Breaking News
Home / 2021 / ಮೇ / 22 (page 4)

Daily Archives: ಮೇ 22, 2021

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …

Read More »

ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ ಅಂತ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಜಿದ್ದಿಗೆ ಮಾರಕಾಸ್ತ್ರಗಳಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ತಮ್ಮೇಗೌಡ ಹಾಗೂ ಈತನನ್ನ ರಕ್ಷಿಸಲು ಹೋದ ಮಂಜು ಶಂಕರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಗ್ರಾಮದ ಮರಿಯಪ್ಪರ ಮಗ ಚಾಣಕ್ಯ ಗೌಡ, ಅಕ್ಷಯ್ ಗೌಡ, …

Read More »

ಕೊರೊನಾ ಗೆದ್ದ ಒಂದೇ ಕುಟುಂಬದ 16 ಮಂದಿ

ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಮ್ಮಾರಿ ವೈರಸ್‍ಗೆ ಸಾಕಷ್ಟು ಜನರು ಬಲಿಯಾಗುತ್ತಿದ್ದಾರೆ. ಇದರ ನಡುವೆಯೇ ಅದೃಷ್ಟಶಾಲಿಗಳೆಂಬಂತೆ ವೈರಸ್ ವಿರುದ್ಧ ಹೋರಾಡಿ ಒಂದೇ ಕುಟುಂಬದ 16 ಜನರು ಗುಣಮುಖರಾಗುವ ಮೂಲಕ ಇತರಿಗೂ ಮಾದರಿಯಾಗಿದ್ದಾರೆ. ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಜನಕ್ಕೆ ಕೊರೊನಾ ಸೋಂಕು ತಗುಲಿತ್ತು. ಮೇ 3 ರಿಂದ ಎಲ್ಲರೂ ಹೋಮ್ ಐಸೋಲೇಷನ್‍ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇದರಲ್ಲಿ ಮೂರು ವರ್ಷದ …

Read More »

ಶಾಲಾ, ಕಾಲೇಜು ಶುಲ್ಕ ಕಡಿತಗೊಳಿಸಿ- ಸಿಎಂ ಬಿಎಸ್‍ವೈಗೆ ನಟ ಕಿರಣ್ ರಾಜ್ ಮನವಿ

ಬೆಂಗಳೂರು: ಕೊರೊನಾ ಬಿಕ್ಕಟ್ಟಿನ ಪರಿಸ್ಥಿತಿ ಇರುವುದರಿಂದ ಶಾಲಾ-ಕಾಲೇಜುಗಳ ಶುಲ್ಕವನ್ನು ಕಡಿಮೆಗೊಳಿಸುವಂತೆ ನಟ ಕಿರಣ್ ರಾಜ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಅಲ್ಲದೆ ಇದೀಗ ಲಾಕ್‍ಡೌನ್ ಜಾರಿಗೊಳಿಸಲಾಗಿದ್ದು, ಪೋಷಕರು ಜೀವನ ನಡೆಸಲು ಕೂಡ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಮಕ್ಕಳ ಶಾಲಾ ಕಾಲೇಜಿನ ಪೂರ್ತಿ ಶುಲ್ಕವನ್ನು ಪಾವತಿಸಲು ಪೋಷಕರು ಕಷ್ಟಪಡುತ್ತಿದ್ದಾರೆ. ಅಲ್ಲದೆ ಶಾಲಾ ಆಡಳಿತ …

Read More »

ಸರಿಯಾಗಿ ಸಂಖ್ಯೆ ನೀಡದವರು ಕೊರೊನಾ ಹೇಗೆ ನಿಯಂತ್ರಿಸ್ತೀರಿ- ಡಿಸಿಗೆ ಬೊಮ್ಮಾಯಿ ಕ್ಲಾಸ್

ಹಾವೇರಿ: ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಫುಲ್ ಗರಂ ಆಗಿದ್ದು, ಕ್ಲಾಸ್ ತೆಗೆದುಕೊಂಡಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ನಡೆಯುತ್ತಿದ್ದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯ ಆರಂಭದಲ್ಲಿ ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸರಿಯಾದ ಅಂಕಿ ಅಂಶಗಳನ್ನು ನೀಡದ್ದರಿಂದ ಸಚಿವ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಸರಿಯಾದ ಅಂಕಿ, ಸಂಖ್ಯೆ …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಮೇ.25 ರಂದು ತಜ್ಞವೈದ್ಯರು, ವೈದ್ಯಾಧಿಕಾರಿಗಳ ನೇಮಕಾತಿಗೆ ನೇರ ಸಂದರ್ಶನ

ಹಾವೇರಿ : ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ನಿರ್ವಹಣೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ರಚಿಸಲಾದ ಐ.ಸಿ.ಯುಗಳು ಮತ್ತು ಆಮ್ಲಜನಕ ಬೆಂಬಲಿತ ಹಾಸಿಗೆಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿಯಾಗಿ ಆರು ತಜ್ಞ ವೈದ್ಯರು, 12 ವೈದ್ಯಾಧಿಕಾರಿಗಳು ಹಾಗೂ ತಲಾ ಓರ್ವ ಮೇಂಟೆನೆನ್ಸ್ ಇಂಜನೀಯರ್ ಹಾಗೂ ಐ.ಸಿ.ಯು ಟೆಕ್ನಿಷಿಯನ್ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಮೇ 25 ರಂದು ಬೆಳಿಗ್ಗೆ 10 ಗಂಟೆಯಿಂದ ನೇರ ಸಂದರ್ಶನ ಹಾವೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ …

Read More »

ಎಂತ ಕಾಲ ಬಂತು: ಮೃತ ಸೋಂಕಿತರ ಅಂತ್ಯಕ್ರಿಯೆ ನೆರವೇರಿಸಲು ಟೆಂಡರ್ ಆಹ್ವಾನ!

ಚಾಮರಾಜನಗರ ( ಮೇ 21) ಹಲವೆಡೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸಲು ಹಿಂಜರಿಯುತ್ತಿರುವುದು ಕಂಡು ಬರುತ್ತಿದೆ. ಇದನ್ನು ಮನಗಂಡ ಸ್ವಯಂ ಸೇವಾ ತಂಡಗಳು ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ಮುಂಜಾಗ್ರತಾ ಕ್ರಮಗಳೊಂದಿಗೆ ಮೃತ ಸೋಂಕಿತರ ಅಂತ್ಯ ಸಂಸ್ಕಾರ ನೆರವೇರಿಸುತ್ತಾ ಬಂದಿವೆ. ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆ ನೆರವೇರಿಸಲೆಂದೇ ಚಾಮರಾಜನಗರ ಜಿಲ್ಲಾಡಳಿತ ಯಡಬೆಟ್ಟದ ಬಳಿ ಭೂಮಿಯನ್ನು ನಿಗದಿಪಡಿಸಿದೆ. ಸೋಂಕಿನಿಂದ ಮೃತಪಟ್ಟ ಹಲವಾರು ಮಂದಿಯ ಅಂತ್ಯಸಂಸ್ಕಾರವನ್ನು ಸ್ವಯಂ ಸೇವಕರು ಇಲ್ಲಿ ನೆರವೇರಿಸುತ್ತಾ ಬಂದಿದ್ದಾರೆ. …

Read More »

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್‌ಸ್ಟೆಬಲ್ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ …

Read More »

ಒನ್ ನೇಷನ್, ಒನ್ ರೇಷನ್ ‘ ಯೋಜನೆ : ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯಡಿ ರಾಜ್ಯದಲ್ಲಿ ಉದ್ಯೋಗ ಮತ್ತು ಇತರೆ ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಬಂದಿರುವವರು ರಾಜ್ಯದ ಯಾವುದೇ ಸ್ಥಳದಲ್ಲಿ ಪಡಿತರ ಪಡೆಯಬಹುದು ಎಂದು ಆಹಾರ ಇಲಾಖೆ ತಿಳಿಸಿದೆ.   ಈ ಕುರಿತು ಮಾಹಿತಿ ನೀಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತ ಶಮ್ಲಾ ಇಕ್ಬಾಲ್, ಅಂತ್ಯೋದಯ ಅಥವಾ ಪಡಿತರ ಚೀಟಿ ಹೊಂದಿರುವವರು …

Read More »

ಸಿಎಂ ಯಡಿಯೂರಪ್ಪಗೆ ಪ್ರಧಾನಿ ಮೋದಿಯಿಂದ ಕಿರುಕುಳ! ಕೈ ಶಾಸಕ ಅಮರೇಗೌಡ ಗಂಭೀರ ಆರೋಪ

ಕೊಪ್ಪಳ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರಧಾನಿ ಮೋದಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ರಾಜ್ಯದ 25 ಸಂಸದರನ್ನು ಕೂಡಾ ಪ್ರಧಾನಿ ಮೋದಿ ತನ್ನ ಹತ್ತಿರಕ್ಕೆ ಬಿಟ್ಟುಕೊಳ್ಳುತ್ತಿಲ್ಲ. ಪ್ರಧಾನಿಗೆ ಕರ್ನಾಟಕ ಎಂದರೆ ಅಲರ್ಜಿ ಆಗಿದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ತಾವಾಗಿಯೇ ಸಿಎಂ ಖುರ್ಚಿ ಖಾಲಿ ಮಾಡಲಿ ಎನ್ನುವ …

Read More »