Breaking News
Home / 2021 / ಮೇ (page 34)

Monthly Archives: ಮೇ 2021

ಕೋವಿಡ್ ಲಾಕ್ ಡೌನ್ ನಿಯಮ ಉಲ್ಲಂಘನೆ; ಸಿಎಂ ಪುತ್ರ ಬಿವೈ ವಿಜಯೇಂದ್ರ ವಿರುದ್ಧ ಎಫ್‌ಐಆರ್ ಗೆ ಒತ್ತಡ

ಮೈಸೂರು: ಕೋವಿಡ್ ತಡೆಯುವುದಕ್ಕಾಗಿ ಕಟ್ಟುನಿಟ್ಟಾದ ಲಾಕ್‌ಡೌನ್ ವಿಧಿಸಿದ್ದರು, ಈ ನಿ‌ಯಮ ಉಲ್ಲಂಘಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ನಡೆದುಕೊಂಡಿರುವ ಕಾರಣ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಒತ್ತಾಯಿಸಿದೆ. ವೈ.‌ ವಿಜಯೇಂದ್ರ ಮೇ 18ರಂದು ಕುಟುಂಬ ಸಮೇತರಾಗಿ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದರು. ವಿಶೇಷ ಪೂಜೆ ಹಾಗೂ ಹೋಮ ನಡೆಸಿದ್ದರು. ಇದು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಕಾಯ್ದೆ 2005, ಸೆಕ್ಷನ್ …

Read More »

ವೈದ್ಯೆಯಿಂದ ವ್ಯಾಕ್ಸಿನ್ ಕಳ್ಳ ದಂಧೆ – ಪೊಲೀಸರ ಬಲೆಗೆ ಗ್ಯಾಂಗ್

ಬೆಂಗಳೂರು: ಹಲವರು ವ್ಯಾಕ್ಸಿನ್‍ಗಾಗಿ ದಿನಗಟ್ಟಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇನ್ನೂ ಹಲವರು ಮೂರ್ನಾಲ್ಕು ದಿನ ಆಸ್ಪತ್ರೆಗೆ ಅಲೆದರೂ ವ್ಯಾಕ್ಸಿನ್ ಖಾಲಿ ಆಗಿದೆ 3 ದಿನ ಬಿಟ್ಟು ಬನ್ನಿ ಎಂದೇ ಹೇಳುತ್ತಿದ್ದಾರೆ. ಆದರೆ ಬೆಂಗಳೂರಿನ ವೈದ್ಯೆಯೊಬ್ಬಳು ಕಳ್ಳ ಮಾರ್ಗದಲ್ಲಿ ವ್ಯಾಕ್ಸಿನ್ ನೀಡಿದ್ದಾರೆ. ಈ ಕುರಿತು ಭಯಾನಕ ಸತ್ಯ ಇದೀಗ ಹೊರ ಬಿದ್ದಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸರು ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಮಂಜುನಾಥನಗರದ ಪ್ರಾಥಮಿಕ …

Read More »

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ. ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಚಾಮರಾಜನಗರ: ಮನೆಯಲ್ಲಿ ಪತಿ ಇಲ್ಲದ ವೇಳೆ ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ ಗಂಡನಿಗೆ ಗೊತ್ತಾಗದ್ದಂತೆ ಸರಸ-ಸಲ್ಲಾಪದಲ್ಲಿ‌ ತೊಡಗುತ್ತಿದ್ದಳು. ಸುಮಾರು ದಿನವಾದರೂ ಗಂಡನಿಗೆ ಪತ್ನಿಯ ಮೋಸ ಅರಿವಿಗೆ ಬರಲೇ ಇಲ್ಲ. ಆದರೆ ಗ್ರಾಮದಲ್ಲಿ ಗುಸು-ಗುಸು ಎದ್ದಿತ್ತು. ಈ ನಡುವೆ ಪ್ರೇಯಸಿಗೆ ಮುತ್ತಿಡುವಾಗ ಪ್ರಿಯಕರ ಕ್ಲಿಕ್ಕಿಸಿದ ಫೋಟೋ ಅಕ್ರಮ ಸಂಬಂಧದ ಗುಟ್ಟನ್ನು ರಟ್ಟು ಮಾಡಿಬಿಟ್ಟಿತ್ತು. ಮುತ್ತಿಟ್ಟ ಫೋಟೋವನ್ನು ವಾಟ್ಸ್​ಆಯಪ್​ ಸ್ಟೇಟಸ್​ಗೆ ಹಾಕಿಕೊಂಡ ಪ್ರಿಯಕರ ಪ್ರೇಯಸಿ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಇಂತಹ ಘಟನೆ …

Read More »

ರಾಯಚೂರು ವಿದ್ಯುದಾಗಾರದಲ್ಲಿ ಕೊರೊನಾಘಾತ: 5 ಮಂದಿ ಕೊರೊನಾಗೆ ಬಲಿ; ಆಡಳಿತ ಮಂಡಳಿ ನಿರ್ಲಕ್ಷ್ಯ, ಆತಂಕ ಇನ್ನೂ ಅಧಿಕ

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಮೇಲೆ ‌ಕೊರೊನಾ ಕರಿ ನೆರಳು ಬೀರಿದೆ. ಕೊರೊನಾ ಆತಂಕದಲ್ಲೇ ಕೆಲಸ ಮಾಡುತ್ತಿರುವ ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ನೌಕರರು ಕೊರೊನಾ 2ನೇ ಅಲೆಯಿಂದಾಗಿ ಬೆಚ್ಚಿಬಿದ್ದಿದ್ದಾರೆ. ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆಯಿಂದಾಗಿ ನೌಕರರಲ್ಲಿ ಕೊರೊನಾ ಆತಂಕ ಇನ್ನೂ ಅಧಿಕವಾಗಿದೆ. ಕೊರೊನಾ ಪಾಸಿಟಿವ್ ಆದ ಆರ್‌ಟಿಪಿಎಸ್‌ನ ನಾಲ್ವರು ಉದ್ಯೋಗಿಗಳು ಕೊವಿಡ್ ಗೆ ಬಲಿಯಾಗಿದ್ದಾರೆ. ಒಟ್ಟು ಒಂದು ತಿಂಗಳ ಅಂತರದಲ್ಲಿ ಐದು ಮಂದಿ ನೌಕರರು ಕೊವಿಡ್ ಗೆ ಬಲಿಯಾಗಿದ್ದಾರೆ. …

Read More »

ಡಿಸಿಎಂ ಹೋದ 10 ನಿಮಿಷದ ನಂತರ ಧರೆಗುರುಳಿದ ಮರ: ಅಪಾಯದಿಂದ ಪಾರು

ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ವರ್ಷಧಾರೆ ಸುರಿಯಿತು. ನಗರದಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಸುರಿದ ಮಳೆಗೆ ಹಲವೆಡೆ ರಸ್ತೆಗಳು ಕೆರೆ, ಕಾಲುವೆಗಳಂತೆ ತುಂಬಿಕೊಂಡಿದ್ದವು. ಇದೇ ವೇಳೆ ಜೆಎಲ್‌ಬಿ ರಸ್ತೆಯಲ್ಲಿ ಎಸ್‌ಡಿಎಂ ಕಾಲೇಜು ಮುಂಭಾಗದ ರಸ್ತೆಯಲ್ಲೇ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಬರುವ ಐದತ್ತು ನಿಮಿಷಗಳ ಅಂತರದಲ್ಲೇ ಮರವೊಂದು ಧರೆಗುರುಳಿದೆ. ಸಕಾಲಕ್ಕೆ ಆಗಮಿಸಿದ ಅಭಯ-೧ ತಂಡದ ಮಂಜುನಾಥ್ ಡಿ, ಪ್ರಭು,ಮಹದೇವ್,ಸುರೇಂದ್ರ, ಮನು, ವಿಕ್ರಂ ಮರವನ್ನು …

Read More »

ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ

ವಿಜಯನಗರ: ಲಾಕ್​ಡೌನ್​ ಸಂದರ್ಭದಲ್ಲಿ ಅನಗತ್ಯವಾಗಿ ಹೊರ ಬಂದವರನ್ನು ಬಿಡಿಸಲು ಬಂದ ಕುಟುಂಬಸ್ಥರಿಗೆ ಪೊಲೀಸ್​ ಇನ್ಸ್​ಪೆಕ್ಟರ್​ ಕೈ ಮುಗಿದ ಬೇಡಿಕೊಂಡ ಘಟನೆ ಹೊಸಪೇಟೆಯ ಉದ್ಯೋಗ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಸರ್​ ನನ್ನ ತಮ್ಮನನ್ನು ಬಿಟ್ಟುಬಿಡಿ ಎಂದು ವ್ಯಾಪಾರಿಯೊಬ್ಬರು ಕೇಳಿಕೊಂಡು ಬಂದಿದ್ದರು. ಈ ವೇಳೆ ಮಾತನಾಡಿದ ಇನ್ಸ್​ಪೆಕ್ಟರ್​, ದಯಮಾಡಿ ನಿಮಗೆ ಕೈ ಮುಗಿದು ಕೇಳುವೆ ಜನರನ್ನು ಬದುಕಿಸಿ ಎಂದರು. ನಿಮಗೆ ದುಡ್ಡು ಬೇಕು, ನಮಗೆ ಜನ ಬೇಕು. ನಾವು ಕೂಡ ಹೆಂಡತಿ …

Read More »

ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ :B.S.Y.

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾಗಿರುವ ನಿರ್ಬಂಧಗಳ ಬೆನ್ನಲ್ಲೇ ರಾಜ್ಯ ಸರಕಾರ ಭರ್ಜರಿ ಪ್ಯಾಕೇಜ್ ಘೋಷಣೆ ಮಾಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಸಾಲ ಮರುಪಾವತಿದಾರರಿಗೆ ಬಿಗ್ ರಿಲೀಪ್ ಕೊಟ್ಟಿದ್ದು, ಮೂರು ತಿಂಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿ ನೀಡಿದೆ. ರೈತರು ಹಾಗೂ ಸ್ವಸಹಾಯ ಸಂಘಗಳಿಂದ ಸಾಲ ಪಡೆದಿರುವವರಿಗೆ ಸಾಲದ ಕಂತುಗಳ ಮರು ಪಾವತಿಗೆ ಮೂರು ತಿಂಗಳ ಕಾಲ ಅವಕಾಶವನ್ನು ಕಲ್ಪಿಸಿದೆ. ಜುಲೈ ಅಂತ್ಯದ ವರೆಗೆ ಸಾಲದ …

Read More »

ಸಿ ಟಿ ರವಿ ವಿರುದ್ದ ಕಾಂಗ್ರೆಸ್‌ ನಿಂದ ಪೋಲೀಸ್‌ ದೂರು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್‌ ವಿರುದ್ಧ ಆಧಾರರಹಿತ ಆರೋಪ ಮಾಡಿದ್ದು, ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಹನುಮಂತ ನಗರ ಬ್ಲಾಕ್ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಸಿ.ತೇಜೇಶ್ ಕುಮಾರ್ ಹೈಗ್ರೌಂಡ್ಸ್‌ ಠಾಣೆಗೆ ದೂರು ನೀಡಿದ್ದಾರೆ. ‘ಸಿ.ಟಿ.ರವಿ ಅವರು ಕೊರೊನಾ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಪಕ್ಷದ ವಿರುದ್ಧ ಹಲವು ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ …

Read More »

ಆಕ್ಸಿಜನ್ ದುರಂತ: ಚಾಮರಾಜನಗರ ಡಿಸಿ ಡಾ.ಎಂ.ಆರ್‌.ರವಿ ಎತ್ತಂಗಡಿ

ಚಾಮರಾಜನಗರ: ಜಿಲ್ಲೆಯಲ್ಲಿ ನಡೆದ ಆಕ್ಸಿಜನ್ ದುರಂತಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರನ್ನು ಹೊಣೆಯಾಗಿಸಿ ಸ್ಥಳ ನೀಡದೇ ಸರ್ಕಾರ ಅವರನ್ನು ಎತ್ತಂಗಡಿ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಫೆ‌.13ರಂದೇ ಚಾಮರಾಜನಗರ ಡಿಸಿ ರವಿ ಅವರನ್ನು ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಡಾ.ಬಿ‌.ಸಿ.ಸತೀಶ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ ಬಳಿಕ ಕೆಲವು ಬೆಳವಣಿಗೆಗಳು ನಡೆದು ರವಿ ಗಡಿಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಮುಂದುವರೆದಿದ್ದರು. ದುರಂತ ನಡೆದ ಬಳಿಕ ನಡೆದ ನ್ಯಾಯಾಂಗ ತನಿಖೆಯಲ್ಲಿ …

Read More »

ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್

ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಯಾವುದೇ ವೈದ್ಯಕೀಯ ಸಿಬ್ಬಂದಿಯ ಇರುವಿಕೆಯ ಹೊರತಾಗಿ, ಕೊರೊನಾ ಪರೀಕ್ಷೆಯನ್ನು ನಾವೇ ಮಾಡಿಕೊಳ್ಳಬಹುದು. ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಇಂದು (ಮೇ 19) ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್​ನ ಬಗ್ಗೆ ವಿವರಣೆ ನೀಡಿದೆ. ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ …

Read More »