Breaking News
Home / 2021 / ಮೇ / 25 (page 3)

Daily Archives: ಮೇ 25, 2021

ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ ನೂರಾರು ಕೆ.ಜಿ ಅನ್ನ ಮಣ್ಣುಪಾಲಾಗಿದೆ.

ಬಳ್ಳಾರಿ: ಹಳ್ಳಿ ಹಳ್ಳಿಗೂ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ ಮೌಢ್ಯದ ಕಡೆ ಮುಖ ಮಾಡಿದ ಗ್ರಾಮೀಣ ಭಾಗದ ಜನ, ಇದೀಗ ನೂರಾರು ಕೆಜಿ ಅನ್ನ ಮಣ್ಣುಪಾಲು ಮಡಿರುವ ಘಟನೆ ಬಳ್ಳಾರಿ ತಾಲೂಕಿನ ಡಿ ಕಗ್ಗಲ್ಲು ಗ್ರಾಮದಲ್ಲಿ ನಡೆದಿದೆ. ಕೊರೊನಾ ದೂರವಾಗಲಿ ಅಂಥಾ ನೂರಾರು ಕೆಜಿ ಅನ್ನ ಮಣ್ಣುಪಾಲು ಮಾಡಿದ್ದಾರೆ. ಮನೆ ಮನೆಯಲ್ಲಿ ಅನ್ನ ಮಾಡಿಸಿ ರಾತ್ರಿ ವೇಳೆಯಲ್ಲಿ ಊರ ಆಚೆ ಚೆಲ್ಲಿ ಬಂದಿದ್ದಾರೆ. ಗ್ರಾಮದಲ್ಲಿ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಳ್ಳಿ ಜನತೆ …

Read More »

ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್

ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.   ಹೊಸೂರಿನಲ್ಲಿ ಸುಮಾರು 50 …

Read More »

ಸನ್ನಿ ಲಿಯೋನ್‍ಗೆ ಬಟ್ಟೆ ತೊಡಿಸಿ ಸುಸ್ತಾದ ಆರ್ಮಿ ತಂಡ

ಮುಂಬೈ: ಮಾದಕ ನಟಿ ಸನ್ನಿ ಲಿಯೋನ್ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ನಾನಾ ವಿಚಾರಕ್ಕೆ ಸುದ್ದಿಯಾಗುವ ಬೇಬಿ ಡಾಲ್ ಬಟ್ಟೆ ತೊಟ್ಟುಕೊಳ್ಳಲು ಕಷ್ಟ ಪಡುತ್ತಿರುವ ವೀಡಿಯೋ ಸಖತ್ ವೈರಲ್ ಆಗಿದೆ. ಸನ್ನಿ ಲಿಯೋನ್ ರಿಯಾಲಿಟಿ ಶೋವೊಂದರಲ್ಲಿ ನಿರೂಪಕಿಯಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್‍ನ ಜನಪ್ರಿಯ Splitsvilla ಶೋಗೆ ನಿರೂಪಕಿಯಾಗಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ತಯಾರಾಗುತ್ತಿರುವ ಹಿನ್ನಲೆಯಲ್ಲಿ ತನಗೆ ಕಾಸ್ಟ್ಯೂಮ್ ತೊಡಿಸಲು ಕಷ್ಟ ಪಟ್ಟ ತಂಡವೊಂದರ ಚಿತ್ರವನ್ನು ಸನ್ನಿ ಲಿಯೋನ್ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ …

Read More »

ವ್ಯರ್ಥವಾಯ್ತು ಸರ್ಕಾರದ ಕೋಟಿ ಕೋಟಿ ಹಣ..!

ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …

Read More »

ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ

ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು …

Read More »

ವಿಡಿಯೋ; ಚಿತ್ರದುರ್ಗ ಜಿಲ್ಲಾಸ್ಪತ್ರೆ ವಾರ್ಡ್‌ನಲ್ಲಿ ನಾಯಿ ಸಂಚಾರ

ಚಿತ್ರದುರ್ಗ, ಮೇ 25; ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಇರುವುದಿಲ್ಲ, ಒಂದೊಂದು ಸಮಯದಲ್ಲಿ ಕುಳಿತುಕೊಳ್ಳಲು ಜಾಗವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಬೀದಿ ನಾಯಿಗಳ ಓಡಾಟ ನಡೆಸುತ್ತಿವೆ. ನಾಯಿಗಳ ಓಡಾಟದ ವಿಡಿಯೋ ವೈರಲ್ ಆಗಿದೆ. ತಡರಾತ್ರಿ ಎರಡು ಗಂಟೆ ಸಮಯದಲ್ಲಿ ರೋಗಿಗಳು ಇರುವ ವಾರ್ಡ್‌ನಲ್ಲಿಯೇ ನಾಯಿಗಳು ಓಡಾಟ ನಡೆಸುತ್ತಿವೆ. ಜಿಲ್ಲಾಸ್ಪತ್ರೆಯಲ್ಲಿ ಏಲ್ಲಿ ನೋಡಿದರೂ ರಾಜಾ ರೋಷವಾಗಿ ನಾಯಿಗಳು ಓಡಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   …

Read More »

ಶವ ಕೊಡಲು ಬಿಲ್ ಬಾಕಿ ಕೇಳಿದರೆ ಆಸ್ಪತ್ರೆ ನೋಂದಣಿ ರದ್ದು: ಸರ್ಕಾರ

ಮೈಸೂರು: ಕೋವಿಡ್ ಸೋಂಕಿತರು ಆಸ್ಪತ್ರೆಗಳಲ್ಲಿ ಮೃತಪಟ್ಟರೆ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲು ಬಾಕಿ ಬಿಲ್ ಪಾವತಿಸುವಂತೆ ಒತ್ತಾಯಿಸಿದರೆ. ಅಂತಹ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಲಾಗುವುದು ಎಂದು ಸರ್ಕಾರ ಆದೇಶಿಸಿದೆ. ರಾಜ್ಯದ ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರು ಮೃತಪಟ್ಟಲ್ಲಿ ಆಸ್ಪತ್ರೆಯ ಹಾಗೂ ಚಿಕಿತ್ಸೆಯ ಬಾಕಿ ವೆಚ್ಚವನ್ನು ಪಾವತಿಸಿದ ನಂತರವೇ ಶವವನ್ನು ಸಂಬಂಧಿಕರಿಗೆ ನೀಡುವಂತೆ ಷರತ್ತು ವಿಧಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮೃತ ವ್ಯಕ್ತಿಯ ದೇಹವನ್ನು ಹಸ್ತಾಂತರಿಸುವ ವೇಳೆ ಆಸ್ಪತ್ರೆಯ …

Read More »

ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ‌ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ‌‌. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ …

Read More »

ಭಾರತದಲ್ಲಿ ಸ್ಪುಟ್ನಿಕ್ ವಿ ಲಸಿಕೆ ಉತ್ಪಾದನೆಗೆ ಚಾಲನೆ

ನವದೆಹಲಿ, : ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಯ ಉತ್ಪಾದನೆಯನ್ನು ಭಾರತದಲ್ಲಿ ಸೋಮವಾರದಿಂದ ಆರಂಭಿಸಲಾಗಿದೆ. ದಿ ರಷ್ಯನ್ ಡೈರೆಕ್ಟ್ ಇನ್ವೆಸ್ಟ್‌ಮೆಂಟ್ ಫಂಡ್(ಆರ್‌ಡಿಐಎಫ್) ಸಹಯೋಗದೊಂದಿಗೆ ಭಾರತದ ಅತಿ ದೊಡ್ಡ ಲಸಿಕೆ ಮತ್ತು ಔ‍ಷಧೀಯ ಸಂಸ್ಥೆಗಳಲ್ಲಿ ಒಂದಾದ ಪನಾಶಿಯಾ ಈ ಲಸಿಕೆಯನ್ನು ಉತ್ಪಾದಿಸಲು ಆರಂಭಿಸಿದೆ. ಆರ್‌ಡಿಎಫ್ ಪ್ರಕಾರ ಭಾರತದ ಪನಾಶಿಯಾ ಸಂಸ್ಥೆ ವರ್ಷಕ್ಕೆ 10 ಕೋಟಿ ಲಸಿಕೆಯನ್ನು ಉತ್ಪಾದನೆ ಮಾಡಲಿದೆ ಎಂದು ತಿಳಿಸಿದೆ. ಭಾರತದಲ್ಲಿ ಉತ್ಪಾದನೆಯಾದ ಮೊದಲ ಬ್ಯಾಚ್‌ನ ಲಸಿಕೆಯನ್ನು ‘ಸ್ಪಿಟ್ನಿಕ್ ವಿ’ ಲಸಿಕೆಯನ್ನು …

Read More »

ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

ಮಂಗಳೂರು, : ಕೊರೊನಾ ವೈರಸ್, ಚಂಡಮಾರುತದ ಭೀಕರತೆಗೆ ಕರಾವಳಿಯಲ್ಲಿ ಮತ್ಸೋದ್ಯಮ ನಲುಗಿ ಹೋಗಿದೆ. ಮೀನುಗಾರಿಕೆ ಉತ್ತುಂಗವಿದ್ದ ಸಮಯದಲ್ಲಿಯೇ ಲಾಕ್‌ಡೌನ್ ಬರೆ ಬಿದ್ದು, ಸ್ವಲ್ಪ ಸುಧಾರಿಸುವಾಗಲೇ ಚಂಡಮಾರುತ ಹೊಡೆತಕೊಟ್ಟಿತು.ಇದೆಲ್ಲದರ ನಡುವೆ ಇದೀಗ ಮೀನುಗಾರಿಕಾ ಋತು ಅಂತಿಮವಾಗುತ್ತಿದ್ದು, ಜೂನ್ 1 ರಿಂದ ಮೀನುಗಾರಿಕೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ರಾಜ್ಯ ಸರ್ಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕಾ ನಿಯಂತ್ರಣ ಕಾಯಿದೆಯನುಸಾರವಾಗಿ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತೀಕೃತ ಬೋಟ್ …

Read More »