Breaking News
Home / 2021 / ಮೇ / 23 (page 3)

Daily Archives: ಮೇ 23, 2021

ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನವದೆಹಲಿ: ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಹಾಗೂ ಅವರ ಬಲಗೈ ಬಂಟ ಅಜಯ್ ಎಂಬಾತನನ್ನು ಪಂಜಾಬ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಸುಶೀಲ್ ಕುಮಾರ್ ಅವರನ್ನು ಪಂಜಾಬ್ ಪೊಲೀಸರು ದೆಹಲಿ ಪೊಲೀಸರಿಗೆ ಒಪ್ಪಿಸಲಿದ್ದಾರೆ. ಇದಕ್ಕೂ ಮೊದಲು ದೆಹಲಿ ಕೋರ್ಟ್ ಸುಶೀಲ್ ಕುಮಾರ್‌ಗೆ ಜಾಮೀನು ನೀಡಲು ನಿರಾಕರಿಸಿತ್ತು. ಸುಶೀಲ್ ಕುಮಾರ್ 2008ರ ಬಿಜಿಂಗ್ ಹಾಗೂ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ …

Read More »

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …

Read More »

ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿ

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೂಲಕ ಹುಬ್ಬಳ್ಳಿ ಕಿಮ್ಸ್ ನಲ್ಲಿ  ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿಯಾದ ಪ್ರಕರಣ ಇದಾಗಿದೆ. ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬ್ಲ್ಯಾಕ್ ಫಂಗಸ್ ಸೋಂಕಿಗೆ ಕಿಮ್ಸ್ ನಲ್ಲಿ ಜಿಲ್ಲೆಯ ಒಟ್ಟು 78 …

Read More »

ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಯುವಕನ ಮೊಬೈಲ್ ಒಡೆದು, ಕಪಾಳಮೋಕ್ಷ ಮಾಡಿದ ಜಿಲ್ಲಾಧಿಕಾರಿ

ರಾಯಪುರ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಹೊರ ಬಂದಿದ್ದ ಯುವಕನನ್ನು ಜಿಲ್ಲಾಧಿಕಾರಿಯೊಬ್ಬರು ತಡೆದಿದ್ದು, ಕಪಾಳಮೋಕ್ಷ ಮಾಡಿ ಮೊಬೈಲ್‌ ಕಸಿದು ಅದನ್ನು ಒಡೆದು ಹಾಕಿದ ಪ್ರಸಂಗ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ನಡೆದಿದೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗುತ್ತಿವೆ.   ವೈರಲ್ ಆಗಿರುವ ವಿಡಿಯೋದಲ್ಲಿ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ವ್ಯಕ್ತಿಯೋರ್ವನ ಬಳಿಗೆ ಬಂದು ಆತನ ಬಳಿಯಿದ್ದ ಗುರುತಿನ ಚೀಟಿ ಪಡೆಯುತ್ತಾರೆ. ನಂತರ ಮೊಬೈಲ್ ಫೋನ್ ಕೇಳಿ, ಆತ ಮೊಬೈಲ್​ ಕೊಟ್ಟ …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ …

Read More »

ದೇಶದಲ್ಲಿ ಕರ್ನಾಟಕವೇ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರ ಸ್ಥಾನ

ನವದೆಹಲಿ: ಕಳೆದ 24 ಗಂಟೆಯ ಕೊರೊನಾವೈರಸ್ ಸಕ್ರಿಯ ಪ್ರಕರಣಗಳನ್ನು ತೋರಿಸುವ ಸರ್ಕಾರದ ವಿವಿಧ ರಾಜ್ಯಗಳು ಮತ್ತು ಯುಟಿಗಳಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಸೂಚಿಸಲು ಕೇಂದ್ರವು ಶನಿವಾರ ನಕ್ಷೆಯನ್ನು ಹಂಚಿಕೊಂಡಿದೆ. ಅದರಂತೆ, ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ -19 ಪ್ರಕರಣಗಳನ್ನು ಹೊಂದಿರುವ ಎಂಟು ರಾಜ್ಯಗಳಲ್ಲಿ ಕರ್ನಾಟಕ ಮೊಡಲಸ್ಥನ ಹೊಂದಿದೆ. ಅದರಂತೆ ಕರ್ನಾಟಕ 5.14 ಲಕ್ಷ ಸಕ್ರಿಯ ಪ್ರಕರಣಗಳನ್ನು ಹೊಂದಿದ್ದು, ಮಹಾರಾಷ್ಟ್ರ 3.69 ಲಕ್ಷ , ಕೇರಳ 3.06 …

Read More »