Breaking News
Home / 2021 / ಮೇ / 22 (page 2)

Daily Archives: ಮೇ 22, 2021

ಆಮ್ಲಜನಕ ಘಟಕದ ಕಾಮಗಾರಿಗೆ ಶಂಕುಸ್ಥಾಪನೆ , 20 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಬೆಳಗಾವಿ – ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಪ್ರತಿ ನಿಮಿಷಕ್ಕೆ 700 ಲೀಟರ್ ಆಮ್ಲಜನಕವನ್ನು ಉತ್ಪಾದಿಸುವ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ ಘಟಕಕ್ಕೆ ಇಂದು ಶಾಸಕರುಗಳಾದ  ಅಭಯ ಪಾಟೀಲ ಹಾಗೂ  ಅನೀಲ‌ ಬೆನಕೆ  ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಎಲ್&ಟಿ ಕಂಪನಿಯ ವತಿಯಿಂದ ನಿರ್ಮಾಣಗೊಳ್ಳುವ ಈ ಘಟಕವು ಸುಮಾರು 60 ಲಕ್ಷ ರೂಪಾಯಿಗಳ ಅಂದಾಜು ಮೊತ್ತವಾಗಿದ್ದು, 50 ಚದರ‌ ಅಡಿಯ ಜಾಗದಲ್ಲಿ ಈ ಯಂತ್ರವನ್ನು ಅಳವಡಿಸಲಾಗುವುದು. ಇದರಿಂದ ಸುಮಾರು 50 ರಿಂದ 60 ಹಾಸಿಗೆಗಳಿಗೆ …

Read More »

ಕೋವಿಡ್ ಕಾರಣಕ್ಕೆ ಎಲ್ಲಾ ತಪ್ಪಿಗೂ ಕ್ಷಮೆ ಸಿಗದು: ಹೈಕೋರ್ಟ್

ಬೆಂಗಳೂರು: ಎಲ್ಲಾ ಲೋಪಕ್ಕೂ ಕೋವಿಡ್ ಕಾರಣ ನೀಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ಆದೇಶದಲ್ಲಿದ್ದ ನಿರ್ಬಂಧ ಸಡಿಲಿಕೆ ಕೋರಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. 10 ದಿನಗಳಲ್ಲಿ ಪೊಲೀಸ್ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಮಂಡ್ಯ ನಿವಾಸಿ ದೇವರಾಜ್ ಎಂಬುವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸರು ಸ್ಪೋಟಕ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು 2019ರ ನವೆಂಬರ್‌ 4ರಂದು ದಾಖಲಿಸಿದ್ದರು. ಟೈಫಾಯಿಡ್‌ನಿಂದ ಬಳಲುತ್ತಿದ್ದ ಕಾರಣ ನೀಡಿದ್ದಕ್ಕಾಗಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿತ್ತು. …

Read More »

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ …

Read More »

ಹಮ್ ಆಪ್ಕೆ ಹೈ ಕೌನ್’ ಚಿತ್ರದ ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್ ನಿಧನ

ನಾಗ್ಪುರ​: ಜನಪ್ರಿಯ ಸಂಗೀತ ಸಂಯೋಜಕ ರಾಮ್ ಲಕ್ಷ್ಮಣ್(79) ಅವರು ಶನಿವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ‘ಹಮ್ ಆಪ್ಕೆ ಹೈ ಕೌನ್’ ಚಿತ್ರ ಸೇರದಂತೆ 100ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ಸಂಯೋಜಕರಾಗಿದ್ದ ರಾಮ್​ ಲಕ್ಷ್ಮಣ್​ ಅವರು ಮಹಾರಾಷ್ಟ್ರದ ನಾಗ್ಪುರದ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು. ರಾಮ್​ ಲಕ್ಷ್ಮಣ್​ರ ನಿಧನಕ್ಕೆ ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್​ ಅವರು ಸಂತಾಪ ಸೂಚಿಸಿದ್ದಾರೆ. ‘ಅತ್ಯಂತ್ಯ ಪ್ರತಿಭಾವಂತ ರಾಮ್​ ಲಕ್ಷ್ಮಣ್​ ಜಿ ನಿಧನ ಸುದ್ದಿ ಕೇಳಿ ನನಗೆ …

Read More »

ಪಚ್ಚೆ ನಂಜುಂಡಸ್ವಾಮಿ ಬರಹ – ಬಾಬಾಗೌಡರ ನೆನಪು| ಚಳವಳಿಕಾರನಾದ ಐಎಎಸ್ ಆಕಾಂಕ್ಷಿ

ಧಾರವಾಡ: ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸಿನೊಂದಿಗೆ ಅಧ್ಯಯನ ನಡೆಸುತ್ತಿದ್ದ ವ್ಯಕ್ತಿಯೊಳಗಿದ್ದ ಒಬ್ಬ ಚಳವಳಿಕಾರ ಹಾಗೂ ನಾಯಕ ಹೊರಜಗತ್ತಿಗೆ ಪರಿಚಯಗೊಂಡಿದ್ದೇ ರೈತ ಹೋರಾಟದ ಮೂಲಕ. ಅಂಥ ಒಬ್ಬ ಮೇರು ವ್ಯಕ್ತಿ ರೈತನಾಯಕನಾಗಿ, ಶಾಸಕನಾಗಿ, ಕೇಂದ್ರ ಸಚಿವರಗಿ ರೈತಕುಲಕ್ಕಾಗಿ ಮಾಡಿದ ಕೆಲಸ ಅನನ್ಯ. ಆದರೆ ಜನರ ಕಲ್ಯಾಣಕ್ಕಾಗಿ ಅವರ ಜ್ಞಾನವನ್ನು ಬಳಸಿಕೊಳ್ಳಬೇಕಾಗಿದ್ದ ರಾಜಕೀಯ ಪಕ್ಷಗಳು, ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದು ನಿಜಕ್ಕೂ ಬೇಸರ. ಆ ಅಪ್ರತಿಮ ಹೋರಾಟಗಾರ ಬಾಬಾಗೌಡ ಪಾಟೀಲ ಅವರು ಇಂದು ನಮ್ಮೊಂದಿಗೆ …

Read More »

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮನೆಯ ಹತ್ತಿರದ ಅಂಗಡಿಗಳಿಗೆ, ಸ್ಥಳಗಳಿಗೆ ನಾಗರಿಕರಿಗೆ ಅಗತ್ಯ ಕೆಲಸಗಳಿಗೆ ಹೋಗಲು ಮಾತ್ರ ಸರ್ಕಾರ ಅವಕಾಶ ನೀಡಿದ್ದು ಅನಗತ್ಯವಾಗಿ ರಸ್ತೆಯಲ್ಲಿ ನಡೆದುಕೊಂಡು, ವಾಹನಗಳಲ್ಲಿ ಓಡಾಡುವವರನ್ನು ವಶಕ್ಕೆ ಪಡೆದು …

Read More »

ಬ್ಲಾಕ್ ಫಂಗಸ್ ಗೆ ಸರ್ಕಾರದಿಂದ ಉಚಿತ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಸುಧಾಕರ್

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ ಸೋಂಕು ಕಡಿಮೆಯಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸೋಂಕಿತರಿಗೆ ಉಚಿತವಾಗಿ ಸರಿಯಾದ ಚಿಕಿತ್ಸೆ ಕೊಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ನಿಂದ ಸಾವಿನ ಪ್ರಮಾಣ ಜಾಸ್ತಿ ಆಗಿಲ್ಲ. ವರ್ಷಕ್ಕೆ 10 ಜನ ಇರುತ್ತಾ ಇದ್ದರು. ಆದರೆ ಈಗ 250 ಜನ ಸೋಂಕಿತರು ರಾಜ್ಯದಲ್ಲಿ ಇದ್ದಾರೆ. ಹೀಗಾಗಿ ಅವರಿಗೆಲ್ಲ ಎಷ್ಟು ಔಷಧಿ ಬೇಕೋ ಇವೆಲ್ಲವನ್ನು ಸರ್ಕಾರ ನೀಡಲಿದೆ …

Read More »

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ. ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ …

Read More »

ಡಾಕ್ಟರ್ ಆದ ಫಾರ್ಮಸಿಸ್ಟ್‍ಗೆ ಖಾಕಿ ಟ್ರಿಟ್ಮೆಂಟ್ !

ಚಿತ್ರದುರ್ಗ :ಸರ್ಕಾರಿ ಆಸ್ಪತ್ರೆಯಲ್ಲಿ ಫಾರ್ಮ್ ಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ನಡೆಸುತಿದ್ದ ಖಾಸಗಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮದಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ವಿವೇಕಾನಂದನನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳ ತಂಡ ಶುಕ್ರವಾರ ತಡರಾತ್ರಿ ದಾಳಿ ನಡೆಸಿದೆ. ದಾಳಿ ವೇಳೆ ಸಾವಿರಾರು ರೂ. ಮೌಲ್ಯದ ಔಷಧಿಗಳು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ. ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಕೋವಿಡ್ 19: ಖಾಸಗಿ ಆಯಂಬುಲೆನ್ಸ್‌ಗಳು ಇನ್ನು ಬೇಕಾಬಿಟ್ಟಿ ಬಾಡಿಗೆ ಹೇಳುವಂತಿಲ್ಲ!

ಬೆಂಗಳೂರು, ಮೇ 22: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗೀ ಆಯಂಬುಲೆನ್ಸ್‌ಗಳು ಅಕ್ಷರಶಃ ಸುಲಿಗೆಗೆ ಇಳಿದಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾಸಗೀ ಆಯಂಬುಲೆನ್ಸ್‌ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಯಂಬುಲೆನ್ಸ್‌ಗಳಿಗೆ ದರವನ್ನು ನಿಗದಿ ಪಡಿಸಲಾಗಿದೆ. ಸಾಮಾನ್ಯ ಆಯಂಬುಲೆನ್ಸ್‌ಗಳಿಗೆ (ಪೇಶೆಂಟ್ ಟ್ರಾನ್ಸ್‌ಪೋರ್ಟ್ ಆಯಂಬುಲೆನ್ಸ್)ಮೊದಲ 10 ಕಿ.ಮೀಟರ್‌ಗಳಿಗೆ 1500 ರೂಪಾಯಿ ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. 10 ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ …

Read More »