Breaking News
Home / 2021 / ಮೇ (page 18)

Monthly Archives: ಮೇ 2021

: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು

ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ. ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ. “ಮಾಹಿತಿಯ ಪ್ರಾಥಮಿಕ …

Read More »

ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ

ಬೆಳಗಾವಿ : ಪೊಲೀಸರಿಂದಲೇ ಚಿನ್ನ ಕಳ್ಳತನ ಪ್ರಕರಣ ತನಿಖೆ ಬೆಳಗಾವಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೆಲ ಹಿರಿಯ ಪೊಲೀಸ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಯಮಕನಮರಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ 2.5 ಕೋಟಿ ಬೆಲೆ ಬಾಳುವ ಐದು ಕೆ.ಜಿ. ಚಿನ್ನ ಪ್ರಕರಣದಲ್ಲಿ ಅದರ ಸಿಐಡಿ ಅಧಿಕಾರಿಗಳು ಕಿರಣ್ ವೀರನಗೌಡರ್ ಎಂಬ ಡಿಲ್ ನ ಮಧ್ಯವರ್ತಿ ವ್ಯಕ್ತಿಯ ಜನ್ಮ ಜಾಲಾಡಿದ್ದಾರೆ. ಕಿರಣ ವೀರನಗೌಡರ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿದ್ದು, ಅಕ್ರಮಗಳ ಬಗ್ಗೆ ಪೊಲೀಸರಿಗೆ …

Read More »

ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿ

ಬೆಳಗಾವಿ: ಬೆಳಗಾವಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಒಂದೇ ಕುಟುಂಬದ ಮೂವರು ಮಹಾಮಾರಿಗೆ ಬಲಿಯಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಯೆಲಿಮುನೊಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಇಂದುಮತಿ ಹಾಗೂ ಇಬ್ಬರು ಗಂಡು ಮಕ್ಕಳು ಎರಡೇ ದಿನಗಳ ಅಂತರದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೃತರನ್ನು ಇಂದುಮತಿ (69) ಮಕ್ಕಳಾದ ಸತೀಶ್ (45) ಹಾಗೂ ಮಹೇಶ್ (47) ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಇದೀಗ ಇಂದುಮತಿ ಪತಿ ಶಂಕರ್ ಅವರಿಗೂ ಸೋಂಕು ತಗುಲಿದ್ದು, …

Read More »

ಬ್ಲ್ಯಾಕ್ ಫಂಗಸ್ ಬೆನ್ನಲ್ಲೇ `ವೈಟ್ ಫಂಗಸ್’ ಆತಂಕ : ಬೆಳಗಾವಿಯ ಇಬ್ಬರಲ್ಲಿ ವೈಟ್ ಫಂಗಸ್ ಸೋಂಕು ಪತ್ತೆ!

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಜೊತೆಗೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಎದುರಾಗಿದ್ದು, ಇದೀಗ ಬೆಳಗಾವಿಯಲ್ಲಿ ವೈಟ್ ಫಂಗಸ್ ಸೋಂಕು ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್ ಒ ಡಾ.ಎಸ್.ವಿ ಮುನ್ಯಾಳ್ ಮಾಹಿತಿ ನೀಡಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಈವರೆಗೆ 9 ಮಂದಿಯಲ್ಲಿ …

Read More »

ಸಿದ್ದರಾಮಯ್ಯ ಮೇಲೆ ಜಮೀರ್ ಅತಿಯಾದ ಗುರುಭಕ್ತಿ: ಹೈಕಮಾಂಡ್ ಕೆಂಗಣ್ಣು

ಬೆಂಗಳೂರು, ಮೇ 25: ಇತ್ತೀಚೆಗೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ತೀವ್ರ ಮುಜುಗರಕ್ಕೆ ಒಳಗಾದರಾ? ಹೌದು ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಮೇಲೆ ಜಮೀರ್ ಅಹ್ಮದ್ ತೋರುತ್ತಿರುವ ಅತಿಯಾದ ಪ್ರೀತಿ, ವಿಶ್ವಾಸವೇ ಕಾರಣ. ಒಂದು ವೇಳೆ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಚರ್ಚೆಯನ್ನು …

Read More »

ಬೆಳಗಾವಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಮಾವೇಶ: ಆಯೋಜಕರ ವಿರುದ್ಧ ಎಫ್‌ಐಆರ್ ಯಾಕಿಲ್ಲ; ಹೈಕೋರ್ಟ್ ಪ್ರಶ್ನೆ

ಬೆಂಗಳೂರು, : ಬೆಳಗಾವಿಯಲ್ಲಿ ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಅಲ್ಲಿನ ನಗರ ಪೊಲೀಸ್ ಆಯುಕ್ತರು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅನುಸಾರ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಕೇವಲ ದಂಡ ವಿಧಿಸಲಾಗಿದೆ. ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ …

Read More »

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಮಾತು..?

ಬೆಂಗಳೂರು: ಬಳ್ಳಾರಿ ಜಿಲ್ಲೆ ತೋರಣಗಲ್‌ನಲ್ಲಿ ಜಿಂದಾಲ್‌ ಕಂಪನಿಗೆ 3,677 ಎಕರೆ ಭೂಮಿ ಪರಭಾರೆ ಮಾಡಿರುವುದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸರ್ಕಾರವನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಸಂಬಂಧ ಚರ್ಚೆ ನಡೆಸಲು ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು ಎಂದು ಶಾಸಕರು ಒತ್ತಡ ಹೇರಲು ಆರಂಭಿಸಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ, ಹೆಚ್ಚುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕೆಂಬ ವಿಷಯದಲ್ಲಿ ಕೂಡ ಶಾಸಕರು ಒಗ್ಗೂಡುತ್ತಿರುವುದು ಪಕ್ಷದಲ್ಲಿನ ಹೊಸ ಬೆಳವಣಿಗೆಯಾಗಿದೆ. ಪಕ್ಷ ಮತ್ತು ಸರ್ಕಾರದಲ್ಲಿನ ಈ …

Read More »

ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ.?

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್ ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ಡೌನ್ ಜಾರಿ ಮಾಡಿದ ನಂತರ ಕೊರೋನಾ ಸಂಕು ಇಳಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಮೇ 24 ರಿಂದ ಜೂನ್ 7 ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ಕಠಿಣ ನಿರ್ಬಂಧ ಜಾರಿಗೊಳಿಸಿದೆ. …

Read More »

ಕೋವಿಡ್‌ ಪೀಡಿತ ತಂದೆಯ ಮೃತದೇಹ ಸಾಗಾಟಕ್ಕೂ ಲಂಚದ ಹಣ: ಸಂಕಟ ಹಂಚಿಕೊಂಡ ನೃತ್ಯಪಟು

ಬೆಂಗಳೂರು: ಕೋವಿಡ್‌ ಪರೀಕ್ಷೆಯಿಂದ ಹಿಡಿದು ಮರಣ ಪ್ರಮಾಣಪತ್ರ ಪಡೆಯುವವರೆಗೆ.. ಹೆಜ್ಜೆ ಹೆಜ್ಜೆಗೂ ಸುಲಿಗೆ ಮಾಡುತ್ತಾರೆ. ಆಸ್ಪತ್ರೆಗೆ ದಾಖಲಾಗುವುದರಿಂದ ಹಿಡಿದು ಹೆಣ ಒಯ್ಯುವ ವಾಹನದವರೆಗೂ ಎಲ್ಲೆಡೆ ಚೆಲ್ಲಬೇಕು ದುಡ್ಡು. ಸಾಲ ಮಾಡಿ ₹ 4 ಲಕ್ಷ ಖರ್ಚು ಮಾಡಿದರೂ ತಂದೆಯನ್ನು ಉಳಿಸಿಕೊಳ್ಳಲಾಗಲಿಲ್ಲ. ಕೋವಿಡ್‌ನಿಂದಾಗಿ ತಂದೆಯನ್ನು (ಮಂಜುನಾಥ ಆರಾಧ್ಯ, 52) ಕಳೆದುಕೊಂಡ ಕರುಣಾಜನಕ ಕತೆಯನ್ನು ಆನೇಕಲ್‌ನ ಚೇತನ್‌ ಆರಾಧ್ಯ ಬಿಚ್ಚಿಟ್ಟದ್ದು ಹೀಗೆ. ಮಧುಮೇಹ ಉಲ್ಬಣಗೊಂಡ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿದ ತಂದೆಗೆ ಕೋವಿಡ್‌ ಕಾಣಿಸಿಕೊಂಡಿದ್ದು, …

Read More »

ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತೆ ಸಾವು

ಮಂಡ್ಯ: ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲವೇ ಗಂಟೆಗಳಲ್ಲಿ ಕೋವಿಡ್​ ಸೋಂಕಿತ ಗರ್ಭಿಣಿ ಮೃತಪಟ್ಟಿರುವ ಕರುಣಾಜನಕ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಗುಣಶ್ರೀ (35) ಸಾವಿಗೀಡಾದ ಮಹಿಳೆ. ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದ ಗುಣಶ್ರಿ, ಅರೆತಿಪ್ಪೂರಿನ ಮನೋಹರಗೌಡರಿಗೆ ಮದುವೆ ಮಾಡಿಕೊಡಲಾಗಿತ್ತು. ಗುಣಶ್ರೀ, ಮಳವಳ್ಳಿಯ ಶಾಂತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾಗಿದ್ದರು. ಮದುವೆಯಾಗಿ 4 ವರ್ಷಗಳಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಏಳೂವರೆ ತಿಂಗಳ ಗರ್ಭಿಣಿಯಾಗಿದ್ದ ಗುಣಶ್ರೀ ಅವರಿಗೆ ಇತ್ತಿಚೆಗೆ ಕರೊನಾ …

Read More »