Breaking News
Home / 2021 / ಮೇ (page 31)

Monthly Archives: ಮೇ 2021

ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು.

ಬೆಳಗಾವಿ –  ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಶುಕ್ರವಾರ ಆಟೋ ಚಾಲಕರಿಗೆ ರೇಷನ್ ಕಿಟ್ ಗಳನ್ನು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಯಿತು. ಈ ಕೊರೋನಾ ಸಂದರ್ಭದಲ್ಲಿ ಯಾವುದೇ ದುಡಿಮೆಯಿಲ್ಲದೆ ಜನ ಪರಿತಪಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕಿಂಚಿತ್ ಸಹಾಯವಾಗಲಿ ಎನ್ನುವ ಉದ್ದೇಶದಿಂದ ಲಕ್ಷ್ಮಿ ತಾಯಿ ಫೌಂಡೇಶನ್  ಈ ನೆರವು ನೀಡುತ್ತಿದೆ. ಆಸ್ಪತ್ರೆಯಲ್ಲಿರುವ ಎಷ್ಟೋ ರೋಗಿಗಳಿಗೆ, ಅವರ ಸಹಾಯಕರಿಗೆ ಆಹಾರ, ನೀರು ಸಿಗುತ್ತಿಲ್ಲ. ಹಾಗಾಗಿ ಅವರಿಗೆ ಆಹಾರದ ಕಿಟ್ , ನೀರಿನ ಬಾಟಲ್, ಮಾತ್ರೆಯ ಕಿಟ್ …

Read More »

ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.: B.S.Y.

ಬೆಂಗಳೂರು – ರಾಜ್ಯದಲ್ಲಿ ಜೂನ್ 7ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಿರಿಯ ಸಚಿವರ ಸಭೆಯ ನಂತರ ಈ ವಿಷಯ ತಿಳಿಸಿದ್ದಾರೆ. ಹಳ್ಳಿಗಳಿಗೆ ಹರಡಿರುವುದರಿಂದ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಠಿಣ ನಿರ್ಧಾರ ಇನಿವಾರ್ಯ ಎಂದು ಅವರು ತಿಳಿಸಿದ್ದಾರೆ. ಮೇ 14ರಿಂದ ಇನ್ನೂ 14 ದಿನ ಲಾಕ್ ಡೌನ್ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ. ಈಗಿನ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದೇ ಮುಂದುವರಿಯಲಿದೆ.

Read More »

ಪಾಸಿಟಿವ್ ಆಗಿದ್ದರೂ ಊರಲ್ಲಿ ಸುತ್ತಾಟ – ವ್ಯಕ್ತಿಯ ವಿರುದ್ಧ ಕೇಸ್ ದಾಖಲು

ಮಡಿಕೇರಿ: ಕೊಡಗಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ವ್ಯಕ್ತಿಯೋರ್ವ ಗ್ರಾಮ ಮತ್ತು ನಗರಪ್ರದೇಶದಲ್ಲಿ ಸುತ್ತಾಡುತ್ತಿರುವುದರ ಬಗ್ಗೆ ಕೇಳಿ ಬಂದ ದೂರಿನ ಮೇರೆಗೆ ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡಿಕೇರಿ ತಾಲೂಕಿನ ಕಾಲೂರು ಗ್ರಾಮದ ನಿವಾಸಿ ಗಣೇಶ್ ಎಂಬುವವರಿಗೆ ಕಳೆದ ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿತ್ತು. ಬಳಿಕ ಅವರನ್ನು ಮಡಿಕೇರಿ ಸಮೀಪ ಇರುವ ನವೋದಯ ಶಾಲೆ ಕೋವಿಡ್ …

Read More »

ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನ ನೆಪದಲ್ಲಿ ಆರೋಗ್ಯ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿವೆ ಎಂಬ ಆರೋಪಗಳ ಮಧ್ಯೆ ಹಿರಿಯ ಆರೋಗ್ಯಾಧಿಕಾರಿ ಹಣ ಹಾಗೂ ರೆಮ್ಡಿಸಿವಿರ್ ಔಷಧಿಗಳಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.   ಮೇ 13 ಹಾಗೂ ಮೇ 14 ರಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅವರ ಚಿಕ್ಕಬಳ್ಳಾಪುರ ಜಿಲ್ಲೆಯ ಭೇಟಿಯ ಸಮಯದಲ್ಲಿ ಜೊತೆಗಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು …

Read More »

ಹಳ್ಳಿಗಳಲ್ಲಿ ಕೊರೋನಾ 2ನೇ ಅಲೆ ಹರಡಲು ಸರ್ಕಾರದ ವೈಫಲ್ಯವೇ ಕಾರಣ : ಸಿದ್ದು

ಬೆಂಗಳೂರು, ಮೇ 21- ಕೊರೋನಾ 2ನೇ ಅಲೆ ಬಹಳ ವೇಗವಾಗಿ ಹರಡುತ್ತಿದೆ. ಮೊದಲನೆ ಅಲೆ ನಗರ ಪ್ರದೇಶದಲ್ಲಿ ಇತ್ತು. ಎರಡನೇ ಅಲೆ ಗ್ರಾಮೀಣ ಪ್ರದೇಶಕ್ಕೂ ಹಬ್ಬಿದೆ. ಸರ್ಕಾರದ ವೈಪಲ್ಯವೇ ಇದಕ್ಕೆ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಜೀವ್ ಗಾಂಧಿ ಪುಣ್ಯಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಲೂ ಸರ್ಕಾರ ಎಚ್ಚೆತ್ತುಕೊಂಡು ಪರೀಕ್ಷೆಗಳನ್ನು ಸರಿಯಾಗಿ ಮಾಡುತ್ತಿಲ್ಲ, ವೈದ್ಯಕೀಯ ವ್ಯವಸ್ಥೆ ಸರಿ ಮಾಡಿಲ್ಲ. ಸುಳ್ಳು ಹೇಳುವುದೇ …

Read More »

ಬೀದಿ ಬೀದಿಯಲ್ಲಿ ನಿಮಗೆ ಕಲ್ಲು ಹೊಡೀತಾರೆ ಹುಷಾರ್ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ಯಾರಿಗೆ ಗೊತ್ತಾ..?

ಬೆಳಗಾವಿ : ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಅವರು ಕೊರೊನಾ ಮೃತರ ಲೆಕ್ಕವನ್ನು ರಾಜ್ಯದ ಜನರಿಗೆ ತಪ್ಪಾಗಿ ನೀಡುತ್ತಿದ್ದಾರೆ. ಇದೇ ಲೆಕ್ಕವನ್ನು ಚಿಕ್ಕಬಳ್ಳಾಪುರ ಜನರ ಎದುರಿಗೆ ಹೇಳಿದರೆ ಅಲ್ಲಿನ ಜನ ಸಚಿವರನ್ನು ಪೊರಕೆಯಿಂದ ಹೊಡೆಯುತ್ತಾರೆ ಎಂದು ಕೆಪಿಸಿಸಿ ವಕ್ತಾರೆ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾತಾನಾಡಿದ ಅವರು, ಚಿಕ್ಕಬಳ್ಳಾಪುರಕ್ಕೆ‌ ಹೋಗಿ ಡಾ. ಕೆ.ಸುಧಾಕರ್ ಕೋವಿಡ್ ಸಾವಿನ ಲೆಕ್ಕ‌ ಹೇಳಲಿ. ಚಿಕ್ಕಬಳ್ಳಾಪುರ ಜನ ಅವರನ್ನು …

Read More »

ಬಿಜೆಪಿಯವರಿಗೆ ಲಸಿಕೆ ಮೇಲೆ ನಂಬಿಕೆ ಇರಲಿಲ್ಲ, ಅದಕ್ಕೆ ಮೊದಲು ಮೋದಿ ಪಡೆದಿಲ್ಲ: ಡಿ.ಕೆ.ಶಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಲಸಿಕೆ ನೀಡುವುದನ್ನು ವಿರೋಧಿಸಿಲ್ಲ. ಪೂರ್ಣ ಪ್ರಮಾಣದಲ್ಲಿ ಪರೀಕ್ಷಿಸದೆ, ಅದನ್ನು ಬಡ ಆಶಾ ಕಾರ್ಯಕರ್ತೆಯರು ಸೇರಿದಂತೆ ಕೋವಿಡ್ ವಾರಿಯರ್ಸ್ ಗಳಿಗೆ ನೀಡುವುದನ್ನು ಮಾತ್ರ ಪ್ರಶ್ನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಲಸಿಕೆ ಬಗ್ಗೆ ಬಿಜೆಪಿಯವರಿಗೆ ನಂಬಿಕೆ ಇರಲಿಲ್ಲ. ಹೀಗಾಗಿ ಮೊದಲು ಪ್ರಧಾನ …

Read More »

ಜಿಯೋ ನೀಡುತ್ತಿದೆ ಅತ್ಯಂತ ಕಡಿಮೆ ದರದ ಇಂಟರ್ ನೆಟ್ ಪ್ಲ್ಯಾನ್..! ಮಾಹಿತಿ ಇಲ್ಲಿದೆ

ನವ ದೆಹಲಿ : ಟೆಲಿಕಾಮ್ ನೆಟ್ ವಕರ್ಗಳಲ್ಲಿಯೇ ದೈತ್ಯ ಸಂಸ್ಥೆ ಜಿಯೋ ಮತ್ತೊಂದು ಹೊಸ ಗ್ರಾಹಕ ಸ್ನೇಹಿ ಯೋಜನೆಯೊಂದನ್ನು ಜಾರಿಗೆ ತಂದಿದೆ. ಟೆಲಿಕಾಮ್ ನೆಟ್ ವರ್ಕ್ ನಲ್ಲಿ ಭಾರಿ ಪೈಪೋಟಿ ನಡೆಯುತ್ತಿರುವ ಈ ಸಂದರ್ಭದಲ್ಲಿ ಗ್ರಾಹಕರ ಮನಸ್ಸನ್ನು ಸೆಳೆಯುವ ಉದ್ದೇಶದಿಂದ ರಿಲಯನ್ಸ್ ಜಿಯೋ 100 ರೂ.ಗಿಂತ ಕಡಿಮೆ ಮೊತ್ತದ ಅನೇಕ ಕೈಗೆಟುಕುವ ರಿಚಾರ್ಜ್ ಪ್ಲ್ಯಾನ್ ನೀಡುತ್ತಿದೆ. ಆ ಪೈಕಿ ಜಿಯೋ ಹೊಸದಾಗಿ ಮತ್ತೆರಡು ಪ್ಲ್ಯಾನ್ ಜಾರಿಗೆ ತಂದಿದೆ. ಹೌದು, ಕೇವಲ …

Read More »

ಪ್ರಧಾನಿ ಮೋದಿಗೆ ಅವಮಾನ ಮಾಡಿದ ಯುವಕ ಅರೆಸ್ಟ್.?

ಹಾಸನ: ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಪುರಲೇಹಳ್ಳಿ ಗ್ರಾಮದಲ್ಲಿ ಪ್ರಧಾನಿ ಮೋದಿ ಅವರಿಗೆ ಅವಮಾನ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಧಾನಿ ಮೋದಿ ಮಾಸ್ಕ್ ಹಾಕಿಲ್ಲ. ಆದರೆ, ಬೇರೆಯವರಿಗೆ ಮಾಸ್ಕ್ ಹಾಕಿ ಎಂದು ಹೇಳುತ್ತಾರೆ ಎನ್ನುವ ಮೂಲಕ ಯುವಕ ಅವಮಾನ ಮಾಡಿದ್ದಾನೆ. ಮೋದಿಯವರ ಮಾಸ್ಕ್ ಸಂದೇಶದ ಫೋಟೋ ಬಳಿ ಯುವಕನಿಗೆ ಪ್ರಚೋದನೆ ನೀಡಿ ಪ್ರಧಾನಿಯವರಿಗೆ ಅವಮಾನಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು …

Read More »

ತಿಂಗಳಾಂತ್ಯದವರೆಗೂ ಲಾಕ್ ಆಗಲಿದೆ ಕರುನಾಡು.!

ದಾವಣಗೆರೆ: ಕೊರೊನಾ ಅಟ್ಟಹಾಸ ನಿಯಂತ್ರಿಸಲು ರಾಜ್ಯದಲ್ಲಿ ಮೇ 24ರ ಬಳಿಕವೂ ಲಾಕ್ ಡೌನ್ ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಬಹುತೇಕ ಸಚಿವರು ಒಲವು ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಇಚ್ಛೆ ಕೂಡ ಅದೇ ಆಗಿದೆ. ಮೇ 22 ಅಥವಾ 23ರಂದು ಲಾಕ್ ಡೌನ್ ನಿರ್ಧಾರ ಪ್ರಕಟವಾಗಲಿದೆ ಎಂದರು.   ಗ್ರಾಮೀಣ ಪ್ರದೇಶಕ್ಕೂ …

Read More »