Breaking News
Home / 2021 / ಮೇ (page 2)

Monthly Archives: ಮೇ 2021

ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ

ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ. ಆಹಾರವನ್ನು ಮಕ್ಕಳು ಮುಟ್ಟುತ್ತಿಲ್ಲ, ನಾವು ಸಹ ತಿನ್ನುತ್ತಿಲ್ಲ. ಅದು ತಿನ್ನುವುದಕ್ಕೆ ಬಾರದಂತಿದೆ ಎಂಬ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ‌ ಸಂದರ್ಭದಲ್ಲಿ …

Read More »

ಮೇ 31, ಜೂನ್ 1 ರಂದು ಸಿನಿಮಾ ಕಲಾವಿದರಿಗೆ ಉಚಿತ ಕೋವಿಡ್ ಲಸಿಕೆ

ಚಿತ್ರರಂಗದ ಸದಸ್ಯರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೇ 31 ಹಾಗೂ ಜೂನ್ 1 ರಂದು ಎರಡು ದಿನಗಳ ಕಾಲ ಸ್ಯಾಂಡಲ್‌ವುಡ್ ಇಂಡಸ್ಟ್ರಿಯ ನೋಂದಾಯಿತ ಕಲಾವಿದರಿಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜನೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನ ಕಟ್ಟಡದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ, ಸಂಸದೆ ಸುಮಲತಾ ಚಾಲನೆ ನೀಡಲಿದ್ದಾರೆ. ಈ ವೇಳೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದರ ಸಂಘದ ಕಾರ್ಯದರ್ಶಿ …

Read More »

ಮಗಳು ವಮಿಕಾ ಹೆಸರಿನ ಅರ್ಥ ಹೇಳಿದ ವಿರಾಟ್ ಕೊಹ್ಲಿ

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಜನಿಸಿದ ಎಂದು ತಿಳಿದಾಗ ಮಗುವಿಗೆ ಏನೆಂದು ಹೆಸರಿಡಬಹುದು ಎನ್ನುವ ದೊಡ್ಡ ಚರ್ಚೆಯೇ ನಡೆದಿತ್ತು. ಕುತೂಹಲದ ನಡುವೆ ಮಗಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಿದ್ದರು ತಾರಾ ದಂಪತಿ. ವಮಿಕಾ ಎಂದು ಹೆಸರಿನ ಒಳ ಅರ್ಥವೇನು? ಯಾವ ಕಾರಣದಿಂದ ಮಗಳಿಗೆ ಅನುಷ್ಕಾ-ಕೊಹ್ಲಿ ದಂಪತಿ ಈ ಹೆಸರಿಟ್ಟರು ಎನ್ನುವುದು ಅಷ್ಟೇ ಚರ್ಚೆಯಾಗಿತ್ತು. ವಿರಾಟ್ ಹೆಸರಿನಿಂದ ‘ವ’, ಅನುಷ್ಕಾ ಹೆಸರಿನಿಂದ ‘ಕಾ’ ಒಳಗೊಂಡು ವಮಿಕಾ ಆಗಿದೆ …

Read More »

ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್

ಬೆಂಗಳೂರು :ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್ ಲಾಕ್ ಡೌನ್ ಸಮಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕ್‌ಡೌನ್‌ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು . ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ . ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ . ಆ ಮೂಲಕ ಅವರು ಸಪ್ತಪದಿ ತುಳಿದಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಂತಾಗಿದೆ . ಮೊನ್ನೆಯಷ್ಟೇ …

Read More »

ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್​ಮಾಲ್

ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ. ನೀರು ಮಿಶ್ರಿತ ಹಾಲು …

Read More »

ಸೆಖೆಯಾಗ್ತಿದೆ ಎಂದು ಮನೆಯ ಹೊರಗೆ ಹೋದವ ಶವವಾಗಿ ಪತ್ತೆ! ಬೆಚ್ಚಿಬೀಳಿಸುತ್ತೆ ನಿನ್ನೆ ರಾತ್ರಿಯ ಘಟನೆ

ರಾಯಚೂರು: ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ. ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ …

Read More »

ಶಾಸಕ ಪಿ.ರಾಜೀವ್ ವಿರುದ್ಧ ಸಂವಸುದ್ದಿ ಗ್ರಾಮಸ್ಥರು ಆಕ್ರೋಶ: ಸಂವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ 70 ಮಂದಿ ಸಾವು

ಬೆಳಗಾವಿ: ಮಹಾಮಾರಿ ಕೊರೊನಾ ಎಲ್ಲೆಡೆ ತನ್ನ ಕಬಂದ ಬಾಹುಗಳನ್ನು ಚಾಚುತ್ತ ಸಾಗಿದೆ. ಕೊರೊನಾಗೆ ಬಲಿಯಾಗುವವರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನು ಒಂದು ಕಡೆ ಕೊರೊನಾ ನರಕ ತೋರಿಸುತಿದ್ರೆ ಮತ್ತೊಂದೆಡೆ ಇತರ ಖಾಯಿಲೆಗಳಿಗೆ ಬಲಿಯಾಗುತ್ತಿರುವ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಸದ್ಯ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಸಂವಸುದ್ದಿ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ 80 ಜನ ಬಲಿಯಾಗಿದ್ದಾರೆ. 80 ಜನರ ಪೈಕಿ 10 ಜನರು ಕೊರೊನಾ ಸೋಂಕಿಗೆ ಬಲಿಯಾದ್ರೆ ಉಳಿದ …

Read More »

ಉದ್ಯೋಗ ಖಾತ್ರಿ ಯೋಜನೆಯಿಂದ ವಂಚಿತರಾದ ಆಶ್ರಯ ಮನೆಯ ಜನ; ಕೆಲಸವಿಲ್ಲದೆ ಗ್ರಾಮಸ್ಥರ ಪರದಾಟ

ಬೀದರ್: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಪರಿಸ್ಥಿತಿಯನ್ನು ಸುಧಾರಿಸಲು ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಇನ್ನಿತರ ದಿನಗೂಲಿಕಾರರು ನಿತ್ಯ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಸಾವಿರಾರು ಜನರಿಗೆ ಕೆಲಸ ಕೊಟ್ಟಿದೆ. ಆದರೆ ಬೀದರ್ ಜಿಲ್ಲೆಯ ಆಶ್ರಯ ಮನೆಯಲ್ಲಿ ವಾಸ ಮಾಡುವ ನೂರಾರು ಕುಟುಂಬಗಳು ಈ ಯೋಜನೆಯಿಂದ ದೂರ ಉಳಿದಿದ್ದು, ಕೆಲಸ ವಿಲ್ಲದೇ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. …

Read More »

ಸರ್ಕಾರಿ ಶಿಕ್ಷಕರ ವೇತನ ಕಡಿತಗೊಳಿಸಿ ಖಾಸಗಿ ಶಿಕ್ಷಕರಿಗೆ ಪ್ಯಾಕೇಜ್

ಬೆಂಗಳೂರು: ರಾಜ್ಯದ ಅನುದಾನರಹಿತ ಶಾಲಾ- ಕಾಲೇಜು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ಚಿಂತಿಸಿದ್ದು, ಈ ನಿಟ್ಟಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಪಿಯು ಉಪನ್ಯಾಸಕರ ಕೆಲವು ದಿನಗಳ ವೇತನ ಕಡಿತಗೊಳಿಸಿ ಆ ಹಣದಿಂದ ಪ್ಯಾಕೇಜ್ ನೀಡುವ ಬಗ್ಗೆ ಸಚಿವ ಎಸ್.ಸುರೇಶ್ ಕುಮಾರ್‌ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರ ಬರೆದಿರುವ ಅವರು, ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ವಿವಿಧ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಶಂಕಿತ ಅಭ್ಯರ್ಥಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಭಾಗಿಯಾಗಿರುವ ಅಶ್ಲೀಲ ಸಿಡಿ ಪ್ರಕರಣದ ಶಂಕಿತ ಆರೋಪಿಗಳು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್​ ಜೂನ್ 2ಕ್ಕೆ ಮುಂದೂಡಿದೆ. ಈ ಸಂಬಂಧ ಸಿಟಿ ಸಿವಿಲ್ ಕೋರ್ಟ್​ನ 91ನೇ ಕೋರ್ಟ್​ ಆದೇಶ ನೀಡಿದೆ. ಬ್ಲಾಕ್​ಮೇಲ್ ಸಂಬಂಧ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳಾದ ನರೇಶ್​ ಗೌಡ ಮತ್ತು ಶ್ರವಣ್ ಈ ಸಂಬಂಧ​ ನ್ಯಾಯಾಲಯದ …

Read More »