Home / 2021 / ಮೇ / 28

Daily Archives: ಮೇ 28, 2021

ಕೊರೋನ ಕಾಲ ಘಟ್ಟದಲ್ಲೂ ದಾಖಲೆಯ ಪ್ರಮಾಣದಲ್ಲಿ ನಿವ್ವಳ ಲಾಭ ಗಳಿಸಿದ ಕರ್ನಾಟಕ ಬ್ಯಾಂಕ್

ಮಂಗಳೂರು: ಮಂಗಳೂರು ನಗರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರ್ನಾಟಕ ಬ್ಯಾಂಕ್ ಲಿಮಿಟೆಡ್ 2020-21ನೇ ಸಾಲಿನಲ್ಲಿ 482.57 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ, ಇದು ಹಿಂದಿನ ಎಲ್ಲ ದಾಖಲೆಗಳನ್ನು ವಿನಮ್ರಗೊಳಿಸಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಬ್ಯಾಂಕ್ ನಿವ್ವಳ ಲಾಭವನ್ನು 431.78 ಕೋಟಿ ರೂ. ಆಗಿದ್ದು, ವರ್ಷದಿಂದ ವರ್ಷಕ್ಕೆ 11.76 ರಷ್ಟು ಹೆಚ್ಚಳವಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಇದು ಕೇವಲ 14.83 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಮೇ 26 ರ ಬುಧವಾರ ಇಲ್ಲಿ …

Read More »

ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ

ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಢಿಕ್ಕಿ ಪಡೆದ ಪರಿಣಾಮ ಓಮ್ನಿ ವ್ಯಾನ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿರುವ ಘಟನೆ, ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಎಂಬಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ ದಾವೂದ್(22) ಹಾಗೂ ಕುಂಜತ್ಕಲ ನಿವಾಸಿ ಉನೈಸ್(27) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಗಳು. ತೀವ್ರವಾಗಿ ಗಾಯಗೊಂಡಿರುವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ …

Read More »

ಜಿಂದಾಲ್‌ಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ: ಯತ್ನಾಳ್

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ನೀಡುವ ನಿರ್ಧಾರ ಹಿಂತೆಗೆತ ನಮ್ಮ ಹೋರಾಟದ ಫಲ. ಪ್ರಧಾನಿ ಮೋದಿ ಸೇರಿ ಕೇಂದ್ರದ ನಾಯಕರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದೆವು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ನಮ್ಮ ರಾಜ್ಯದ ನೆಲ ಜಲ ಮತ್ತು ನೈಸರ್ಗಿಕ ಸಂಪತ್ತು ಉಳಿಸಲು ನಾವು ಇತ್ತೀಚೆಗೆ ಕರ್ನಾಟಕ ಸರ್ಕಾರ ತೆಗೆದುಕೊಂಡ ಸುಮಾರು 3660 ಎಕರೆ ಖನಿಜ ಸಂಪತ್ತು ಹೊಂದಿದ ಪ್ರತಿ ಎಕರೆಗೆ ಕೋಟ್ಯಂತರ ಬೆಲೆ …

Read More »

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್; ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳಿಗೆ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಿದಾಯ್ ಬಾಬು, ಸಾಗರ್‌ ಕಾಲಿಗೆ ಗುಂಡುಹಾರಿಸಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಕೇಳಿಕೊಂಡಿದ್ದಾರೆ. ಆದರೆ ಮಾತು ಕೇಳದೆ ಹಲ್ಲೆಗೆ ಮುಂದಾಗಿದ್ದು ಈ ವೇಳೆ ಆರೋಪಿಗಳಾದ ರಿದಾಯ್ ಬಾಬು …

Read More »

ಪತ್ರಕರ್ತರ ಮೇಲೆ ಖಾಕಿ ದೌರ್ಜನ್ಯ : ಪೊಲೀಸ್ ವರಿಷ್ಠಾಧಿಕಾರಿಗೆ ದೂರು

ಮಡಿಕೇರಿ: ನಗರದ ಆರ್ಮಿ ಕ್ಯಾಂಟೀನ್ ಎದುರು ವಸ್ತುಗಳ ಖರೀದಿಗಾಗಿ ಸಾಲಿನಲ್ಲಿ ನಿಂತಿದ್ದ ಮಾಜಿ ಸೈನಿಕರ ದೃಶ್ಯಾವಳಿ ಸೆರೆ ಹಿಡಿಯುತ್ತಿದ್ದ ಜಿಲ್ಲೆಯ ಇಬ್ಬರು ಯುವ ಪತ್ರಕರ್ತರ ಮೇಲೆ ಪೊಲೀಸರು ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರಿಗೆ ದೂರು ಸಲ್ಲಿಸಿದ್ದಾರೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಂಘ, ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ಇಂಡಿಯನ್ …

Read More »

ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ: H.D.K.

ಬೆಂಗಳೂರು, ಮೇ 28: ಜಿಂದಾಲ್‌ಗೆ ಭೂಮಿ ಮಾರಾಟ ಹಿಂದಕ್ಕೆ ಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಮಾಡಿದ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಟ್ವೀಟ್ ಮೂಲಕ ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮಾಜಿ ಸಿಎಂ ಎಚ್‌ಡಿಕೆ, “”ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ” ಎಂದಿದ್ದಾರೆ. ರಾಜಕೀಯ …

Read More »

2000 ರೂ. ನೋಟ್ ಗೆ ಗೇಟ್ ಪಾಸ್ ಗ್ಯಾರಂಟಿ.? ಪ್ರಿಂಟ್ ನಿಲ್ಲಿಸಿದ ನಂತ್ರ ಚಲಾವಣೆಯಿಂದಲೂ ಹೊರಕ್ಕೆ

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ 2000 ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್(RBI) ಪ್ರಜ್ಞಾಪೂರ್ವಕವಾಗಿಯೇ ಗುಲಾಬಿ ನೋಟುಗಳನ್ನು ಚಲಾವಣೆಯಿಂದ ಹೊರತೆಗೆಯುತ್ತಿದೆ. 2000 ರೂ. ನೋಟುಗಳಿಗೆ ಪಿಂಕ್ ಸ್ಲಿಪ್ ನೀಡುವುದು ಖಚಿತವಾಗಿದೆ. ಚಲಾವಣೆಯಿಂದ 2000 ರೂಪಾಯಿ ನೋಟುಗಳನ್ನು ತೆಗೆದುಹಾಕುವುದು ಖಚಿತವೆನ್ನಲಾಗಿದೆ. ಗುರುವಾರ ಬಿಡುಗಡೆಯಾದ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ, 2021 ರ ಹಣಕಾಸು ವರ್ಷದಲ್ಲಿ ಎರಡು ಸಾವಿರ ರೂಪಾಯಿ ಮುಖಬೆಲೆಯ 57,757 ಕೋಟಿ ನೋಟುಗಳು ಚಲಾವಣೆಯಿಂದ ಹೊರ …

Read More »

ಗ್ರಾಮಸ್ಥರೊಂದಿಗೆ ವೈಮನಸ್ಯ; ಶವವನ್ನು ಹೊತ್ತು ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ರಾಂಚಿ : ಮೃತಪಟ್ಟ ಮಹಿಳೆಯ ಶವವನ್ನು ಹೊರಲು ಪುರುಷರು ನಿರಾಕರಿಸಿದ ಕಾರಣಕ್ಕೆ ಮಹಿಳೆಯರೇ ಶವಸಂಸ್ಕಾರ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಗ್ರಾಮ ಒಂದರಲ್ಲೇ ನಡೆದಿದೆ. ಜಾರ್ಖಂಡ್ ರಾಜ್ಯದ ಹಜಾರಿಬಾಗ್ ಜಿಲ್ಲೆಯ ಖಂಡ್ವಾ ಗ್ರಾಮದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಮೃತಪಟ್ಟ ಮಹಿಳೆಯ ಶವ ಹೊರಲು ಪುರುಷರು ಮುಂದಾಗದ ಹಿನ್ನೆಲೆಯಲ್ಲಿ ಹೆಣ್ಣುಮಕ್ಕಳೇ ಶವಸಂಸ್ಕಾರ ಮಾಡಿದ್ದಾರೆ. ಮೃತರಾಗಿರುವ ಮಹಿಳೆ ಕುಂತೀದೇವಿ ನಾಲ್ಕು ವರ್ಷಗಳ ಹಿಂದೆ ಗಲಾಟೆ ಮಾಡಿಕೊಂಡಿದ್ದರು . ಆದ್ದರಿಂದ ಅವರನ್ನು ಗ್ರಾಮದ ಮುಖಂಡರು ತಮ್ಮ …

Read More »

ಬೆಂಗಳೂರಲ್ಲಿ ಲಸಿಕೆ ವಿತರಣೆಯಲ್ಲೂ ಗೋಲ್ಮಾಲ್..!

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಒಂದೆಡೆ ತನ್ನ ರೌದ್ರನರ್ತನ ತೋರುತ್ತಿದ್ದರೆ, ಇನ್ನೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಲಸಿಕೆ ವಿತರಣೆಯಲ್ಲಿಯೂ ಗೋಲ್ ಮಾಲ್ ನಡೆಯುತ್ತಿದೆ. ಬೆಂಗಳೂರಲ್ಲಿ ಬಿಜೆಪಿ ನಾಯಕರ ಆಪ್ತರಿಗೆ ಸುಲಭದಲ್ಲಿ ಲಸಿಕೆ ಸಿಗುತ್ತಿದೆ. ಮುಂಚೂಣಿ ಕಾರ್ಯಕರ್ತರಿಗೆ ಸರ್ಕಾರ ಉಚಿತ ಲಸಿಕೆ ಘೋಷಿಸಿದೆ. ಈ ಲಸಿಕೆಯನ್ನು ಬಿಜೆಪಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಈ ಮೂಲಕ ಲಸಿಕೆ ವಿತರಣೆಯಲ್ಲೂ ರಾಜಕಾರಣ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನಲ್ಲಿ ಲಸಿಕೆ ರಾಜಕಾರಣ ಬಯಲಾಗಿದೆ. …

Read More »

ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ ಆಸ್ಪತ್ರೆಯ ಮಹಿಳಾ ಸಿಬ್ಬಂದಿ

ಮಡಿಕೇರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೇಬಿನಿಂದ 11 ಸಾವಿರ ರೂ. ನಗದನ್ನು ಕಳವು ಮಾಡಿದ್ದ ಆಸ್ಪತ್ರೆಯ ತಾತ್ಕಾಲಿಕ ಡಿ ಗ್ರೂಪ್ ಸಿಬ್ಬಂದಿಯನ್ನು ಬಂಧಿಸುವಲ್ಲಿ ಮಡಿಕೇರಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 17 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಮಡಿಕೇರಿ ತಾಲೂಕಿನ ಜೋಡುಪಾಲ ನಿವಾಸಿ ದಿಲ್‍ಶಾದ್(45) ಬಂಧಿತ ಆರೋಪಿಯಾಗಿದ್ದಾಳೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮದ ರಜನಿಕಾಂತ್ …

Read More »