Breaking News
Home / 2021 / ಮೇ (page 40)

Monthly Archives: ಮೇ 2021

ಶರಣ್ ನಟನೆಯ ‘ಗುರು ಶಿಷ್ಯರು’ ಚಿತ್ರದ ನಾಯಕಿಯ ಫಸ್ಟ್ ಲುಕ್ ರಿಲೀಸ್

ಡೇಶ್ ಕುಮಾರ್ ಹಂಪಿ ನಿರ್ದೇಶನದ ಶರಣ್ ಅಭಿನಯದ ‘ಗುರು ಶಿಷ್ಯರು’ ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸುತ್ತಿದ್ದು, ಇಂದು ಅವರ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಅವರ ಹುಟ್ಟುಹಬ್ಬದ ಪ್ರಯುಕ್ತ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಉಡುಗೊರೆಯಾಗಿ ನೀಡಿದ್ದಾರೆ. ಈ ಪೋಸ್ಟರ್ ನಲ್ಲಿ ನಿಶ್ವಿಕಾ ನಾಯ್ಡು ಲಂಗ ದಾವಣಿಯನ್ನುಟ್ಟುಕೊಂಡಿದ್ದು ಸೈಕಲ್ ಸವಾರಿ ಮಾಡುತ್ತಿದ್ದಾರೆ. ಈ ಹಿಂದೆ ಮಾಡಿದ ಎಲ್ಲಾ ಸಿನಿಮಾಗಳಿಗಿಂತ ನಿಶ್ವಿಕಾ ನಾಯ್ಡು ಹೊಸ ಲುಕ್ …

Read More »

ಬೈಕ್ ರೈಡರ್ಸ್ ಸಹೋದರರು ಇದೀಗ ಅಂಬುಲೆನ್ಸ್ ಡ್ರೈವರ್ಸ್

ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಜನ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರ ಕಷ್ಟವನ್ನು ನೋಡಲಾಗದೆ ನಗರದ ಇಬ್ಬರು ಹವ್ಯಾಸಿ ಬೈಕ್ ರೈಡರ್ಸ್ ಸಹೋದರರು ಅಂಬುಲೆನ್ಸ್ ಡ್ರೈವರ್‍ ಗಳಾಗಿ ಜನರ ಸಹಾಯಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಸಹೋದರರಾದ ಮುರ್ತಾಜಾ ಜುನೈದ್ ಮತ್ತು ಮುತೀಬ್ ಜೊಹೆಬ್ ಹವ್ಯಾಸಿ ಬೈಕ್ ರೈಡರ್ಸ್ ಆಗಿ ಹಲವು ಊರುಗಳನ್ನು ಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ಎರಡನೇ ಅಲೆಯಿಂದ ಜನ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಜನರ ಸೇವೆ ಮಾಡಲು …

Read More »

ಒತ್ತಡಕ್ಕೆ ಮಣಿದು ಕಾಟಾಚಾರಕ್ಕೆ ಪ್ಯಾಕೇಜ್ ಘೋಷಣೆ, ಕಳೆದ ವರ್ಷ ಘೋಷಣೆ ಮಾಡಿದ್ದೇ ಯಾರ ಕೈಸೇರಿಲ್ಲ: ಡಿಕೆಶಿ

ಬೆಂಗಳೂರು: ಕಳೆದ ಬಾರಿ ಹೀಗೆ ಲಾಕ್‍ಡೌನ್ ಪ್ಯಾಕೇಜ್ ಘೋಷಣೆ ಮಾಡಿದರು. ಸರಿಯಾಗಿ ಹಣ ಕೊಡಲಿಲ್ಲ. ಈಗ ಸರಿಯಾಗಿ ಪ್ಯಾಕೇಜ್ ಹಂಚಿಕೆ ಮಾಡ್ತಾರೆ ಅನ್ನೋ ಗ್ಯಾರಂಟಿ ಇಲ್ಲಾ ಎಂದು ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಸಾವಿರ ಪಂಚಾಯ್ತಿ ಮೂಲಕ ಕೊಡಬೇಕು. ಇದು ಕೊಡಬೇಕು ಅಂತ ಕೊಟ್ಟಿರೋದಲ್ಲ. ನಾವೆಲ್ಲಾ ಒತ್ತಾಯ ಮಾಡಿದೆವು ಅಂತ ಏನೋ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಬಡವರ ಬಗ್ಗೆ …

Read More »

ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಣೆ ಸರ್ಕಾರ ಮಾಡಿದೆ. ಕೆಲವಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕೊಡಲಾಗಿತ್ತು …

Read More »

ಕಾರವಾರ: ದೇವರ ಮುಂದೆ ಮಗುವಿನ ಶವ ಕೊಂಡೊಯ್ದ ಅಜ್ಜಿ ; ಬದುಕಿಸು ಎಂದು ಪ್ರಾರ್ಥಿಸಿದಳು

ಕಾರವಾರ: cವಿನ ಗಂಟಲಲ್ಲಿ ಶೇಂಗಾ ಬೀಜ ಸಿಲುಕಿ ಉಸಿರುಗಟ್ಟಿ ಮೃತಪಟ್ಟ ನಂತರ , ಆತನ ಅಜ್ಜಿ ಗಣಪತಿ ದೇವಸ್ಥಾನಕ್ಕೆ ತೆರಳಿ, ಮಗುವಿನ ಶವವಿಟ್ಟು , ಬದುಕಿಸುವಂತೆ ಪ್ರಾರ್ಥಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮಂಗಳವಾರ ಯಲ್ಲಾಪುರದ ಗಣಪತಿ ಗಲ್ಲಿಯಲ್ಲಿ ದೇವಸ್ಥಾನದಲ್ಲಿ ಈ ಮನ ಕಲಕುವ ಘಟನೆ ನಡೆಯಿತು. ಮಗು ಸಾವನ್ನಪ್ಪಿದ ತಕ್ಷಣ ದಿಕ್ಕೇ ತೋಚದ ಮಗುವಿನ ಅಜ್ಜಿ, ಸಮೀಪದ ದೇವಸ್ಥಾನಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಿ , ದೇವಸ್ಥಾನದ …

Read More »

ಗದಗ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಮಹಿಳೆ ಬಲಿ; ಸಂಬಂಧಿಕರ ಆರೋಪ

ಗದಗ: ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಉಸಿರಾಟ ಸಮಸ್ಯೆಯಿಂದ ಒದ್ದಾಡುತ್ತಿದ್ದ ಸುಮಿತ್ರಾ ಮನ್ನೂರ ಎಂಬ ಮಹಿಳೆ ಆಕ್ಸಿಜನ್ ಸಿಗದೆ ಮಹಿಳೆ ನರಳಿ ನರಳಿ ಮೃತಪಟ್ಟಿದ್ದಾರೆ ಎಂದು ಮಹಿಳೆ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಮಹಿಳೆ ಆಕ್ಸಿಜನ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಸಿಜನ್ ತೆಗೆದು ಬೇರೆ ಮಷಿನ್ನನ್ನು ಅಳವಡಿಸಲು ಆಸ್ಪತ್ರೆ ಸಿಬ್ಬಂದಿ ಬಂದಿದ್ದರು. ಅಲ್ಟ್ರನೇಟಿವ್ ಆಕ್ಸಿಜನ್ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರು ಗೋಗರೆದರೂ ಆಸ್ಪತ್ರೆ …

Read More »

ಕೊಪ್ಪಳ ಸಂಪೂರ್ಣ ಲಾಕ್​ಡೌನ್​: ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿ ಪರದಾಟ

ಕೊಪ್ಪಳ: ಕೊರೊನಾ ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 17 ರಿಂದ 21ರ ವರೆಗೆ ಅಂದರೆ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಘೋಷಣೆಯಾಗಿದೆ. ಹೀಗಾಗಿ ಯಾವುದೇ ಆಟೋಗಳು ಜಿಲ್ಲೆಯಲ್ಲಿ ಓಡಾಡುತ್ತಿಲ್ಲ. ಇದರಿಂದ ಅಜ್ಜಿಯೊಬ್ಬರು ಊರಿಗೆ ತೆರಳಲು ಪರದಾಟ ಪಟ್ಟಿದ್ದಾರೆ. ಸಿದ್ದಮ್ಮ ಎಂಬ ವೃದ್ಧೆ ಕೊಪ್ಪಳದಿಂದ ತಳಕಲ್ಗೆ ಹೋಗಬೇಕಿತ್ತು. ಆದರೆ ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿಗೆ ದಿಕ್ಕು ತೋಚದಂತಾಗಿತ್ತು. ನಿನ್ನೆ ರಾತ್ರಿ ಅಜ್ಜಿಯ ಪತಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗವಿ ಮಠದ …

Read More »

ತಮಿಳು ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಸಂಸ್ಥಾಪಕ ಹಾಗೂ ನಟ ವಿಜಯಕಾಂತ್ ಉಸಿರಾಟದ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬುಧವಾರ ಮೇ 19 ವಿಜಯಕಾಂತ್‍ರವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಳೆದ ವರ್ಷವು ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಹೊಂದಿದ್ದರು. ವೈದ್ಯರ ತಂಡ ಇದೀ ವಿಜಯಕಾಂತ್‍ರವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ವಿಜಯಕಾಂತ್‍ರವರು …

Read More »

ಜ್ಯೂನಿಯರ್ ಆರ್ಟಿಸ್ಟ್ ಗಳನ್ನಿಟ್ಟುಕೊಂಡು ವೇಶ್ಯಾವಾಟಿಕೆ; ಪ್ರೊಡಕ್ಷನ್ ಮ್ಯಾನೇಜರ್ ಬಂಧನ

ಹೈದರಾಬಾದ್​: ಸಿನಿಮಾ ಪ್ರೊಡ್ಯೂಸರ್ ಒಬ್ಬ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಪರಿಚಯವಿದ್ದ ಜೂನಿಯರ್​ ನಟಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದನೆಂದು ಆತನನ್ನು ಹೈದರಾಬಾದ್​ ನ ಸರೋರ್​ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಾಗಿರುವ ಸಿನಿಮಾ ಪ್ರೊಡ್ಯೂಸರ್, ಸುಧೀರ್​ (31) ಎಂದು ಗುರುತಿಸಲಾಗಿದೆ. ಈತ ಕರೊನಾ ಲಾಕ್​ಡೌನ್​ ಸಮಯದಲ್ಲಿ ಜಾಲತಾಣದಲ್ಲಿ ಮಹಿಳೆಯರ ಅರೆಬೆತ್ತಲೆ ಫೋಟೋ ಹಾಕಿ ದಂಧೆಗೆ ಯುವಕರನ್ನು ಸೆಳೆಯುತ್ತಿದ್ದ ಎಂಬುದು ಗೊತ್ತಾಗಿದೆ. ಈ ವೇಶ್ಯಾವಾಟಿಕೆ ದಂಧೆ ನಡೆಸಲು ಮಧಪುರ್​ ನ ಅಯ್ಯಪ್ಪ ಸೊಸೈಟಿಯಲ್ಲಿ ಮನೆಯೊಂದನ್ನು …

Read More »

ಪ್ರಶ್ನೆ ಪತ್ರಿಕೆ ಸೋರಿಕೆ ಕಿಂಗ್​ಪಿನ್ ಶಿವಕುಮಾರ್​​ ಕೊರೋನಾಗೆ ಬಲಿ

ತುಮಕೂರು: ವಿವಿಧ ಪಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್‌ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. 2011ರಲ್ಲಿ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಈತನ ವಿರುದ್ಧ ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2012ರಲ್ಲಿ ತುಮಕೂರಿನ ಹೊಸ ಬಡಾವಣೆ ಪೊಲೀಸ್‌ …

Read More »