಾಕ್ ಡೌನ್ ನಿಂದ …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್: ಶಿಕ್ಷಕರ ನೇಮಕಾತಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚುರುಕುಗೊಳಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಾಕ್ಡೌನ್ ಮುಗಿದ ಕೂಡಲೇ ಶಿಕ್ಷಕರ ವರ್ಗಾವಣೆ ಮಾಡಲಾಗುವುದು. 6 ರಿಂದ 8 ನೇ ತರಗತಿ ಪದವೀಧರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಆದೇಶಿಸಿದ್ದು, ವಿಳಂಬವಾಗಿರುವ ಕಾರಣ ನೇಮಕಾತಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಲಮಿತಿಯೊಳಗೆ ನೇಮಕಾತಿಗೆ ಕ್ರಮ ಕೈಗೊಳ್ಳಲು …

Read More »